ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ
ವಿಜಯಪುರ, ಏಪ್ರಿಲ್ 13: ಹದಿಹರೆಯದ ಪ್ರೇಮ ಪ್ರಕರಣಗಳು ಕೆಲವೊಮ್ಮೆ ಜೀವಕ್ಕೇ ಕಂಟಕವಾಗಿಬಿಡುತ್ತವೆ. ಪ್ರೀತಿಸಿದ ಹುಡುಗ ಅಥವಾ ಹುಡುಗಿ ಸಿಗದ ಕಾರಣಕ್ಕೆ ಮನನೊಂದು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದುಕೊಂಡು ಬಲಿಯಾದವರ ಸಂಖ್ಯೆ ದೊಡ್ಡದ್ದೇ ಇದೆ. ಆದರೆ ವಿಜಯಪುರದಲ್ಲಿ ಇದಕ್ಕೆ ತುಸು ಭಿನ್ನವೆಂಬಂತಹ ಪ್ರಕರಣವೊಂದು ನಡೆದಿದೆ. ತಾನು ಪ್ರೀತಿಸಿದ್ದ ಯುವತಿಗೆ ಮತ್ತೊಬ್ಬನ ಜೊತೆ ವಿವಾಹ ನಿಶ್ಚಯವಾಗಿದ್ದಕ್ಕೆ ರೊಚ್ಚಿಗೆದ್ದ ಯುವಕ ಮಾಡಿದ ಕೆಲಸ, ಮದುವೆಯ ಕನಸು ಕಂಡಿದ್ದ ಯುವತಿಯ ಪ್ರಾಣವನ್ನೇ ತೆಗೆದಿದೆ. ಹೌದು, ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದ…