ತಾಯಿ ಸತ್ತ ನೋವಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ ಈಗ ಟಾಪರ್! ಸಾಧನೆಗೆ ಅಮ್ಮನ ಮಾತುಗಳೇ ಸ್ಪೂರ್ತಿಯಾಗಿದ್ದು ಹೇಗೆ?
ಮಂಗಳೂರು, ಏಪ್ರಿಲ್ 10: ಗುರುವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ (PUC Topper Disha) ಪಡೆದಿದ್ದಾಳೆ. ಈಕೆಯ ಈ ಸಾಧನೆಯ ಹಿಂದೆ ಒಂದು ನೋವಿನ ಕಥೆಯಿದೆ. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲೇ ಅಮ್ಮನನ್ನು ಕಳೆದುಕೊಂಡ ದಿಶಾಳಿಗೆ ಧೃತಿಗೆಡದೆ ತನ್ನ ಗುರಿ ಸಾಧಿಸಲು ಪ್ರೇರೇಪಿಸಿದ್ದು ಆಕೆಯ ತಾಯಿಯ ಮಾತುಗಳು. ಪರೀಕ್ಷೆ ಮುಗಿಸಿ ಬಂದ ದಿಶಾಳಿಗೆ ಕಾದಿತ್ತು ಆಘಾತ! ದಿನೇಶ್…