10,000 ರೂಗಿಂತ ಹೆಚ್ಚಿನ ಮೊತ್ತದ ಯುಪಿಐ, ಐಎಂಪಿಎಸ್ ಪೇಮೆಂಟ್ 1 ಗಂಟೆ ವಿಳಂಬ? ಆರ್ಬಿಐ ಹೊಸ ಕ್ರಮಕ್ಕೆ ಯೋಜನೆ
ನವದೆಹಲಿ, ಏಪ್ರಿಲ್ 10: ಆನ್ಲೈನ್ ವಂಚನೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಡಿಜಿಟಲ್ ಪೇಮೆಂಟ್ ಸಿಸ್ಟಂನಲ್ಲಿ (Digital payment system) ಸರ್ಕಾರ ಒಂದಷ್ಟು ಮಾರ್ಪಾಡು ಮಾಡಲು ಹೊರಟಿದೆ. ಡಿಜಿಟಲ್ ಪೇಮೆಂಟ್ ಅನ್ನು ಹೆಚ್ಚು ಸುರಕ್ಷಿತವಾಗಿಸಲು ಅಧಿಕ ಮೌಲ್ಯದ ವಹಿವಾಟುಗಳಿಗೆ ಒಂದು ಗಂಟೆ ವಿಳಂಬ ಪಾವತಿ ವ್ಯವಸ್ಥೆ ತರುವ ಪ್ರಸ್ತಾಪವ ಆರ್ಬಿಐ ಮುಂದಿದೆ ಎಂದು ವರದಿಗಳು ಹೇಳುತ್ತಿವೆ. ಈ ಪ್ರಸ್ತಾಪದ ಪ್ರಕಾರ ಯುಪಿಐ ಮತ್ತು ಐಎಂಪಿಎಸ್ ಇತ್ಯಾದಿ ಮೂಲಕ ಮಾಡಲಾಗುವ 10,000 ರೂಗೂ ಅಧಿಕ ಮೊತ್ತದ ಪೇಮೆಂಟ್ಗಳು ರಿಯಲ್ ಟೈಮ್ನಲ್ಲಿ ಸಂದಾಯವಾಗುವುದಿಲ್ಲ….