ರಶೀದ್ ಖಾನ್ ವಿಶ್ವ ದಾಖಲೆಯನ್ನೇ ಅಳಿಸಿ ಹಾಕಿದ ಜೇಸನ್ ಹೋಲ್ಡರ್ – Kannada News | Jason Holder breaks the T20s World record
ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷದೊಳಗೆ ಅತ್ಯಧಿಕ ವಿಕೆಟ್ ಕಬಳಿಸಿದ ವಿಶ್ವ ದಾಖಲೆ ವೆಸ್ಟ್ ಇಂಡೀಸ್‌ನ ಜೇಸನ್ ಹೋಲ್ಡರ್ ಪಾಲಾಗಿದೆ. ಪ್ರಸ್ತುತ ನಡೆಯುತ್ತಿರುವ ಇಂಟರ್ನ್ಯಾಷನಲ್ ಟಿ೨೦ ಲೀಗ್ ಟೂರ್ನಿಯಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಹೋಲ್ಡರ್ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಹೆಸರಿನಲ್ಲಿತ್ತು. 2018 ರಲ್ಲಿ 61 ಟಿ೨೦ ಇನಿಂಗ್ಸ್ ಮೂಲಕ ರಶೀದ್ ಒಟ್ಟು 96 ವಿಕೆಟ್ ಕಬಳಿಸಿದ್ದರು. ಈ ಮೂಲಕ ರಶೀದ್ ಖಾನ್…