BJP ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿದ್ದು ಯಾರು? ಮಹಿಳೆಯ ಹೈಡ್ರಾಮಾವೋ? ಪೊಲಿಸರ ಕ್ರೌರ್ಯವೋ? – Kannada News | BJP worker accuses cops of disrobing her during arrest, police deny allegations

ಹುಬ್ಬಳ್ಳಿ, (ಜನವರಿ 07): ಬಿಜೆಪಿ ಕಾರ್ಯಕರ್ತೆಯನ್ನ (BJP Worker) ಬಟ್ಟೆಬಿಚ್ಚಿ ಪೊಲೀಸರು ಥಳಿಸಿದ ಆರೋಪ ಕೇಳಿ ಬಂದಿದೆ. ಹುಬ್ಬಳ್ಳಿಯ (Hubballi) ಕೇಶ್ವಾಪುರ ಪೊಲೀಸ್ ಠಾಣೆಯ ಪೊಲೀಸರು, ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಬಂಧನದ ವೇಳೆ ವಿವಸ್ತ್ರಗೊಳಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ನಡುವೆ ಹಳೆ ವೈಷಮ್ಯದ‌ ಹಿನ್ನಲೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ತಿಕ್ಕಾಟ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸರು, ಸುಜಾತ ಅವರನ್ನ ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ದೊಡ್ಡ ಹೈಡ್ರಾಮವೇ ಆಗಿದ್ದು,ಪೊಲೀಸ್ ವಾಹನದಲ್ಲೇ ಬಂಧಿತ ಸುಜಾತ ಅರೆನಗ್ನ ಸ್ಥಿತಿಯಲ್ಲಿರುವ ವಿಡಿಯೋ ವೈರಲ್ ಆಗಿದ್ದು, ಕೇಶ್ವಾಪುರ ಪೊಲೀಸರ ವರ್ತನೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಆದ್ರೆ,
ಇದನ್ನು ಪೊಲೀಸರು ಅಲ್ಲಗೆಳೆದಿದ್ದಾರೆ.

ಅಷ್ಟಕ್ಕೂ ಆಗಿದ್ದೇನು ಅಂದ್ರೆ, ಜನವರಿ 5 ರಂದು ಹುಬ್ಬಳ್ಳಿಯ ಕೇಶ್ವಾಪುರ ಠಾಣೆ ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿಯನ್ನ ಬಂಧಿಸಿದ್ರು. ಈ ಬಂಧನದ ವೇಳೆ ಸುಜಾತಳನ್ನ ಪೊಲೀಸರು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಸಂಬಂಧ ವೈರಲ್‌ ವಿಡಿಯೋ ಮುಂದಿಟ್ಟುಕೊಂಡು ಇಂದು ಠಾಣೆ ಮುಂದೆ ಪ್ರತಿಭಟಿಸಿದ್ದು, ಪೊಲೀಸರ ಅಮಾನತಿಗೆ ಆಗ್ರಹಿಸಿದ್ದಾರೆ. ನನ್ನ ಮಗಳ ಬಟ್ಟೆ ಬಿಚ್ಚಿ ಪೊಲೀಸರೇ ಹಲ್ಲೆ ನಡೆಸಿದ್ದಾರೆ ಎಂದು ಸುಜಾತ ತಾಯಿ ಕಮಲಮ್ಮ ಸಹ ಆರೋಪಿಸಿದ್ದು, ಮಗಳ ಸ್ಥಿತಿ ನೆನೆದು ಕಣ್ಣೀರಾಗಿದ್ದಾರೆ.

ಇದನ್ನೂ ನೋಡಿ: ನನ್ನ ಮಗಳ ಬಟ್ಟೆ ಬಿಚ್ಚಿದ್ದು ಪೊಲೀಸರೇ: BJP ಕಾರ್ಯಕರ್ತೆ ತಾಯಿ ಕಣ್ಣೀರು

ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಹುಬ್ಬಳ್ಳಿ ಪೊಲೀಸ್‌ ಕಮಿಷನರ್ ಶಶಿಕುಮಾರ್‌, ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ ಎಂದು ಮನವೊಲಿಕೆ ಕೆಲಸ ಮಾಡಿದ್ದಾರೆ. ಪೊಲೀಸ್‌ ವಶದಲ್ಲಿದ್ದಾಗ ವಿಡಿಯೋ ಮಾಡಿದ್ಯಾರು? ಅವರ ಬಗ್ಗೆಯೂ ಕ್ರಮ ತೆಗೆದುಕೊಳ್ತೀವಿ. ಹಲ್ಲೆ ಆರೋಪದ ಬಗ್ಗೆಯೂ ತನಿಖೆ ಮಾಡ್ತೀವಿ ಎಂದಿದ್ದಾರೆ.

ಪ್ರಕರಣವನ್ನ ಗಂಭೀರವಾಗಿ ಪರಿಣಿಸಿರೋ ಬಿಜೆಪಿ ನಾಯಕರು, ಕಾಂಗ್ರೆಸ್ ಕಾರ್ಪೊರೇಟರ್‌ ಸುವರ್ಣ ಕಲ್ಲಕುಂಟ್ಲಾ ಕುಮ್ಮಕ್ಕಿನಿಂದಲೇ ದಲಿತ ಮಹಿಳೆ ಮೇಲೆ ಹಲ್ಲೆ ಆಗಿದೆ ಅಂತಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡಾ ರಾಜ್ಯದಲ್ಲಿ ತುಘಲಕ್ ಸಾಮ್ರಾಜ್ಯ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಆರೋಪ ತಳ್ಳಿ ಹಾಕಿದ ಪೊಲೀಸ್ರು

ಪೊಲೀಸರು ತಮ್ಮ ವಿರುದ್ಧದ ಆರೋಪವನ್ನ ತಳ್ಳಿ ಹಾಕಿದ್ದಾರೆ. ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡ್ಲು ಅಂತಿದ್ದಾರೆ. ಸಾಲದ್ದಕ್ಕೆ ಕಾರ್ಯಕರ್ತೆಯೇ ಮಹಿಳಾ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಆರೋಪ ಕೂಡ ಕೇಳಿಬಂದಿದ್ದು, ಮಹಿಳಾ ಪೊಲೀಸರು ಆಯುಕ್ತರ ಮುಂದೆ ಈ ಬಗ್ಗೆ ಕಣ್ಣೀರಿಟ್ಟಿದ್ದಾರೆ. ಇನ್ನು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಸಹ ಮಾಹಿತಿ ಪಡೆದಿದ್ದು, ಸುಜಾತಾಳ ಸಹೋದರನೇ ವಿಡಿಯೋ ವೈರಲ್ ಮಾಡಿದ್ದಾನೆ ಎಂದಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯರಿಗೆ ಪೊಲೀಸ್ ಅಧಿಕಾರಿಗಳು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿ ಪ್ರಕರಣದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹಾಗೂ ಸಂತೋಷ್ ಲಾಡ್, ಬಿಜೆಪಿ ಕಾರ್ಯಕರ್ತೆಯದ್ದೇ ತಪ್ಪು ಅಂತಿದ್ದಾರೆ.

ಸುಜಾತ ಹಂಡಿಯನ್ನ ಬಂಧಿಸಿದ್ಯಾಕೆ? ಏನಿದು ಪ್ರಕರಣ?

ಸುಜಾತ SIR- BLO ಗಳನ್ನು ಕರೆತಂದು ನಮ್ಮ ವೋಟ್ ಡಿಲಿಟ್ ಮಾಡಿಸಿದ್ದಾರೆ ಎಂಬ ಆರೋಪವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡುತ್ತಿದ್ದಾರೆ. ಇದೇ ಆರೋಪದ ಮೇಲೆ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಆಗಿತ್ತು. ಈ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ನೀಡಿದ ದೂರಿನ ಮೇರೆಗೆ ಕಲ್ಲಕುಂಟ್ಲಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆ ಸುಜತಾ ಹಂಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಬಂಧನ ವೇಳೆ ಪ್ರತಿರೋಧ ತೋರಿ ಸುಜಾತ ಹಂಡಿ ಚೀರಾಟ ನಡೆಸಿದ್ದಾರೆ. ಈ ವೇಳೆ ವಿವಸ್ತ್ರಗೊಳಿಸಿ ಥಳಿಸಿದ ಆರೋಪ ಕೇಳಿ ಬಂದಿದೆ. ಇನ್ನು ಬಂಧನದ ಸಂದರ್ಭದಲ್ಲಿ ಸುಜಾತ ಅನುಚಿತ ವರ್ತನೆ ತೋರಿದ್ದಾರೆ ಎಂದು ಕೇಶ್ವಾಪುರ ಪೊಲೀಸರು ಮತ್ತೊಂದು ದೂರು ದಾಖಲಿಸಿಕೊಂಡಿದ್ದಾರೆ.

ಹಿಂದೆ ಕಾಂಗ್ರೆಸ್‌ನಲ್ಲಿದ್ದ ಸುಜಾತ ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈಕೆ ಮೇಲೆ ವಿವಿಧ ಠಾಣೆಗಳಲ್ಲಿ 9 ಕೇಸ್‌ಗಳಿದ್ದು, ವಿವಸ್ತ್ರದ ಆರೋಪವನ್ನ ಪೊಲೀಸರು ತಳ್ಳಿಹಾಕಿದ್ದಾರೆ. ಆದ್ರೆ ಬಿಜೆಪಿ ನಾಯಕರು ಮಾತ್ರ ತನಿಖೆಗೆ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ – Kannada News | Mana Shankara Vara Prasad Garu and The Raja Saab movie ticket price hike

ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾಗಳ ಟಿಕೆಟ್ ದರವನ್ನು ಏಕಾಏಕಿ ಹೆಚ್ಚಿಸಲು ಅವಕಾಶ ಇಲ್ಲ. ಆದರೆ ದೊಡ್ಡ ಸಿನಿಮಾಗಳು ಬಂದಾಗ ವಿಶೇಷ ಅನುಮತಿ ಪಡೆದು ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಈಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಹಾಗೂ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗಳಿಗೆ ಅವಕಾಶ ಸಿಕ್ಕಿದೆ. ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಗಲಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳಷ್ಟು ನಿರೀಕ್ಷೆ ಇದೆ. ಮಾರುತಿ ನಿರ್ದೇಶನದ ಈ ಚಿತ್ರದಲ್ಲಿ ಹಾರರ್ ಕಥಾಹಂದರ ಇದೆ. ಚಿರಂಜೀವಿ ಅವರ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾ ಕೂಡ ಸಾಕಷ್ಟು ಹೈಪ್ ಸೃಷ್ಟಿ ಮಾಡಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IND vs SA: 233 ರನ್​ಗಳಿಂದ ಗೆದ್ದು ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ – Kannada News | India U19 Dominates SA: Suryavanshi Leads Historic 3 0 Clean Sweep

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಅಂಡರ್-19 ತಂಡವು (India U19 vs South Africa U19) ಕ್ಲೀನ್ ಸ್ವೀಪ್ ಮಾಡಿದೆ. ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ಆತಿಥೇಯರನ್ನು 233 ರನ್​​ಗಳಿಂದ ಏಕಪಕ್ಷೀಯವಾಗಿ ಸೋಲಿಸಿ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಇದರೊಂದಿಗೆ ನಾಯಕನಾಗಿ ಮೊಟ್ಟ ಮೊದಲ ಬಾರಿಗೆ ತಂಡವನ್ನು ಮುನ್ನಡೆಸಿದ್ದ ವೈಭವ್ ಸೂರ್ಯವಂಶಿಗೆ ಸ್ಮರಣಿಯ ಗೆಲುವು ದಕ್ಕಿದೆ. ಇಡೀ ಸರಣಿಯಲ್ಲಿ ಆಟಗಾರನಾಗಿ ಮಾತ್ರವಲ್ಲದೆ ನಾಯಕತ್ವದಲ್ಲೂ ಮಿಂಚಿದ ವೈಭವ್ ಸೂರ್ಯವಂಶಿ (Vaibhav Suryavanshi) ಅತಿ ಕಿರಿಯ ವಯಸ್ಸಿಗೆ ಕ್ಲೀನ್ ಸ್ವೀಪ್ ಮಾಡಿದ ನಾಯಕ ಎಂಬ ದಾಖಲೆಯನ್ನು ಬರೆದಿದ್ದಾರೆ.

ಭಾರತ ತಂಡಕ್ಕೆ ಏಕಪಕ್ಷೀಯ ಗೆಲುವು

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, 50 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 393 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಆರಂಭಿಕರಾದ ವೈಭವ್ ಸೂರ್ಯವಂಶಿ ಮತ್ತು ಆರನ್ ಜಾರ್ಜ್ ಅದ್ಭುತ ಶತಕ ಬಾರಿಸಿದರು. ನಾಯಕ ವೈಭವ್ 127 ರನ್‌ಗಳ ಆಕ್ರಮಣಕಾರಿ ಇನ್ನಿಂಗ್ಸ್ ಆಡಿದರೆ, ಆರನ್ 118 ರನ್‌ಗಳ ಕೊಡುಗೆ ನೀಡಿದರು. ಇವರಿಬ್ಬರು ಜೊತೆಯಾಗಿ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು. ಇವರಿಬ್ಬರನ್ನು ಹೊರತುಪಡಿಸಿ ವೇದಾಂತ್ ತ್ರಿವೇದಿ ಕೂಡ 34 ರನ್​ಗಳ ಇನ್ನಿಂಗ್ಸ್ ಆಡಿದರೆ, ಮೊಹಮ್ಮದ್ ಎನಾನ್ 28 ರನ್‌ಗಳ ಕೊಡುಗೆ ನೀಡಿದರು.

ಆರಂಭದಲ್ಲೇ ಸೋಲೊಪ್ಪಿಕೊಂಡ ಆಫ್ರಿಕಾ

394 ರನ್‌ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾದ ಅಂಡರ್-19 ತಂಡವು ಭಾರತೀಯ ಬೌಲರ್‌ಗಳ ವಿರುದ್ಧ ಸಂಪೂರ್ಣವಾಗಿ ಅಸಹಾಯಕವಾಗಿ ಕಾಣಿಸಿಕೊಂಡಿತು. ಭಾರತದ ಪರ ಮಾರಕ ಬೌಲಿಂಗ್ ಮಾಡಿದ ಕಿಶನ್ ಸಿಂಗ್, ಆಫ್ರಿಕಾಕ್ಕೆ ಆರಂಭಿಕ ಆಘಾತ ನೀಡಿದರು. ಇದರಿಂದಾಗಿ ಒತ್ತಡಕ್ಕೆ ಸಿಲುಕಿದ ಆತಿಥೇಯರು ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭದಲ್ಲೇ ಸೋಲಿನ ಸುಳಿವು ನೀಡಿದರು. ತಂಡದ ಪರ ಹೋರಾಟ ನೀಡಿದ ಡೇನಿಯಲ್ ಬೋಸ್ಮನ್ ಮತ್ತು ಪಾಲ್ ಜೇಮ್ಸ್ ಇನ್ನಿಂಗ್ಸ್ ಕಟ್ಟಲು ಪ್ರಯತ್ನಿಸಿದರೂ ಅದು ತಂಡವನ್ನು ಗೆಲ್ಲಿಸಲು ಸಾಕಾಗಲಿಲ್ಲ. ಪಾಲ್ ಜೇಮ್ಸ್ 41 ರನ್ ಗಳಿಸಿದರೆ, ಡೇನಿಯಲ್ ಬೋಸ್ಮನ್ 40 ರನ್ ಬಾರಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡವು 35 ಓವರ್‌ಗಳಲ್ಲಿ 160 ರನ್‌ಗಳಿಗೆ ಆಲೌಟ್ ಆಯಿತು.

ವೈಭವ್, ಜಾರ್ಜ್​ ಸ್ಫೋಟಕ ಶತಕ; ಆಫ್ರಿಕಾಗೆ ಬೃಹತ್ ಗುರಿ ನೀಡಿದ ಯಂಗ್ ಇಂಡಿಯಾ

ಕಿಶನ್ ಸಿಂಗ್ ಮಾರಕ ಬೌಲಿಂಗ್

ಟೀಂ ಇಂಡಿಯಾ ಪರ ಅದ್ಭುತ ಬೌಲಿಂಗ್ ಮಾಡಿದ ಕಿಶನ್ ಸಿಂಗ್ ನಾಲ್ಕು ಓವರ್‌ಗಳಲ್ಲಿ ಕೇವಲ 15 ರನ್‌ಗಳನ್ನು ಬಿಟ್ಟುಕೊಟ್ಟು ಮೂವರು ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದರು. ಉಳಿದಂತೆ ಮೊಹಮ್ಮದ್ ಎನಾ ಎರಡು ವಿಕೆಟ್ ಪಡೆದರೆ, ಹೆನಿಲ್ ಪಟೇಲ್, ಕನಿಷ್ಕ್ ಚೌಹಾಣ್ , ಉದ್ಧವ್ ಮೋಹನ್, ಆರ್‌ಎಸ್ ಅಂಬ್ರಿಸ್ ಮತ್ತು ವೈಭವ್ ಸೂರ್ಯವಂಶಿ ತಲಾ ಒಂದು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 8:52 pm, Wed, 7 January 26

Source link

ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ! – Kannada News | Viral video thief found hanging from exhaust fan hole in Kota

ಜೈಪುರ, ಜನವರಿ 7: ರಾಜಸ್ಥಾನದ (Rajasthan) ಕೋಟಾದಲ್ಲಿ ದಂಪತಿಗಳು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು. ಅವರು ಅಲ್ಲಿಂದ ಹಿಂದಿರುಗುವಾಗ ಒಂದು ವಿಚಿತ್ರ ಸಂಭವಿಸಿತ್ತು. ಒಬ್ಬ ಕಳ್ಳ ಎಕ್ಸಾಸ್ಟ್ ಫ್ಯಾನ್ ರಂಧ್ರದ ಮೂಲಕ ಅವರ ಮನೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ. ಆದರೆ ಅದರಿಂದ ಹೊರಬರಲಾಗದೆ ಆತ ಗೋಡೆಯಲ್ಲೇ ಸಿಕ್ಕಿಹಾಕಿಕೊಂಡ. ಅಷ್ಟರಲ್ಲಿ ಮನೆಗೆ ಬಂದ ದಂಪತಿಗೆ ಗೋಡೆಯಲ್ಲಿ ಕಳ್ಳನ ಅರ್ಧ ದೇಹ ಕಂಡು ಶಾಕ್ ಆಯಿತು. ಕೊನೆಗೆ ಅವರೇ ಆ ಕಳ್ಳನನ್ನು ಎಳೆದು ಕೆಳಕ್ಕೆ ತಂದು ಕಾಪಾಡಿದರು. ಇದರಿಂದ ಕಳ್ಳ ತಾನು ಬೀಸಿದ ಬಲೆಗೆ ತಾನೇ ಬಿದ್ದಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕಿಂಗ್ ಕೊಹ್ಲಿಯನ್ನು ಮುತ್ತಿದ ಫ್ಯಾನ್ಸ್, ಹೊರಬರಲಾಗದೆ ಒದ್ದಾಡಿದ ವಿರಾಟ್; ವಿಡಿಯೋ ವೈರಲ್ – Kannada News | Viral: Virat Kohli Faces Fan Chaos at Vadodara Airport Ahead of India NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಜನವರಿ 11 ರಿಂದ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗುತ್ತಿದೆ. ಈ ಸರಣಿಗಾಗಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಬುಧವಾರ ಸಂಜೆ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಆದರೆ ಕೊಹ್ಲಿ ಅವರ ಆಗಮನದ ಬಗ್ಗೆ ತಿಳಿದಿದ್ದ ಸಾವಿರಾರು ಅಭಿಮಾನಿಗಳು ವಿಮಾನ ನಿಲ್ದಾಣಕ್ಕೆ ಜಮಾಯಿಸಿದ್ದು ವಿರಾಟ್ ಹೊರಬಂದ ತಕ್ಷಣ ‘ಕೊಹ್ಲಿ.. ಕೊಹ್ಲಿ..’ ಎಂಬ ಘೋಷಣೆಗಳೊಂದಿಗೆ ಅವರನ್ನು ಸುತ್ತುವರೆದಿದ್ದಾರೆ. ಇದರಿಂದಾಗಿ ಕೊಹ್ಲಿ ಆ ಜನಜಂಗುಳಿಯನ್ನು ದಾಟಿ ತಮ್ಮ ಕಾರಿಗೆ ಹತ್ತಲು ಸಾಕಷ್ಟು ಹರಸಾಹಸ ಪಡಬೇಕಾಯಿತು.

ವಿಮಾನ ನಿಲ್ದಾಣದಿಂದ ಹೊರಬಂದ ವಿರಾಟ್ ಕೊಹ್ಲಿ ತಮ್ಮ ಕಾರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಅಭಿಮಾನಿಗಳು ಸೆಲ್ಫಿಗಾಗಿ ಮುತ್ತಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿಗಳು ಕೊಹ್ಲಿಯನ್ನು ಸುರಕ್ಷಿತವಾಗಿ ಕಾರಿನ ಬಳಿ ಕರೆದೊಯ್ಯಲು ಶ್ರಮಿಸಬೇಕಾಯಿತು. ಒಂದು ಹಂತದಲ್ಲಿ, ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟಕರವಾಯಿತು, ಇದರಿಂದ ವಿರಾಟ್ ಕೂಡ ಸ್ವಲ್ಪ ಕಸಿವಿಸಿಗೊಂಡರು. ಆದಾಗ್ಯೂ, ಅವರು ತಾಳ್ಮೆಯಿಂದ ಮುಗುಳ್ನಕ್ಕು, ಕೆಲವು ಅಭಿಮಾನಿಗಳೊಂದಿಗೆ ಫೋಟೋಗಳಿಗೆ ಪೋಸ್ ನೀಡಿ ಕಾರಿನಲ್ಲಿ ಹೊರಟುಹೋದರು. ಪ್ರಸ್ತುತ, ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಣ್ಣ ತಂಗಿ ಪ್ರೀತಿ ಪ್ರೇಮ ಲಿವಿಂಗ್ ರಿಲೇಶಷನ್ ಶಿಪ್ ತನಕ: ಆಮೇಲೇನಾಯ್ತು? – Kannada News | A Young Woman Suspected death Who Love Affair with Cousin Brother In Chikkaballapur

ಚಿಕ್ಕಬಳ್ಳಾಪುರ, (ಜನವರಿ 07): ಅಣ್ಣ ತಂಗಿ ಸಂಬಂಧ ಪ್ರೀತಿಗೆ ತಿರುಗಿ ಲಿವಿಂಗ್ ರಿಲೇಶಷನ್ ಶಿಪ್​​ ತನಕ ಹೋಗಿದ್ದು, ಇದೀಗ ಅಣ್ಣ ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯವಾಗಿದೆ. ಹೌದು.. ವ್ಯಕ್ತಿಯೋರ್ವನಿಗೆ ಮದುವೆಯಾಗಿದ್ದು, ಮಗು ಸಹ ಇದೆ. ಆದರೂ ಆತ ತನ್ನ ದೊಡ್ಡಪ್ಪನ ಮಗಳು ಅಂದರೆ ತಂಗಿಯನ್ನೇ ಲವ್ ಮಾಡಿದ್ದಾನೆ. ಬಳಿಕ ಇಬ್ಬರ ಪ್ರೀತಿ ಅನೈತಿಕ ಸಂಬಂಧಕ್ಕೆ ತಿರುಗಿದ್ದು, ಬಳಿಕ ಬೇರೆ ಮನೆ ಮಾಡಿಕೊಂಡು ಸಂಸಾರ ನಡೆಸಿದ್ದಾರೆ. ಆದ್ರೆ, ಇದೀಗ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ನಡೆದಿದ್ದು, ರಾಮಲಕ್ಷ್ಮೀ ಸಾವಿನ ಸುತ್ತ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ರಾಮಲಕ್ಷ್ಮೀ ಜತೆ ಸಂಬಂಧ ಹೊಂದಿದ್ದ ಅಣ್ಣ ಕೃಷ್ಣ ಸಹ ನಾಪತ್ತೆಯಾಗಿದ್ದಾನೆ. ರಾಮಲಕ್ಷ್ಮೀ ಅಂತ ಹೇಳಿಕೊಂಡು ಚಿಕ್ಕಪ್ಪನ ಮಗನ ಜೊತೆ ರೂಮ್​ ಮಾಡಿಕೊಂಡಿದ್ದಳು. ಇದೀಗ ಏಕಾಏಕಿ ಲಕ್ಷ್ಮೀ ಶವವಾಗಿ ಪತ್ತೆಯಾಗಿದ್ದು. ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಇದನ್ನೂ ಓದಿ: ಪತ್ನಿ ಮಗ ಇದ್ರೂ ತಂಗಿ ಜತೆ ಅಣ್ಣ ಸಂಸಾರ: ಅಣ್ಣ-ತಂಗಿ ಲವ್ವಿಡವ್ವಿ ಸಾವಿನಲ್ಲಿ ಅಂತ್ಯ!

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

ಊಟಿ ಬಳಿ 120 ಅಡಿ ಆಳಕ್ಕೆ ಬಿದ್ದ ಮಿನಿಬಸ್; 32 ಜನರಿಗೆ ಗಾಯ – Kannada News | Mini bus travelling from Ooty fell into a 120 foot gorge near Manalada

ಊಟಿ, ಜನವರಿ 7: ತಮಿಳುನಾಡಿನ ಊಟಿ ಬಳಿ 120 ಅಡಿ ಕಂದಕಕ್ಕೆ ಮಿನಿ ಬಸ್ ಬಿದ್ದು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ (Accident) 32 ಜನರು ಗಾಯಗೊಂಡಿದ್ದಾರೆ. ಅವರಲ್ಲಿ 3 ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಕ್ರಿಯ ತನಿಖೆ ನಡೆಸುತ್ತಿದ್ದಾರೆ.

ನೀಲಗಿರಿ ಜಿಲ್ಲೆಯ ಉಡಗೈನ ಕಲ್ಲಕೊರೈ ಹಾಡ ಬಳಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ 120 ಅಡಿ ಆಳಕ್ಕೆ ಉರುಳಿ ಬಿದ್ದು ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಸಂಭವಿಸಿದ ಭೀಕರ ಅಪಘಾತದ ವಿಡಿಯೋ ಇಲ್ಲಿದೆ

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಊಟಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿದರು. ಪ್ರಸ್ತುತ ಅವರಿಗೆ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NZ: ಕಿವೀಸ್ ವಿರುದ್ಧ ಕಣಕ್ಕಿಳಿಯಲು ಶ್ರೇಯಸ್ ಅಯ್ಯರ್​ಗೆ ಗ್ರೀನ್ ಸಿಗ್ನಲ್ ನೀಡಿದ ಬಿಸಿಸಿಐ

Source link

WPL 2026: ಇನ್ನೇರಡು ದಿನಗಳಲ್ಲಿ ಡಬ್ಲ್ಯುಪಿಎಲ್ ಆರಂಭ; ಇಲ್ಲಿದೆ ಪೂರ್ಣ ವೇಳಾಪಟ್ಟಿ – Kannada News | Women’s Premier League 2026: Schedule, Teams, Live Stream and Full Details

ಮಹಿಳಾ ಪ್ರೀಮಿಯರ್ ಲೀಗ್‌ನ (Women’s Premier League) ನಾಲ್ಕನೇ ಸೀಸನ್ ಆರಂಭಕ್ಕೆ ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಐಪಿಎಲ್​ನಂತೆಯೇ (IPL) ಭಾರತದಲ್ಲಿ ಅತಿ ಹೆಚ್ಚು ಜನಪ್ರಿಯತೆಗಳಿಸಿರುವ ಈ ಮಹಿಳಾ ಟಿ20 ಲೀಗ್​ ಜನವರಿ 9, 2026 ರಂದು ಪ್ರಾರಂಭವಾಗಲಿದೆ. ಮೊದಲ ಮೂರು ಆವೃತ್ತಿಗಳು ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಯಶಸ್ವಿಯಾಗಿದ್ದವು. ಇದೀಗ ನಾಲ್ಕನೇ ಸೀಸನ್ ಕೂಡ ಕ್ರಿಕೆಟ್ ಅಭಿಮಾನಿಗಳನ್ನು ರಂಜಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದರಲ್ಲೂ ಭಾರತ ಮಹಿಳಾ ಪಡೆ ಏಕದಿನ ವಿಶ್ವಕಪ್ ಗೆದ್ದ ಬಳಿಕ ಮಹಿಳಾ ತಂಡಕ್ಕೂ ಪುರುಷ ತಂಡದಷ್ಟೇ ಮನ್ನಣೆ ಸಿಗುತ್ತಿದೆ. ಹೀಗಾಗಿ ಈ ನಾಲ್ಕನೇ ಸೀಸನ್ ಮತ್ತೊಂದು ದಾಖಲೆ ಬರೆಯಲಿದೆ ಎಂಬುದು ಬಿಸಿಸಿಐ (BCCI) ಲೆಕ್ಕಾಚಾರವಾಗಿದೆ. ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣ ಹಾಗೂ ವಡೋದರಾದ ಬಿಸಿಎ ಕ್ರೀಡಾಂಗಣ ಈ ಪಂದ್ಯಗಳಿಗೆ ಆತಿಥ್ಯ ನೀಡಲಿವೆ.

28 ದಿನ, 22 ಪಂದ್ಯಗಳು

ಈ ಆವೃತ್ತಿಯಲ್ಲೂ ಎಂದಿನಂತೆ ಐದು ತಂಡಗಳು ಕಣಕ್ಕಿಳಿಯುತ್ತಿದ್ದು, 28 ದಿನಗಳ ಕಾಲ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 22 ಪಂದ್ಯಗಳಳು ನಡೆಯಲಿವೆ. ಎಲಿಮಿನೇಟರ್ ಪಂದ್ಯ ಫೆಬ್ರವರಿ 3 ರಂದು ವಡೋದರಾದಲ್ಲಿ ನಡೆದರೆ, ಫೈನಲ್ ಪಂದ್ಯ ಫೆಬ್ರವರಿ 5 ರಂದು ನಡೆಯಲಿದೆ. ಈ 22 ಪಂದ್ಯಗಳು ಎರಡು ಸ್ಥಳಗಳಲ್ಲಿ ನಡೆಯಲಿದ್ದು,

5 ತಂಡಗಳು ಹೀಗಿವೆ

  1. ಮುಂಬೈ ಇಂಡಿಯನ್ಸ್
  2. ರಾಯಲ್ ಚಾಲೆಂಜರ್ಸ್ ಬೆಂಗಳೂರು
  3. ದೆಹಲಿ ಕ್ಯಾಪಿಟಲ್ಸ್
  4. ಯುಪಿ ವಾರಿಯರ್ಸ್
  5. ಗುಜರಾತ್ ಜೈಂಟ್ಸ್

ಈ ಲೀಗ್​ನ ಸ್ವರೂಪ ಹೇಗಿರಲಿದೆ?

ಎಂದಿನಂತೆ ಐದು ತಂಡಗಳಲ್ಲಿ ಪ್ರತಿಯೊಂದೂ ತಂಡವು ಪರಸ್ಪರ ಎರಡು ಪಂದ್ಯಗಳನ್ನು ಆಡುತ್ತವೆ. ಅಂದರೆ ಪ್ರತಿ ತಂಡವು ಪಂದ್ಯಾವಳಿಯಲ್ಲಿ ಎಂಟು ಪಂದ್ಯಗಳನ್ನು ಆಡುತ್ತದೆ. ಲೀಗ್ ಹಂತ ಮುಗಿದ ನಂತರ, ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವು ನೇರವಾಗಿ ಫೈನಲ್‌ಗೆ ಮುನ್ನಡೆದರೆ, 2 ನೇ ಮತ್ತು 3 ನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್‌ನಲ್ಲಿ ಆಡುತ್ತವೆ. ಇಲ್ಲಿ ಗೆದ್ದ ತಂಡವು ಫೈನಲ್‌ಗೆ ಅರ್ಹತೆ ಪಡೆಯುತ್ತದೆ.

ಎಷ್ಟು ಡಬಲ್ ಹೆಡರ್ ಪಂದ್ಯಗಳು ನಡೆಯಲಿವೆ?

ಈ ಬಾರಿ ಎರಡು ಡಬಲ್ ಹೆಡರ್‌ ಪಂದ್ಯಗಳು ಅಂದರೆ ಒಂದೇ ದಿನದಲ್ಲಿ ಎರಡು ಪಂದ್ಯಗಳು ನಡೆಯಲಿವೆ. ಮೊದಲ ಡಬಲ್ ಹೆಡರ್ ಜನವರಿ 10 ರಂದು ನಡೆದರೆ, ಎರಡನೇ ಜನವರಿ 17 ರಂದು ಎರಡನೇ ಡಬಲ್ ಹೆಡರ್ ನಡೆಯಲಿದೆ.

ನೇರ ಪ್ರಸಾರ ಮತ್ತು ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ಅಭಿಮಾನಿಗಳು ಈ ಲೀಗ್​ನ ಪಂದ್ಯಗಳ ನೇರ ಪ್ರಸಾರವನ್ನು ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಮತ್ತು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

WPL 2026 ರ ಪೂರ್ಣ ವೇಳಾಪಟ್ಟಿ

ದಿನಾಂಕ ಮುಖಾಮುಖಿ ಸ್ಥಳ
09-01-2026 ಮುಂಬೈ ಇಂಡಿಯನ್ಸ್ vs ಆರ್​ಸಿಬಿ ನವಿ ಮುಂಬೈ
10-01-2026 ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ ನವಿ ಮುಂಬೈ
10-01-2026 ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ ನವಿ ಮುಂಬೈ
11-01-2026 ದೆಹಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ ನವಿ ಮುಂಬೈ
12-01-2026 ಆರ್​ಸಿಬಿ vs ಯುಪಿ ವಾರಿಯರ್ಸ್ ನವಿ ಮುಂಬೈ
13-01-2026 ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ ನವಿ ಮುಂಬೈ
14-01-2026 ಯುಪಿ ವಾರಿಯರ್ಸ್ vs ದೆಹಲಿ ಕ್ಯಾಪಿಟಲ್ಸ್ ನವಿ ಮುಂಬೈ
15-01-2026 ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ನವಿ ಮುಂಬೈ
16-01-2026 ಆರ್​ಸಿಬಿ vs ಗುಜರಾತ್ ಜೈಂಟ್ಸ್ ನವಿ ಮುಂಬೈ
17-01-2026 ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ ನವಿ ಮುಂಬೈ
17-01-2026 ದೆಹಲಿ ಕ್ಯಾಪಿಟಲ್ಸ್ vs ಆರ್​ಸಿಬಿ ನವಿ ಮುಂಬೈ
19-01-2026 ಗುಜರಾತ್ ಜೈಂಟ್ಸ್ vs ಆರ್​ಸಿಬಿ ವಡೋದರಾ
20-01-2026 ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ ವಡೋದರಾ
22-01-2026 ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ ವಡೋದರಾ
24-01-2026 ಆರ್​ಸಿಬಿ vs ದೆಹಲಿ ಕ್ಯಾಪಿಟಲ್ಸ್ ವಡೋದರಾ
26-01-2026 ಆರ್​ಸಿಬಿ vs ಮುಂಬೈ ಇಂಡಿಯನ್ಸ್ ವಡೋದರಾ
27-01-2026 ಗುಜರಾತ್ ಜೈಂಟ್ಸ್ vs ದೆಹಲಿ ಕ್ಯಾಪಿಟಲ್ಸ್ ವಡೋದರಾ
29-01-2026 ಯುಪಿ ವಾರಿಯರ್ಸ್ vs ಆರ್​ಸಿಬಿ ವಡೋದರಾ
30-01-2026 ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ ವಡೋದರಾ
01-02-2026 ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ ವಡೋದರಾ
03-02-2026 ಎಲಿಮಿನೇಟರ್ ವಡೋದರಾ
05-02-2026 ಫೈನಲ್ ವಡೋದರಾ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಗನಿಗೆ ವಿಹಾನ್ ಕೌಶಲ್ ಎಂದು ಹೆಸರಿಟ್ಟ ಕತ್ರಿನಾ ಕೈಫ್, ವಿಕ್ಕಿ ಕೌಶಲ್ – Kannada News | Vicky Kaushal and Katrina Kaif name their son Vihaan Kaushal

ಬಾಲಿವುಡ್​​ನ ಸ್ಟಾರ್ ದಂಪತಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ (Vicky Kaushal) ಅವರು ಅಭಿಮಾನಿಗಳಿಗೆ ಒಂದು ಸ್ಪೆಷಲ್ ನ್ಯೂಸ್ ನೀಡಿದ್ದಾರೆ. ತಮ್ಮ ಪುತ್ರನಿಗೆ ಅವರೀಗ ನಾಮಕರಣ ಮಾಡಿದ್ದಾರೆ. 2025ರ ನವೆಂಬರ್ 7ರಂದು ಕತ್ರಿನಾ ಕೈಫ್ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಈಗ ವಿಹಾನ್ ಕೌಶಲ್ (Vihaan Kaushal) ಎಂದು ಹೆಸರು ಇಡಲಾಗಿದೆ. ಒಂದು ವಿಶೇಷವಾದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ (Katrina Kaif) ಅವರು ಈ ವಿಷಯ ತಿಳಿಸಿದ್ದಾರೆ. ಅಭಿಮಾನಿಗಳು, ಆಪ್ತರು ಈ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಪುಟ್ಟ ಮಗುವಿನ ಕೈಯನ್ನು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು ತಮ್ಮ ಅಂಗೈಯಲ್ಲಿ ಇರಿಸಿಕೊಂಡಿದ್ದಾರೆ. ಈ ಫೋಟೋದ ಜೊತೆ ‘ನಮ್ಮ ಬೆಳಕಿನ ಕಿರಣ. ವಿಹಾನ್ ಕೌಶಲ್’ ಎಂದು ಕ್ಯಾಪ್ಷನ್ ನೀಡುವ ಮೂಲಕ ಮಗುವಿನ ಹೆಸರು ಏನು ಎಂಬುದನ್ನು ಈ ದಂಪತಿ ತಿಳಿಸಿದ್ದಾರೆ. ಫ್ಯಾನ್ಸ್ ಪೇಜ್​​ಗಳಲ್ಲಿ ಈ ಫೋಟೋ ವೈರಲ್ ಆಗುತ್ತಿದೆ.

‘ಪ್ರಾರ್ಥನೆಗಳು ಫಲಿಸಿವೆ. ಬದುಕು ಸುಂದರವಾಗಿದೆ. ನಮ್ಮ ಬದುಕು ಬದಲಾಗಿದೆ. ಪದಗಳನ್ನು ಮೀರಿದ ಕೃತಜ್ಞತೆಗಳು’ ಎಂದು ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರು ಖುಷಿ ಹಂಚಿಕೊಂಡಿದ್ದಾರೆ. ಜನಸಾಮಾನ್ಯರು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಈ ಪೋಸ್ಟ್​ಗೆ ಕಮೆಂಟ್ ಮಾಡಿದ್ದಾರೆ. ಪರಿಣೀತಿ ಚೋಪ್ರಾ, ಭೂಮಿ ಪೆಡ್ನೇಕರ್, ಸಿದ್ಧಾಂತ್ ಚತುರ್ವೇದಿ, ರಿಚಾ ಚಡ್ಡಾ ಮುಂತಾದವರು ಕಮೆಂಟ್ ಮಾಡಿದ್ದಾರೆ.

ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರು ಪರಸ್ಪರ ಪ್ರೀತಿಸಿ ಮದುವೆ ಆದರು. 2021ರಲ್ಲಿ ಅವರ ವಿವಾಹ ನೆರವೇರಿತ್ತು. ಇಬ್ಬರ ನಡುವೆ ವಯಸ್ಸಿನ ಅಂತರ ಇದೆ. ವಿಕ್ಕಿ ಕೌಶಲ್ ಅವರಿಗಿಂತ ಕತ್ರಿನಾ ಕೈಫ್ 5 ವರ್ಷ ದೊಡ್ಡವರು. ಈಗ ವಿಕ್ಕಿ ಕೌಶಲ್ ಅವರಿಗೆ 37 ವರ್ಷ ವಯಸ್ಸು. ಕತ್ರಿನಾ ಕೈಫ್ ಅವರಿಗೆ 42 ವರ್ಷ ವಯಸ್ಸು. ಮದುವೆ ಬಳಿಕ ಚಿತ್ರರಂಗದಲ್ಲಿ ಕತ್ರಿನಾ ಅವರು ಹೆಚ್ಚು ಆ್ಯಕ್ಟೀವ್ ಆಗಿಲ್ಲ.

ಇದನ್ನೂ ಓದಿ: ಕತ್ರಿನಾ ಕೈಫ್ ರೀತಿ ಕಾಣುವ ನಟಿ ಝರೀನ್ ಖಾನ್​ಗೆ 9 ವರ್ಷ ಕಿರಿಯವನ ಮೇಲೆ ಲವ್

ಚಿತ್ರರಂಗದಲ್ಲಿ ವಿಕ್ಕಿ ಕೌಶಲ್ ಅವರಿಗೆ ಸಖತ್ ಬೇಡಿಕೆ ಇದೆ. ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’, ‘ಛಾವ’ ಮುಂತಾದ ಸಿನಿಮಾಗಳ ಮೂಲಕ ಅವರು ಸೂಪರ್ ಸ್ಟಾರ್ ಪಟ್ಟ ಪಡೆದುಕೊಂಡಿದ್ದಾರೆ. ಪ್ರಸ್ತುತ ‘ಲವ್ ಆ್ಯಂಡ್ ವಾರ್’ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ‘ಛಾವ’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:25 pm, Wed, 7 January 26

Source link

Exit mobile version