ತಡರಾತ್ರಿ ಜನಿಸಿದ ಮಗುವಿನ ಕರುಳೆಲ್ಲಾ ಹೊರಕ್ಕೆ: ಝೀರೋ ಟ್ರಾಫಿಕ್‌ನಲ್ಲಿ ಹುಬ್ಬಳ್ಳಿಗೆ ರವಾನೆ – Kannada News | Koppal: Baby’s Intestine Came Out, Rushed to Hubballi Hospital in Zero Traffic Corridor

ಕೊಪ್ಪಳ, ಡಿಸೆಂಬರ್​​ 28: ಕೇವಲ 10 ಗಂಟೆ ಹಿಂದೆ ಜನಿಸಿದ ಮಗು (Newborn baby). ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು. ಮಗುವನ್ನು ಉಳಿಸಲು ಕೆಲವರು ಪ್ರಾಣ ಒತ್ತೆ ಇಟ್ಟಿದ್ದರು. ಮಗುವನ್ನು ಝೀರೋ ಟ್ರಾಫಿಕ್​ನಲ್ಲಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದ್ದು, ಪೊಲೀಸ್ ಇಲಾಖೆ ಕೂಡ ಸಾಥ್ ನೀಡಿತ್ತು.

ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ ಮಗುವೊಂದನ್ನ ಝೀರೋ ಟ್ರಾಫಿಕ್​ನಲ್ಲಿ ಸುಮಾರು 110 ಕಿ.ಮೀ ದೂರದ ಹುಬ್ಬಳ್ಳಿ ಕಿಮ್ಸ್​ಗೆ ಕರೆದುಕೊಂಡು ಹೋಗಲಾಗಿದೆ. ಕುಕನೂರ ತಾಲೂಕಿನ ಗುತ್ತೂರ ನಿವಾಸಿಗಳಾದ ಮಲ್ಲಪ್ಪ, ವಿಜಯಲಕ್ಷ್ಮೀ ದಂಪತಿಗೆ ಶನಿವಾರ ಕುಕನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗು ಜನಿಸಿತ್ತು. 10 ಗಂಟೆಗಳ ಹಿಂದೆ ಜನಿಸಿದ ಮಗುವಿನ ಕರಳುಗಳೆಲ್ಲಾ ಹೊರಗಡೆ ಬಂದಿದ್ದ ಕಾರಣ ಮಗುವಿಗೆ ತುರ್ತು ಆಪರೇಷನ್​​ ಮಾಡಬೇಕಾದ ಹಿನ್ನಲೆ ಕೊಪ್ಪಳ ಜಿಲ್ಲಾಸ್ಪತ್ರೆಯಿಂದ ತಾಯಿ ಮತ್ತು ಮಗುವನ್ನು 5 ಆಂಬ್ಯುಲೆನ್ಸ್​ಗಳ ಮೂಲಕ ಹುಬ್ಬಳ್ಳಿಗೆ ಝೀರೋ ಟ್ರಾಫಿಕ್​​ನಲ್ಲಿ ರವಾನಿಸಲಾಗಿದೆ.

ಇದನ್ನೂ ಓದಿ: ದಕ್ಷಿಣ ಭಾರತದ ಕುಂಭಮೇಳ ಕೊಪ್ಪಳ ಅಜ್ಜನ ಜಾತ್ರೆಗೆ ಸಿದ್ಧತೆ: ಈ ಬಾರಿ ಭಕ್ತರಿಗೆ ಏನು ಸ್ಪೆಷಲ್ ಗೊತ್ತಾ?

ಮಗುವಿಗೆ ಕರಳು ಸಮಸ್ಯೆ ಇರುವ ಹಿನ್ನಲೆ ವೈದ್ಯರು ತುರ್ತಾಗಿ ಆಪರೇಷನ್ ಮಾಡಬೇಕು ಎಂದು ಕಿಮ್ಸ್​ಗೆ ರೆಫರ್ ಮಾಡಿದ್ದರು. ಅಲ್ಲದೆ ನವಜಾತ ಶಿಶುವಿಗೆ ಕಿಡ್ನಿ ಸಮಸ್ಯೆ ಕೂಡ ಇದೆ. ಈ ಕಾರಣಕ್ಕೆ ಮಗುವಿನ ಪ್ರಾಣ ಉಳಿಸಲು ಕೊಪ್ಪಳ ವೈದ್ಯರು ಸಾಕಷ್ಟು ಹರಸಾಹಸ ಪಟ್ಟರು. ಹತ್ತು ಗಂಟೆ ಹಿಂದೆ ಜನಿಸಿದ ಮಗುವನ್ನ ಆಂಬ್ಯುಲೆನ್ಸ್ ಚಾಲಕ ಪ್ರಕಾಶ್ ಝೀರೋ ಟ್ರಾಫಿಕ್​ನಲ್ಲಿ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ. ನವಜಾತ ಶಿಶು ಪ್ರಾಣ ಉಳಿಸಲು ಪೊಲೀಸರು ಕೂಡ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಹನುಮಂತನಿಗೆ ಪೂಜೆ ಮಾಡಲು ಕಿತ್ತಾಟ: 3 ಕೇಸ್​ ಬುಕ್, ವಿವಾದದ ಕೇಂದ್ರ ಬಿಂದುವಾದ ಅಂಜನಾದ್ರಿ

ಒಟ್ಟಾರೆ ಹತ್ತು ಗಂಟೆಯ ಹಿಂದೆ ಜನಿಸಿದ ಮಗು ಇದೀಗ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದೆಸಾಕಷ್ಟು ಅಪಾಯ ತಗೆದುಕೊಂಡು ಕೊಪ್ಪಳದಿಂದ ಝೀರೋ ಟ್ರಾಫಿಕ್​ನಲ್ಲಿ ಮಗುವನ್ನ ಕರೆದುಕೊಂಡು ಬರಲಾಗಿದೆ. ದೇವರ ದಯೆಯಿಂದ ಮಗು ಬದುಕಿದರೆ ಸಾಕು ಅನ್ನೋದು ನಮ್ಮ ಆಶಯ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೆಡ್ ಕೋಚ್ ಹುದ್ದೆಯಿಂದ ಗಂಭೀರ್ ತಲೆದಂಡ? ಸ್ಪಷ್ಟನೆ ನೀಡಿದ ಬಿಸಿಸಿಐ – Kannada News | Gautam Gambhir Test Coach Future: BCCI Denies Laxman Rumors Amidst Poor Performance

ಗೌತಮ್ ಗಂಭೀರ್ (Gautam Gambhir) ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬಳಿಕ ತಂಡದ ಪ್ರದರ್ಶನದ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಟಿ20 ಹಾಗೂ ಏಕದಿನ ಮಾದರಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿದ್ದರೂ, ಟೆಸ್ಟ್​ನಲ್ಲಿ ಮಾತ್ರ ತಂಡದ ಪ್ರದರ್ಶನ ಕಳಪೆಯಾಗಿದೆ. ಅದರಲ್ಲೂ ತವರಿನಲ್ಲೇ ಕ್ಲೀನ್ ಸ್ವೀಪ್ ಮುಜುಗರಕ್ಕೆ ಒಳಗಾಗುವಷ್ಟು ಮಟ್ಟಕ್ಕೆ ತಂಡದ ಪ್ರದರ್ಶನ ಕುಸಿದಿದೆ. ಹೀಗಾಗಿ ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಮುಖ್ಯ ಕೋಚ್ ಹುದ್ದೆಯಿಂದ ಹೊರಗಿಡಬೇಕು ಎಂಬ ಕೂಗು ಜೋರಾಗಿದೆ. ಇದೆಲ್ಲದರ ನಡುವೆ, ಗಂಭೀರ್ ಅವರನ್ನು ಟೆಸ್ಟ್ ತಂಡದಿಂದ ಹೊರಗಿಡುವ ಬಗ್ಗೆ ಬಿಸಿಸಿಐ (BCCI) ಚಿಂತಿಸುತ್ತಿದ್ದು, ಅವರ ಬದಲಿಗೆ ವಿವಿಎಸ್ ಲಕ್ಷ್ಮಣ್ (VVS Laxman)​ ಅವರನ್ನು ಈ ಸ್ಥಾನಕ್ಕೆ ತಂದುಕೂರಿಸಲು ಬಿಸಿಸಿಐ ಚಿಂತಿಸುತ್ತಿದೆ ಎಂದು ಕೆಲವು ದಿನಗಳಿಂದ ವರದಿಯಾಗುತ್ತಿದೆ. ಆದರೀಗ ಈ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಇದೆಲ್ಲ ಕೇವಲ ಊಹಾಪೋಹ ಎಂದಿದ್ದಾರೆ.

ವಿವಿಎಸ್ ಲಕ್ಷ್ಮಣ್ ಮುಂದಿನ ಕೋಚ್

ದಕ್ಷಿಣ ಆಫ್ರಿಕಾ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿ ಸೋಲಿನ ನಂತರ ಬಿಸಿಸಿಐ ಮಾಜಿ ಸ್ಟಾರ್ ಬ್ಯಾಟ್ಸ್‌ಮನ್ ವಿವಿಎಸ್ ಲಕ್ಷ್ಮಣ್ ಅವರನ್ನು ಸಂಪರ್ಕಿಸಿದೆ ಎಂದು ಪಿಟಿಐ ಸುದ್ದಿ ಸಂಸ್ಥೆಯ ಇತ್ತೀಚಿನ ವರದಿ ತಿಳಿಸಿತ್ತು. ವರದಿಯ ಪ್ರಕಾರ, ಮಂಡಳಿಯ ಅಧಿಕಾರಿಯೊಬ್ಬರು ಲಕ್ಷ್ಮಣ್ ಅವರೊಂದಿಗೆ ಟೆಸ್ಟ್ ತಂಡಕ್ಕೆ ತರಬೇತಿ ನೀಡುವ ಸಾಧ್ಯತೆಯ ಬಗ್ಗೆ ಅನೌಪಚಾರಿಕವಾಗಿ ಚರ್ಚಿಸಿದ್ದಾರೆ. ಆದರೆ ಲಕ್ಷ್ಮಣ್ ಮಾತ್ರ ಬಿಸಿಸಿಐ ಆಹ್ವಾನವನ್ನು ನಿರಾಕರಿಸಿದ್ದು, ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲೇ ತಾನು ಮುಂದುವರೆಯುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿತ್ತು.

ಗಂಭೀರ್‌ಗೆ ಬಿಸಿಸಿಐ ಬೆಂಬಲ

ಆದಾಗ್ಯೂ ಈ ವರದಿಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅಧಿಕೃತ ಹೇಳಿಕೆಯನ್ನು ನೀಡುವ ಮೂಲಕ ಈ ಊಹಾಪೋಹಗಳಿಗೆ ಅಂತ್ಯ ಹಾಡಲು ಪ್ರಯತ್ನಿಸಿದ್ದಾರೆ. ಲಕ್ಷ್ಮಣ್ ಅವರನ್ನು ಕೋಚ್ ಆಗಿ ನೇಮಕ ಮಾಡಲು ಕೇಳಲಾಗಿದೆ ಎಂಬ ಹೇಳಿಕೆಯನ್ನು ಸೈಕಿಯಾ ತಳ್ಳಿಹಾಕಿದ್ದು, ‘ಹರಿದಾಡುತ್ತಿರುವ ಎಲ್ಲಾ ವರದಿಗಳು ಸುಳ್ಳು ಮತ್ತು ಕೇವಲ ಊಹಾಪೋಹಗಳು. ಈ ವರದಿಗಳು ಪ್ರಮುಖ ಮಾಧ್ಯಮಗಳಲ್ಲಿಯೂ ಕಾಣಿಸಿಕೊಂಡಿವೆ, ಆದರೆ ಅಂತಹ ಹೇಳಿಕೆಗಳಲ್ಲಿ ಯಾವುದೇ ಸತ್ಯವಿಲ್ಲ. ಬಿಸಿಸಿಐ ಈ ವರದಿಗಳನ್ನು ಸಂಪೂರ್ಣವಾಗಿ ನಿರಾಕರಿಸುತ್ತದೆ ಮತ್ತು ಅಂತಹ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದ್ದಾರೆ.

IND vs SA: ‘ನೀವು ಆತ್ಮಾವಲೋಕನ ಮಾಡಿಕೊಳ್ಳಬೇಕು’; ಗಂಭೀರ್ ತಂತ್ರವನ್ನು ಪ್ರಶ್ನಿಸಿದ ಕುಂಬ್ಳೆ

ಸಧ್ಯಕ್ಕೆ ದೇವಜಿತ್ ಸೈಕಿಯಾ ಅವರ ಸ್ಪಷ್ಟನೆಯ ನಂತರ ಟೆಸ್ಟ್ ತಂಡದಲ್ಲೂ ಗಂಭೀರ್ ಅವರೇ ಮುಖ್ಯ ಕೋಚ್ ಆಗಿ ಮುಂದುವರೆಯಲಿದ್ದಾರೆ ಎಂಬುದು ಖಚಿತವಾಗಿದೆ. ಆದರೆ ಮುಂದಿನ ಕೆಲವು ತಿಂಗಳುಗಳಲ್ಲಿ ಈ ಪರಿಸ್ಥಿತಿ ಮುಂದುವರಿಯುತ್ತದೆಯೇ? ಎಂಬುದು ಪ್ರಶ್ನೆಯಾಗಿದೆ. ಏಕೆಂದರೆ ಗಂಭೀರ್ ಅವರನ್ನು ಮೂರು ವರ್ಷಗಳಿಗೆ ಮಾತ್ರ ಈ ಹುದ್ದೆಗೆ ನೇಮಕ ಮಾಡಲಾಗಿದೆ. ಅದರಂತೆ ಅವರ ಅಧಿಕಾರಾವಧಿಯು 2027 ರ ವಿಶ್ವಕಪ್​ವರೆಗೆ ಇರುತ್ತದೆ. ಆದಾಗ್ಯೂ, ಈ ಮಧ್ಯೆ ಟೀಂ ಇಂಡಿಯಾ ಟಿ20 ವಿಶ್ವಕಪ್ ಅನ್ನು ಸಹ ಆಡಲಿದೆ, ನಂತರ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಪ್ರದರ್ಶನ ಬದಲಾಗದಿದ್ದರೆ, ಗಂಭೀರ್ ಸ್ಥಾನಕ್ಕೆ ಕುತ್ತು ಬರುವುದು ಖಚಿತ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:36 pm, Sun, 28 December 25

Source link

IND-W vs SL-W: ಟಾಸ್ ಗೆದ್ದ ಶ್ರೀಲಂಕಾ; ಪ್ಲೇಯಿಂಗ್ 11 ಹೀಗಿದೆ – Kannada News | IND W vs SL W 4th T20: India Dominates, Sri Lanka Wins Toss for Formal Match

ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ತಿರುವನಂತಪುರದಲ್ಲಿ ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡವು ಈಗಾಗಲೇ ಸರಣಿಯಲ್ಲಿ 3-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ಕೈವಶಮಾಡಿಕೊಂಡಿದೆ. ಹೀಗಾಗಿನ ಉಳಿದಿರುವ ಎರಡು ಪಂದ್ಯಗಳು ಭಾರತ ತಂಡಕ್ಕೆ ಕೇವಲ ಔಪಚಾರಿಕವಾಗಿವೆ. ಆದಾಗ್ಯೂ ಮುಂಬರುವ ವಿಶ್ವಕಪ್ ದೃಷ್ಟಿಯಿಂದ ಟೀಂ ಇಂಡಿಯಾ ಯಾವ ಪಂದ್ಯವನ್ನು ನಿರ್ಲಕ್ಷಿಸುವಂತಿಲ್ಲ. ಆದ್ದರಿಂದ ಹರ್ಮನ್​ ಪಡೆ ಮೊದಲ ಮೂರು ಪಂದ್ಯಗಳಲ್ಲಿ ಮಾಡಿದ ಕೆಲವು ತಪ್ಪುಗಳನ್ನು ತಿದ್ದಿಕೊಳ್ಳಲು ಉಳಿದಿರುವ ಎರಡು ಪಂದ್ಯಗಳಲ್ಲಿ ಮಾಡಬೇಕಿದೆ.

ಟಾಸ್ ಗೆದ್ದ ಶ್ರೀಲಂಕಾ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಆತಿಥೇಯರನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಈ ಸರಣಿಯಲ್ಲಿ ಲಂಕಾ ತಂಡ ಟಾಸ್ ಗೆದ್ದಿರುವುದು ಇದೇ ಮೊದಲು. ಮೊದಲ 3 ಪಂದ್ಯಗಳಲ್ಲಿ ಟಾಸ್ ಗೆದ್ದಿದ್ದ ಟೀಂ ಇಂಡಿಯಾ ಪಂದ್ಯವನ್ನು ಗೆದ್ದುಕೊಂಡಿತ್ತು. ಇದೀಗ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ಭಾರತವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದೆ.

ಉಭಯ ತಂಡಗಳು

ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ವೈಷ್ಣವಿ ಶರ್ಮಾ, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ.

ಶ್ರೀಲಂಕಾ ತಂಡ: ಹಾಸಿನಿ ಪೆರೇರಾ, ಚಾಮರಿ ಅಟಾಪಟು (ನಾಯಕಿ), ಹರ್ಷಿತಾ ಸಮರವಿಕ್ರಮ, ಇಮೇಶಾ ದುಲಾನಿ, ನೀಲಾಕ್ಷಿಕಾ ಸಿಲ್ವಾ, ಕವಿಶಾ ದಿಲ್ಹಾರಿ, ಕೌಶಿನಿ ನುತ್ಯಂಗನಾ (ವಿಕೆಟ್ ಕೀಪರ್), ಮಲ್ಶಾ ಶೆಹಾನಿ, ನಿಮಾಶಾ ಮೀಪಗೆ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂಡಿ.

Published On – 6:49 pm, Sun, 28 December 25

Source link

ಅಧಿಕಾರಿಗಳ ನಡೆ ಗ್ರಾಮಗಳ ಕಡೆ: ಜನ ಸೇವೆಯೇ ಜನಾರ್ಧನ ಸೇವೆಗೆ ವಿಶೇಷ ಅರ್ಥ ಕೊಟ್ಟ CEO – Kannada News | Davangere ZP CEO’s Morning Village Visits: Gitte Madhav Rao Solves Public Problems

ದಾವಣಗೆರೆ, ಡಿಸೆಂಬರ್​ 28: ಸರ್ಕಾರಿ ಅಧಿಕಾರಿಗಳು (Government officer) ಅಂದರೆ ಬೆಳಗ್ಗೆ 10 ಗಂಟೆಗೆ ಕಚೇರಿಗೆ ಹೋಗಿ, ಸಂಜೆ 5 ಗಂಟೆಗೆ ಮನೆಗೆ ಹೋಗುತ್ತಾರೆ ಎನ್ನುವ ಮಾತು ಎಲ್ಲೆಡೆ ಕೇಳಿಬರತ್ತೆ. ಆದರೆ ಇಲ್ಲೊಬ್ಬರು ಅಧಿಕಾರಿ ಬೆಳ್ಳಂಬೆಳಗ್ಗೆ ಎದ್ದು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲ ಗ್ರಾಮದ ವೀಕ್ಷಣೆ ಬಳಿಕ ಬೆಳಗ್ಗೆ 10 ಗಂಟೆಗೆ ಕಚೇರಿಗೆ ತೆರಳಿ ಕಾರ್ಯನಿರ್ವಹಿಸುತ್ತಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠಲ್ ರಾವ್, ಅಭಿವೃದ್ಧಿಗೆ ಹೊಸ ಭಾಷೆ ಬರೆಯಲು ಮುಂದಾಗಿದ್ಧಾರೆ. ಅಧಿಕಾರಿಗಳ ಬೆಳಗಿನ ನಡೆ, ಗ್ರಾಮಗಳ ಕಡೆ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳ್ಳಂಬೆಳಗ್ಗೆ ಗ್ರಾಮಗಳಿಗೆ, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುತ್ತಿದ್ದಾರೆ.

ಇದನ್ನೂ ಓದಿ: ವಿವಿಧ ಕೇಸ್​​ಗಳನ್ನ ಭೇದಿಸಿದ ದಾವಣಗೆರೆ ಪೊಲೀಸ್​: 20.38 ಕೋಟಿ ರೂ ಮಾಲು ವಾರಸುದಾರರಿಗೆ ಹಸ್ತಾಂತರ

ದಿನಕ್ಕೆ ಎರಡರಿಂದ ಮೂರು ಪಂಚಾಯಿತಿಗಳಿಗೆ ಭೇಟಿ ನೀಡಿ ಅಧ್ಯಕ್ಷರು, ಸದಸ್ಯರ ಜೊತೆ ಔಪಚಾರಿಕ ಸಭೆ ನಡೆಸಿ ಪಂಚಾಯಿತಿಯ ಕುಂದು, ಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಗ್ರಂಥಾಲಯಕ್ಕೂ ಭೇಟಿ ನೀಡಿ ಪರಿಶೀಲನೆ ಮಾಡುತ್ತಾರೆ.

ಇನ್ನು ಸ್ವಚ್ಛತಾ ಕಾರ್ಯ ಹೇಗೆ ನಡೆಯುತ್ತಿದೆ, ಪ್ರತಿನಿತ್ಯ ತ್ಯಾಜ್ಯ ವಿಲೇವಾರಿ ವಾಹನ ಬರುತ್ತಿದೆಯಾ, ಗ್ರಾಮದಲ್ಲಿ ಏನೇನು ಸಮಸ್ಯೆ ಇದೆ ಅಂತ ಗ್ರಾಮಸ್ಥರ ಬಳಿ ಮಾಹಿತಿ ಪಡೆದುಕೊಂಡು ಕೆಲವೊಂದಕ್ಕೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಕಾರ್ಯ ಕೂಡ ಮಾಡುತ್ತಿದ್ದಾರೆ.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ್ ವಿಠಲ್ ರಾವ್ ಈಗಾಗಲೇ ಮಾಯಕೊಂಡ, ಅಣಜಿ, ನರಗನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದು, ನಿತ್ಯ ಬೆಳಗ್ಗೆ 6 ಗಂಟೆಯಿಂದ‌ ಅವರ ದಿನಚರಿ ಶುರುವಾಗುತ್ತದೆ. ಗ್ರಾಮ ಪಂಚಾಯತಿಗಳನ್ನು ಭೇಟಿ ಮಾಡೋದು, ಸರ್ಕಾರಿ ವಸತಿ ಶಾಲೆ ಹಾಸ್ಟೆಲ್​ಗಳಿಗೆ ಭೇಟಿ ನೀಡಿ ಅವರ ಜೊತೆಯೇ ಊಟ, ಉಪಹಾರ ಮಾಡುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಚಿಕ್ಕಮಲ್ಲನಹೊಳೆಯಲ್ಲಿ ನಿಗೂಢ ಸ್ಫೋಟ, ಹಲವು ಗ್ರಾಮಗಳಿಗೆ ಕೇಳಿಸಿದ ಸದ್ದು: ಬೆಚ್ಚಿಬಿದ್ದ ಜನ

ಯಾವ ದಿನ, ಯಾವ ಗ್ರಾಮಕ್ಕೆ ಹೋಗುತ್ತಾರೆ ಎನ್ನುವುದು ಮೊದಲೇ ನಿಗದಿಯಾಗಿರುವುದಿಲ್ಲ. ಬೆಳಗ್ಗೆ ಎದ್ದ ತಕ್ಷಣ ಸಿಇಒ ಅವರಿಗೆ ಹೋಗಬೇಕೆನಿಸಿದ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಜಿಲ್ಲಾ ಕೇಂದ್ರದಿಂದ ನೂರಾರು ದೂರದಲ್ಲಿರುವ ಗ್ರಾಮಕ್ಕೂ ಕೂಡ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಬಗೆಹರಿಸಲಿದ್ದಾರೆ. ಅಲ್ಲದೆ ಜನರು ಅಧಿಕಾರಿಗಳನ್ನು ಹುಡುಕಿ ಕಚೇರಿ ಅಲೆಯುವುದಲ್ಲ ಅಧಿಕಾರಿಗಳೇ ಜನರ ಬಳಿ ಹೋಗಬೇಕು ಎನ್ನುವ ಉದ್ದೇಶ ಇವರದ್ದಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ನಡೆ ಬಗ್ಗೆ ಜನರು ಸಾಕಷ್ಟು ಸಂತಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಮಟ್ಟದ ಓರ್ವ ಅಧಿಕಾರಿ ಹೀಗೆ ಗ್ರಾಮಗಳಿಗೆ ಭೇಟಿ ನೀಡಿದಾಗ ಸ್ಥಳೀಯ ಅಧಿಕಾರಿಗಳು ಮೈ ಚಳಿ ಬಿಟ್ಟು ಕೆಲಸ ಮಾಡುತ್ತಾರೆ. ಅಲ್ಲದೆ ಸಾಮಾನ್ಯ ಜನರಿಗೂ ಜಿಲ್ಲಾ ಮಟ್ಟದ ಅಧಿಕಾರಿ ಅಂದರೆ ಯಾರು, ಅವರ ಕಾರ್ಯ ಏನು ಅನ್ನೋದು ಗೊತ್ತಾಗುತ್ತದೆ. ಅಧಿಕಾರಿಗಳಿಗೂ ಗ್ರೌಂಡ್ ಲೆವೆಲ್ ಮಾಹಿತಿ ಲಭ್ಯ ಆಗುತ್ತದೆ. ಗಿತ್ತೆ ಮಾಧವ್ ವಿಠಲ್ ರಾವ್ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಇವರ ಕಾರ್ಯ ಇತರೆ ಅಧಿಕಾರಿಗಳಿಗೂ ಮಾದರಿ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 28: ಹಲವರಿಂದ ಹಣ ಪಡೆದು ಓರ್ವ ಅಲ್ಲಿ ಶೆಡ್​ ಹಾಕಿದ್ದಾನೆ. ಹೀಗಾಗಿ ತೀರ್ಮಾನ ತೆಗೆದುಕೊಂಡು ನೋಟಿಸ್ ಕೊಟ್ಟಿದ್ದೇವೆ. ಅವರು ಸ್ಥಳೀಯರೇ ಆಗಿದ್ದರೆ ಪರಿಹಾರದ ಬಗ್ಗೆ ಚರ್ಚೆ ನಡೀತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ, ಆದ್ರೆ ವೇಣುಗೋಪಾಲ್ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?

2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ  ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ.

ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ:

  • ಜನವರಿ 1, 2026 – ಹೊಸ ವರ್ಷ
  • ಜನವರಿ 1, 2026 – ಜಾಗತಿಕ ಕುಟುಂಬ ದಿನ
  • ಜನವರಿ 2, 2026 – ವಿಶ್ವ ಅಂತರ್ಮುಖಿ ದಿನ
  • ಜನವರಿ 4, 2026 – ವಿಶ್ವ ಬ್ರೈಲ್ ದಿನ
  • ಜನವರಿ 5, 2026 – ರಾಷ್ಟ್ರೀಯ ಪಕ್ಷಿ ದಿನ
  • ಜನವರಿ 6, 2026 – ವಿಶ್ವ ಯುದ್ಧ ಅನಾಥರ ದಿನ
  • ಜನವರಿ 6, 2026 – ಗುರು ಗೋಬಿಂದ್ ಸಿಂಗ್ ಜಯಂತಿ
  • ಜನವರಿ 8, 2026 – ಭೂಮಿಯ ತಿರುಗುವಿಕೆ ದಿನ
  • ಜನವರಿ 10, 2026 – ವಿಶ್ವ ಹಿಂದಿ ದಿನ
  • ಜನವರಿ 10, 2026 – ವಿಶ್ವ ತರ್ಕ ದಿನ
  • ಜನವರಿ 11, 2026 – ರಾಷ್ಟ್ರೀಯ ಮಾನವ ಕಳ್ಳಸಾಗಣೆ ಜಾಗೃತಿ ದಿನ
  • ಜನವರಿ 12, 2026 – ರಾಷ್ಟ್ರೀಯ ಯುವ ದಿನ
  • ಜನವರಿ 15, 2026 – ಭಾರತೀಯ ಸೇನಾ ದಿನ
  • ಜನವರಿ 16, 2026 – ರಾಷ್ಟ್ರೀಯ ನವೋದ್ಯಮ ದಿನ
  • ಜನವರಿ 17, 2026 – ವಿಶ್ವ ಧರ್ಮ ದಿನ
  • ಜನವರಿ 20, 2026 – ಪೆಂಗ್ವಿನ್ ಜಾಗೃತಿ ದಿನ
  • ಜನವರಿ 23, 2026 – ಪರಾಕ್ರಮ ದಿವಸ
  • ಜನವರಿ 23, 2026 – ಕೈಬರಹ ದಿನ
  • ಜನವರಿ 24, 2026 – ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ
  • ಜನವರಿ 24, 2026 – ಅಂತರರಾಷ್ಟ್ರೀಯ ಶಿಕ್ಷಣ ದಿನ
  • ಜನವರಿ 25, 2026 – ರಾಷ್ಟ್ರೀಯ ಮತದಾರರ ದಿನ
  • ಜನವರಿ 25, 2026 – ರಾಷ್ಟ್ರೀಯ ಪ್ರವಾಸೋದ್ಯಮ ದಿನ
  • ಜನವರಿ 26, 2026 – ಗಣರಾಜ್ಯೋತ್ಸವ
  • ಜನವರಿ 26, 2026 – ಅಂತರರಾಷ್ಟ್ರೀಯ ಕಸ್ಟಮ್ಸ್ ದಿನ
  • ಜನವರಿ 27, 2026 – ರಾಷ್ಟ್ರೀಯ ಭೌಗೋಳಿಕ ದಿನ
  • ಜನವರಿ 29, 2026 – ಭಾರತೀಯ ಪತ್ರಿಕಾ ದಿನ
  • ಜನವರಿ 30, 2026 – ವಿಶ್ವ ಕುಷ್ಠರೋಗ ದಿನ
  • ಜನವರಿ 30, 2026 – ಅಂತಾರಾಷ್ಟ್ರೀಯ ಜೀಬ್ರಾ ದಿನ

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 6:23 pm, Sun, 28 December 25

Source link

ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಭಾಗಿ – Kannada News | PM Modi Blesses Neeraj Chopra Himani Mor: Viral Wedding Reception Videos

2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ ಮೋದಿ ದಂಪತಿಗಳಿಗೆ ಉಡುಗೊರೆಗಳನ್ನು ನೀಡುತ್ತಿರುವುದು ಮತ್ತು ಅವರೊಂದಿಗೆ ಫೋಟೋಶೂಟ್‌ಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದಾಗಿದೆ. ಆ ಬಳಿಕ ದಂಪತಿಗಳನ್ನು ಆಶೀರ್ವದಿಸಿರುವ ಮೋದಿ ಅವರೊಂದಿಗೆ ಕೆಲ ಸಮಯ ಮಾತನಾಡಿ ಅಲ್ಲಿಂದ ತೆರಳಿದ್ದಾರೆ.

Source link

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ – Kannada News | IGP boralingaiah talks about Hunsur Sky Gold And Diamonds Jewelry Shop Robbery

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಐಜಿಪಿ ಬೋರಲಿಂಗಯ್ಯ ಪ್ರತಿಕ್ರಿಯಿಸಿದ್ದು, ಪ್ರಕರಣದ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ ಆರೋಗ್ಯ ಎಚ್ಚರಿಕೆಯನ್ನು ಹಂಚಿಕೊಂಡಿದ್ದಾರೆ.

ಭಾರತದ ಯುವ ಜನರು ದೇಶದ ಅತಿದೊಡ್ಡ ಭರವಸೆಯ ಮೂಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನವರಿ 12ರಂದು ರಾಷ್ಟ್ರೀಯ ಯುವ ದಿನ ಹಾಗೂ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯಂದು ವಿಕಸಿತ ಭಾರತ ಯುವ ನಾಯಕರ ಸಂವಾದದ ಎರಡನೇ ಆವೃತ್ತಿ ನಡೆಯಲಿದೆ ಎಂದು ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ

ಈ ವೇಳೆ ಆರೋಗ್ಯದ ಬಗ್ಗೆ ಗಮನಹರಿಸಿದ ಪ್ರಧಾನಿ ಮೋದಿ, “ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳು (ಯುಟಿಐ) ನಂತಹ ರೋಗಗಳ ವಿರುದ್ಧ ಪ್ರತಿಜೀವಕಗಳು (ಆ್ಯಂಟಿಬಯೋಟಿಕ್) ಕಡಿಮೆ ಪರಿಣಾಮಕಾರಿಯಾಗುತ್ತಿವೆ ಎಂದು ಎಚ್ಚರಿಸುವ ಇತ್ತೀಚಿನ ಐಸಿಎಂಆರ್ ವರದಿಯನ್ನು ಪ್ರಧಾನಿ ಬಹಿರಂಗಪಡಿಸಿದ್ದಾರೆ. ವೈದ್ಯರ ಸಲಹೆಯಿಲ್ಲದೆ ಆ್ಯಂಟಿಬಯೋಟಿಕ್​ಗಳನ್ನು ಬಳಸದಂತೆ ಅವರು ಜನರ ಬಳಿ ಮನವಿ ಮಾಡಿದ್ದಾರೆ. ಇವುಗಳ ಅತಿಯಾದ ಬಳಕೆ ಅಥವಾ ಯಾವುದೇ ವೈದ್ಯಕೀಯ ಸಲಹೆಯಿಲ್ಲದ ಬಳಕೆಯು ಅವುಗಳ ಪರಿಣಾಮಕಾರಿತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದ್ದಾರೆ. ಆ್ಯಂಟಿಬಯೋಟಿಕ್ ಔಷಧಿಯನ್ನು ತೆಗೆದುಕೊಳ್ಳುವ ಮುನ್ನ ವೈದ್ಯರ ಸಲಹೆ ಪಡೆಯಲೇಬೇಕು” ಎಂದು ಅವರು ಎಚ್ಚರಿಸಿದ್ದಾರೆ.

ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕುಗಳು (ಯುಟಿಐ) ನಂತಹ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ ಆ್ಯಂಟಿಬಯೋಟಿಕ್​​ಗಳು ಹೆಚ್ಚು ನಿಷ್ಪರಿಣಾಮಕಾರಿಯಾಗುತ್ತಿವೆ ಎಂದು ಐಸಿಎಂಆರ್ ವರದಿಯು ಕಂಡುಹಿಡಿದಿದೆ. ಇದು ತುಂಬಾ ಆತಂಕಕಾರಿ ಸಂಗತಿ. ವೈದ್ಯಕೀಯ ಸಲಹೆಯಿಲ್ಲದೆ ಜನರು ಆ್ಯಂಟಿಬಯೋಟಿಕ್​ಗಳನ್ನು ಸೇವಿಸುವ ಅಭ್ಯಾಸವು ಬೆಳೆಯುತ್ತಿರುವುದು ಆತಂಕಕಾರಿ ಸಂಗತಿ. ಪ್ರತಿಜೀವಕಗಳು ಹಾಗೆ ಯಾರು ಬೇಕಾದರೂ ಹೇಗೆ ಬೇಕಾದರೂ ತೆಗೆದುಕೊಳ್ಳಬಹುದಾದ ಔಷಧಿಗಳಲ್ಲ. ಅವುಗಳನ್ನು ವೈದ್ಯರ ಸಲಹೆಯ ನಂತರ ಮಾತ್ರ ಬಳಸಬೇಕು” ಎಂದು ಮೋದಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Mann Ki Baat: ಬೆಂಗಳೂರಿನ ಐಐಎಸ್​ಸಿಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ

“ಇದು 2025ರ ಮನ್ ಕಿ ಬಾತ್​​ನ ಕೊನೆಯ ಕಂತು. 2026ರಲ್ಲಿ ನಾವು ಮತ್ತೆ ಭೇಟಿಯಾಗುತ್ತೇವೆ. ಹೊಸ ಕಂತುಗಳು, ಹೊಸ ಸಮಸ್ಯೆಗಳೊಂದಿಗೆ ನಾವು ಅದೇ ಉತ್ಸಾಹ, ಶಕ್ತಿ ಮತ್ತು ಒಗ್ಗಟ್ಟಿನ ಭಾವನೆಯೊಂದಿಗೆ ಹಿಂತಿರುಗುತ್ತೇವೆ” ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್​​ನ ಕೊನೆಯಲ್ಲಿ ಹೇಳಿದ್ದಾರೆ. ಚಳಿಗಾಲದಲ್ಲಿ ಜನರು ಹೆಚ್ಚು ಆರೋಗ್ಯದ ಬಗ್ಗೆ ಗಮನ ಹರಿಸಲು ಒತ್ತಾಯಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 5:59 pm, Sun, 28 December 25

Source link

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ‌ ಮಾಡಿದರು ಎಂದು ತಿಳಿಸಿದ್ದಾರೆ. ಇನ್ನು ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ಹೇಳಿದ ದುಬೈನ ‘ಕನ್ನಡ ಪಾಠ ಶಾಲೆ’ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ

Source link

Exit mobile version