120 ಕೋಟಿ ಮಠದ ಜಮೀನು ಕಬಳಿಕೆ ಕೇಸ್: ಕೊನೆಗೂ ಪೊಲೀಸರ ಮುಂದೆ ಹಾಜರಾದ ಕಿಂಗ್‌ಪಿನ್ ನರೇಶ್ ಗೌಡ – Kannada News | Bengaluru 120 Cr Math Land Grab: Naresh Gowda Grilled on Forged Documents
ಬೆಂಗಳೂರು ಆ 5: ಬೆಂಗಳೂರು ಹೊರವಲಯದ ಕಂಬೀಪುರದಲ್ಲಿ ಶ್ರೀ ಆದಿಚುಂಚನಗಿರಿ ಮಠಕ್ಕೆ ಸೇರಿದ ಸುಮಾರು 120 ಕೋಟಿ ರೂಪಾಯಿ ಮೌಲ್ಯದ 6 ಎಕರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ನೆಲಮಂಗಲದ ನರೇಶ್ ಗೌಡ ಕೊನೆಗೂ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ. ಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದ ಆತ, ಕೆಂಗೇರಿ ಪೊಲೀಸ್ ಇನ್ಸ್‌ಪೆಕ್ಟರ್ ಜಗದೀಶ್ ಅವರ ಮುಂದೆ ವಿಚಾರಣೆಗೆ ಹಾಜರಾಗಿ ತನಗೇನೂ ತಿಳಿಯದಂತೆ ಹೇಳಿಕೆ ನೀಡಿದ್ದಾನೆ. ವಿಚಾರಣೆ ವೇಳೆ ನರೇಶ್ ಗೌಡ, “ನಾನೊಬ್ಬ…