New Year 2026: ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು – Kannada News | New Year 2026 Security: Bengaluru Expects Over 10 Lakh Revelers; Focus on Womens Safety and Crowd Management
ಬೆಂಗಳೂರು, ಡಿಸೆಂಬರ್ 28: ಹೊಸ ವರ್ಷ 2026ರ ಆಚರಣೆಗೆ ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸರು ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ಜನದಟ್ಟಣೆ ನಿರ್ವಹಣೆಗೆ ವಿಶೇಷ ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಅತ್ಯುನ್ನತ ಆದ್ಯತೆ ನೀಡಲಾಗಿದೆ. ಬಾರ್, ರೆಸ್ಟೋರೆಂಟ್ ಮತ್ತು ಮಾಲ್‌ಗಳೊಂದಿಗೆ ಸಭೆ ನಡೆಸಿ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ….