Bhagavad Gita: ಭಗವದ್ಗೀತೆಯನ್ನು ಓದುವುದರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News | Bhagavad Gita: Do you know how many benefits there are from reading the Bhagavad Gita?
ಶ್ರೀಮದ್ ಭಗವದ್ಗೀತೆ (Bhagavad Gita) ಹಿಂದೂ ಧರ್ಮದ ಪವಿತ್ರ ಗ್ರಂಥವಾಗಿದೆ. 18 ಅಧ್ಯಾಯಗಳು ಮತ್ತು 700 ಶ್ಲೋಕಗಳನ್ನು ಒಳಗೊಂಡಿರುವ ಭಗವದ್ಗೀತೆ ಅಪಾರ ಮಹತ್ವವನ್ನು ಹೊಂದಿದೆ. ಈ ಪ್ರತಿ ಅಧ್ಯಾಯಗಳು ಆತ್ಮ, ಪರಮಾತ್ಮ, ಭಕ್ತಿ, ಕರ್ಮ ಮತ್ತು ಜೀವನದ ಸಾರವನ್ನು ಒಳಗೊಂಡಿದೆ. ಇಂತಹ ಪವಿತ್ರ ಭಗವದ್ಗೀತೆ ಕೇವಲ ಧಾರ್ಮಿಕ ಗ್ರಂಥವಲ್ಲ ನಮ್ಮ ಜೀವನಕ್ಕೆ ಮಾರ್ಗಸೂಚಿಯಿದ್ದಂತೆ. ಹೌದು ಪ್ರತಿನಿತ್ಯ ಗೀತೆಯನ್ನು ಓದುವ ಮೂಲಕ ಯಶಸ್ವಿ, ಸಂತೋಷದಾಯಕ ಜೀವನವನ್ನು ಹೇಗೆ ನಡೆಸುವುದು ಎಂಬುದನ್ನು ಕಲಿಯುವುದರ ಜೊತೆಗೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ಈ…