IND vs ENG: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಇಂಗ್ಲೆಂಡ್ ಪ್ಲೇಯಿಂಗ್ 11 ಪ್ರಕಟ – Kannada News | England’s Squad for 1st ODI vs India: Bethell and Duckett Open, Archer Returns
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾವನ್ನು ಹೀನಾಯವಾಗಿ ಮಣಿಸಿದ್ದ ಆತಿಥೇಯ ಇಂಗ್ಲೆಂಡ್ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಜುಲೈ 14 ರಂದು ಬರ್ಮಿಂಗ್ಹ್ಯಾಮ್‌ನ ಐತಿಹಾಸಿಕ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯಲಿದೆ. ಈ ಹೈ-ವೋಲ್ಟೇಜ್ ಪಂದ್ಯಕ್ಕೆ ಇನ್ನು ಒಂದು ದಿನ ಬಾಕಿ ಇರುವಂತೆಯೇ ಆತಿಥೇಯ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ತನ್ಮ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ನಾಯಕ ಹ್ಯಾರಿ ಬ್ರೂಕ್ ನೇತೃತ್ವದ…