Headlines

ಕಾರನ್ನು ಕಾಪಾಡಲು ತನ್ನ ಜೀವವನ್ನೂ ಲೆಕ್ಕಿಸದ ಮಹಿಳೆ!

ನವದೆಹಲಿ, ಏಪ್ರಿಲ್ 9: ಅಲ್ಲಿ ಸಾಲಾಗಿ ಕಾರುಗಳನ್ನು ನಿಲ್ಲಿಸಲಾಗಿತ್ತು. ಅವುಗಳ ಹಿಂದೆ ಎತ್ತರವಾದ ಕಾಂಪೌಂಡ್ ಇತ್ತು. ಶಿಥಿಲವಾಗಿದ್ದ ಆ ಕಾಂಪೌಂಡ್​ ಗೋಡೆ ಇನ್ನೇನು ಬೀಳುವುದರಲ್ಲಿತ್ತು. ಇದರ ಸುಳಿವು ಸಿಕ್ಕೊಡನೆ ಮಹಿಳೆ ಓಡಿಹೋಗಿ ತನ್ನ ಕಾರನ್ನು ಆ ಸ್ಥಳದಿಂದ ತೆಗೆದಿದ್ದಾರೆ. ಆಕೆ ಕಾರನ್ನು ತೆಗೆದ ಕೆಲವೇ ಸೆಕೆಂಡುಗಳಲ್ಲಿ ಆ ಗೋಡೆ ಮಗುಚಿಬಿದ್ದಿದೆ. ಅಲ್ಲಿದ್ದ ಕಾರುಗಳೆಲ್ಲ ಆ ಗೋಡೆಯಡಿ ಹೂತುಹೋಗಿವೆ. ಆ ಮಹಿಳೆ ತನ್ನ ಪ್ರಾಣವನ್ನೂ ಲೆಕ್ಕಿಸದೆ ಕಾರನ್ನು ತೆಗೆಯಲು ಓಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ನಡೆದಿದ್ದು…

Read More

ಬಿಡುಗಡೆಗೂ ಮುನ್ನವೇ ‘ಜನ ನಾಯಗನ್’ ದೃಶ್ಯ ಲೀಕ್: ದಳಪತಿ ವಿಜಯ್ ಸಿನಿಮಾಗೆ ಸಂಕಷ್ಟ

ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ (Jana Nayagan) ಸಿನಿಮಾಗೆ ಸದ್ಯ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಒಂದು ಕಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಚಿತ್ರದ ಬಿಡುಗಡೆಗೆ ಅಡ್ಡಿಯಾಗಿದ್ದರೆ, ಮತ್ತೊಂದೆಡೆ ಚಿತ್ರದ ಪ್ರಮುಖ ದೃಶ್ಯವೊಂದು ಆನ್‌ಲೈನ್‌ನಲ್ಲಿ ಲೀಕ್ (Leak) ಆಗಿರುವುದು ಚಿತ್ರತಂಡವನ್ನು ಆತಂಕಕ್ಕೆ ತಳ್ಳಿದೆ. ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಆಗಿದೆ. ದಳಪತಿ ವಿಜಯ್ (Vijay) ಅವರ ವಿರೋಧಿಗಳು ಈ ಕೃತ್ಯದ ಹಿಂದೆ ಇದ್ದಾರೆ ಎಂಬುದು ಫ್ಯಾನ್ಸ್ ಆರೋಪ. ಸಾಮಾಜಿಕ ಜಾಲತಾಣಗಳಲ್ಲಿ…

Read More

ಬೆಂಗಳೂರಿನಲ್ಲಿ ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕನಿಂದ ಅತ್ಯಾಚಾರ, ದುಡಿಯಲು ಬಂದವನಿಂದ ನೀಚ ಕೃತ್ಯ

ಬೆಂಗಳೂರು, ಏಪ್ರಿಲ್ 09):  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಾನಗೇಡಿ ಕೃತ್ಯವೊಂದು ನಡೆದಿದೆ.  ಹಿಂದೂ ಬಾಲಕಿ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಪ್ರಾಪ್ತೆ ಕೈಗೆ 150 ರೂಪಾಯಿ ಕೊಟ್ಟು ಎಸ್ಪೇಪ್ ಆಗಿದ್ದ ಮೊಹಮ್ಮದ್ ಮುನ್ನ ಪೊಲೀಸರು ಬಂಧಿಸಿದ್ದಾರೆ. ಹೊಟ್ಟೆಪಾಡಿಗಾಗಿ…

Read More

ಬೆಂಗಳೂರು ವೈರಲ್​ ಜೋಂಬಿ ಡ್ರಗ್ಸ್ ಕೇಸ್; ಪೊಲೀಸ್​​ ತನಿಖೆಯಲ್ಲಿ ಅಸಲಿಯತ್ತು ಬಯಲು

ಬೆಂಗಳೂರು, ಏಪ್ರಿಲ್​ 09: ಇತ್ತೀಚೆಗೆ ಒಂದು ವಿಡಿಯೋ ಭಾರೀ ವೈರಲ್​ ಆಗಿತ್ತು. ಅದರಲ್ಲಿ ಓರ್ವ ವ್ಯಕ್ತಿ  ಗಂಟೆಗಟ್ಟಲ್ಲೇ ನಿಂತಲ್ಲೇ ನಿಂತಿದ್ದ. ಇದನ್ನ ಕೆಲವರು ಬೆಂಗಳೂರಿನಲ್ಲಿ ಜೋಂಬಿ ಡ್ರಗ್ಸ್​ (zombie drug) ಕಾಲಿಟ್ಟಿದೆ ಎಂದು ವೈರಲ್ ಮಾಡಲಾಗಿತ್ತು. ಇನ್ನು ಇದೇ ವಿಚಾರವಾಗಿ ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್ ಕೂಡ ಧ್ವನಿ ಎತ್ತಿದ್ದಾರೆ. ಇದೀಗ ಈಶಾನ್ಯ ವಿಭಾಗದ ಪೊಲೀಸರಿಂದ ಈ ಬಗ್ಗೆ ತನಿಖೆ ಮಾಡಲಾಗಿದ್ದು, ಈ ವೇಳೆ ಅಸಲಿಯತ್ತು ಬಯಲಾಗಿದೆ. ಜೋಂಬಿ ಡ್ರಗ್ಸ್ ಎನ್ನುವುದೇ ಇಲ್ಲಾ ಎಂಬ ಸ್ಫೋಟಕ ಸತ್ಯ…

Read More

ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯ

ನವದೆಹಲಿ, ಏಪ್ರಿಲ್ 9: ಅಸ್ಸಾಂ, ಕೇರಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ (Assembly Elections) ಇಂದು (ಏಪ್ರಿಲ್ 9) ಮತದಾನ ಮುಕ್ತಾಯವಾಯಿತು. ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಬಿಗಿ ಭದ್ರತೆಯಲ್ಲಿ ನಡೆಸಲಾಯಿತು. ಮೂರು ರಾಜ್ಯಗಳ ವಿಧಾನಸಭೆಗಳಲ್ಲಿ ನೂರಾರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಮತದಾರರು ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಸೇರಿದಂತೆ ಪ್ರಮುಖ ನಾಯಕರು ಆರಂಭಿಕ ಮತದಾರರಲ್ಲಿ…

Read More

2nd PUC Exam 2 Time Table: ಫೇಲಾದ್ರೇನಂತೆ ಇನ್ನೊಂದು ಎಕ್ಸಾಮ್ ಟೈಮ್ ಟೇಬಲ್ ಇಲ್ಲಿದೆ ನೋಡಿ

ಬೆಂಗಳೂರು, (ಏಪ್ರಿಲ್ 09): 2025-26ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು (ಏಪ್ರಿಲ್ 09) ಸಂಜೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಫಲಿತಾಂಶ ಪ್ರಕಟಿಸಿದ್ದು, ಇದೇ ವೇಳೆ ಮೊದಲ ಪರೀಕ್ಷೆಯಲ್ಲಿ ಫೇಲಾದವರಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು (Karnataka Second PUC 2nd exam Timetable) ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30…

Read More

RCB vs RR: ಶೇ. 56 ರಷ್ಟು ಮಳೆ..! ಆರ್​ಸಿಬಿ- ರಾಜಸ್ಥಾನ್​ ಪಂದ್ಯಕ್ಕೆ ಮಳೆ ಅಡ್ಡಿ

ಐಪಿಎಲ್ 2026 (IPL 2026) ರ 16 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವೆ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇದುವರೆಗೆ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿವೆ. ರಾಜಸ್ಥಾನ್ ರಾಯಲ್ಸ್ ಆಡಿರುವ ಮೂರಕ್ಕೆ ಮೂರು ಪಂದ್ಯಗಳಲ್ಲಿಯೂ ಗೆದ್ದಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಪಂದ್ಯಗಳನ್ನು ಆಡಿದ್ದು, ಎರಡರಲ್ಲೂ ಗೆದ್ದಿದೆ. ಹೀಗಾಗಿ ಈ ಪಂದ್ಯದ ಬಳಿಕ ಒಂದು ತಂಡ ಮೊದಲ ಸೋಲಿಗೆ ಕೊರಳೊಡ್ಡಬೇಕಾಗಿದೆ. ಇತ್ತ ವಿಜೇತ ತಂಡ…

Read More

ರಣವೀರ್ ಸಿಂಗ್ ಕೆನ್ನೆ ಮುಟ್ಟಿ ಮಾತಾಡಿಸಿದ ಶಾರುಖ್ ಖಾನ್; ವಿಡಿಯೋ ವೈರಲ್

ಮುಂಬೈ ಮೂಲದ ಪ್ರಮುಖ ಉದ್ಯಮಿ ಮತ್ತು ಬಿಜೆಪಿ ಮುಖಂಡ ಮೋಹಿತ್ ಕಂಬೋಜ್ ಅವರ ಪುತ್ರಿ ಮಿಷ್ಕಾ ಕಂಬೋಜ್ ಅವರ 16ನೇ ಜನ್ಮದಿನದ ಸೆಲೆಬ್ರೇಷನ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಬಾಲಿವುಡ್‌ನ ಘಟಾನುಘಟಿ ತಾರೆಗಳು ಪಾಲ್ಗೊಂಡಿದ್ದರು. ವಿಶೇಷವಾಗಿ ಶಾರುಖ್ ಖಾನ್ (Shah Rukh Khan) ಮತ್ತು ರಣವೀರ್ ಸಿಂಗ್ ಅವರ ನಡುವಿನ ಆತ್ಮೀಯ ಕ್ಷಣಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿವೆ. ‘ಧುರಂಧರ್ 2’ (Dhurandhar 2) ಸಕ್ಸಸ್ ಬೆನ್ನಲ್ಲೇ ಈ ಭೇಟಿ ನಡೆದಿರುವುದು ವಿಶೇಷ….

Read More

ಶಿವಮೊಗ್ಗ: ರಸ್ತೆ ಅಗಲೀಕರಣ ವೇಳೆ ಭೀಕರ ದುರಂತ; ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವು

ಶಿವಮೊಗ್ಗ, ಏಪ್ರಿಲ್​ 09: ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿದು ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​ನಲ್ಲಿ ನಡೆದಿದೆ. ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತಷ್ಟು ಮಾಹಿತಿ ಅಪ್​ಡೇಟ್ ಆಗಲಿದೆ. Source link

Read More

ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ

ಮುಂಬೈ, ಏಪ್ರಿಲ್ 9: ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Mumbai Airport) ಟರ್ಮಿನಲ್ 1 ಬಿ ಒಳಗೆ ಇಂದು ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಟರ್ಮಿನಲ್ ಒಳಗಿನ ಕೇಬಲ್ ಟ್ರೇಗಳು ಮತ್ತು ಸ್ವಿಚ್ ಬಾಕ್ಸ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಹೇಳಿದ್ದಾರೆ. ಬೆಂಕಿ ಟರ್ಮಿನಲ್‌ನ ನೆಲ ಮಹಡಿಯಲ್ಲಿ ಮಾತ್ರ ಕಾಣಿಸಿಕೊಂಡಿದ್ದು ಮಾಹಿತಿ ಪಡೆದ ಕೂಡಲೇ ಮುಂಬೈ ಅಗ್ನಿಶಾಮಕ ದಳ, ಪೊಲೀಸರು ಮತ್ತು ವಾರ್ಡ್…

Read More