Headlines

Bengaluru Air Quality: ಮೈಸೂರು ಸೇರಿದಂತೆ ಬೆಂಗಳೂರು, ಬೆಳಗಾವಿಯ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಮಾರ್ಚ್​ 21: ಹಲವಾರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಾಯು ಗುಣಮಟ್ಟ (Bengaluru Air Quality) ಕುಸಿತ ಕಂಡಿತ್ತು. ಆದರೆ ಇಂದು ಹಲವು ಭಾಗಗಳಲ್ಲಿ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತಿದೆ. ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ಹಲವೆಡೆ ಇಂದು ವಾಯು ಗುಣಮಟ್ಟ 150ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 140ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ,…

Read More

ಊಟ ಮಾಡುವಾಗ ಅಥವಾ ಊಟವಾದ ಎಷ್ಟು ಹೊತ್ತಿನ ನಂತರ ನೀರು ಕುಡಿಯಬೇಕು? ಆಯುರ್ವೇದ ಏನು ಹೇಳುತ್ತದೆ?

ಆಹಾರ ಮತ್ತು ನೀರು (Water) ಎರಡೂ ಕೂಡ ದೇಹದ ಆರೋಗ್ಯಕ್ಕೆ ಅತ್ಯಂತ ಮುಖ್ಯ. ಆದರೆ ಅವುಗಳನ್ನು ಯಾವ ಸಮಯದಲ್ಲಿ, ಹೇಗೆ ಸೇವನೆ ಮಾಡಬೇಕು ಎಂದು ತಿಳಿದಿರಬೇಕಾಗುತ್ತದೆ. ಇಲ್ಲವಾದಲ್ಲಿ ಈ ರೀತಿಯ ಅಭ್ಯಾಸ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಯುರ್ವೇದದ ಪ್ರಕಾರ, ಆಹಾರ ಸೇವಿಸುವ ಸಮಯ ಮತ್ತು ನೀರು ಕುಡಿಯುವ ಸಮಯವು ಜೀರ್ಣಕ್ರಿಯೆಗೆ (Digestion) ಬಹಳ ಮಹತ್ವದ್ದಾಗಿದ್ದು ಇದು ಸರಿಯಾಗಿ ಆಗದಿದ್ದಲ್ಲಿ ಹೊಟ್ಟೆ ಭಾರವಾಗುವುದು, ಅನಿಲ (ಗ್ಯಾಸ್) ಉಂಟಾಗುವುದು, ಅಜೀರ್ಣ, ಹೊಟ್ಟೆ ಉಬ್ಬುವುದು ಅಥವಾ ಆಸಿಡಿಟಿ ಮುಂತಾದ ಸಮಸ್ಯೆಗಳು…

Read More

Guddattu Vinayaka Temple: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ – Kannada News | Guddattus Jalahivasa Ganapathi: The Worlds Only Water Immersed Deity

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಡಿಭಾಗದಲ್ಲಿರುವ ಗುಡ್ಡಟ್ಟು ಗ್ರಾಮವು ಶ್ರೀ ವಿನಾಯಕ ದೇವಸ್ಥಾನದಿಂದಾಗಿ ಪ್ರಪಂಚದಾದ್ಯಂತ ಗಮನ ಸೆಳೆದಿದೆ. ಈ ದೇವಸ್ಥಾನವು ಹಲವು ಅಪರೂಪದ ವೈಶಿಷ್ಟ್ಯಗಳನ್ನು ಹೊಂದಿದ್ದು, ಗಣಪತಿ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ. ದೇವಸ್ಥಾನವು ಶಿರಿಹಾರ-ಗುಡ್ಡಟ್ಟು ರಸ್ತೆಯಲ್ಲಿದೆ. ಇಲ್ಲಿನ ವಿನಾಯಕ ದೇವರ ಮೂರ್ತಿಯು ಸ್ವಯಂಭೂ ರೂಪವಾಗಿದೆ. ಅಂದರೆ, ಇದನ್ನು ಯಾವುದೇ ಶಿಲ್ಪಿಯು ಕೆತ್ತದೆ, ಸಾವಿರಾರು ವರ್ಷಗಳ ಹಿಂದೆ ತಾನಾಗಿಯೇ ಕಲ್ಲಿನಿಂದ ಉದ್ಭವಿಸಿದೆ. ಇತರ ಸ್ವಯಂಭೂ ವಿಗ್ರಹಗಳಂತೆ ಇದು ಕೇವಲ ಬಂಡೆಯ ಆಕಾರದಲ್ಲಿಲ್ಲ, ಬದಲಾಗಿ ಸ್ಪಷ್ಟವಾದ ಗಣಪತಿಯ…

Read More

ಕೊಲೆ ಆರೋಪಿ ರೌಡಿಶೀಟರ್ ಜತೆ ವರ್ತೂರು ಇನ್ಸ್‌ಪೆಕ್ಟರ್ ಯೋಗಾನಂದ್ ದೋಸ್ತಿ: ಗಂಭೀರ ಆರೋಪ – Kannada News | Bangalore Crime: Inspector Yoganand Under Fire for Alleged Collusion in Revanth Murder

, ವರ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಬೆಂಗಳೂರು, ಫೆ.21: ನಗರದ ವರ್ತೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ (Varthur Police corruption) ಯೋಗಾನಂದ್ ಅವರು ರೌಡಿಶೀಟರ್‌ಗಳೊಂದಿಗೆ ಕೈಜೋಡಿಸಿ, ಕೊಲೆ ಪ್ರಕರಣವೊಂದನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ ಆತಂಕಕಾರಿ ಆರೋಪ ಕೇಳಿಬಂದಿದೆ. ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣದ ತನಿಖೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ಸಂತ್ರಸ್ತ ಕುಟುಂಬ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. 2024ರ ಸೆಪ್ಟೆಂಬರ್ 18ರಂದು ತಮಿಳುನಾಡಿನ ಬಾಗಲೂರಿನಲ್ಲಿ 24 ವರ್ಷದ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್‌ನನ್ನು…

Read More

Pulse Polio 2026: ಬೆಂಗಳೂರಿನಲ್ಲಿ ಪಲ್ಸ್ ಪೋಲಿಯೋ ಅಭಿಯಾನದ ಮೊದಲ ದಿನವೇ 11 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ! – Kannada News | Bengaluru Pulse Polio Drive: Over 11 Lakh Kids Immunized on Day 1, Records 96.4 percent Coverage

ಬೆಂಗಳೂರು, ಜೂನ್ 29: ರಾಷ್ಟ್ರೀಯ ಪಲ್ಸ್ ಪೋಲಿಯೋ ಇಮ್ಯುನೈಸೇಶನ್ ಕಾರ್ಯಕ್ರಮದ ಮೊದಲ ದಿನವಾದ ಭಾನುವಾರ ಬೃಹತ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ಐದು ವರ್ಷದೊಳಗಿನ ಒಟ್ಟು 11,06,535 ಮಕ್ಕಳಿಗೆ ಯಶಸ್ವಿಯಾಗಿ ಪೋಲಿಯೋ ಹನಿಗಳನ್ನು ಹಾಕಲಾಗಿದ್ದು, ಮೊದಲ ದಿನವೇ ಶೇ 96.4 ರಷ್ಟು ಗುರಿ ತಲುಪಲಾಗಿದೆ. ಜೂನ್ 28 ರಿಂದ ಜುಲೈ 1 ರವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಈ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಒಟ್ಟು 11,47,872 ಮಕ್ಕಳಿಗೆ…

Read More

ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂ ಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್!

ರಾಮನಗರ, ಜನವರಿ 01: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ತಡರಾತ್ರಿ ಭಯಾನಕ ಘಟನೆಯೊಂದು ನಡೆದಿದೆ. ಗ್ರಾಮದ ಮಧ್ಯದಲ್ಲಿ ವಾಮಾಚಾರ ಮಾಡಲಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರಿಗೆ ಆಘಾತ ಎದುರಾಗಿದೆ. ರಸ್ತೆಯಲ್ಲಿ ಅರಿಶಿನ, ಕುಂಕುಮ, ನಿಂಬೆಹಣ್ಣು, ದೀಪ ಇಟ್ಟು ಪೂಜೆ ಮಾಡಲಾಗಿದೆ. ತಮಾಷೆಗೆ ಮಾಡಿದ್ದಾರಾ ಅಥವಾ ಉದ್ದೇಶ ಪೂರ್ವಕವಾಗಿ ಮಾಡಿದ್ದಾರಾ ಎಂಬುವುದು ತಿಳಿದುಬಂದಿಲ್ಲ. ಸದ್ಯ ಇದರಿಂದಾಗಿ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಪೊಲೀಸ್​​ ತನಿಖೆಗೆ ಜನರು ಒತ್ತಾಯಿಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ…

Read More

Viral Video: ಕಾಲೇಜಿಗೆಂದು ಹೋದ ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆ; ವಿಡಿಯೋ ವೈರಲ್​ – Kannada News | Viral Hotel Room Drama: Mother Catches Daughter with Boyfriend; Video Sparks Debate

ಮಗಳು ಲಾಡ್ಜ್‌ನಲ್ಲಿ ಪ್ರಿಯಕರನ ಜೊತೆ ಪತ್ತೆImage Credit source: Twitter “ಅಮ್ಮಾ ಕಾಲೇಜಿಗೆ ಹೋಗಿ ಬರುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟ ಮಗಳೊಬ್ಬಳು, ದಾರಿ ಮಧ್ಯೆ ಪ್ರಿಯಕರನ ಕೈ ಹಿಡಿದು ಹೋಟೆಲ್ ರೂಮ್ ಸೇರಿದ ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಗ್ರಾಮಸ್ಥರ ನೆರವಿನಿಂದ ಮಗಳು ಎಲ್ಲಿದ್ದಾಳೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ಆಕೆಯ ತಾಯಿ ಸ್ಥಳಕ್ಕೆ ಧಾವಿಸಿದ್ದು, ಅಲ್ಲಿ ನಡೆದ ಹೈಡ್ರಾಮಾ ಈಗ ಎಲ್ಲೆಡೆ ವೈರಲ್ ಆಗಿದೆ. ಲಾಡ್ಜ್‌ನಲ್ಲಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ…

Read More

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್! – Kannada News | Home Minister Parameshwara on JJ Nagar Stone Pelting, Juvenile Arrest

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರು. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅವರು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು…

Read More

ಸರ್ಕಾರಿ ಮಕ್ಕಳಿಗೆ ‘ಸರ್ಪ್ರೈಸ್’ ಕೊಟ್ಟ ಸಚಿವ ಜಮೀರ್: ಸ್ವಂತ ಖರ್ಚಿನಲ್ಲಿ 60 ವಿದ್ಯಾರ್ಥಿಗಳಿಗೆ ಹೆಲಿಕಾಪ್ಟರ್ ರೈಡ್ – Kannada News | Hampi Utsav Joy: 60 Govt School Kids Experience Helicopter Ride, Thanks to Minister

ಬಳ್ಳಾರಿ, ಫೆ.14: ವಿಶ್ವವಿಖ್ಯಾತ ಹಂಪಿ ಉತ್ಸವವು ಈ ಬಾರಿ ಸರ್ಕಾರಿ ಶಾಲಾ ಮಕ್ಕಳ ಪಾಲಿಗೆ ಅವಿಸ್ಮರಣೀಯ ಕ್ಷಣವಾಗಿದೆ. ದೂರದಿಂದ ಹೆಲಿಕಾಪ್ಟರ್ ನೋಡಿ ಸಂಭ್ರಮಿಸುತ್ತಿದ್ದ ಪುಟಾಣಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಕಾಶದಲ್ಲಿ ಹಾರಾಡುವ ಅವಕಾಶ ಮಾಡಿಕೊಡುವ ಮೂಲಕ ದೊಡ್ಡ ‘ಸರ್ಪ್ರೈಸ್’ ನೀಡಿದ್ದಾರೆ. ಕಮಲಾಪುರದ ಮಯೂರ ಹೋಟೆಲ್ ಆವರಣದಲ್ಲಿ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿತ್ತು. ಇದನ್ನು ನೋಡಲು ಸುತ್ತಮುತ್ತಲಿನ ಸರ್ಕಾರಿ ಶಾಲಾ ಮಕ್ಕಳು ಕುತೂಹಲದಿಂದ ಬಂದಿದ್ದರು.ಈ ವೇಳೆ ಸ್ಥಳದಲ್ಲಿದ್ದ ಸಚಿವ ಜಮೀರ್ ಅಹಮದ್ ಖಾನ್…

Read More

ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಗೆ ಅಲೋಕ್ ಕುಮಾರ್ ದಿಟ್ಟ ಕ್ರಮ: ಕೈದಿಗಳ ಭೇಟಿಗೆ ಹೊಸ ರೂಲ್ಸ್

ಬೆಂಗಳೂರು, (ಮಾರ್ಚ್ 09): ಕರ್ನಾಟಕದ ಜೈಲುಗಳಲ್ಲಿ ( Karnataka jail) ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (Alok Kumar) ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಜೈಲು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಇನ್ನು ಜೈಲಿನಲ್ಲಿ ಕೈದಿಗಳ ಉಟೋಪಚಾರದಲ್ಲೂ ಸಹ ಕೆಲ ಮಹತ್ವದ ಬದಲಾವಣೆ ತಂದಿದ್ದು, ಇದೀಗ ಜೈಲುಗಳಲ್ಲಿರುವ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್ ಮಾಡಿದ್ದಾರೆ. ಕೈದಿಗಳಿಗೆ ಗಂಭೀರ…

Read More