ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?: ಡ್ರೋನ್​​ನಲ್ಲಿ ಪತ್ತೆಯಾಯಿತು ಕೇರಳಂ ಹುಡುಗಿಯ ಶವ

ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?: ಡ್ರೋನ್​​ನಲ್ಲಿ ಪತ್ತೆಯಾಯಿತು ಕೇರಳಂ ಹುಡುಗಿಯ ಶವ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದೀಗ ಈ ಸಾವಿನ ಸುತ್ತು ಹಲವು ಅನುಮಾನಗಳನ್ನು ಮೂಡಿದೆ. ಇದು ಕೊಲೆಯೋ? ಆತ್ಮಹತ್ಯೆಯೋ ಅಥವಾ ಕಾಲು ಜಾರಿ ಬಿದ್ದಿರುವುದಾ? ಎಂಬೆಲ್ಲ ಪ್ರಶ್ನೆಗಳು ಮೂಡಿದೆ. ಇನ್ನು ಬಾಲಕಿಯನ್ನು ಮೃತದೇಹವನ್ನು ಡ್ರೋನ್​​ ಮೂಲಕ ಪತ್ತೆ ಮಾಡಲಾಗಿದೆ. ದೇಹವೂ ಗಾಯಗಳಿಂದ ಕೂಡಿದೆ. ಬಾಲಕಿ ಏಪ್ರಿಲ್ 7ರಂದು ನಾಪತ್ತೆಯಾದಾಗ ಯಾವ ಬಟ್ಟೆಯನ್ನು ಧರಿಸಿದ್ದಳೋ, ಅದೇ ಬಟ್ಟೆಯಲ್ಲಿ ಮೃತದೇಹ ಪತ್ತೆಯಾಗಿದೆ. ಇದು ಬಾಲಕಿ ನಾಪತ್ತೆಯಾದ ಕೆಲವೇ ಹೊತ್ತಿನಲ್ಲಿ ಮೃತಪಟ್ಟಿರಬಹುದು ಎಂಬ ಶಂಕೆಯನ್ನು ಬಲಪಡಿಸಿದೆ. ಬಹಳ ಕಡಿದಾದ ಮತ್ತು ಮನುಷ್ಯರು ಸುಲಭವಾಗಿ ತಲುಪಲಾಗದ 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವವಿದ್ದ ಕಾರಣ, ಡ್ರೋನ್ ಕ್ಯಾಮೆರಾಗಳು ಶವ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸದ್ಯಕ್ಕೆ ಶವವನ್ನು ಮೇಲೆತ್ತುವ ಕಾರ್ಯಾಚರಣೆ ಮುಂದುವರಿದಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಅಪಘಾತವೋ ಎಂಬ ಸತ್ಯ ಹೊರಬರಲಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Yashwant Varma: ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆ ಪ್ರಕರಣ, ಅಲಹಾಬಾದ್ ಹೈಕೋರ್ಟ್​ ನ್ಯಾ. ಯಶವಂತ್ ವರ್ಮಾ ರಾಜೀನಾಮೆ

ನವದೆಹಲಿ, ಏಪ್ರಿಲ್ 10: ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಸಿಲುಕಿದ್ದ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ(Yashwant Varma) ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಸುದೀರ್ಘ ಕಾನೂನು ಸಂಘರ್ಷದ ಬಳಿಕ ಅಂತಿಮವಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳಿಗೆ ನಾಂದಿ ಹಾಡಿದ್ದು ಮಾರ್ಚ್ 14, 2025ರಂದು ನಡೆದ ಒಂದು ಸಣ್ಣ ಘಟನೆ. ಅಂದು ದೆಹಲಿಯಲ್ಲಿದ್ದ ನ್ಯಾಯಮೂರ್ತಿ ವರ್ಮಾ ಅವರ ಅಧಿಕೃತ ನಿವಾಸದ ಸ್ಟೋರ್ ರೂಂನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತ್ತು.

ಬೆಂಕಿ ನಂದಿಸಲು ಹೋದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅಲ್ಲಿ ಕಂಡ ದೃಶ್ಯ ದಂಗು ಬಡಿಸಿತ್ತು. ಅಲ್ಲಿ ಅಪಾರ ಪ್ರಮಾಣದ 500 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳಿದ್ದವು. ಬೆಂಕಿಯ ಜ್ವಾಲೆಯಲ್ಲಿ ಕೆಲವು ನೋಟುಗಳು ಈಗಾಗಲೇ ಸುಟ್ಟು ಬೂದಿಯಾಗಿದ್ದರೆ, ಕೆಲವು ಭಾಗಶಃ ಸುಟ್ಟಿದ್ದವು. ಈ ಸುಟ್ಟ ನೋಟುಗಳ ವಿಡಿಯೋ ಇಡೀ ದೇಶಾದ್ಯಂತ ವೈರಲ್ ಆಗಿ ಸಂಚಲನ ಮೂಡಿಸಿತ್ತು.

ನಗದು ಪತ್ತೆಯಾದ ಬೆನ್ನಲ್ಲೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಆಂತರಿಕ ತನಿಖಾ ಸಮಿತಿಯನ್ನು ರಚಿಸಿದರು. ಆ ಸಮಿತಿಯು ವರ್ಮಾ ಅವರನ್ನು ವಜಾಗೊಳಿಸಲು ಶಿಫಾರಸು ಮಾಡಿತು. ವರ್ಮಾ ಅವರು ರಾಜೀನಾಮೆ ನೀಡಲು ನಿರಾಕರಿಸಿದಾಗ, ಅವರ ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ ಪ್ರಕ್ರಿಯೆ ಆರಂಭವಾಯಿತು. ಲೋಕಸಭೆಯ 146 ಸದಸ್ಯರು ಇದಕ್ಕೆ ಸಹಿ ಹಾಕಿದ್ದರು. ಲೋಕಸಭೆಯ ಸ್ಪೀಕರ್ ಅವರು ನ್ಯಾಯಾಧೀಶರ ತನಿಖಾ ಕಾಯ್ದೆಯಡಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿ ತನಿಖೆ ಮುಂದುವರೆಸಿದ್ದರು.

ವರ್ಗಾವಣೆ ಮತ್ತು ಅಂತಿಮ ನಿರ್ಗಮನ
ವಿವಾದ ಉಲ್ಬಣಗೊಂಡ ಕಾರಣ ಮಾರ್ಚ್ ಅಂತ್ಯದಲ್ಲಿ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಾಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಏಪ್ರಿಲ್ 5, 2025 ರಂದು ಅಲ್ಲಿ ಪ್ರಮಾಣವಚನ ಸ್ವೀಕರಿಸಿದರಾದರೂ, ವರ್ಗಾವಣೆಯ ಬಗ್ಗೆಯೂ ಕಾನೂನು ವಲಯದಲ್ಲಿ ವ್ಯಾಪಕ ಟೀಕೆಗಳು ಕೇಳಿಬಂದವು. ಸಂಸದೀಯ ಸಮಿತಿಯ ತನಿಖೆ ಬಿಗಿಯಾಗುತ್ತಿದ್ದಂತೆ ಮತ್ತು ವಜಾಗೊಳ್ಳುವ ಭೀತಿ ಎದುರಾದಾಗ, ಅವರು ಶುಕ್ರವಾರ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ರವಾನಿಸಿದರು.

ತಮ್ಮ ರಾಜೀನಾಮೆ ಪತ್ರದಲ್ಲಿ ವರ್ಮಾ ಅವರು ಕಾರಣಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ನನ್ನನ್ನು ಈ ನಿರ್ಧಾರಕ್ಕೆ ಒತ್ತಾಯಿಸಿದ ಕಾರಣಗಳನ್ನು ನಾನು ಬಹಿರಂಗಪಡಿಸಲು ಬಯಸುವುದಿಲ್ಲ. ಅಲಾಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕೆಲಸ ಮಾಡಿದ್ದು ಒಂದು ಗೌರವ, ಆದರೆ ತೀವ್ರ ವಿಷಾದದೊಂದಿಗೆ ನಾನು ಈ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಬರೆದಿದ್ದಾರೆ.

ಮತ್ತಷ್ಟು ಓದಿ: ಮನೆಯಲ್ಲಿ ಅಕ್ರಮ ಹಣ ಪತ್ತೆ; ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣದ ತನಿಖೆಗೆ ಸಿಜೆಐ ಸಂಜೀವ್ ಖನ್ನಾ ಆದೇಶ

ಭ್ರಷ್ಟಾಚಾರದ ಆರೋಪ ಹೊತ್ತ ನ್ಯಾಯಮೂರ್ತಿಯೊಬ್ಬರು ಸಂಸತ್ತಿನ ದೋಷಾರೋಪಣೆ ಪ್ರಕ್ರಿಯೆಯ ಮಧ್ಯದಲ್ಲಿಯೇ ಅಧಿಕಾರ ತ್ಯಜಿಸಿರುವುದು ನ್ಯಾಯಾಂಗ ವ್ಯವಸ್ಥೆಯ ಪಾರದರ್ಶಕತೆಯ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಪಿತೂರಿ ಎಂದು ಆರೋಪಗಳನ್ನು ತಳ್ಳಿಹಾಕಿದ್ದ ವರ್ಮಾ, ಅಂತಿಮವಾಗಿ ಕಾನೂನು ಮತ್ತು ಸಂಸದೀಯ ಒತ್ತಡಕ್ಕೆ ಮಣಿದು ನಿರ್ಗಮಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಅನಂತ್ ಅಂಬಾನಿಗೆ ಕಂಡ್ರೆ ಸಲ್ಲುಗೆ ಸಖತ್ ಪ್ರೀತಿ; ಈ ಪೋಟೋನೇ ಸಾಕ್ಷಿ

ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ತಮ್ಮ ಎರಡು ಯೋಜನೆಗಳ ಬಗ್ಗೆ ಬಹಳ ಸಮಯದಿಂದ ಸುದ್ದಿಯಲ್ಲಿದ್ದಾರೆ. ಮೊದಲನೆಯದು ಮಾತೃಭೂಮಿ, ಇದು ಈ ವರ್ಷ ಬಿಡುಗಡೆಯಾಗಲಿದೆ. ಮತ್ತೊಂದು ವಂಶಿ ಪೈಡಿಪಲ್ಲಿ ಮಾಡುತ್ತಿರುವ ಸಿನಿಮಾ. ಇತ್ತೀಚೆಗೆ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಮಗ ಅನಂತ್ ಅವರ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಲ್ಮಾನ್ ಕಾಣಿಸಿಕೊಂಡರು. ಸಲ್ಮಾನ್ ಈಗ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ, ಮತ್ತು ಅದು ಕೂಡ ತುಂಬಾ ವಿಭಿನ್ನ ಶೈಲಿಯಲ್ಲಿ. ಅವರ ಇತ್ತೀಚಿನ ಇನ್‌ಸ್ಟಾಗ್ರಾಮ್ ಪೋಸ್ಟ್ ವೈರಲ್ ಆಗುತ್ತಿದೆ.

ಸಲ್ಮಾನ್ ಖಾನ್ ಅನಂತ್ ಅಂಬಾನಿಗಾಗಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದು, ಅವರನ್ನು ತಮ್ಮ ಕಿರಿಯ ಸಹೋದರ ಎಂದು ಕರೆದಿದ್ದಾರೆ. ಈ ಚಿತ್ರದಲ್ಲಿ ಅವರು ಕುರ್ಚಿಯ ಮೇಲೆ ಕುಳಿತಿರುವಾಗ ಅನಂತ್ ಅಂಬಾನಿಯನ್ನು ತಬ್ಬಿದ್ದಾರೆ. ನಟ ಕೂಡ ಅವರನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾರೆ. ಅವರು ಇದಕ್ಕೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ.

ಸಲ್ಮಾನ್ ಖಾನ್ ಅನಂತ್ ಅಂಬಾನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಹೊಗಳಿದ್ದಾರೆ. ‘ನಿಮಗೆ ನನೆಪಿನ ಶಕ್ತಿ ಕಡಿಮೆ ಇದ್ದರೆ ಅದನ್ನು ಬರೆದಿಟ್ಟುಕೊಳ್ಳಿ. ಈ ವ್ಯಕ್ತಿ ದೇಶವನ್ನು ಎತ್ತಿ ಹಿಡಿಯುತ್ತಾನೆ. ನನ್ನ ಕಿರಿಯ ಸಹೋದರ ಅನಂತ್. ಅವರದ್ದು ಶುದ್ಧ ಆತ್ಮ, ಅವರಿಗೆ ಒಳ್ಳೆಯದಾಗಲಿ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಸಿನಿಮಾ ಸೇರಿದ ಮತ್ತೊಬ್ಬ ದಕ್ಷಿಣದ ಜನಪ್ರಿಯ ನಟ

ಅನಂತ್ ಭುಜದ ಮೇಲೆ ಸಲ್ಮಾನ್ ಖಾನ್ ಕುಳಿತಿರುವುದನ್ನು ನೋಡಿ ಜನರು ಈ ಫೋಟೋಗೆ ಪ್ರೀತಿಯಿಂದ ಸುರಿಮಳೆಗೈಯುತ್ತಿದ್ದಾರೆ. ಸಲ್ಮಾನ್ ಖಾನ್ ಯಾವಾಗಲೂ ಅನಂತ್ ಅಂಬಾನಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ರಣಬೀರ್ ಕಪೂರ್ ಮತ್ತು ಆಕಾಶ್ ಅಂಬಾನಿ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದರೂ, ಬಾಲಿವುಡ್‌ನ ಖಾನ್‌ಗಳು ಸಹ ಅಂಬಾನಿ ಕುಟುಂಬದೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ.

ಇತ್ತೀಚೆಗೆ ಸಲ್ಮಾನ್ ಖಾನ್ ಅವರ ಹೊಸ ಚಿತ್ರದಲ್ಲಿ ರಾಜ್‌ಪಾಲ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿತ್ತು. ಕೆಲವು ದಿನಗಳ ಹಿಂದೆ ನಟ ರಾಜ್‌ಪಾಲ್ ಯಾದವ್ ಅವರನ್ನು ಬೆಂಬಲಿಸಿದ್ದರು. ಎಲ್ಲರೂ ‘ಮಾತೃಭೂಮಿ’ ಬಿಡುಗಡೆ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

‘ಜನ ನಾಯಗನ್’ ಸಿನಿಮಾ ಲೀಕ್, ದಿಟ್ಟ ಹೆಜ್ಜೆಗೆ ಮುಂದಾದ ಕೆವಿಎನ್?

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಆಗುತ್ತಿರುವ ಅನ್ಯಾಯ, ಕಳೆದ ಕೆಲ ವರ್ಷಗಳಲ್ಲಿ ಇನ್ಯಾವ ಸಿನಿಮಾಕ್ಕೂ ಆಗಿಲ್ಲ. ಕೇವಲ ರಾಜಕೀಯ ಉದ್ದೇಶದಿಂದಾಗಿ ಸಿಬಿಎಫ್​​ಸಿ, ಕ್ಷುಲ್ಲಕ ಕಾರಣ ನೀಡಿ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಆಗದಂತೆ ತಡೆದು ನಿಲ್ಲಿಸಿದೆ. ವಿಜಯ್ ಅವರು ರಾಜಕೀಯಕ್ಕೆ ಸ್ಪರ್ಧಿಸಿ, ಇದು ತಮ್ಮ ಕೊನೆಯ ಸಿನಿಮಾ ಎಂದು ಹೇಳಿದ್ದು, ಈ ಸಿನಿಮಾವನ್ನು ತಮ್ಮ ರಾಜಕೀಯ ಪಕ್ಷದ ಪರೋಕ್ಷ ಪ್ರಚಾರಕ್ಕೆ ಬಳಸಿರುವ ಸಾಧ್ಯತೆ ಇದೆಯೆಂಬ ಕಾರಣಕ್ಕೆ ವಿಜಯ್ ಅವರ ರಾಜಕೀಯ ಎದುರಾಳಿಗಳು ಪ್ರಭಾವ ಬಳಸಿ ಸಿನಿಮಾ ಬಿಡುಗಡೆ ಆಗದಂತೆ ತಡೆದಿದ್ದಾರೆ.

‘ಜನ ನಾಯಗನ್’ ಬಿಡುಗಡೆಯನ್ನು ಅನ್ಯಾಯವಾಗಿ ತಡೆದ ಬೆನ್ನಲ್ಲೆ ಇದೀಗ ಸಿನಿಮಾವನ್ನು ಆನ್​​ಲೈನ್​​ನಲ್ಲಿ ಲೀಕ್ ಮಾಡಿ, ಸಿನಿಮಾಕ್ಕೆ ಭಾರಿ ಪೆಟ್ಟು ನೀಡಲಾಗಿದೆ. ಸಿನಿಮಾದ ಹಲವು ದೃಶ್ಯಗಳು ಬಿಡಿ-ಬಿಡಿಯಾಗಿ ಹಾಗೂ ಕೆಲವು ಸೈಟ್​​ಗಳಲ್ಲಿ ಸಿನಿಮಾದ ಇಡೀ ಲಿಂಕ್ ಅನ್ನು ಪೋಸ್ಟ್ ಮಾಡಿ ಲೀಕ್ ಮಾಡಲಾಗಿದೆ. ಇದು ಚಿತ್ರತಂಡಕ್ಕೆ ಆತಂಕ ತಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿನಿಮಾದ ನಿರ್ದೇಶಕ ಎಚ್ ವಿನೋದ್, ಸಿನಿಮಾದ ಲೀಕ್ ಆಗಿರುವ ದೃಶ್ಯಗಳನ್ನು ಶೇರ್ ಮಾಡದಂತೆ ಮನವಿ ಮಾಡಿದ್ದಾರೆ. ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸಿನಿಮಾದ ಲೀಕ್ ಹಿಂದೆ ಸೆನ್ಸಾರ್ ಮಂಡಳಿ ಇದೆ ಎಂದು ವಿಜಯ್ ಅವರ ಅಭಿಮಾನಿಗಳು ಆರೋಪಿಸುತ್ತಿದ್ದಾರೆ. ಇನ್ನು ಕೆಲವರು, ಚುನಾವಣೆ ಪ್ರಚಾರ ಸಿಗಲೆಂದು ವಿಜಯ್ ಅಭಿಮಾನಿಗಳೇ ‘ಜನ ನಾಯಗನ್’ ಸಿನಿಮಾ ಲೀಕ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಾರೆ ಸಿನಿಮಾ ಲೀಕ್ ಆಗಿದೆ, ಇದರಿಂದ ಯಾರಿಗೆ ಲಾಭವಾಗುತ್ತದೆಯೋ ತಿಳಿಯದು ಆದರೆ ನಿರ್ಮಾಪಕರಿಗಂತೂ ಭಾರಿ ನಷ್ಟವೇ ಆಗಲಿದೆ.

ಇದನ್ನೂ ಓದಿ:ದಳಪತಿ ವಿಜಯ್​​ಗೆ ಕೂಲ್​​ಡ್ರಿಂಗ್ ಕೊಟ್ಟ ಅಭಿಮಾನಿ: ವಿಡಿಯೋ ನೋಡಿ

ಸಿನಿಮಾ ಲೀಕ್ ಆಗಿರುವ ಕಾರಣ, ಹೆಚ್ಚಿನ ಡ್ಯಾಮೇಜ್ ಆಗುವ ಮುಂಚೆ ಸಿನಿಮಾವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲು ನಿರ್ಮಾಣ ಸಂಸ್ಥೆ ಮುಂದಾಗಿದೆ ಎನ್ನಲಾಗುತ್ತಿದೆ. ಆದರೆ ಒಟಿಟಿ ಬಿಡುಗಡೆಗೂ ಸಹ ಚುನಾವಣಾ ನೀತಿ ಸಂಹಿತೆ ಅಡ್ಡ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕೆವಿಎನ್ ನಿರ್ಮಾಣ ಸಂಸ್ಥೆಯು ‘ಜನ ನಾಯಗನ್’ ಸಿನಿಮಾದ ಮೇಲೆ ಸುಮಾರು 400 ಕೋಟಿ ಹೂಡಿಕೆ ಮಾಡಿದೆ. ಜನವರಿ ತಿಂಗಳಲ್ಲೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಸಿಬಿಎಫ್​​ಸಿಯು ಕ್ಷುಲ್ಲಕ ಕಾರಣ ನೀಡಿ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ನೀಡಲಿಲ್ಲ. ಬಳಿಕ ನ್ಯಾಯಾಲಯದಲ್ಲಿಯೂ ಸಹ ಕೆವಿಎನ್​​ಗೆ ‘ನ್ಯಾಯ’ ದೊರಕಲಿಲ್ಲ. ಇದೀಗ ಚುನಾವಣೆ ಬಂದಿರುವ ಕಾರಣ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡವಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Apply Now: ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ; ಯಾವೆಲ್ಲಾ ಹುದ್ದೆಗಳಿವೆ? ಅರ್ಹತೆಗಳೇನು? ಇಲ್ಲಿದೆ ಮಾಹಿತಿ

ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ಸೇವೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ಮಹತ್ವದ ಹೆಜ್ಜೆ ಇಟ್ಟಿದೆ. ಅಧಿಕೃತ ಅಧಿಸೂಚನೆಯಂತೆ, ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 12 ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಅಥವಾ ಮುಂದುವರಿಸಲು ಬಯಸುವ ವೈದ್ಯಕೀಯ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ವೇದಿಕೆ ಲಭ್ಯವಿದೆ.

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮುಖ್ಯವಾಗಿ ಎರಡು ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ವೈದ್ಯರು ಅಥವಾ ಶಿಶುವೈದ್ಯರ (Pediatricians) 4 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇವರಿಗೆ ಮಾಸಿಕ 1,30,000 ರೂ.ಗಳವರೆಗೆ ಆಕರ್ಷಕ ವೇತನವನ್ನು ನಿಗದಿಪಡಿಸಲಾಗಿದೆ. ಇನ್ನುಳಿದಂತೆ 8 ತುರ್ತು ವೈದ್ಯಕೀಯ ಅಧಿಕಾರಿ (Emergency Medical Officers) ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 60,000 ರೂ.ಗಳ ವೇತನ ದೊರೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ವಿವಿಧ ಭಾಗಗಳಲ್ಲಿ ಈ ನೇಮಕಾತಿಗಳು ನಡೆಯಲಿವೆ.

ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ, ವೈದ್ಯರು ಅಥವಾ ಶಿಶುವೈದ್ಯರ ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು (Post Graduation) ಪೂರ್ಣಗೊಳಿಸಿರಬೇಕು. ತುರ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಕನಿಷ್ಠ ಎಂಬಿಬಿಎಸ್ (MBBS) ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ವಯೋಮಿತಿಯ ಸಡಿಲಿಕೆಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಚಾಲ್ತಿಯಲ್ಲಿರುವ ನಿಯಮಗಳ ಪ್ರಕಾರ ಅನ್ವಯವಾಗಲಿದ್ದು, ಅರ್ಹತೆಯ ಪೂರ್ಣ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್‌ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅದರೊಂದಿಗೆ ಅಗತ್ಯವಿರುವ ಶೈಕ್ಷಣಿಕ ದಾಖಲೆಗಳು, ಐಡಿ ಪ್ರೂಫ್, ಇತ್ತೀಚಿನ ಭಾವಚಿತ್ರ ಮತ್ತು ಅನುಭವದ ಪ್ರಮಾಣಪತ್ರಗಳನ್ನು ಸ್ವಯಂ ದೃಢೀಕರಿಸಿ ಲಗತ್ತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ‘ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಕಚೇರಿ, ಕಾರವಾರ, ಉತ್ತರ ಕನ್ನಡ’ ಎಂಬ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಕೊಡಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕಗಳ ಕುರಿತಾದ ನವೀಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಗಮನಿಸಿ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ನವದೆಹಲಿ, ಏಪ್ರಿಲ್ 10: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ (ಏಪ್ರಿಲ್ 10, 2026) ದೆಹಲಿಯ ಸಂಸತ್ ಭವನದಲ್ಲಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದು ಅವರಿಗೆ ಹೊಸ ರಾಜಕೀಯ ಪ್ರಯಾಣದ ಆರಂಭವನ್ನು ಸೂಚಿಸಿತು. ಉಪರಾಷ್ಟ್ರಪತಿ ನಿತೀಶ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ನಿತೀಶ್ ಕುಮಾರ್ ಈಗ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸಿದ ನಂತರ ಏಪ್ರಿಲ್ 14 ರಂದು ಅವರು ರಾಜೀನಾಮೆ ನೀಡಬಹುದು ಎಂದು ಹೇಳಲಾಗಿದೆ.ರಾಜೀನಾಮೆ ನೀಡುವ ಮೊದಲು, ಶಾಸಕಾಂಗ ಪಕ್ಷದ ಸಭೆ ನಡೆಯುವ ಸಾಧ್ಯತೆಯಿದೆ. ಅಲ್ಲಿ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಏಪ್ರಿಲ್ 15 ರಂದು ಬಿಹಾರದಲ್ಲಿ ಹೊಸ ಸರ್ಕಾರ ರಚನೆಯಾಗಬಹುದು. ಮುಖ್ಯಮಂತ್ರಿ ಯಾರು ಆಗುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ; ಕ್ವಿಂಟಾಲ್​​ಗೆ ರೇಟ್​​ ಎಷ್ಟು ಗೊತ್ತಾ?

ಬೆಂಗಳೂರು, ಏಪ್ರಿಲ್​​ 10: ಕೊಬ್ಬರಿ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಒಂದು ಕ್ವಿಂಟಾಲ್ ಕೊಬ್ಬರಿ ದರ ಸುಮಾರು 32 ಸಾವಿರ ರೂಪಾಯಿಗೆ ತಲುಪಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಕ್ವಿಂಟಾಲ್‌ಗೆ 8 ರಿಂದ 10 ರೂಪಾಯಿ ಹೆಚ್ಚಳವಾಗಿದೆ. ನುಸಿಪೀಡೆ ಮತ್ತು ವಿವಿಧ ರೋಗಗಳಿಂದ ತೀವ್ರ ತೊಂದರೆ ಅನುಭವಿಸಿದ್ದ ರೈತರಿಗೆ ಈ ಬೆಲೆ ಏರಿಕೆ ಸಂತಸ ತಂದಿದೆ. ಪ್ರಸ್ತುತ ಕೊಬ್ಬರಿ ದಾಸ್ತಾನು ಯಾರ ಬಳಿ ಇದೆ ಎಂಬುದು ಒಂದು ಪ್ರಶ್ನೆಯಾಗಿದ್ದು, ಸಣ್ಣ ರೈತರು ತಮ್ಮ ಉತ್ಪನ್ನವನ್ನು ಬೇಗನೆ ಮಾರಾಟ ಮಾಡಿದ್ದಾರೆ. ಈ ವರ್ಷ ಇಳುವರಿ ಕಡಿಮೆ ಇದ್ದು, ಮಾರುಕಟ್ಟೆಯಲ್ಲಿ ಕೊಬ್ಬರಿ ಸಂಗ್ರಹವೂ ಕಡಿಮೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಕಡಿಮೆ ಇಳುವರಿಯೇ ಪ್ರಸ್ತುತ ಬೆಲೆ ಏರಿಕೆಗೆ ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ. ಬೆಲೆ ಇನ್ನೆಷ್ಟು ಏರಬಹುದು ಎಂಬುದರ ಬಗ್ಗೆ ಅಧಿಕಾರಿಗಳಿಗೂ ನಿಖರ ಅಂದಾಜು ಇಲ್ಲ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಎಡಿಬಿ ವರದಿ: ಭಾರತದ ಜಿಡಿಪಿ ಬೆಳವಣಿಗೆ 2025ರಲ್ಲಿ ಶೇ. 6.9, 2027ರಲ್ಲಿ ಶೇ. 7.3 ಅಂದಾಜು

ನವದೆಹಲಿ, ಏಪ್ರಿಲ್ 10: ಜಾಗತಿಕ ತುಮುಲಗಳು, ಬಿಕ್ಕಟ್ಟುಗಳ ಮಧ್ಯೆ ಭಾರತದ ಆರ್ಥಿಕತೆ (Indian Economy) ಉತ್ತಮ ಬೆಳವಣಿಗೆ ದಾಖಲಿಸುವ ನಿರೀಕ್ಷೆ ಇದೆ. ಈ ವರ್ಷ ನಿರೀಕ್ಷಿತ ಅಭಿವೃದ್ಧಿ ಕಾಣದಿದ್ದರೂ ಒಟ್ಟಾರೆಯಾಗಿ ಸಮಾಧಾನಕರ ಬೆಳವಣಿಗೆ ಪಡೆಯಬಹುದು ಎಂದು ಅನೇಕ ಏಜೆನ್ಸಿಗಳು ಅಭಿಪ್ರಾಯಪಟ್ಟಿವೆ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್​ನ (ಎಡಿಬಿ) ಇತ್ತೀಚಿನ ವರದಿಯಲ್ಲಿ 2026 ಮತ್ತು 2027ರ ವರ್ಷಕ್ಕೆ ಭಾರತದ ಜಿಡಿಪಿ ಎಷ್ಟು ಬೆಳೆಯಬಹುದು ಎಂದು ಅಂದಾಜಿಸಿದೆ.

ಏಪ್ರಿಲ್ ತಿಂಗಳ ಏಷ್ಯನ್ ಡೆವಲಪ್ಮೆಂಟ್ ಔಟ್​ಲುಕ್ (ಎಡಿಒ) ವರದಿ ಪ್ರಕಾರ, 2026ರ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ. 6.9ಕ್ಕೆ ಮಿತಿಗೊಳ್ಳಬಹುದು. ಆದರೆ, 2027ರಲ್ಲಿ ಚೇತರಿಕೆ ಕಂಡು ಶೇ. 7.3 ಬೆಳವಣಿಗೆ ದಾಖಲಿಸಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. 2025ರ ಕ್ಯಾಲಂಡರ್ ವರ್ಷದಲ್ಲಿ ಭಾರತ ಶೇ. 7.6ರಷ್ಟು ಜಿಡಿಪಿ ಬೆಳವಣಿಗೆ ಕಂಡಿತ್ತು.

ಇದನ್ನೂ ಓದಿ: ಭಾರತ ಶೇ 7.8, ಅಮೆರಿಕ ಶೇ. 0.5; ಆರ್ಥಿಕ ಬೆಳವಣಿಗೆ ವೇಗದಲ್ಲಿ ಅಜಗಜಾಂತರ

ಏಷ್ಯಾದ ಒಟ್ಟಾರೆ ಬೆಳವಣಿಗೆ ಹೇಗಿರಬಹುದು?

ಎಡಿಬಿ ವರದಿ ಪ್ರಕಾರ ಏಷ್ಯಾ ಪೆಸಿಫಿಕ್ ಪ್ರದೇಶದ ಒಟ್ಟಾರೆ ಬೆಳವಣಿಗೆ 2026ರಲ್ಲಿ ಶೇ. 5.1ಕ್ಕೆ ನಿಲ್ಲಬಹುದು. 2025ರಲ್ಲಿ ಶೇ. 5.4 ಬೆಳವಣಿಗೆ ಹೋಲಿಸಿದರೆ ಈ ವರ್ಷ ಏಷ್ಯಾದ ಒಟ್ಟಾರೆ ಅಭಿವೃದ್ಧಿ ಸ್ವಲ್ಪ ನಿಧಾನಗೊಳ್ಳಲಿದೆ. 2027ರಲ್ಲೂ ಈ ಪ್ರದೇಶವು ಶೇ. 5.1ರಷ್ಟು ಮಾತ್ರವೇ ಬೆಳವಣಿಗೆ ದಾಖಲಿಸಲಿದೆ ಎಂದು ಎಡಿಬಿ ಹೇಳಿದೆ. ಈ ಮಧ್ಯೆ ಭಾರತದಂತಹ ಕೆಲ ಏಷ್ಯನ್ ದೇಶಗಳು ಸರಾಸರಿಗಿಂತ ಹೆಚ್ಚು ಪ್ರಗತಿ ಹೊಂದುವ ಸಾಧ್ಯತೆ ಇದೆ.

ಕುತೂಹಲವೆಂದರೆ ಮಾರ್ಚ್ 10ರವರೆಗಿನ ವಾತಾವರಣದ ಆಧಾರದ ಮೇಲೆ ಎಡಿಬಿ ಈ ಭವಿಷ್ಯ ನುಡಿದಿದೆ. ಇರಾನ್ ಯುದ್ಧ ಫೆಬ್ರುವರಿ 28ರಂದು ಶುರುವಾಗಿತ್ತು. ಯುದ್ಧ ತೀರಾ ಮುಂದುವರಿಯಬಹುದು ಎನ್ನುವ ಕಲ್ಪನೆ ಇಲ್ಲದೇ 2026 ಮತ್ತು 2027ರ ಆರ್ಥಿಕ ಬೆಳವಣಿಗೆಯನ್ನು ಎಡಿಬಿಯ ಆರ್ಥಿಕ ತಜ್ಞರು ಅಂದಾಜು ಮಾಡಿದ್ದಾರೆ. ಆದರೆ, ಯುದ್ದ ದೀರ್ಘಾವಧಿ ಮುಂದುವರಿದರೆ ಅಪಾಯ ಇದೆ ಎನ್ನುವ ಎಚ್ಚರಿಕೆಯನ್ನು ಈ ವರದಿಯಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಭಾರತಕ್ಕೆ ಪೆಟ್ರೋಲ್, ಡೀಸಲ್ ಸಮಸ್ಯೆ ವಕ್ಕರಿಸಲಿಲ್ಲ ಯಾಕೆ? ಸರ್ಕಾರದ ಈ ಕೆಲ ಕ್ರಮಗಳೇ ಕಾರಣವಾ?

ಇರಾನ್ ಯುದ್ಧವು ಒಂದು ತಿಂಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದು ಜಾಗತಿಕವಾಗಿ ತಲ್ಲಣಗೊಳಿಸಿದೆ. ಅದರಲ್ಲೂ ಗಲ್ಫ್ ತೈಲದ ಮೇಲೆ ಹೆಚ್ಚು ಅವಲಂಬಿತವಾಗಿದ್ದ ಏಷ್ಯನ್ ದೇಶಗಳಿಗೆ ಈ ಒಂದು ತಿಂಗಳು ಬಹಳ ಹೊಡೆತ ಕೊಟ್ಟಿದೆ. ಭಾರತದ ತೈಲ ಮತ್ತು ಅನಿಲ ಪೂರೈಕೆ ಜಾಲ ಹೆಚ್ಚಿಸಿಕೊಂಡಿದ್ದರಿಂದ ತಕ್ಕಮಟ್ಟಿಗೆ ಪರಿಸ್ಥಿತಿ ನಿಭಾಯಿಸಲು ಯಶಸ್ವಿಯಾಗಿದೆ. ಒಂದು ವೇಳೆ 15 ದಿನಗಳ ಕದನವಿರಾಮದ ಬಳಿಕ ಮತ್ತೆ ಯುದ್ಧ ಶುರುವಾದರೆ ಪರಿಸ್ಥಿತಿ ನಿಜಕ್ಕೂ ಬಿಗಡಾಯಿಸಬಹುದು ಎಂದು ಅನೇಕ ಆರ್ಥಿಕ ತಜ್ಞರು ಹೇಳುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಶ್ರೀನಂದಾ ಮೃತದೇಹ ಚಂದ್ರದ್ರೋಣ ಪರ್ವತದ 2 ಸಾವಿರ ಅಡಿ ಪ್ರಪಾತದಲ್ಲಿ ಪತ್ತೆ

ಚಿಕ್ಕಮಗಳೂರು, ಏ.10: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಇಂದು (ಏಪ್ರಿಲ್ 10) ಪತ್ತೆಯಾಗಿದೆ. ಸುಮಾರು 2 ಸಾವಿರ ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಸಿಕ್ಕಿರುವುದು ದೃಢಪಟ್ಟಿದೆ. ಕೇರಳದಿಂದ ಏಪ್ರಿಲ್ 7ರಂದು ಚಿಕ್ಕಮಗಳೂರು ನಗರಕ್ಕೆ ಆಗಮಿಸಿದ್ದ 40 ಜನರ ಪ್ರವಾಸಿ ತಂಡದಲ್ಲಿ ಶ್ರೀನಂದಾ ಕೂಡ ಇದ್ದರು. ಇನಾಮು ದತ್ತಾತ್ರೇಯ ಪೀಠ ಹಾಗೂ ಮಾಣಿಕ್ಯಧಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಿ ಹಠಾತ್ತಾಗಿ ನಾಪತ್ತೆಯಾಗಿದ್ದರು. ಈ ಘಟನೆ ನಡೆದ ನಂತರ ಪೊಲೀಸರ ತಂಡ ಹುಡುಗಿಗಾಗಿ ಕಾರ್ಯಚರಣೆಯನ್ನು ನಡೆಸಲಾಗಿತ್ತು . ಇದೀಗ ಹುಡುಗಿಯ ಮೃತದೇಹ ಪತ್ತೆಯಾಗಿದೆ.

ಬಾಲಕಿಯ ಪತ್ತೆಗಾಗಿ ಎಸ್‌ಡಿಆರ್‌ಎಫ್ (SDRF), ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಎಎನ್ಎಫ್ (ANF) ತಂಡಗಳು ಜಂಟಿ ಕಾರ್ಯಾಚರಣೆ ನಡೆಸಿದ್ದವು. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶವಾದ್ದರಿಂದ ಡ್ರೋನ್ ಹಾಗೂ ಥರ್ಮಲ್ ಕ್ಯಾಮೆರಾಗಳನ್ನು ಸಹ ಬಳಸಲಾಗಿತ್ತು.

ಇದನ್ನೂ ಓದಿ: ಶಾಲೆಯಲ್ಲೇ ಕಾಮದಾಟ, ಪ್ರಕರಣ ಬಯಲಾಗದಿರಲು ವಿದ್ಯಾರ್ಥಿನಿಗೆ ಗರ್ಭಪಾತ ಮಾಡಿಸಿದ್ದ ಗಣಿತ ಶಿಕ್ಷಕ! ಕೇಸ್ ದಾಖಲು

ಸತತ ಮೂರು ದಿನಗಳ ಕಾಲ ನಡೆಸಿದ ತೀವ್ರ ಶೋಧದ ನಂತರ, ಇಂದು ಮಾಣಿಕ್ಯಧಾರಾದ ಅತ್ಯಂತ ಆಳವಾದ ಪ್ರಪಾತದ ಕೆಳಗೆ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ. ಕೇರಳದಿಂದ ಆಗಮಿಸಿದ್ದ ಪೋಷಕರು ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

‘ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ’: ಗೃಹ ಸಚಿವ ಪರಮೇಶ್ವರ್

ಬೆಂಗಳೂರು, ಏಪ್ರಿಲ್ 10: ಇತ್ತೀಚಿಗೆ ಬೆಂಗಳೂರಿನ ರಸ್ತೆಯೊಂದರಲ್ಲಿ ಓರ್ವ ವ್ಯಕ್ತಿ ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ ವೀಡಿಯೋ ಭಾರಿ ವೈರಲ್ ಆಗಿತ್ತು. ಆತ ಝೋಂಬಿ ಡ್ರಗ್ ಸೇವನೆಯ ಎಫೆಕ್ಟ್​ನಿಂದಾಗಿ ಹೀಗೆ ವರ್ತಿಸಿದ್ದಾನೆ ಎಂದು ವೀಡಿಯೋ ವೈರಲ್ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​ ಸಿಂಗ್, ಸುಳ್ಳು ಸುದ್ದಿ ಹರಡಲಾಗಿದೆ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್ ಕೂಡ ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ, ಇದು ಸತ್ಯಕ್ಕೆ ದೂರವಾದದ್ದು ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version