ದುರಂತ ಅಂತ್ಯ ಕಂಡ ಕಾಲೇಜ್ ಲವ್: ಯುವತಿ ಮದ್ವೆಗೆ ಒಪ್ಪದಕ್ಕೆ ಡೆತ್ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಬೆಂಗಳೂರು, ಏಪ್ರಿಲ್ 09: ಮದುವೆಗೆ ಯುವತಿ ಒಪ್ಪದಿದ್ದಕ್ಕೆ ಮನನೊಂದ ಯುವಕ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ (suicide) ಶರಣಾಗಿರುವಂತಹ ಘಟನೆ ಬೆಂಗಳೂರಿನ ಯಲಹಂಕ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಭಿಷೇಕ್(23) ಮೃತ ಯುವಕ. ಇತ್ತೀಚೆಗಷ್ಟೇ ಅಭಿಷೇಕ್ ಖಾಸಗಿ ಕಾಲೇಜಿನಲ್ಲಿ ಬಿಕಾಂ ಮುಗಿಸಿದ್ದ. ಸದ್ಯ ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ಅಭಿಷೇಕ್ ಖಾಸಗಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ ಯುವತಿಯ ಜೊತೆ ಪ್ರೀತಿ ಮಾಡಿದ. ಕಳೆದ ಆರೇಳು ವರ್ಷದಿಂದ ಇಬ್ಬರು ಪ್ರೀತಿ ಮಾಡುತ್ತಿದ್ದರು….