ಚಿತ್ರದುರ್ಗ: ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು – Kannada News | Chitradurga Bolero Accident: 4 Workers Dead Near Andanur
ಚಿತ್ರದುರ್ಗ, ಜನವರಿ 06: ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ. Source link