ಪಾರ್ಕಿಂಗ್ ವಿಚಾರಕ್ಕೆ ಜಗಳ, ಡ್ರೈವರ್ ತಲೆ ಕತ್ತರಿಸಿದ ವ್ಯಕ್ತಿ, ಪೊಲೀಸರೆದುರೇ ಆರೋಪಿಯನ್ನು ಕೊಂದ ಜನ
ಪಾಟ್ನಾ, ಏಪ್ರಿಲ್ 10: ಕಾನೂನು ಕೈಗೆತ್ತಿಕೊಂಡರೆ ಆಗುವ ಅನಾಹುತಕ್ಕೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬ್ಸ್‌ಗಂಜ್ ಸಾಕ್ಷಿಯಾಗಿದೆ. ಗುರುವಾರ ಇಲ್ಲಿ ನಡೆದ ಅವಳಿ ಕೊಲೆ(Murder)ಗಳು ಕೇವಲ ಕ್ರೌರ್ಯದ ಪರಾಕಾಷ್ಠೆಯಲ್ಲ, ಬದಲಿಗೆ ಕಾನೂನು ಸುವ್ಯವಸ್ಥೆಯ ವೈಫಲ್ಯದ ಪ್ರತಿಬಿಂಬದಂತಿದೆ. ಘಟನೆಯ ಆರಂಭವಾಗಿದ್ದು ಒಂದು ಸಣ್ಣ ಪಾರ್ಕಿಂಗ್ ವಿವಾದದಿಂದ. ರಸ್ತೆಬದಿಯ ವ್ಯಾಪಾರಿ ರವಿ ಚೌಹಾಣ್ ಹಾಗೂ ಪಿಕಪ್ ಚಾಲಕ ಅಲಿ ಹುಸೇನ್ ನಡುವೆ ವಾಹನ ನಿಲ್ಲಿಸುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ‘ಈ ಸಣ್ಣ ಜಗಳ ವಿಕೋಪಕ್ಕೆ ತಿರುಗಿದಾಗ, ರವಿ ಚೌಹಾಣ್ ಅತ್ಯಂತ…