ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ – Kannada News | Bengaluru temperature: Light rain in south part of Karnataka including Bengaluru
ಬೆಂಗಳೂರು, ತುಮಕೂರು ಸೇರಿ ಹಲವೆಡೆ ಮಳೆಯ ಸಾಧ್ಯತೆ ಬೆಂಗಳೂರು, ಡಿಸೆಂಬರ್ 31: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನ ತಾಪಮಾನದಲ್ಲಿ ಅಷ್ಟೇನೂ ಸುಧಾರಣೆಯಿಲ್ಲದ ಕಾರಣ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ವರ್ಷಾಂತ್ಯದ ವರೆಗೂ ರಾಜ್ಯದಲ್ಲಿ ಒಣ ಹವೆಯೇ ಇರಲಿದ್ದು, ಹೊಸ ವರ್ಷಕ್ಕೆ ವರುಣಾರ್ಭಟವಿರಬಹುದೆಂದು…