Headlines

SSLC ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ಬಿಗ್​​ ಶಾಕ್​​ ಕೊಟ್ಟ ಹೈಕೋರ್ಟ್​

ಬೆಂಗಳೂರು, ಏಪ್ರಿಲ್​​ 10: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ನಿರ್ಧಾರ ಭಾರಿ ಪರ-ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​ ಶಾಕ್​​ ಕೊಟ್ಟಿದೆ. ಅರ್ಜಿದಾರರಿಗೆ…

Read More

ಲೆಬನಾನ್‌ನಲ್ಲಿ ಶಾಂತಿ ಸ್ಥಾಪನೆಯಾಗುವವರೆಗೆ ಚರ್ಚೆ ಇಲ್ಲ, ಅಮೆರಿಕದೊಂದಿಗೆ ಮಾತುಕತೆ ಸ್ಥಗಿತಗೊಳಿಸುವುದಾಗಿ ಇರಾನ್ ಎಚ್ಚರಿಕೆ

ಟೆಹ್ರಾನ್, ಏಪ್ರಿಲ್ 10: ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಆಶಾಕಿರಣವಾಗಿದ್ದ ಅಮೆರಿಕ-ಇರಾನ್(Iran) ಕದನ ವಿರಾಮ ಒಪ್ಪಂದವು ಈಗ ಸಂಪೂರ್ಣ ಕುಸಿತದ ಅಂಚಿಗೆ ಬಂದು ನಿಂತಿದೆ. ನಾಳೆ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ನಿರ್ಣಾಯಕ ಮಾತುಕತೆಯಿಂದ ಹಿಂದೆ ಸರಿಯುವುದಾಗಿ ಇರಾನ್ ಘೋಷಿಸಿದ್ದು, ಜಾಗತಿಕ ರಾಜಕೀಯದಲ್ಲಿ ಮತ್ತೆ ಆತಂಕದ ಕಾರ್ಮೋಡ ಕವಿಯುವಂತೆ ಮಾಡಿದೆ. ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿದ್ದ 14 ದಿನಗಳ ಕದನ ವಿರಾಮವು ಮುರಿದುಬೀಳುವ ಹಂತಕ್ಕೆ ತಲುಪಿದೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಭೀಕರ ದಾಳಿಗಳನ್ನು ನಿಲ್ಲಿಸದ ಹೊರತು ನಾವು ಯಾವುದೇ ಮಾತುಕತೆಗೆ…

Read More

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಮಹಾ ಎಡವಟ್ಟು! 600ಕ್ಕೆ 683 ಅಂಕ ನೀಡಿದ ಬೋರ್ಡ್​!

ಬೆಂಗಳೂರು, ಏಪ್ರಿಲ್ 10: ಗುರುವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ (2nd PUC result) ಪ್ರಕಟವಾಗಿದೆ. ಹಲವಾರು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. 600ಕ್ಕೆ 600 ಅಂಕವನ್ನೂ ಪಡೆದವರಿದ್ದಾರೆ. ಆದರೆ ಕರ್ನಾಟಕ ಸರ್ಕಾರದ ಅಧಿಕೃತ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಅಂಕಪಟ್ಟಿಯಲ್ಲಿಯೇ ಗಂಭೀರ ಲೋಪವೊಂದು ಕಂಡುಬಂದಿದೆ. 600 ಅಂಕಗಳ ಪರೀಕ್ಷೆಗೆ 683 ಅಂಕಗಳನ್ನು ನೀಡಿದ ಬೋರ್ಡ್​ನ ಎಡವಟ್ಟು ಬೆಳಕಿಗೆ ಬಂದಿದೆ. ಆರೂ ವಿಷಯಗಳಲ್ಲೂ 100ಕ್ಕೂ ಹೆಚ್ಚು ಅಂಕ! ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಕೆಲ ವಿದ್ಯಾರ್ಥಿಗಳು…

Read More

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಈಗ ವಿರಾಟ್ ಕೊಹ್ಲಿ, ಪಡಿಕ್ಕಲ್ ಅವರ ಬಾಲ್ಯದ ಫೋಟೋ ಗಮನ ಸೆಳೆದಿದೆ. ಸೆಷನ್ ಒಂದನ್ನು ನಡೆಸಿ ಇದರಲ್ಲಿ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ಕೊಹ್ಲಿ ಹಾಗೂ ಇಶಾನ್ ಶರ್ಮಾ ಒಂದೇ ಫೋಟೋದಲ್ಲಿ ಇದ್ದರು. ಪಡಿಕ್ಕಲ್ ಅವರು ಸಣ್ಣ ವಯಸ್ಸಿನಲ್ಲೇ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದರು. ಆ ಬಗ್ಗೆ ಇಲ್ಲಿದೆ ವಿವರ. ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?: ಡ್ರೋನ್​​ನಲ್ಲಿ ಪತ್ತೆಯಾಯಿತು ಕೇರಳಂ ಹುಡುಗಿಯ ಶವ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದೀಗ ಈ ಸಾವಿನ ಸುತ್ತು ಹಲವು ಅನುಮಾನಗಳನ್ನು ಮೂಡಿದೆ. ಇದು ಕೊಲೆಯೋ? ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿರುವುದಾ? ಎಂಬೆಲ್ಲ ಪ್ರಶ್ನೆಗಳು ಮೂಡಿದೆ. ಇನ್ನು ಬಾಲಕಿಯನ್ನು ಮೃತದೇಹವನ್ನು ಡ್ರೋನ್​​ ಮೂಲಕ ಪತ್ತೆ ಮಾಡಲಾಗಿದೆ. ದೇಹವೂ ಗಾಯಗಳಿಂದ ಕೂಡಿದೆ. ಬಾಲಕಿ ಏಪ್ರಿಲ್ 7ರಂದು ನಾಪತ್ತೆಯಾದಾಗ ಯಾವ ಬಟ್ಟೆಯನ್ನು…

Read More

Yashwant Varma: ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆ ಪ್ರಕರಣ, ಅಲಹಾಬಾದ್ ಹೈಕೋರ್ಟ್​ ನ್ಯಾ. ಯಶವಂತ್ ವರ್ಮಾ ರಾಜೀನಾಮೆ

ನವದೆಹಲಿ, ಏಪ್ರಿಲ್ 10: ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಸಿಲುಕಿದ್ದ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ(Yashwant Varma) ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಸುದೀರ್ಘ ಕಾನೂನು ಸಂಘರ್ಷದ ಬಳಿಕ ಅಂತಿಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಗೆ ನಾಂದಿ ಹಾಡಿದ್ದು ಮಾರ್ಚ್ 14, 2025ರಂದು ನಡೆದ ಒಂದು ಸಣ್ಣ ಘಟನೆ. ಅಂದು ದೆಹಲಿಯಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದ ಸ್ಟೋರ್ ರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ…

Read More

ಅನಂತ್ ಅಂಬಾನಿಗೆ ಕಂಡ್ರೆ ಸಲ್ಲುಗೆ ಸಖತ್ ಪ್ರೀತಿ; ಈ ಪೋಟೋನೇ ಸಾಕ್ಷಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ತಮ್ಮ ಎರಡು ಯೋಜನೆಗಳ ಬಗ್ಗೆ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಮೊದಲನೆಯದು ಮಾತೃಭೂಮಿ, ಇದು ಈ ವರ್ಷ ಬಿಡುಗಡೆಯಾಗಲಿದೆ. ಮತ್ತೊಂದು ವಂಶಿ ಪೈಡಿಪಲ್ಲಿ ಮಾಡುತ್ತಿರುವ ಸಿನಿಮಾ. ಇತ್ತೀಚೆಗೆ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಲ್ಮಾನ್ ಕಾಣಿಸಿಕೊಂಡರು. ಸಲ್ಮಾನ್ ಈಗ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ, ಮತ್ತು ಅದು ಕೂಡ ತುಂಬಾ ವಿಭಿನ್ನ ಶೈಲಿಯಲ್ಲಿ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್…

Read More

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು…

Read More

Apply Now: ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ; ಯಾವೆಲ್ಲಾ ಹುದ್ದೆಗಳಿವೆ? ಅರ್ಹತೆಗಳೇನು? ಇಲ್ಲಿದೆ ಮಾಹಿತಿ

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಸೇವೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಮಹತ್ವದ ಹೆಜ್ಜೆ ಇಟ್ಟಿದೆ. ಅಧಿಕೃತ ಅಧಿಸೂಚನೆಯಂತೆ, ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 12 ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಅಥವಾ ಮುಂದುವರಿಸಲು ಬಯಸುವ ವೈದ್ಯಕೀಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ವೇದಿಕೆ ಲಭ್ಯವಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ…

Read More

Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ನವದೆಹಲಿ, ಏಪ್ರಿಲ್ 10: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ (ಏಪ್ರಿಲ್ 10, 2026) ದೆಹಲಿಯ ಸಂಸತ್ ಭವನದಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದು ಅವರಿಗೆ ಹೊಸ ರಾಜಕೀಯ ಪ್ರಯಾಣದ ಆರಂಭವನ್ನು ಸೂಚಿಸಿತು. ಉಪರಾಷ್ಟ್ರಪತಿ ನಿತೀಶ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿತೀಶ್ ಕುಮಾರ್ ಈಗ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸಿದ ನಂತರ ಏಪ್ರಿಲ್ 14 ರಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಲಾಗಿದೆ.ರಾಜೀನಾಮೆ ನೀಡುವ…

Read More