Headlines

IPL 2026: ಸತತ ಸೋಲುಗಳಿಂದ ಕಂಗೆಟ್ಟ KKRಗೆ ಸಿಕ್ತು ಗುಡ್ ನ್ಯೂಸ್

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ  ಕೊನೆಗೂ ಸಿಹಿ ಸಿಕ್ಕಿದೆ. ಶ್ರೀಲಂಕಾದ ಸ್ಟಾರ್ ವೇಗಿ ಮಥೀಶ ಪತಿರಾಣ ಅವರಿಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಅಂತಿಮವಾಗಿ 'ನಿರಕ್ಷೇಪಣಾ ಪತ್ರ' (NOC) ನೀಡಿದ್ದು, ಅವರು ಶೀಘ್ರದಲ್ಲೇ ಕೆಕೆಆರ್ ತಂಡವನ್ನು ಸೇರಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್ ವೇಳೆ ಹ್ಯಾಮ್‌ಸ್ಟ್ರಿಂಗ್ ಗಾಯಕ್ಕೆ ತುತ್ತಾಗಿದ್ದ ಮಥೀಶ ಪತಿರಾಣ, ಐಪಿಎಲ್‌ನ ಆರಂಭಿಕ ಪಂದ್ಯಗಳಿಂದ ವಂಚಿತರಾಗಿದ್ದರು. ಶ್ರೀಲಂಕಾದಲ್ಲಿ ಪುನಶ್ಚೇತನ ಶಿಬಿರದಲ್ಲಿದ್ದ ಅವರು ಈಗ ಸಂಪೂರ್ಣ ಫಿಟ್…

Read More

ಗಾಯಾಳುವಿಗೆ ನೆರವಾದ ಹೆಚ್.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು, ಏಪ್ರಿಲ್​​ 12: ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಕ್ಷಣ ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ, ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ್ದಾರೆ. ಈ ಅಪಘಾತದಲ್ಲಿ ವಿಕ್ರಂ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸುಮಾರು ಅರ್ಧ ಗಂಟೆಯಿಂದ ರಸ್ತೆಯಲ್ಲೇ ಬಿದ್ದಿದ್ದರು. ಸಚಿವರು ಕೂಡಲೇ ಕಾರ್ಯಪ್ರವೃತ್ತರಾಗಿ, ಗಾಯಾಳುವನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ…

Read More

ಪೆಟ್ರೋಲಿಯಂ ಉತ್ಪನ್ನಗಳ ರಫ್ತು ಸುಂಕದಲ್ಲಿ ಭರ್ಜರಿ ಹೆಚ್ಚಳ; ಡೀಸಲ್​ಗೆ 55.5 ರೂ, ಎಟಿಎಫ್​ಗೆ 42 ರೂ ಸುಂಕ

ನವದೆಹಲಿ, ಏಪ್ರಿಲ್ 12: ಕೆಲ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರ ರಫ್ತು ಸುಂಕವನ್ನು (Exports Duty) ಗಣನೀಯವಾಗಿ ಹೆಚ್ಚಿಸಿದೆ. ಆಂತರಿಕವಾಗಿ ಈ ಇಂಧನ ಲಭ್ಯತೆ ಕಡಿಮೆ ಆಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಡೀಸಲ್ ಮತ್ತು ಜೆಟ್ ಇಂಧನದ ಮೇಲಿನ ಸುಂಕ ಹೆಚ್ಚಿದೆ. ಅಚ್ಚರಿ ಎಂಬಂತೆ ಪೆಟ್ರೋಲ್ ಮೇಲೆ ಯಾವುದೇ ರಫ್ತು ಸುಂಕ ಹಾಕಲಾಗಿಲ್ಲ. ಡೀಸಲ್ ಮೇಲಿನ ರಫ್ತು ಸುಂಕವನ್ನು ಲೀಟರ್​ಗೆ 34 ರೂಗಳಷ್ಟು ಏರಿಸಲಾಗಿದೆ. 21.5 ರೂ ಇದ್ದ ಇದರ ರಫ್ತು ಸುಂಕವನ್ನು 55.5…

Read More

Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ  ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ…

Read More

Sun Transit: ಏಪ್ರಿಲ್ 14 ಸೂರ್ಯ ಮೇಷ ರಾಶಿಗೆ ಪ್ರವೇಶ; ಈ ಮೂರು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜನಾದ ಸೂರ್ಯನು ಏಪ್ರಿಲ್ 14 ರಂದು ತನ್ನ ಉಚ್ಛ ರಾಶಿಯಾದ ಮೇಷ ರಾಶಿಗೆ ಸಂಚರಿಸಲಿದ್ದಾನೆ. ಸೂರ್ಯನ ಈ ಸಂಚಾರವು ಕೆಲವು ರಾಶಿಯವರಿಗೆ ಅದೃಷ್ಟ ತಂದರೆ, ಇನ್ನು ಕೆಲವು ರಾಶಿಯವರಿಗೆ ಸವಾಲುಗಳನ್ನು ತರಲಿದೆ. ವಿಶೇಷವಾಗಿ ವಾಹನ ಚಾಲನೆ ಮತ್ತು ಪ್ರಯಾಣದ ವಿಷಯದಲ್ಲಿ ಕೆಲವು ರಾಶಿಯವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜ್ಯೋತಿಷ್ಯ ತಜ್ಞರು ಎಚ್ಚರಿಸಿದ್ದಾರೆ. ಆ ರಾಶಿಗಳು ಯಾವುವು ಮತ್ತು ಯಾವ ರೀತಿಯ ಜಾಗ್ರತೆ ವಹಿಸಬೇಕು ಎಂಬ ವಿವರ ಇಲ್ಲಿದೆ: ಮೇಷ ರಾಶಿ…

Read More

ಮಂಗಳೂರು ಯುವಕನ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​: ಪ್ರೀತಿಸಿದ ಯುವತಿಯಿಂದಾದ ಅವಮಾನಕ್ಕೆ ನೊಂದು ಆತ್ಮಹತ್ಯೆ?

ಮಂಗಳೂರು, ಏಪ್ರಿಲ್​​ 12: ಮೂಡುಶೆಡ್ಡೆಯ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್(22) ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್​ಟ್​ ಸಿಕ್ಕಿದೆ. ಪ್ರೀತಿಸಿದ ಯುವತಿಯ ಕಿರುಕುಳವೇ ಸಾವಿಗೆ ಕಾರಣ ಎನ್ನಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಯುವತಿ ಮತ್ತು ಆಕೆಯ ತಾಯಿ ಸೇರಿದಂತೆ ಮೂವರ ವಿರುದ್ಧ ಮಂಗಳೂರಿನ (Mangaluru) ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಚ್ 21ರಂದು ಈದ್ ಹಬ್ಬದ ದಿನವೇ ಆಶಿಕ್​​ ಆತ್ಮಹತ್ಯೆ ಮಾಡಿಕೊಂಡಿದ್ದರು. ಆರಂಭದಲ್ಲಿ ಯಾವುದೋ ಕಾರಣಕ್ಕೆ ಮನನೊಂದು ಆಶಿಕ್​​ ಈ ನಿರ್ಧಾರ ಕೈಗೊಂಡಿರಬಹುದು ಎಂದು ಭಾವಿಸಲಾಗಿತ್ತಾದರೂ, ಮೊಬೈಲ್​​…

Read More

ಅಪ್ಪಾಜಿ ಇಲ್ಲದೇ 20 ವರ್ಷ ಆಗಿದೆ ಅಂತ ನಂಬೋಕೆ ಆಗಲ್ಲ: ರಾಘವೇಂದ್ರ ರಾಜ್​ಕುಮಾರ್

ಮೇರುನಟ ಡಾ. ರಾಜ್​ಕುಮಾರ್ ಅವರ ಪುಣ್ಯಸ್ಮರಣೆ (Death Anniversary) ಪ್ರಯುಕ್ತ ಇಂದು (ಏಪ್ರಿಲ್ 12) ಕುಟುಂಬದವರು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಭಿಮಾನಿಗಳು ಕೂಡ ಅಪಾರ ಸಂಖ್ಯೆಯಲ್ಲಿ ಬಂದು ಅಣ್ಣಾವ್ರಿಗೆ ನಮಿಸಿದ್ದಾರೆ. ರಾಜ್​ಕುಮಾರ್ (Dr Rajkumar) ನಿಧನರಾಗಿ 20 ವರ್ಷಗಳು ಕಳೆದಿವೆ. ಆ ಬಗ್ಗೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದ್ದಾರೆ. ‘20 ವರ್ಷ ಆಯ್ತು ಅಂತ ನಂಬೋಕೆ ಆಗುತ್ತಿಲ್ಲ. ಅವರು ನಮ್ಮ ಜೊತೆ ಇನ್ನೂ ಇದ್ದಾರೆ ಅಂತ ಅಂದುಕೊಂಡಿದ್ದೇವೆ. ಅವರು ಸಂಪಾದನೆ ಮಾಡಿದ್ದು ಅಭಿಮಾನಿಗಳನ್ನು ಮಾತ್ರ. ಇಷ್ಟು ವರ್ಷ…

Read More

ದೇವಸ್ಥಾನದೊಳಗೆ ಹಣ ಕದ್ದು ಅಲ್ಲೇ ನಿದ್ರೆಗೆ ಜಾರಿದ ಕಳ್ಳ

ಚೆನ್ನೈ, ಏಪ್ರಿಲ್ 12: ತಮಿಳುನಾಡಿನ ಅಂಬೂರಿನ ಕುಡಪ್ಪನಮೂಡಿನಲ್ಲಿರುವ ಕುಳುವಲ್ವತ್ತಂ ಶ್ರೀ ಭಗತಿ ದೇವಸ್ಥಾನ(Temple)ದಲ್ಲಿ ಶನಿವಾರ ಬೆಳಗ್ಗೆ ಒಂದು ವಿಚಿತ್ರ ದೃಶ್ಯ ಕಂಡುಬಂದಿದೆ. ದೇವಸ್ಥಾನದ ಕಚೇರಿಗೆ ಕನ್ನ ಹಾಕಿ ಹಣ ಕದ್ದ ಕಳ್ಳನೊಬ್ಬ, ಅಲ್ಲಿಂದ ಪರಾರಿಯಾಗುವ ಬದಲು ಸುಸ್ತಾಗಿ ಅಲ್ಲೇ ಗಾಢ ನಿದ್ರೆಗೆ ಜಾರಿದ್ದ. ದಿನದಂತೆ ಶನಿವಾರ ಬೆಳಗ್ಗೆ 5.30ಕ್ಕೆ ದೇವಸ್ಥಾನದ ಸಮಿತಿ ಸದಸ್ಯರು ಕಚೇರಿಗೆ ಬಂದಾಗ, ಬಾಗಿಲು ಮುರಿದಿರುವುದನ್ನು ಕಂಡು ಆತಂಕಕ್ಕೊಳಗಾದರು. ಯಾವುದೋ ದೊಡ್ಡ ಕಳ್ಳತನವಾಗಿದೆ ಎಂದು ಒಳಗೆ ಹೋಗಿ ನೋಡಿದವರಿಗೆ ಆಶ್ಚರ್ಯ ಕಾದಿತ್ತು. ಕಚೇರಿಯ ಹಣದ…

Read More

ಮೈದಾನಕ್ಕಿಳಿಯದಿದ್ದರೂ ನಿತೀಶ್ ರಾಣಾಗೆ ಬಿತ್ತು ಭಾರೀ ದಂಡ..!

IPL 2026: ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ಆಟಗಾರ ನಿತೀಶ್ ರಾಣಾ (Nitish Rana) ಅವರು ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಕಾರಣಕ್ಕಾಗಿ ಪಂದ್ಯದ ಸಂಭಾವನೆಯ ಶೇಕಡಾ 25ರಷ್ಟು ದಂಡಕ್ಕೆ ಗುರಿಯಾಗಿದ್ದಾರೆ. ಇದರೊಂದಿಗೆ ಅವರಿಗೆ ಒಂದು ‘ಡಿಮೆರಿಟ್’ ಪಾಯಿಂಟ್ ಕೂಡ ನೀಡಲಾಗಿದೆ. ಕುತೂಹಲಕಾರಿ ವಿಷಯ ಎಂದರೆ ಈ ಪಂದ್ಯದಲ್ಲಿ ನಿತೀಶ್ ರಾಣಾ ಕಣಕ್ಕಿಳಿದಿರಲಿಲ್ಲ ಎಂಬುದು. ಏಪ್ರಿಲ್ 11, 2026 ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ…

Read More

ಮದುವೆ ಬಳಿಕ ‘ರಣಬಾಲಿ’ ಚಿತ್ರೀಕರಣಕ್ಕೆ ಬಂದ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಸಲುವಾಗಿ ಇಷ್ಟು ದಿನ ಬ್ರೇಕ್ ಪಡೆದುಕೊಂಡಿದ್ದರು. ಈಗ ಅವರ ‘ರಣಬಾಲಿ’ (Ranabaali) ಸಿನಿಮಾದ ಚಿತ್ರೀಕರಣಕ್ಕೆ ಮರಳಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ಚಿತ್ರತಂಡದ ಜೊತೆ ಅವರು ತೆಗೆದುಕೊಂಡ ಫೋಟೋ ವೈರಲ್ ಆಗಿದೆ. ವಿವಾಹದ ನಂತರ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹಾಜರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಚಿತ್ರತಂಡದವರು ಅತ್ಯಂತ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ. ಶೂಟಿಂಗ್ ಸೆಟ್‌ನಲ್ಲಿ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ…

Read More