ಕಸದ ರಾಶಿಗೆ ರಸ್ತೆ, ಫುಟ್ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಬೆಂಗಳೂರು, ಏಪ್ರಿಲ್ 12: ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳೀಯ ನಿವಾಸಿಗಳಾದ ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ನಾಗರಿಕರು ತಮ್ಮ ಸ್ವಂತ ವೆಚ್ಚದಲ್ಲಿ ಜೆಸಿಬಿ ಕರೆಸಿ ಕಸವನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಸದ ರಾಶಿಗಳಿಂದ…