ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ – Kannada News | Hhubballi Case: CM Siddaramaiah Announces special law to prevent honor killings
ಬೆಂಗಳೂರು, (ಜನವರಿ 04): ಹುಬ್ಬಳ್ಳಿಯಲ್ಲಿ (hubballi) ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾ ಹತ್ಯೆ (honour killing) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು (ಜನವರಿ 4) ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ…