ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಸೀಜ್ ಪ್ರಕರಣ; ಇದರ ಹಿಂದಿದ್ಯಾ ಕೆಮಿಕಲ್ ಇಂಜಿನಿಯರ್ ಮಾಸ್ಟರ್ ಮೈಂಡ್!? – Kannada News | Bangalore Drug Factory seized; Is a chemical engineer the mastermind
ಡ್ರಗ್ಸ್ ತಯಾರಿಕೆಗೆ ಬೇಕಾದ ಫಾರ್ಮುಲಾ ನೀಡುತ್ತಿದ್ದನಾ ಪ್ರಶಾಂತ್? ಬೆಂಗಳೂರು, ಡಿಸೆಂಬರ್ 29: ಮಹಾರಾಷ್ಟ್ರ ANTF, ಬೆಂಗಳೂರು ಪೊಲೀಸರು ಹಾಗೂ ಎನ್ಸಿಬಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನ (Bengaluru) ಮೂರು ಕಡೆಗಳಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾಗಿದ್ದು, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು. ಈತ ಕೆಮಿಕಲ್ ಇಂಜಿನಿಯರ್ ಆಗಿದ್ದು, ಡ್ರಗ್ಸ್ ಜಾಲದಲ್ಲಿ ಈತನೇ ಮಖ್ಯಪಾತ್ರಧಾರಿಯೇ ಎಂಬ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ ತಯಾರಿಕೆಗೆ…