Vastu Tips: ಮನೆಯಲ್ಲಿ ತಪ್ಪಿಯೂ ಈ ಜಾಗದಲ್ಲಿ ಹಣ ಇಡಬೇಡಿ, ಸಾಲ ಹೆಚ್ಚಾಗಬಹುದು – Kannada News | Vastu Tips for Money: Avoid Financial Loss and Attract Wealth

ಹಿಂದೂ ಧರ್ಮದಲ್ಲಿ ವಾಸ್ತು ಶಾಸ್ತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಅನೇಕ ಜನರು ವಾಸ್ತು ಶಾಸ್ತ್ರದ ಪ್ರಕಾರ ತಮ್ಮ ಮನೆಗಳನ್ನು ನಿರ್ಮಿಸುತ್ತಾರೆ. ವಾಸ್ತುವು ಅನೇಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತದೆ ಎಂದು ನಂಬಲಾಗಿದೆ. ಗಳಿಸಿದ ಹಣವು ಬಾಳಿಕೆ ಬರದಿರಲು ಒಂದು ಕಾರಣವಿದೆ ಎಂದು ವಾಸ್ತು ಶಾಸ್ತ್ರವು ಹೇಳುತ್ತದೆ. ಅನಿರೀಕ್ಷಿತ ಆರ್ಥಿಕ ತೊಂದರೆಗಳು ಮತ್ತು ಹೆಚ್ಚುತ್ತಿರುವ ಸಾಲಗಳು ವಾಸ್ತು ದೋಷಗಳಿಂದ ಉಂಟಾಗುತ್ತವೆ ಎಂದು ಹೇಳಲಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಕೆಲವು ಸ್ಥಳಗಳಲ್ಲಿ ಹಣವನ್ನು ಇಡಲೇಬಾರದು. ಯಾಕೆಂದರೆ ಅಂತಹ ಸ್ಥಳಗಳಲ್ಲಿ ಹಣವನ್ನು ಇಟ್ಟರೆ ಅದು ಎಂದಿಗೂ ನಿಮ್ಮಲ್ಲಿ ಉಳಿಯುವುದಿಲ್ಲ. ಜೊತೆಗೆ ಮನೆಯಲ್ಲಿ ಸಮೃದ್ಧಿ ಇರುವುದಿಲ್ಲ. ಆದ್ದರಿಂದ ವಾಸ್ತುವು ಹೇಳುವ ಸೂಚನೆಗಳನ್ನು ನಿಖರವಾಗಿ ಪಾಲಿಸಿದರೆ ಸಾಕು.

ಇದನ್ನೂ ಓದಿ: ಪ್ರಪಂಚದ ಏಕೈಕ ಜಲಾಧಿವಾಸ ಗಣಪ; ಗುಡ್ಡಟ್ಟು ವಿನಾಯಕ ದೇವಸ್ಥಾನದ ಇಂಟರೆಸ್ಟಿಂಗ್​ ಸಂಗತಿ ಇಲ್ಲಿದೆ

ವಾಸ್ತು ಶಾಸ್ತ್ರದ ಪ್ರಕಾರ ನೀವು ಎಂದಿಗೂ ಶೌಚಾಲಯ ಅಥವಾ ಸ್ನಾನಗೃಹದ ಪಕ್ಕದ ಗೋಡೆಯ ಮೇಲಿನ ತಿಜೋರಿಯಲ್ಲಿ ಹಣವನ್ನು ಇಡಬಾರದು. ಇದಲ್ಲದೇ ಮನೆಯಲ್ಲಿರುವ ತಿಜೋರಿಯು ಮೂಲೆಯಲ್ಲಿ ಅಥವಾ ಕತ್ತಲೆಯ ಸ್ಥಳದಲ್ಲಿ ಇರಬಾರದು. ಇದು ಮನೆಯಲ್ಲಿ ವಾಸ್ತು ದೋಷಗಳನ್ನು ಉಂಟುಮಾಡುತ್ತದೆ. ಎಲ್ಲಿ ಸ್ವಚ್ಛತೆ ಇರುತ್ತದೆಯೋ, ಆ ಮನೆಗೆ ಯಾವಾಗಲೂ ಲಕ್ಷ್ಮಿ ದೇವಿಯ ಆಶೀರ್ವಾದವಿರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಆದ್ದರಿಂದ ಯಾವಾಗಲೂ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಎಟಿಎಂಗಳಲ್ಲಿ ಮಾರ್ಚ್ ನಂತರ 500 ರೂ ನೋಟು ಸಿಗಲ್ವಾ? ಸರ್ಕಾರದ ಸ್ಪಷ್ಟನೆ ಇದು – Kannada News | Viral news of Rs 500 notes stopping in 2026, govt clarifies again

ನವದೆಹಲಿ, ಜನವರಿ 4: ಭಾರತೀಯ ರಿಸರ್ವ್ ಬ್ಯಾಂಕ್ (RBI) 500 ರೂ ನೋಟುಗಳ ಚಲಾವಣೆ ಕಡಿಮೆ ಮಾಡುತ್ತದೆ. ಮುಂಬರುವ ದಿನಗಳಲ್ಲಿ ಎಟಿಎಂಗಳಲ್ಲಿ 500 ರೂ ನೋಟುಗಳು ಸಿಕ್ಕೋದಿಲ್ಲ ಎಂದು ತಿಳಿಸುತ್ತಿರುವ ಕೆಲ ಪೋಸ್ಟ್​ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಸರ್ಕಾರ 500 ರೂ ನೋಟುಗಳ ಮುದ್ರಣ ನಿಲ್ಲಿಸಿ, 100 ರೂ ನೋಟುಗಳ ಚಲಾವಣೆ ಮಾತ್ರ ಮುಂದುವರಿಸಬಹುದು ಎನ್ನುವಂತಹ ಸುದ್ದಿಗಳು ಕೆಲ ತಿಂಗಳ ಹಿಂದೆ ಹರಿದಾಡುತ್ತಿದ್ದವು. ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿರುವ ಈ ಸುದ್ದಿಗಳನ್ನು ಸರ್ಕಾರ ಅಲ್ಲಗಳೆದಿದೆ. ಇವು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ.

ಸರ್ಕಾರದ ಪಿಐಬಿ ಇಲಾಖೆಯ ಫ್ಯಾಕ್ಟ್ ಚೆಕಿಂಗ್ ಘಟಕವು ಎಕ್ಸ್​ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿದೆ. ಎಟಿಎಂಗಳಲ್ಲಿ 500 ರೂ ನೋಟುಗಳ ವಿತರಣೆ ನಿಲ್ಲಿಸಲಾಗುವುದು ಎನ್ನುವುದೆಲ್ಲಾ ಸುಳ್ಳು. ಆರ್​ಬಿಐ ಇಂಥ ಯಾವುದೇ ಪ್ರಕಟಣೆ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಪಿಐಬಿ ಫ್ಯಾಕ್ಟ್ ಚೆಕ್ ತಂಡದ ಟ್ವೀಟ್

ಇದನ್ನೂ ಓದಿ: ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ?

‘500 ರೂ ನೋಟುಗಳು ಚಲಾವಣೆಯಲ್ಲಿ ಮುಂದುವರಿಯುತ್ತವೆ. ಎಲ್ಲಾ ರೀತಿಯ ವಹಿವಾಟುಗಳಲ್ಲಿ ಅದನ್ನು ಮುಕ್ತವಾಗಿ ಬಳಸಬಹುದು. ಇಂಥ ಸುದ್ದಿಗಳನ್ನು ನಂಬುವ ಮುನ್ನ ಆ ಮಾಹಿತಿ ಅಧಿಕೃತ ಮೂಲಗಳಿಂದ ಬಂದಿದೆಯಾ ಎಂಬುದನ್ನು ಮೊದಲು ಖಚಿತಪಡಿಸಿಕೊಳ್ಳಿ ಎಂದು ಪಿಐಬಿ ತನ್ನ ಟ್ವೀಟ್​ನಲ್ಲಿ ಜನರನ್ನು ಎಚ್ಚರಿಸಿದೆ.

ಕೆಲ ತಿಂಗಳ ಹಿಂದೆ 500 ರೂ ನೋಟುಗಳನ್ನು ಅಮಾನ್ಯ ಮಾಡಲಾಗುವುದು ಎನ್ನುವ ಸುದ್ದಿಯೂ ಇತ್ತು. ಆಗಲೂ ಕೂಡ ಸರ್ಕಾರದ ವತಿಯಿಂದ ಹಲವು ಬಾರಿ ಸ್ಪಷ್ಟನೆ ನೀಡಿ, ಅದು ಸುಳ್ಳು ಸುದ್ದಿ ಎಂದು ತಿಳಿಸಲಾಗಿತ್ತು. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರೂ ಕೂಡ ಕೆಲ ತಿಂಗಳ ಹಿಂದೆ ಸಂಸತ್​ನಲ್ಲಿ ಈ ವಿಚಾರವಾಗಿ ಮಾತನಾಡಿ, 500 ರೂ ನೋಟುಗಳನ್ನು ಅಮಾನ್ಯ ಮಾಡಲಾಗುವುದಿಲ್ಲ ಎಂದಿದ್ದರು. ಎಟಿಎಂಗಳಲ್ಲಿ 100 ರೂ, 200 ರೂಗಳಂತೆ 500 ರೂ ನೋಟುಗಳನ್ನೂ ವಿತರಿಸುವುದು ಮುಂದುವರಿಯುತ್ತದೆ ಎಂದಿದ್ದರು.

ಇದನ್ನೂ ಓದಿ: ಆಧಾರ್ ಜೊತೆ ಪಾನ್ ಲಿಂಕ್ ಮಾಡಲು ಡೆಡ್​ಲೈನ್ ಮುಗೀತು? ಮತ್ತೆ ಲಿಂಕ್ ಮಾಡಬಹುದಾ? ಮುಂದೇನಾಗಬಹುದು?

ದರೂ ಕೂಡ ಕೆಲ ಕಿಡಿಕೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಇಂತಹ ಪೋಸ್ಟ್​ಗಳನ್ನು ಹಾಕುವುದು ಮುಂದುವರಿದೇ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ; ಕಾರಣ ಕೇಳಿದರೆ ಶಾಕ್ ಆಗ್ತೀರಾ! – Kannada News | Bengaluru Father Poisons Specially Abled Son Over Treatment Costs

ಚಿಕಿತ್ಸೆಗೆ ಹಣವಿಲ್ಲವೆಂದು ವಿಶೇಷಚೇತನ ಮಗನಿಗೇ ವಿಷ ಹಾಕಿದ ತಂದೆ!

ಬೆಂಗಳೂರು, ಜನವರಿ 04: ಹೆತ್ತ ಮಕ್ಕಳನ್ನು ಸಾಕಲು ತಂದೆ-ತಾಯಿ ಕಷ್ಟ ಪಟ್ಟು ದುಡಿಯುತ್ತಾರೆ. ತಮಗೆಷ್ಟೇ ತೊಂದರೆಗಳಿದ್ದರೂ ಮಕ್ಕಳ ಮುಖ ನೋಡಿಕೊಂಡು ನೋವು ನುಂಗಿಕೊಂಡಿರುತ್ತಾರೆ. ಆದರೆ ಇಲ್ಲೋರ್ವ ಪಾಪಿ ತಂದೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ಮಗನಿಗೇ ವಿಷ ಹಾಕಿರುವ ಅಮಾನವೀಯ ಘಟನೆ ಬೆಂಗಳೂರಲ್ಲಿ ನಡೆದಿದೆ. ವಿಶೇಷ ಚೇತನ ಮಗನ ಚಿಕಿತ್ಸೆಗಾಗಿ ಅಲೆದು ಬೇಸತ್ತಿದ್ದ ತಂದೆ, ಈ ಕುಕೃತ್ಯವೆಸಗಿದ್ದು, ಮಗು ಸಾವು-ಬದುಕಿನ ನಡುವೆ ಹೋರಾಡುತ್ತಿದೆ.

ಮಗುವಿನ ಸ್ಥಿತಿ ಗಂಭೀರ

ಬಾಗಲೂರು ನಿವಾಸಿಗಳಾದ ಸತ್ಯ ಮತ್ತು ಮುನಿಕೃಷ್ಣ ದಂಪತಿಯ ಮಗ ಜೋಯಲ್ ಹುಟ್ಟಿನಿಂದಲೇ ಗಂಭೀರ ಆರೋಗ್ಯ ಸಮಸ್ಯೆಗಳು ಹಾಗೂ ವಿಶೇಷ ಚೇತನತೆಯಿಂದ ಬಳಲುತ್ತಿದ್ದ. ಮಗುವಿನ ನಿರಂತರ ಚಿಕಿತ್ಸೆ, ಆಸ್ಪತ್ರೆಗಳ ಓಡಾಟ ಮತ್ತು ಹೆಚ್ಚುತ್ತಿರುವ ಖರ್ಚಿನಿಂದ ಮಾನಸಿಕವಾಗಿ ಕುಗ್ಗಿದ್ದ ತಂದೆ ಮುನಿಕೃಷ್ಣ ಈ ಕೃತ್ಯ ಎಸಗಿದ್ದಾನೆ.

ಡಿಸೆಂಬರ್ 22ರಂದು ನಡೆದ ಘಟನೆ ತಡವಾಗಿ ಬಹಿರಂಗವಾಗಿದೆ. ಮಗು ಬಾಯಲ್ಲಿ ನೊರೆ ಕಂಡು ತಾಯಿ ಹಾಗೂ ಅಜ್ಜಿ ಗಾಬರಿ ಆಗಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸದ್ಯ ಮಗು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದು ಸ್ಥಿತಿ ಗಂಭೀರವಾಗಿದೆ. ಘಟನೆ ಬಗ್ಗೆ ಪತ್ನಿ ಸತ್ಯ ನೀಡಿರುವ ದೂರಿನ ಅನ್ವಯ ಮುನಿಕೃಷ್ಣ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ ಪ್ರೀತಿಸಿದ ಹುಡುಗನ ವಶೀಕರಣ ಮಾಡುವುದಾಗಿ ನಂಬಿಸಿ ಯುವತಿಗೆ ಲಕ್ಷ ಲಕ್ಷ ವಂಚನೆ!

ಮಗನಿಗೆ ಕೀಟನಾಶಕ ಕುಡಿಸಿದ್ದನ್ನು ಒಪ್ಪಿಕೊಂಡ ತಂದೆ

ಅಮಾನವೀಯ ಕೃತ್ಯದ ಬಳಿಕ ಟಿವಿ9 ಜೊತೆ ಮಾತನಾಡಿರುವ ತಂದೆ ಮುನಿಕೃಷ್ಣ, ವಿಶೇಷಚೇತನನಾದ ನನ್ನ ಮಗನ ಚಿಕಿತ್ಸೆಗೆ ಹಣವಿಲ್ಲ. ನನಗೆ ಯಾರು ಸಪೋರ್ಟ್ ಮಾಡಿಲ್ಲ. ಇದಲ್ಲದೇ ವೈದ್ಯರೂ ಕೈಚೆಲ್ಲಿದ್ದರು. ನಾನು ಕೆಲಸಕ್ಕೆ ಹೋಗುವ ಕಡೆ ಗಿಡಗಳಿಗೆ ಔಷಧ ಹೊಡೆಯುತ್ತಿದ್ದರು. ಅವರ ಬಳಿ 50 ಮಿ.ಲಿ ಕಿಟನಾಶಕ ತಂದು ಮಗನ ಆಹಾರಕ್ಕೆ ಹಾಕಿದ್ದೆ. ಆತನ ಚಿಕಿತ್ಸೆಗೆ ಸಾಕಷ್ಟು ಸಾಲ ಮಾಡಿದ್ದೇನೆ. ಹೀಗಾಗಿಯೇ ವಿಷ ಹಾಕಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 11:25 am, Sun, 4 January 26

Source link

ದಕ್ಷಿಣ ಕೊರಿಯಾ ಅಧ್ಯಕ್ಷರ ಚೀನಾ ಭೇಟಿಗೂ ಮುನ್ನ, ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ಹಾರಿಸಿದ ಉತ್ತರ ಕೊರಿಯಾ – Kannada News | North Korea Conducts Fresh Missile Launches Into Eastern Waters

ದಕ್ಷಿಣ ಕೊರಿಯಾ, ಜನವರಿ 04: ದಕ್ಷಿಣ ಕೊರಿಯಾ(South Korea) ಅಧ್ಯಕ್ಷ ಲೀ ಜೇ-ಮ್ಯುಂಗ್ ಚೀನಾಗೆ ತೆರಳುವ ಮುನ್ನ ಉತ್ತರ ಕೊರಿಯಾ(North Korea) ದಕ್ಷಿಣ ಕೊರಿಯಾ ಸಮುದ್ರಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ಜತೆಗಿನ ಶೃಂಗಸಭೆಗಾಗಿ ಲೀ ಚೀನಾಗೆ ತೆರಳಿದ್ದಾರೆ. ಉತ್ತರ ಕೊರಿಯಾ ಭಾನುವಾರ ಬೆಳಿಗ್ಗೆ ಕ್ಷಿಪಣಿಯನ್ನು ಉಡಾಯಿಸಿದೆ ಎಂದು ದಕ್ಷಿಣ ಕೊರಿಯಾದ ಜಂಟಿ ಮುಖ್ಯಸ್ಥರು (ಜೆಸಿಎಸ್) ದೃಢಪಡಿಸಿದ್ದಾರೆ. ಕ್ಷಿಪಣಿಯ ವ್ಯಾಪ್ತಿ ಮತ್ತು ನಿಖರತೆಯ ವಿವರವಾದ ವಿಶ್ಲೇಷಣೆ ಇನ್ನೂ ನಡೆಯುತ್ತಿದೆ.

ಈ ಸಮಯದಲ್ಲಿ ಈ ಪರೀಕ್ಷೆಯನ್ನು ನಡೆಸುವ ಮೂಲಕ, ಉತ್ತರ ಕೊರಿಯಾ ತನ್ನ ಮಿಲಿಟರಿ ಉಪಸ್ಥಿತಿಯ ಬಗ್ಗೆ ದಕ್ಷಿಣ ಕೊರಿಯಾ ಮತ್ತು ಚೀನಾ ಎರಡಕ್ಕೂ ಬಲವಾದ ಸಂದೇಶವನ್ನು ಕಳುಹಿಸಲು ಪ್ರಯತ್ನಿಸಿದೆ. ಆಡಳಿತಾರೂಢ ವರ್ಕರ್ಸ್ ಪಾರ್ಟಿ ಶೀಘ್ರದಲ್ಲೇ ತನ್ನ ಗ್ರ್ಯಾಂಡ್ ಕಾಂಗ್ರೆಸ್ ಅನ್ನು ನಡೆಸಲಿದೆ, ಇದು ಉತ್ತರ ಕೊರಿಯಾದ ಪಕ್ಷದ ಅತ್ಯುನ್ನತ ಸಭೆಯಾಗಿದೆ.

ಈ ಸಭೆಯ ಮೊದಲು ಕಿಮ್ ಜಾಂಗ್ ಉನ್ ತನ್ನ ರಕ್ಷಣಾ ಸಾಧನೆಗಳನ್ನು ಸಾರ್ವಜನಿಕರಿಗೆ ಮತ್ತು ಪಕ್ಷಕ್ಕೆ ಪ್ರದರ್ಶಿಸಲು ಉದ್ದೇಶಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ 7.50ರ ಸುಮಾರಿಗೆ ಉತ್ತರ ಕೊರಿಯಾ ತನ್ನ ರಾಜಧಾನಿ ಪ್ಯೊಂಗ್ಯಾಂಗ್‌ನಿಂದ ಪೂರ್ವ ಕರಾವಳಿಯ ಸಮುದ್ರದ ಕಡೆಗೆ ಹಲವಾರು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದೆ ಎಂದು ದಕ್ಷಿಣ ಕೊರಿಯಾದ ಮಿಲಿಟರಿ ತಿಳಿಸಿದೆ.

ಮತ್ತಷ್ಟು ಓದಿ: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ 40 ದಿನಗಳಿಂದ ಕಾಣಿಸ್ತಿಲ್ವಂತೆ, ಆರೋಗ್ಯದ ಬಗ್ಗೆ ಮತ್ತೆ ಊಹಾಪೋಹ

ಉತ್ತರ ಕೊರಿಯಾ ಮತ್ತೊಮ್ಮೆ ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆಯನ್ನು ನಡೆಸಿದ್ದು, ಕೊರಿಯನ್ ಪರ್ಯಾಯ ದ್ವೀಪ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ದಕ್ಷಿಣ ಕೊರಿಯಾದ ಮಿಲಿಟರಿಯ ಪ್ರಕಾರ, ಉತ್ತರ ಕೊರಿಯಾ ತನ್ನ ಪೂರ್ವ ಕರಾವಳಿಯ ಬಳಿ ಸಮುದ್ರದ ಕಡೆಗೆ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಹಾರಿಸಿದೆ. ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಪ್ರಾದೇಶಿಕ ದೇಶಗಳು ಈ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಕ್ಷಿಪಣಿ ಪರೀಕ್ಷೆಗೂ ಮುನ್ನ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಗೆ ಭೇಟಿ ನೀಡಿದ್ದರು. ರಾಜ್ಯ ಮಾಧ್ಯಮಗಳ ಪ್ರಕಾರ, ಯುದ್ಧತಂತ್ರದ ಮಾರ್ಗದರ್ಶಿ ಶಸ್ತ್ರಾಸ್ತ್ರಗಳ ಉತ್ಪಾದನೆಯನ್ನು ಪ್ರಸ್ತುತ ಮಟ್ಟಕ್ಕಿಂತ ಎರಡು ಪಟ್ಟು ಹೆಚ್ಚಿಸುವಂತೆ ಕಿಮ್ ಕರೆ ನೀಡಿದ್ದಾರೆ .

ಇತ್ತೀಚಿನ ವಾರಗಳಲ್ಲಿ, ಕಿಮ್ ಜಾಂಗ್ ಉನ್ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ, ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಯನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಹಲವಾರು ಕ್ಷಿಪಣಿ ಪರೀಕ್ಷೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಪ್ಯೊಂಗ್ಯಾಂಗ್‌ನಲ್ಲಿ ಕ್ಷಿಪಣಿ ಪರೀಕ್ಷೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಉತ್ತರ ಕೊರಿಯಾ ತನ್ನ ನಿಖರ ದಾಳಿ ಸಾಮರ್ಥ್ಯಗಳನ್ನು ಬಲಪಡಿಸಲು, ಅಮೆರಿಕ ಮತ್ತು ದಕ್ಷಿಣ ಕೊರಿಯಾಕ್ಕೆ ಸವಾಲು ಹಾಕಲು ಮತ್ತು ಭವಿಷ್ಯದಲ್ಲಿ ರಷ್ಯಾದಂತಹ ದೇಶಗಳಿಗೆ ಈ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಆಲೋಚನೆಯಲ್ಲಿ ಇಂಥಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

IPL 2026: ಬಾಂಗ್ಲಾದೇಶ್​ನಲ್ಲಿ ಐಪಿಎಲ್ ಬ್ಯಾನ್? – Kannada News | IPL 2026 Broadcast May Be Ban in Bangladesh

ಬಾಂಗ್ಲಾದೇಶ್  ತಂಡದ ಆಟಗಾರ ಮುಸ್ತಫಿಝುರ್ ರೆಹಮಾನ್​ನನ್ನು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಕೈ ಬಿಟ್ಟ ಬೆನ್ನಲ್ಲೇ ಕೌಂಟರ್ ಅಟ್ಯಾಕ್ ನೀಡಲು ಬಾಂಗ್ಲಾದೇಶ್ ಸರ್ಕಾರ ಮುಂದಾಗಿದೆ. ಅದರ ಮೊದಲ ಹೆಜ್ಜೆಯಾಗಿ ಇದೀಗ ಬಾಂಗ್ಲಾದೇಶ್​​ನಲ್ಲಿ ಐಪಿಎಲ್ ಬ್ಯಾನ್ ಮಾಡಲು ಮುಂದಾಗುತ್ತಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಕ್ರೀಡಾ ಸಚಿವಾಲಯದ ಉಸ್ತುವಾರಿ ಸಚಿವ ಆಸಿಫ್ ನಜ್ರುಲ್,  ಬಾಂಗ್ಲಾದೇಶ್ ಆಟಗಾರನಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರವಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳ ಪ್ರಸಾರವನ್ನು ನಿಲ್ಲಿಸುವಂತೆ ನಾನು ಮಾಹಿತಿ ಮತ್ತು ಪ್ರಸಾರ ಸಚಿವರನ್ನು ವಿನಂತಿಸಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೆ ಯಾವುದೇ ಸಂದರ್ಭದಲ್ಲೂ ಬಾಂಗ್ಲಾದೇಶ್, ಬಾಂಗ್ಲಾದೇಶ್ ಕ್ರಿಕೆಟ್ ಅಥವಾ ಬಾಂಗ್ಲಾದೇಶ ಕ್ರಿಕೆಟಿಗರ ಅವಮಾನವನ್ನು ನಾವು ಸಹಿಸುವುದಿಲ್ಲ. ಗುಲಾಮಗಿರಿಯ ದಿನಗಳು ಮುಗಿದಿವೆ. ಹೀಗಾಗಿ ನಮ್ಮ ದೇಶದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ರಸಾರ ನಿಷೇಧಿಸಲು ಮನವಿ ಸಲ್ಲಿಸಿರುವುದಾಗಿ ಆಸಿಫ್ ನಜ್ರುಲ್ ತಿಳಿಸಿದ್ದಾರೆ.

ಹೀಗಾಗಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂದ್ಯಗಳು ಬಾಂಗ್ಲಾದೇಶ್​​ನಲ್ಲಿ ಪ್ರಸಾರವಾಗುವ ಸಾಧ್ಯತೆಯಿಲ್ಲ. ಈಗಾಗಲೇ ಐಪಿಎಲ್​ ಪಂದ್ಯಗಳಿಗೆ ಪಾಕಿಸ್ತಾನ್ ಸರ್ಕಾರ ನಿಷೇಧ ಹೇರಿದ್ದಾರೆ. ಇತ್ತ ಬಾಂಗ್ಲಾದೇಶ್ ಕೂಡ ಪಾಕ್ ಮಾದರಿಯಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಲೈವ್ ಪ್ರಸಾರಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಹೆಚ್ಚಿದೆ.

ಅಷ್ಟೇ ಅಲ್ಲದೆ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿನ ಬಾಂಗ್ಲಾದೇಶ್ ತಂಡದ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಿದೆ. ಹೀಗಾಗಿ ಬಾಂಗ್ಲಾದೇಶ್ ತಂಡದ ಪಂದ್ಯಗಳಿಗೆ ಶ್ರೀಲಂಕಾ ಆತಿಥ್ಯವಹಿಸುವ ಸಾಧ್ಯತೆಯನ್ನು ಸಹ ತಳ್ಳಿ ಹಾಕುವಂತಿಲ್ಲ.

Published On – 10:54 am, Sun, 4 January 26

Source link

Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ – Kannada News | Optical Illusion: Find the chameleon among parrots in this picture.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media

ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೆಚ್ಚಿನವರು ಇಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ಉತ್ತರ ಕಂಡುಕೊಳ್ಳುವುದು  ಕಷ್ಟಕರ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಬಣ್ಣಬಣ್ಣದ ರಾಮ ಗಿಳಿಗಳಿವೆ. ಇಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಊಸರವಳ್ಳಿಯನ್ನು ಮರೆಮಾಡಲಾಗಿದೆ. ಇದನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ನೋಡಿ.

ಈ ಚಿತ್ರ ಏನು ಹೇಳುತ್ತದೆ?

ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಳ್ಳಲಾದ ಈ ಇಲ್ಯೂಷನ್ ಚಿತ್ರದಲ್ಲಿ ಮರದ ಕೊಂಬೆ ಮೇಲೆ ಕಲರ್ ಫುಲ್ ರಾಮಗಿಳಿಗಳು ಕುಳಿತಿರುವುದನ್ನು ಕಾಣಬಹುದು. ಈ ಗಿಳಿಗಳ ನಡುವೆ ಊಸರವಳ್ಳಿಯೊಂದು ಅಡಗಿ ಕುಳಿತಿದೆ. ನಿರ್ದಿಷ್ಟ ಸಮಯದೊಳಗೆ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ

ಊಸರವಳ್ಳಿಯನ್ನು ಕಂಡುಹಿಡಿಯಲು ಸಾಧ್ಯವಾಯಿತೇ?

ಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಕಂಡು ಹಿಡಿಯುವುದು ನಿಮಗೆ ಕಷ್ಟವಾಗಬಹುದು. ಈ ಚಿತ್ರವನ್ನು ತಕ್ಷಣ ಗಮನಿಸಿದಾಗ ನಿಮ್ಮ ಕಣ್ಣಿಗೆ ಊಸರವಳ್ಳಿ ಕಾಣುವುದಿಲ್ಲ. ಎಷ್ಟೇ ಪ್ರಯತ್ನಪಟ್ಟರೂ ಈ ಸರೀಸೃಪವೂ ಕಾಣಿಸಿಲ್ಲವೇ. ಈ ಕೆಳಗಿನ ಚಿತ್ರದಲ್ಲಿ ಊಸರವಳ್ಳಿ ಎಲ್ಲಿದೆ ಎಂದು ನಾವೇ ನಿಮಗೆ ಹೇಳುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 350 ರೂ ಇಳಿಕೆ – Kannada News | Gold Price Today on 4th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 4: ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಈ ವಾರಾಂತ್ಯದಲ್ಲಿ ತುಸು ತಗ್ಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಕಡಿಮೆಯಾದರೆ, ಬೆಳ್ಳಿ ಬೆಲೆ 1 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಗಳಲ್ಲಿ (Gold Rates) ಅಲ್ಪ ವ್ಯತ್ಯಯಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,24,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,582 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,450 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,187 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 241 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,580 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,450 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 241 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,450 ರೂ
  • ಚೆನ್ನೈ: 12,600 ರೂ
  • ಮುಂಬೈ: 12,450 ರೂ
  • ದೆಹಲಿ: 12,465 ರೂ
  • ಕೋಲ್ಕತಾ: 12,450 ರೂ
  • ಕೇರಳ: 12,450 ರೂ
  • ಅಹ್ಮದಾಬಾದ್: 12,455 ರೂ
  • ಜೈಪುರ್: 12,465 ರೂ
  • ಲಕ್ನೋ: 12,465 ರೂ
  • ಭುವನೇಶ್ವರ್: 12,450 ರೂ

ಇದನ್ನೂ ಓದಿ: ಫೆಬ್ರುವರಿ 1, ಭಾನುವಾರ; ಅಂದೇ ಕೇಂದ್ರ ಬಜೆಟ್ ಮಂಡನೆ ಆಗುತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (12,323 ರುಪಾಯಿ)
  • ದುಬೈ: 483.25 ಡಿರಾಮ್ (11,843 ರುಪಾಯಿ)
  • ಅಮೆರಿಕ: 134.50 ಡಾಲರ್ (12,107 ರುಪಾಯಿ)
  • ಸಿಂಗಾಪುರ: 173.50 ಸಿಂಗಾಪುರ್ ಡಾಲರ್ (12,141 ರುಪಾಯಿ)
  • ಕತಾರ್: 481.50 ಕತಾರಿ ರಿಯಾಲ್ (11,890 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (11,785 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (11,982 ರುಪಾಯಿ)
  • ಕುವೇತ್: 39.34 ಕುವೇತಿ ದಿನಾರ್ (11,524 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 241 ರೂ
  • ಚೆನ್ನೈ: 257 ರೂ
  • ಮುಂಬೈ: 241 ರೂ
  • ದೆಹಲಿ: 241 ರೂ
  • ಕೋಲ್ಕತಾ: 241 ರೂ
  • ಕೇರಳ: 257 ರೂ
  • ಅಹ್ಮದಾಬಾದ್: 241 ರೂ
  • ಜೈಪುರ್: 241 ರೂ
  • ಲಕ್ನೋ: 241 ರೂ
  • ಭುವನೇಶ್ವರ್: 257 ರೂ
  • ಪುಣೆ: 241

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಬನಿಯನ್ ಹಾಕಿದರೂ ರಾಜನಂತೆ ಬಾಳುತ್ತಿರುವ ಗಿಲ್ಲಿ ನಟ: ಗೆಲುವಿನ ಸೂಚನೆ ಕೊಟ್ಟ ಸುದೀಪ್ – Kannada News | Kichcha Sudeep says Gilli Nata playing like Pratham and Hanumantha in Bigg Boss Kannada Season 12

ಈ ಬಾರಿ ಗಿಲ್ಲಿ ನಟ ಅವರೇ ಬಿಗ್ ಬಾಸ್ (Bigg Boss Kannada Season 12) ಟ್ರೋಫಿ ಗೆಲ್ಲುತ್ತಾರೆ ಎಂಬ ಅಭಿಪ್ರಾಯ ಬಹುತೇಕರಿಗೆ ಇದೆ. ಆ ಅಭಿಪ್ರಾಯಕ್ಕೆ ತಕ್ಕಂತೆಯೇ ಗಿಲ್ಲಿ ಅವರು ಆಟ ಆಡುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಈಗಾಗಲೇ ಗಿಲ್ಲಿ (Gilli Nata) ಅವರ ಆಟವನ್ನು ಮೆಚ್ಚಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿಗಳಿಗೂ ಗಿಲ್ಲಿ ಆಟ ಇಷ್ಟ ಆಗುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಬಿಗ್​ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಬರಲಿದೆ. ಗಿಲ್ಲಿಯೇ ಗೆಲ್ಲಬಹುದು ಎಂಬ ಸೂಚನೆಯನ್ನು ಕಿಚ್ಚ ಸುದೀಪ್ (Kichcha Sudeep) ಅವರು ಪರೋಕ್ಷವಾಗಿ ನೀಡಿದ್ದಾರೆ. ಶನಿವಾರದ (ಜನವರಿ 3) ಬಿಗ್ ಬಾಸ್ ಸಂಚಿಕೆಯಲ್ಲಿ ಈ ರೀತಿಯ ಮಾತುಕತೆ ನಡೆದಿದೆ.

ಕಳೆದ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದರು. ಅವರು ಕ್ಯಾಪ್ಟೆನ್ಸಿ ಮಾಡಿದ್ದು ಸರಿ ಇಲ್ಲ ಎಂದು ಇಡೀ ಮನೆಯ ಸದಸ್ಯರು ಆರೋಪ ಮಾಡಿದ್ದರು. ಆದರೆ ವಾರಾಂತ್ಯದ ಕಿಚ್ಚನ ಪಂಚಾಯ್ತಿಯಲ್ಲಿ ಬೇರೆಯದೇ ಆಯಾಮ ಬಂತು. ಗಿಲ್ಲಿ ಹೇಳುವುದಕ್ಕೂ ಮುನ್ನವೇ ಎಲ್ಲ ಸ್ಪರ್ಧಿಗಳು ಬಿಗ್ ಬಾಸ್ ಮನೆಯ ಕೆಲಸವನ್ನು ಮಾಡಿ ಮುಗಿಸಿದ್ದರು. ಅದರಿಂದ ಗಿಲ್ಲಿಗೆ ಪ್ಲಸ್ ಆಯಿತು. ಬೇರೆ ಎಲ್ಲರಿಗಿಂತ ಗಿಲ್ಲಿ ಅವರೇ ಬಿಗ್ ಬಾಸ್ ಆಟವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂಬುದನ್ನು ಸುದೀಪ್ ಒತ್ತಿ ಹೇಳಿದರು.

ಈ ಹಿಂದೆ ಪ್ರಥಮ್ ಮತ್ತು ಹನುಮಂತ ಅವರು ‘ಬಿಗ್ ಬಾಸ್’ ಟ್ರೋಫಿ ಗೆದ್ದಿದ್ದರು. ಈಗ ಗಿಲ್ಲಿ ನಟ ಆಡುತ್ತಿರುವ ಆಟದಲ್ಲಿ ಕೂಡ ಪ್ರಥಮ್ ಮತ್ತು ಹನುಮಂತ ಅವರ ಛಾಯೆ ಕಾಣುತ್ತಿದೆ. ಅದನ್ನು ಕಿಚ್ಚ ಸುದೀಪ್ ಅವರು ಗಮನಿಸಿದ್ದಾರೆ. ‘ಗಿಲ್ಲಿ ನಟ ಬಿಗ್ ಬಾಸ್ ಅರ್ಥ ಮಾಡಿಕೊಂಡಷ್ಟು ಚೆನ್ನಾಗಿ ಬೇರೆ ಯಾರೂ ಅರ್ಥ ಮಾಡಿಕೊಂಡಿಲ್ಲ’ ಎಂದು ಸುದೀಪ್ ಅವರು ಹೇಳಿದ್ದಾರೆ.

ಗಿಲ್ಲಿ ನಟ ಅವರು ಈ ಹಿಂದಿನ ಎಲ್ಲ ಬಿಗ್ ಬಾಸ್ ಸೀಸನ್​​ಗಳನ್ನು ನೋಡಿಕೊಂಡು ಬಂದಿದ್ದಾರೆ. ಪ್ರಥಮ್ ಮತ್ತು ಹನುಮಂತ ವಿನ್ ಆದ ಸೀಸನ್​​ಗಳನ್ನು ಹೆಚ್ಚು ಗಮನಿಸಿಕೊಂಡು ಬಂದಿದ್ದಾರೆ. ಯಾವುದನ್ನು ಮಾಡಬೇಕು, ಯಾವುದನ್ನು ಮಾಡಬಾರದು ಎಂಬುದನ್ನು ತಿಳಿದುಕೊಂಡು ಬಂದಿದ್ದಾರೆ. ಈ ಎಲ್ಲ ವಿಷಯವನ್ನು ಅವರು ಸುದೀಪ್ ಎದುರು ಬಾಯಿಬಿಟ್ಟಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಫೀಲಿಂಗ್ಸ್: ಓಪನ್ ಆಗಿ ಹೇಳಿದ ಕಿಚ್ಚ ಸುದೀಪ್

‘ಗಿಲ್ಲಿ ಪಾತ್ರದಲ್ಲಿ ಒಂದು ಸ್ವಲ್ಪ ಹನುಮಂತ, ಒಂದು ಸ್ವಲ್ಪ ಪ್ರಥಮ್ ಇದ್ದಾರೆ. ಎಷ್ಟು ಸಲ ನಾನು ಈ ಸುಳಿವನ್ನು ಪರೋಕ್ಷವಾಗಿ ಕೊಟ್ಟಿದ್ದೆ. ಗಿಲ್ಲಿ ರೀತಿ ತಯಾರಿ ಮಾಡಿಕೊಂಡು ಬರುವುದು ಖಂಡಿತಾ ತಪ್ಪಲ್ಲ. ಎಲ್ಲ ಸೀಸನ್ ನೋಡಿಕೊಂಡು ಬಂದಿದ್ದಾರೆ. ಗಿಲ್ಲಿ ಹಾಕಿರುವುದು ಬನಿಯನ್ ಇರಬಹುದು. ಆದರೆ ಬಾಳುತ್ತಿರುವ ಬಾಳು ರಾಜಂದು’ ಎಂದು ಸುದೀಪ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Video: ಬಿಹಾರದಲ್ಲಿ 25 ಸಾವಿರ ರೂ. ಕೊಟ್ರೆ ಹುಡ್ಗೀರು ಸಿಗ್ತಾರೆ, ಕೋಲಾಹಲ ಸೃಷ್ಟಿಸಿದ ಸಚಿವೆ ರೇಖಾ ಆರ್ಯ ಪತಿಯ ಹೇಳಿಕೆ – Kannada News | Uttarakhand Minister’s Husband Under Fire for Disturbing Comment on Women

ಉತ್ತರಾಖಂಡ, ಜನವರಿ 04: ಬಿಹಾರದಲ್ಲಿ 20 ರಿಂದ 25 ಸಾವಿರ ರೂ. ಕೊಟ್ಟರೆ ಹುಡುಗಿಯರು ಸಿಗ್ತಾರೆ ಎನ್ನುವ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ತೀವ್ರ ಕೋಲಾಹಲ ಸೃಷ್ಟಿಸಿದೆ. ಉತ್ತರಾಖಂಡ ರಾಜಕೀಯ ಮತ್ತೊಮ್ಮೆ ಗೊಂದಲಮಯವಾಗಿದೆ.ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ಧಾರಿ ಲಾಲ್ ಸಾಹು ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊವೊಂದರಲ್ಲಿ, ಗಿರ್ಧಾರಿ ಲಾಲ್ ಸಾಹು ಮದುವೆ ಆಗದಿದ್ದರೆ ಬಿಹಾರದಿಂದ 20,000-25,000 ರೂಪಾಯಿಗಳಿಗೆ ಹುಡುಗಿಯರು ಸಿಗ್ತಾರೆ ಖರೀದಿಸಿ ಎಂದು ಹೇಳುತ್ತಿರುವುದನ್ನು ಕೇಳಬಹುದು. ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡದ ಬಿಜೆಪಿ ಸರ್ಕಾರ ಈಗಾಗಲೇ ವಿರೋಧ ಪಕ್ಷಗಳಿಂದ ದಾಳಿಗೊಳಗಾಗಿದೆ.ಸಚಿವೆಯ ಪತಿಯ ಹೇಳಿಕೆ ಹೊಸ ವಿವಾದವನ್ನು ಹುಟ್ಟುಹಾಕಿದೆ.

ಹೆಚ್ಚುತ್ತಿರುವ ವಿವಾದದ ನಡುವೆ, ಗಿರ್ಧಾರಿ ಲಾಲ್ ಸಾಹು ಅವರು ವೀಡಿಯೊ ಸ್ಪಷ್ಟೀಕರಣವನ್ನು ಬಿಡುಗಡೆ ಮಾಡಿದರು. ತಮ್ಮ ಹೇಳಿಕೆಯನ್ನು ತಿರುಚಲಾಗುತ್ತಿದೆ ಎಂದು ಅವರು ಹೇಳಿದರು.ಸಾಹು ಅವರ ಪ್ರಕಾರ, ಅವರು ಸ್ನೇಹಿತನ ಮದುವೆಗೆ ಸಂಬಂಧಿಸಿದ ಘಟನೆಯನ್ನು ವಿವರಿಸುತ್ತಿದ್ದರು ಮತ್ತು ಅವರ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿತ್ತು ಎಂದು ಸಮಜಾಯಿಷಿ ನೀಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಹೊಸ ಮನೆಯಲ್ಲಿ ಅದ್ಧೂರಿಯಾಗಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿದ ಮುಸ್ಲಿಮ್ ವ್ಯಕ್ತಿ! – Kannada News | Ayyappa Pooja in Muslim Household: A Symbol of Unity in Kanakagiri

ಕೊಪ್ಪಳ, ಜನವರಿ 04: ಕೊಪ್ಪಳದ ಮುಸ್ಲಿಮ್ ವ್ಯಕ್ತಿಯ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ನೆರವೇರಿಸಿದ್ದಾರೆ. ಕನಕಗಿರಿ ನಗರದ ಐದನೇ ವಾರ್ಡ್ ನಿವಾಸಿ ಶ್ಯಾಮೀದ್ ಸಾಬ್ ಗುರಿಕಾರ್, ತಮ್ಮ ನೂತನ ಮನೆ ನಿರ್ಮಿಸಿದ ನಂತರ ಅಯ್ಯಪ್ಪ ಸ್ವಾಮಿಯ ಪೂಜೆ ಮಾಡಬೇಕೆಂಬುದು ಶ್ಯಾಮೀದ್ ಅವರ ಬಹುದಿನಗಳ ಆಸೆಯಾಗಿತ್ತು. ಜನವರಿ ಒಂದರಂದು ತಮ್ಮ ಮನೆಯ ಗೃಹಪ್ರವೇಶ ನೆರವೇರಿಸಿದ ಬಳಿಕ, ಜನವರಿ ಮೂರರಂದು ಅವರು ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಯ್ಯಪ್ಪ ಸ್ವಾಮಿ ಸೇವೆ ಸಲ್ಲಿಸುವ ತಮ್ಮ ಹಂಬಲ ಈಡೇರಿರುವುದಕ್ಕೆ ಶ್ಯಾಮೀದ್ ಸಾಬ್ ಗುರಿಕಾರ್ ಸಂತಸ ವ್ಯಕ್ತಪಡಿಸಿದ್ದು, ಇವರ ಈ ಕಾರ್ಯ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Exit mobile version