ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves
ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ…