ಮೈಸೂರು ಅರಮನೆ ಬಳಿ ಭಾರಿ ಭದ್ರತಾ ಲೋಪ? ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ ಇದ್ದರೂ ಸೆರೆಯಾಗಿಲ್ಲ ಸ್ಫೋಟದ ದೃಶ್ಯ! – Kannada News | Major Security Lapse Near Mysuru Palace? Blast Footage Missing Despite CCTV Cameras

ಮೈಸೂರು, ಡಿಸೆಂಬರ್ 27: ಕ್ರಿಸ್ಮಸ್ ದಿನ ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದ ಮುಂಭಾಗದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದೆ. ಬಲೂನು ಮಾರಾಟಗಾರ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ ಹಾಗೂ ಬೆಂಗಳೂರು ಮೂಲದ ಲಕ್ಷ್ಮೀ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಸ್ಥಳದ ಸಮೀಪವೇ ಅಳವಡಿಸಲಾಗಿದ್ದ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾದಲ್ಲಿ ಘಟನೆಯ ಯಾವುದೇ ದೃಶ್ಯ ಸೆರೆಯಾಗದಿರುವುದು ಅಚ್ಚರಿ ಮೂಡಿಸಿದೆ. 360 ಡಿಗ್ರಿ ಕ್ಯಾಮರಾ ಅದಾಗಿದ್ದು, ಘಟನೆ ಸಮಯದಲ್ಲಿ ಬೇರೆ ಭಾಗವನ್ನು ಸೆರೆ ಹಿಡಿಯುತ್ತಿತ್ತು ಎಂದು ಮಾಹಿತಿ ಲಭ್ಯವಾಗಿದೆ. ಅರಮನೆಯ ಭದ್ರತೆಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಕ್ಯಾಮರಾಗಳನ್ನು ಅಳವಡಿಸಿದ್ದರೂ, ನಿರ್ಣಾಯಕ ಸಮಯದಲ್ಲಿ ದೃಶ್ಯಗಳು ಲಭ್ಯವಾಗದಿರುವುದು ಭದ್ರತಾ ಲೋಪದ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ. ರಾಜ್ಯ ಗೃಹ ಇಲಾಖೆ ಹಾಗೂ ಮೈಸೂರು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಎನ್ಐಎ ಸಹ ಮಾಹಿತಿ ಕಲೆ ಹಾಕುತ್ತಿದೆ. ಈ ಘಟನೆಯು ಅರಮನೆಯ ಭದ್ರತಾ ವ್ಯವಸ್ಥೆಯ ಬಗ್ಗೆ ಕಳವಳ ಹುಟ್ಟುಹಾಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗದಗ: ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು – Kannada News | Mundargi Incident: 7 Women Brutally Beaten as Child Kidnappers by Mob

ಗದಗ, ಡಿ.27: ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಸಾರ್ವಜನಿಕರು ಥಳಿಸಿರು ಘಟನೆ ನಡೆದಿದೆ. ಮಕ್ಕಳ‌ ಕಳ್ಳಿಯರು ಎಂದು ಭಾವಿಸಿ ಬಸ್ ನಿಲ್ದಾಣದಲ್ಲಿ ಈ ಮಹಿಳೆಯರಿಗೆ ಹೊಡೆದಿದ್ದಾರೆ. ಈ ಏಳು ಮಹಿಳೆಯರನ್ನು ಧಾರವಾಡ ಜಿಲ್ಲೆ ಅಣ್ಣಿಗೇರಿ‌ ಮೂಲದವರು ಎಂದು ಹೇಳಲಾಗಿದೆ. ಹೇರ್ ಪಿನ್ ಮಾರುತ್ತಿದ್ದ ಅಣ್ಣಿಗೇರಿ‌ ಮೂಲದ ಮಹಿಳೆಯರನ್ನು ಮಕ್ಕಳ ಕಳ್ಳಿಯರು ಎಂದು ಹೇಳಿ ಥಳಿಸಿದ್ದಾರೆ. ಇದೀಗ ಸ್ಥಳೀಯರು ಅಪರಿಚಿತ ಮಹಿಳೆಯರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | You can get all these benefits by waking up during Brahma Muhurta

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು (waking up) ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, ಜ್ಞಾನ, ಬುದ್ಧಿವಂತಿಕೆ ಮತ್ತು ಆರೋಗ್ಯ ಲಭಿಸುತ್ತದೆ ಎಂದು ನಂಬಲಾಗಿದೆ. ಹಾಗಿದ್ರೆ ಈ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ನೋಡೋನ ಬನ್ನಿ.

ಬ್ರಹ್ಮ ಮುಹೂರ್ತದಲ್ಲಿ ಏಳುವುದರ ಪ್ರಯೋಜನಗಳೇನು?

ಧಾರ್ಮಿಕ ನಂಬಿಕೆಗಳ ಪ್ರಕಾರ, ಬ್ರಹ್ಮ ಮುಹೂರ್ತದ ಸಮಯದಲ್ಲಿ ಏಳುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ ಮತ್ತು ಈ ಸಮಯದಲ್ಲಿ ಎಚ್ಚರಗೊಳ್ಳುವ ವ್ಯಕ್ತಿಗೆ ದೇವರುಗಳು ಮತ್ತು ದೇವತೆಗಳು ಆಶೀರ್ವಾದ ನೀಡುತ್ತಾರೆ. ಇದಲ್ಲದೆ, ಬ್ರಹ್ಮ ಮುಹೂರ್ತದ ಸಮಯದಲ್ಲಿ ಎಚ್ಚರಗೊಳ್ಳುವ ಅಭ್ಯಾಸವು ಜೀವನದಲ್ಲಿ ಅಪಾರ ಯಶಸ್ಸನ್ನು ತರಲು ಸಹಾಯ ಮಾಡುತ್ತದೆ ಎಂಬ ನಂಬಿಕೆಯಿದೆ.

ವೈಜ್ಞಾನಿಕ ಹಿನ್ನೆಲೆಯಲ್ಲಿ ನೋಡುವುದಾದರೆ, ಬ್ರಹ್ಮಮುಹೂರ್ತದಲ್ಲಿ ಆಮ್ಲಜನಕ ಹೆಚ್ಚಿನ ಮಟ್ಟದಲ್ಲಿರುತ್ತವೆ ಮತ್ತು ಮಾಲಿನ್ಯ ಕಡಿಮೆ ಇರುತ್ತದೆ. ಈ ವಾತಾವರಣವು  ದೇಹವನ್ನು ಚೈತನ್ಯಗೊಳಿಸುತ್ತದೆ ಮತ್ತು ಶ್ವಾಸಕೋಶದ ಕಾರ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಇದು ಮಾನಸಿಕ ಸ್ಪಷ್ಟತೆ, ಒತ್ತಡ ನಿವಾರಣೆ ಮತ್ತು ಬಲವಾದ ರೋಗನಿರೋಧಕ ವ್ಯವಸ್ಥೆಯಂತಹ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಇನ್ನೂ ಅನೇಕ ಪ್ರಯೋಜನಗಳೂ ಇವೆ. ಅವುಗಳೆಂದರೆ,

ಉತ್ತಮ ಜೀರ್ಣಕ್ರಿಯೆ: ಬ್ರಹ್ಮ ಮುಹೂರ್ತದಲ್ಲಿ ಎಚ್ಚರಗೊಳ್ಳುವುದರಿಂದ ದೇಹದ ಸಿರ್ಕಾಡಿಯನ್ ಲಯವು ನಿಯಂತ್ರಿಸಲ್ಪಡುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ.

ಶಕ್ತಿ ಮತ್ತು ಚೈತನ್ಯ: ಬ್ರಹ್ಮ ಮುಹೂರ್ತದ ಸಮಯದಲ್ಲಿ ಗಾಳಿಯು ಆಮ್ಲಜನಕದಿಂದ ಸಮೃದ್ಧವಾಗಿದ್ದು, ಈ ಶುದ್ಧ ಗಾಳಿ ದೇಹವನ್ನು ಉಲ್ಲಾಸಗೊಳಿಸುತ್ತದೆ ಮತ್ತು ಚೈತನ್ಯಗೊಳಿಸುತ್ತದೆ. ಇದು ದಿನದ ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಉತ್ತಮ ನಿದ್ರೆ: ಬ್ರಹ್ಮ ಮುಹೂರ್ತದಲ್ಲಿ ಎಚ್ಚರಗೊಳ್ಳುವುದರಿಂದ ನಿದ್ರೆಯ ಮಾದರಿಗಳು ಕ್ರಮಬದ್ಧವಾಗುತ್ತವೆ, ಇದು ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

ಉತ್ತಮ ರೋಗನಿರೋಧಕ ಶಕ್ತಿ: ಬ್ರಹ್ಮ ಮುಹೂರ್ತದ ಸಮಯದಲ್ಲಿ ನಿಯಮಿತವಾಗಿ ಏಳುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ವಾತಾವರಣವು ಶುದ್ಧ ಆಮ್ಲಜನಕದಿಂದ ಸಮೃದ್ಧವಾಗಿರುತ್ತದೆ, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

ಮಾನಸಿಕ ಒತ್ತಡದಿಂದ ಮುಕ್ತಿ: ಬ್ರಹ್ಮ ಮುಹೂರ್ತದ ಸಮಯದಲ್ಲಿ ವಾತಾವರಣವು ಶಾಂತ ಮತ್ತು ಶುದ್ಧವಾಗಿದ್ದು, ಇದು ಮನಸ್ಸು ಶಾಂತವಾಗಿರಲು ಅನುವು ಮಾಡಿಕೊಡುತ್ತದೆ. ಅಲ್ಲದೆ  ಈ ಸಮಯ ಧ್ಯಾನ, ಯೋಗ ಮತ್ತು ಪ್ರಾಣಾಯಾಮಕ್ಕೆ ಸೂಕ್ತ. ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಈ 7 ಆರೋಗ್ಯ ಸಮಸ್ಯೆ ಇರುವವರು ತಪ್ಪಿಯೂ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಾರದು ಎಚ್ಚರ!

ಬ್ರಹ್ಮ ಮುಹೂರ್ತದಲ್ಲಿ ಏಳಲು ಈ ಹಂತಗಳನ್ನು ಅನುಸರಿಸಿ:

  • ಬ್ರಹ್ಮ ಮುಹೂರ್ತದ ಸಮಯದಲ್ಲಿ ಎಚ್ಚರಗೊಳ್ಳಲು, ಬೇಗ ಮಲಗುವ ಅಭ್ಯಾಸವನ್ನು ರೂಢಿಸಿಕೊಳ್ಳಿ. ಪ್ರತಿದಿನ 7 ಗಂಟೆಗಳ ಕಾಲ ನಿದ್ರೆ ಮಾಡುವ ಗುರಿಯನ್ನು ಹೊಂದಿಸಿ.
  • ಬ್ರಹ್ಮ ಮುಹೂರ್ತದ ಸಮಯದಲ್ಲಿ ಎಚ್ಚರಗೊಳ್ಳಲು, ಭಾರೀ ಭೋಜನವನ್ನು ತಪ್ಪಿಸಿ. ನಿಮ್ಮ ರಾತ್ರಿಯ ಭೋಜನ ಲಘುವಾಗಿರಲಿ.
  • ಬ್ರಹ್ಮ ಮುಹೂರ್ತಕ್ಕೆ 15 ನಿಮಿಷಗಳ ಮೊದಲು ನಿಮ್ಮ ಅಲಾರಂ ಹೊಂದಿಸಿ. ಇದು ನಿಮಗೆ ತಕ್ಷಣ ಎಚ್ಚರಗೊಳ್ಳಲು ಸಹಾಯ ಮಾಡುತ್ತದೆ. ಮೊದಲಿಗೆ ಒಂದು ಅಥವಾ ಎರಡು ದಿನ ನೀವು ಆಲಸ್ಯ ಅನುಭವಿಸಬಹುದು, ಆದರೆ ನಂತರದ ದಿನಗಳಲ್ಲಿ ನೀವು ಬೇಗನೆ ಎಚ್ಚರಗೊಳ್ಳಲು ಒಗ್ಗಿಕೊಳ್ಳುತ್ತೀರಿ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Samudrika Shastra: ನಿಮ್ಮ ತೋರು ಬೆರಳಿನ ಆಕಾರವು ತಿಳಿಸುತ್ತೆ ನಿಮ್ಮ ವ್ಯಕ್ತಿತ್ವ ಮತ್ತು ಅದೃಷ್ಟ – Kannada News | The Astrological Significance of the Index Finger and Its Impact on Destiny

ಒಂದು ಕೈಯಲ್ಲಿ ಐದು ಬೆರಳುಗಳಿರುತ್ತವೆ. ಕೆಲವರಿಗೆ ಆರನೇ ಬೆರಳೂ ಇರುವುದುಂಟು, ಅದನ್ನು ಅದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಐದು ಬೆರಳುಗಳಲ್ಲಿ ಪ್ರತಿಯೊಂದಕ್ಕೂ ಅದರದೇ ಆದ ಇತಿಹಾಸ ಮತ್ತು ಮಹತ್ವವಿದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ, ಹೆಬ್ಬೆರಳನ್ನು ಶುಕ್ರನಿಗೆ, ತೋರು ಬೆರಳನ್ನು ಗುರು (ಬೃಹಸ್ಪತಿ) ಗ್ರಹಕ್ಕೆ, ಮಧ್ಯದ ಬೆರಳನ್ನು ಶನಿಗೆ, ಉಂಗುರದ ಬೆರಳನ್ನು ರವಿಗೆ (ಸೂರ್ಯ) ಮತ್ತು ಕಿರು ಬೆರಳನ್ನು ಬುಧನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತದೆ. ತೋರು ಬೆರಳನ್ನು ಗುರು ಬೆರಳು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಪುಷ್ಯರಾಗ ರತ್ನದ ಉಂಗುರವನ್ನು ಈ ತೋರು ಬೆರಳಿಗೆ ಧರಿಸುವುದು ವಾಡಿಕೆ. ತೋರು ಬೆರಳಿನ ಆಕಾರವು ವ್ಯಕ್ತಿಯ ಬುದ್ಧಿವಂತಿಕೆ ಮತ್ತು ಸ್ವಭಾವವನ್ನು ವಿವರಿಸುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ.

ತೋರು ಬೆರಳಿನ ಆಕಾರವು ವ್ಯಕ್ತಿಯ ಬುದ್ಧಿವಂತಿಕೆ ಮತ್ತು ಸ್ವಭಾವ:

  • ಉದ್ದವಾದ ತೋರು ಬೆರಳು: ತೋರು ಬೆರಳು ಉದ್ದವಾಗಿದ್ದರೆ, ಆ ವ್ಯಕ್ತಿಯು ನಾಯಕತ್ವದ ಗುಣಗಳನ್ನು ಹೊಂದಿರುತ್ತಾನೆ. ಸಮಾಜದಲ್ಲಿ ನಾಯಕನಾಗಿ ರೂಪಗೊಳ್ಳುವ ಸಾಧ್ಯತೆ ಇರುತ್ತದೆ.
  • ಚಪ್ಪಟೆಯಾದ ತೋರು ಬೆರಳು ಮತ್ತು ಅಗಲವಾದ ಉಗುರು: ತೋರು ಬೆರಳು ಚಪ್ಪಟೆಯಾಗಿ ಮತ್ತು ಉಗುರಿನ ಭಾಗ ಸ್ವಲ್ಪ ಅಗಲವಾಗಿದ್ದಲ್ಲಿ, ಆ ವ್ಯಕ್ತಿಗೆ ಹೆಚ್ಚಿನ ಆತ್ಮವಿಶ್ವಾಸ, ನಂಬಿಕೆ ಮತ್ತು ತೀಕ್ಷ್ಣ ಬುದ್ಧಿ ಇರುತ್ತದೆ. ಅವರು ತಮ್ಮ ಕೆಲಸ ಕಾರ್ಯಗಳಲ್ಲಿ ಜಯ ಸಾಧಿಸುವ ಸಾಮರ್ಥ್ಯ ಹೊಂದಿರುತ್ತಾರೆ.
  • ತ್ರಿಕೋನಾಕಾರದ ಅಥವಾ ಮೊನಚಾದ ತೋರು ಬೆರಳು: ತೋರು ಬೆರಳು ತ್ರಿಕೋನಾಕಾರದಲ್ಲಿ ಅಥವಾ ಮೊನಚಾಗಿದ್ದರೆ, ಅಂತಹ ವ್ಯಕ್ತಿಗಳು ಕನಸುಗಾರರಾಗಿರುತ್ತಾರೆ. ಅವರಿಗೆ ಪ್ರೀತಿ, ಆಸೆ-ಆಕಾಂಕ್ಷೆಗಳು ಹೆಚ್ಚು. ವಾಸ್ತವಕ್ಕಿಂತ ಕನಸಿನ ಲೋಕದಲ್ಲಿ ಹೆಚ್ಚು ವಿಹರಿಸುತ್ತಾರೆ.
  • ದಪ್ಪನಾದ ತೋರು ಬೆರಳು ಅಥವಾ ದಪ್ಪನಾದ ಉಗುರಿನ ಭಾಗ: ತೋರು ಬೆರಳು ದಪ್ಪನಾಗಿದ್ದು, ವಿಶೇಷವಾಗಿ ಉಗುರಿನ ಭಾಗ ದಪ್ಪವಾಗಿದ್ದರೆ, ಅಂತಹ ವ್ಯಕ್ತಿಗಳು ವಿಶಾಲ ಹೃದಯ ಮತ್ತು ದಾನಗುಣ ಹೊಂದಿರುತ್ತಾರೆ. ಅವರು ದಾನ ಕಾರ್ಯಗಳಲ್ಲಿ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಾರೆ.
  • ಕುಳ್ಳನೆಯ, ಊದಿಕೊಂಡ ಅಥವಾ ಅಗಲವಾದ ತೋರು ಬೆರಳು: ತೋರು ಬೆರಳು ಕುಳ್ಳಕ್ಕೆ, ಊದಿಕೊಂಡಂತೆ ಅಥವಾ ಅಗಲವಾಗಿದ್ದರೆ, ಅಂತಹ ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಬಗ್ಗೆಯೇ ನಕಾರಾತ್ಮಕ ಭಾವನೆಗಳನ್ನು ಹೊಂದಿರುತ್ತಾರೆ. ‘ನನ್ನ ಜೀವನ ಇಷ್ಟೇನಾ?’ ಎಂದು ಭಾವಿಸುತ್ತಿರುತ್ತಾರೆ. ಆದರೆ ಸಾರ್ವಜನಿಕ ಜೀವನದಲ್ಲಿ ಅವರಿಗೆ ಉತ್ತಮ ಹೆಸರು ಇರುತ್ತದೆ. ಕುಟುಂಬದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು.

ಇದನ್ನೂ ಓದಿ: ಮನಿ ಪ್ಲಾಂಟ್‌ನ ಬುಡದಲ್ಲಿ ಒಂದು ನಾಣ್ಯ ಹೂತಿಡಿ; ಪ್ರಯೋಜನ ಸಾಕಷ್ಟಿವೆ

ಶಾಸ್ತ್ರಕಾರರು ಒಳ್ಳೆಯ ಉದ್ದೇಶಗಳಿಗಾಗಿ ತೋರು ಬೆರಳನ್ನು ಬಳಸಲು ಸಲಹೆ ನೀಡುತ್ತಾರೆ. ಒಬ್ಬರನ್ನು ನಿಂದಿಸಲು ಅಥವಾ ಕೆಟ್ಟದ್ದಕ್ಕೆ ತೋರು ಬೆರಳನ್ನು ತೋರಿಸಿದರೆ, ಅದರ ನಕಾರಾತ್ಮಕ ಪರಿಣಾಮಗಳು ದುಪ್ಪಟ್ಟಾಗಿ ನಮಗೆ ತಲುಪುತ್ತವೆ ಎಂದು ಇತಿಹಾಸದಲ್ಲಿ ಹೇಳಲಾಗಿದೆ. ತೋರು ಬೆರಳಿನ ಆಕಾರ ಒಬ್ಬ ವ್ಯಕ್ತಿಯ ಸಾಮಾನ್ಯ ಗುಣಲಕ್ಷಣಗಳನ್ನು ತೋರಿಸುವ ಸಾಧ್ಯತೆ ಇದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೆಂಪೇಗೌಡ ಏರ್ಪೋರ್ಟ್: ಹಳದಿ ಬೋರ್ಡ್ ಕ್ಯಾಬ್ ನಿಯಮ, ದಂಡ ಪರಿಷ್ಕರಣೆ, ಚಾಲಕರಿಗೆ ರಿಲೀಫ್ – Kannada News | BLR Airport Cab Rules: New Yellow Board Pickup Time and Fines Revised After Protests

ಬೆಂಗಳೂರು, ಡಿ.27: ಬೆಂಗಳೂರು ಕೆಂಪೇಗೌಡ ಏರ್ಪೋಟ್ ನಲ್ಲಿ (Kempegowda Airport) ಹಳದಿ ಬೋರ್ಡ್ ಚಾಲಕರ ಪಿಕಪ್ ಸಮಯ ಹೆಚ್ಚಳ ಹಾಗೂ ದಂಡದ ನಿಯಮ ಜಾರಿಗೆ ಸಂಬಂಧಿಸಿದಂತೆ, ಹೊಸ ನಿಯಮ ಜಾರಿ ವಿರುದ್ದ ಚಾಲಕರು ಮಾಡಿದ್ದ ಪ್ರತಿಭಟನೆಗೆ ಮಣಿದ ಏರ್ಪೋಟ್ ಆಡಳಿತ ಮಂಡಳಿ ಇದೀಗ ಹೊಸ ದರ ಹಾಗೂ ನಿಯಮವನ್ನು ಜಾರಿ ಮಾಡಿದೆ. 10 ನಿಮಿಷದಿಂದ 15 ನಿಮಿಷಕ್ಕೆ ಹಳದಿ ಬೋರ್ಡ್ ಕ್ಯಾಬ್ಗಳ ಪಿಕಪ್ ಸಮಯ ಹೆಚ್ಚಳ ಮಾಡಿತ್ತು. ಟರ್ಮಿನಲ್ 1ರ P3 ಮತ್ತು P4 ನಲ್ಲಿ ಪಿಕಪ್ ಸಮಯ ಹೆಚ್ಚಳ ಮಾಡಲಾಗಿತ್ತು. 15 ನಿಮಿಷದ ಉಚಿತ ಪಿಕಪ್ ಸಮಯ ಮೀರಿದರೆ 15ರಿಂದ 45 ನಿಮಿಷ ಹೆಚ್ಚುವರಿಯಾಗಿ ಉಳಿದುಕೊಂಡರೆ 100 ರೂ. ದಂಡ ಹಾಕಲಾಗುವುದು ಎಂಬ ನಿಯಮವನ್ನು ತರಲಾಗಿತ್ತು.

ಇದೀಗ ಈ ನಿಯಮವನ್ನು ಸಡಿಲಗೊಳಿಸಿ 45 ನಿಮಿಷಕ್ಕಿಂತ ಹೆಚ್ಚುವರಿಯಾಗಿ ನಿಲುಗಡೆ ಮಾಡಿದ್ರೆ ಪ್ರತಿ ಗಂಟೆಗೆ 100 ರೂ. ಬದಲು 50 ರೂ ದಂಡ ಹಾಕಲಾಗುವುದು. ಒಂದು ದಿನ ಪೂರ್ತಿ ವಾಹನ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ರೆ 600 ರೂ. ಪೈನ್ ಹಾಕಲಾಗಿತ್ತು. ಇದೀಗ ಒಂದು ದಿನಕ್ಕೂ ಪಾರ್ಕಿಂಗ್​​​ನಲ್ಲಿ ವಾಹನ ಉಳಿದ್ರೆ ದಿನಕ್ಕೆ 350 ರೂಪಾಯಿ ದಂಡ ಕಟ್ಟಬೇಕಾಗುತ್ತದೆ ಎಂದು ಕೆಂಪೇಗೌಡ ಏರ್ಪೋಟ್ ಆಡಳಿತ ಮಂಡಳಿ ಹೊಸ ದಂಡ ದರ ಪಟ್ಟಿ ಬಿಡುಗಡೆ ಮಾಡಿದೆ.

ಈ ಹಿಂದೆ ಹಳದಿ ಬೋರ್ಡ್ ಕ್ಯಾಬ್ಗೆ 8 ನಿಮಿಷ ಮಾತ್ರ ಉಚಿತ ಪಾರ್ಕಿಂಗ್ ನೀಡಿದ್ದ ಕೆಐಎಬಿ. ನಂತರದಲ್ಲಿ ಈ ನಿಮಯವನ್ನು ಬದಲಾವಣೆ ಮಾಡಿ, 8 ನಿಮಿಷದ ನಂತರ 150 ರೂ ದಂಡ ಹಾಕಲಾಗುವುದು ಎಂದು ಹೇಳಿತ್ತು. ಈ ನಿಯಮದ ವಿರುದ್ದ ಕ್ಯಾಬ್​​ ಚಾಲಕರು ಏರ್ಪೋಟ್ ಟೋಲ್ ಬಳಿ ಪ್ರತಿಭಟನೆ ಮಾಡಿದ್ದರು. ಚಾಲಕರ ಪ್ರತಿಭಟನೆ ಬೆನ್ನಲೇ ಸಭೆ ನಡೆಸಿ ಇದೀಗ ಹಳದಿ ಬೋರ್ಡ್ಗಳಿಗೆ ಹೊಸ ದರ ಹಾಗೂ ಸಮಯ ನಿಗದಿ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಹೊಸ ರೂಲ್ಸ್​: ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ ದಂಡ ಫಿಕ್ಸ್​​

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು, ಇತರ ನಿಯಮಗಳನ್ನು ಅನುಸರಿಸಲು ಹೊಸ ನಿಯಮಗಳನ್ನು ಪರಿಚಯಿಸಲಾಗಿತ್ತು. ಪ್ರತಿದಿನ ಸುಮಾರು 1,30,000 ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತದ 3ನೇ ಅತಿದೊಡ್ಡ ವಿಮಾನ ನಿಲ್ದಾಣ. ಹಾಗಾಗಿ ಸುಮಾರು 1 ಲಕ್ಷ ವಾಹನಗಳು ಪ್ರತಿದಿನ ಏರ್​​ಪೋರ್ಟ್​​ ಮಾರ್ಗದಲ್ಲಿ ಸಂಚಾರ ನಡೆಸುತ್ತವೆ. ಇದರಿಂದಾಗಿ ಟರ್ಮಿನಲ್‌ಗಳ ಮುಂಭಾಗ ಇರುವ ಕರ್ಬ್‌ಸೈಡ್‌ನಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಹಾಗಾಗಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಡ್ರಾಪ್-ಆಫ್ ಮತ್ತು ಪಿಕ್-ಅಪ್ ಮಾರ್ಗಗಳಲ್ಲಿ ಕೆಲವೊಂದು ನಿಯಮಗಳನ್ನು ತರಲಾಗಿತ್ತು. ಇದರ ಜತೆಗೆ ಟರ್ಮಿನಲ್​​​​ 1ರಲ್ಲಿ ಯಲ್ಲೋ ಬೋರ್ಡ್​ ಕಾರುಗಳಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಯಲ್ಲೋ ಬೋರ್ಡ್ ಕಾರುಗಳಿಗೆ P3, P4 ಪಾರ್ಕಿಂಗ್​ಗೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ನಿಯಮದಲ್ಲೂ ಬದಲಾವಣೆ ಮಾಡಲಾಗಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 10:27 am, Sat, 27 December 25

Source link

ಬೆಂಗಳೂರು: ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಖಾಸಗಿ ಬಸ್ ಚಾಲಕ – Kannada News | Private Bus Safety: Drunk Sea Bird Bus Driver Caught Incident Sparks Alarm Amid Bengaluru Checks

ಬೆಂಗಳೂರು, ಡಿಸೆಂಬರ್ 27: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಸೀ ಬರ್ಡ್ ಬಸ್ ದುರಂತದ ಬೆನ್ನಲ್ಲೇ, ಅದೇ ಕಂಪನಿಯ ಮತ್ತೊಬ್ಬ ಚಾಲಕನ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ ಮೂಡಿಸುವಂತಹ ಈ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಸೀ ಬರ್ಡ್ ಬಸ್ ಅನ್ನು ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ ಚಾಲಕ, ಉಪ್ಪಾರಪೇಟೆ ಸಂಚಾರಿ ಪೊಲೀಸರ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ನಗರದಾದ್ಯಂತ ತೀವ್ರ ತಪಾಸಣೆ ನಡೆಯುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಬಸ್ ತಡೆಯಲಾಯಿತು. ತಪಾಸಣೆಯಲ್ಲಿ ಚಾಲಕ ಮದ್ಯಪಾನ ಮಾಡಿರುವುದು ದೃಢಪಟ್ಟ ಕೂಡಲೇ, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡರು.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಿದ ಪೊಲೀಸರು, ತಕ್ಷಣವೇ ಬೇರೆ ಚಾಲಕನ ವ್ಯವಸ್ಥೆ ಮಾಡಿ ಬಸ್ ಅನ್ನು ಗೋವಾಕ್ಕೆ ಕಳುಹಿಸಿದರು. ಈ ಘಟನೆಯು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಖಾಸಗಿ ಬಸ್​ಗಳ ಮೇಲಿನ ನಿಗಾವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಡಿಸೆಂಬರ್ 25ರ ನಸುಕಿನಲ್ಲಿ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಸೀ ಬರ್ಡ್ ಬಸ್ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಎದುರುಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಸ್‌ಗೆ ಗುದ್ದಿದ ಪರಿಣಾಮ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿತ್ತು. ಈ ಭೀಕರ ದುರಂತದ ಕಹಿ ನೆನಪು ಇನ್ನೂ ಮಾಸುವ ಮುನ್ನವೇ ಅದೇ ಕಂಪನಿಯ ಬಸ್ ಚಾಲಕ ನಿರ್ಲಕ್ಷ್ಯದ ಚಾಲನೆ ಮಾಡಿದ್ದು ಬೆಳಕಿಗೆ ಬಂದಿರುವುದು ಆತಂಕ ಹೆಚ್ಚಿಸಿದೆ.

ಬೆಂಗಳೂರಿನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ಕಾರ್ಯಾಚರಣೆ ತೀವ್ರ

ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಬೆಂಗಳೂರು ನಗರದಲ್ಲಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆಯನ್ನು ಪೊಲೀಸರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ನಗರದ 140ಕ್ಕೂ ಹೆಚ್ಚು ಪಾಯಿಂಟ್‌ಗಳಲ್ಲಿ ಶುಕ್ರವಾರ ರಾತ್ರಿ ನಡೆಸಿದ ತಪಾಸಣೆಯಲ್ಲಿ 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಳೆದ ಮೂರು ದಿನಗಳಲ್ಲಿ ಒಟ್ಟು 1500ಕ್ಕೂ ಹೆಚ್ಚು ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಪ್ರಯಾಣಿಕರ ಜೀವಗಳೊಂದಿಗೆ ಚೆಲ್ಲಾಟವಾಡುವ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:01 am, Sat, 27 December 25

Source link

60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್ – Kannada News | Shreyas Iyer first net Session after injury

ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಮತ್ತೆ ಮೈದಾನಕ್ಕಿಳಿದಿದ್ದಾರೆ. ಅದು ಕೂಡ ಬರೋಬ್ಬರಿ 60 ದಿನಗಳ ನಂತರ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಅಯ್ಯರ್ ಅಕ್ಟೋಬರ್​ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣ ಚೇತರಿಸಿಕೊಂಡಿರುವ ಅವರು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.

ಶ್ರೇಯಸ್ ಅಯ್ಯರ್ 2 ತಿಂಗಳುಗಳ ಬಳಿಕ ನೆಟ್ಸ್​​ನಲ್ಲಿ ಅಭ್ಯಾಸ ನಡೆಸಿದ್ದು, ಹೀಗಾಗಿ ಮುಂಬರುವ ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಅವರನ್ನು ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಬಹುದು. ಹೀಗಾಗಿಯೇ ಇದೀಗ ನೆಟ್ಸ್​ನಲ್ಲಿ ಬೆವರಿಳಿಸಲಾರಂಭಿಸಿದ್ದಾರೆ.

ಶ್ರೇಯಸ್ ಅಯ್ಯರ್​ಗೆ ಏನಾಗಿತ್ತು?

ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.

ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿದೆ. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಇದರಿಂದಾಗಿ ಅವರು ಅಸ್ವಸ್ಥರಾಗಿದ್ದರು. ಸ್ಕ್ಯಾನಿಂಗ್ ರಿಪೋರ್ಟ್​ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್‌ ಚಿಕಿತ್ಸೆಗೆ ಒಳಪಡಿಸಲಾಗಿತ್ತು.

ಇದೀಗ ಸಂಪೂರ್ಣವಾಗಿ ಫಿಟ್​ನೆಸ್ ಸಾಧಿಸಿರುವ ಶ್ರೇಯಸ್ ಅಯ್ಯರ್ ಅಭ್ಯಾಸ ಶುರು ಮಾಡಿದ್ದಾರೆ. ಹೀಗಾಗಿ ಜನವರಿ 11 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

Source link

ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ – Kannada News | JDS BJP Alliance Under Strain? HD Deve Gowda Rules Out Tie Up in Local Body Elections, Know What Vijayendra says here

ಬೆಂಗಳೂರು, ಡಿಸೆಂಬರ್ 27: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (JDS) ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ, ಬಿರುಕು ಹೆಚ್ಚಾಗುತ್ತಿದೆಯಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹೆಚ್​ಡಿ ದೇವೇಗೌಡರು ಹೇಳಿದ್ದೇನು?

ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ದೇವೇಗೌಡ, ನಾವು ಲೋಕಸಭೆ, ವಿಧಾನಸಭೆ ಮತ್ತು ಪರಿಷತ್ತಿನ ಚುನಾವಣೆಗಳಲ್ಲಿ ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಲಿದ್ದೇವೆ. ಬಿಜೆಪಿ ರಾಜ್ಯ ಅಧ್ಯಕ್ಷರು ಹೇಳಿರುವ ವಿಚಾರದ ಬಗ್ಗೆ ನಾನು ಯಾವುದೇ ಪ್ರಶ್ನೆಗಳನ್ನು ಎತ್ತುವುದಿಲ್ಲ. ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿಯೂ ಜೆಡಿಎಸ್ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಜೆಡಿಎಸ್, ಆ ಮೂಲಕ ಎನ್​ಡಿಎ ಮಿತ್ರಕೂಟದ ಭಾಗವಾಗಿದೆ. ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲಿವೆ.

ಬಿವೈ ವಿಜಯೇಂದ್ರ ಹೇಳಿದ್ದೇನು?

4 ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಅಧಿಕಾರ ಹಿಡಿದ ಕೂಡಲೇ ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ಲೆಕ್ಕಾಚಾರಕ್ಕೆ ಇಳಿದಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಇದು, 2028ರ ವಿಧಾನಸಭೆ ವೇಳೆಗೆ ಬಿಜೆಪಿ, ಜೆಡಿಎಸ್ ಮೈತ್ರಿ ಮುರಿದು ಬೀಳುತ್ತಾ ಎಂಬ ಪ್ರಶ್ನೆ ಮೂಡಲು ಕಾರಣವಾಗಿದೆ. ಆದರೆ, ವಿಜಯೇಂದ್ರ ಹೇಳಿಕೆ ಬಗ್ಗೆ ಜಾಣತನದಿಂದ ಪ್ರತಿಕ್ರಿಯಿರುವ ದೇವೇಗೌಡರು, ಆ ಬಗ್ಗೆ ಪ್ರಶ್ನೆ ಮಾಡಲು ಹೋಗುವುದಿಲ್ಲ ಎಂದಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ರಚನೆಯಾಗಿದ್ದರೂ ಅದಕ್ಕೆ ಬಿಜೆಪಿ ರಾಜ್ಯ ನಾಯಕರ ಸಂಪೂರ್ಣ ಸಹಮತ ಸಿಕ್ಕಿಲ್ಲ ಎಂಬುದು ನಂತರದ ಬೆಳವಣಿಗೆಗಳಿಂದ ಸ್ಪಷ್ಟವಾಗಿದೆ. ವರಿಷ್ಠರ ಕಟ್ಟಪ್ಪಣೆಗೆ ಮಣಿದ ನಾಯಕರು, ನಾವು ಜೊತೆಗಿದ್ದೇವೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಆದರೆ, ಸರ್ಕಾರದ ವಿರುದ್ಧ ಜಂಟಿಯಾಗಿ ಹೋರಾಟ ರೂಪಿಸುವಲ್ಲಿ ಈ ಮೈತ್ರಿ ಸಫಲವಾಗಿಲ್ಲ. ಆಗೊಮ್ಮೆ ಈಗೊಮ್ಮೆ ಸಭೆ ನಡೆದರೂ ಅದು ಟೀ-ಕಾಫಿಗಷ್ಟೇ ಸೀಮಿತವಾಗಿದೆ ಎಂಬ ಬಗ್ಗೆ ರಾಜಕೀಯ ಪಡಸಾಲೆಯಲ್ಲಿ ಹಲವು ಬಾರಿ ಚರ್ಚೆಗಳಾಗಿವೆ.

ಇದನ್ನೂ ಓದಿ: ಕಾಂಗ್ರೆಸ್ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸುಮ್ನೆ ಭಾಷಣ ಮಾಡಿ ಹೋಗಿಲ್ಲ: ಖರ್ಗೆ ನಿವಾಸದ ಎದುರೇ ಡಿಕೆಶಿ ಖಡಕ್ ಮಾತು

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೂ ಮೈತ್ರಿಯಾಗಿ ವಿಪಕ್ಷಗಳು ಕ್ರಾಂತಿ ಮಾಡಿಲ್ಲ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಂತ ಬಲದ ಬಗ್ಗೆ ಮಾತನಾಡಿದ್ದಾರೆ. ಜೆಡಿಎಸ್ ಸಹ ಸ್ವಂತ ಬಲದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಎದುರಿಸುವ ಘೋಷಣೆ ಮಾಡಿದೆ. ಇದು ಮುಂದೆ ಯಾವ ಮಟ್ಟಕ್ಕೆ ತಲುಪಲಿದೆ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಈ ವಾರ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ – Kannada News | OTT Release this week, From December 23 to December 30

ಮುನಿಕಾಂತ್, ರಾಧಾ ರವಿ ಇನ್ನೂ ಕೆಲವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಡ್ಲ್ ಕ್ಲಾಸ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಮಧ್ಯಮವರ್ಗಗಳ ಬದುಕು, ಬವಣೆಗಳನ್ನು ಹಾಸ್ಯಪ್ರಧಾನವಾಗಿ ಸಿನಿಮಾನಲ್ಲಿ ತೋರಿಸಲಾಗಿದೆ. ಸಿನಿಮಾ ಅನ್ನು ಜೀ5ನಲ್ಲಿ ವೀಕ್ಷಿಸಬಹುದಾಗಿದೆ.

Source link

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..! – Kannada News | AUS vs ENG: Ashes Boxing Day 2025 enters history

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದ ಮೊದಲ ದಿನವೇ 20 ವಿಕೆಟ್​ಗಳು ಉರುಳಿವೆ. ಅಂದರೆ ಒಂದೇ ದಿನವೇ ಎರಡೂ ತಂಡಗಳು ಆಲೌಟ್ ಆಗಿವೆ. ಆಸ್ಟ್ರೇಲಿಯಾದಲ್ಲಿ ನಡೆದ ಬಾಕ್ಸಿಂಗ್ ಡೇ ಟೆಸ್ಟ್​ನ ಮೊದಲ ದಿನ 20 ವಿಕೆಟ್​ಗಳು ಉರುಳಿರುವುದು 94 ವರ್ಷಗಳ ಬಳಿಕ ಎಂಬುದು ವಿಶೇಷ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 110 ರನ್​ಗಳಿಗೆ ಸರ್ವಪತನ ಕಂಡಿದೆ. ಅಂದರೆ ಉಭಯ ತಂಡಗಳು ಬ್ಯಾಟಿಂಗ್ ಮಾಡಿರುವುದು 75.1 ಓವರ್​ಗಳನ್ನು ಮಾತ್ರ.

ಇದಕ್ಕೂ ಮುನ್ನ ಬಾಕ್ಸಿಂಗ್ ಡೇ (ಕ್ರಿಸ್ಮಸ್​ ಮರುದಿನ) ಟೆಸ್ಟ್ ಪಂದ್ಯದ ಮೊದಲ ದಿನವೇ 20 ವಿಕೆಟ್​ ಉರುಳಿರುವುದು 1931 ರಲ್ಲಿ. ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ನಡುವಣ ಈ ಪಂದ್ಯದ ಮೊದಲ ದಿನವೇ ಉಭಯ ತಂಡಗಳು ಆಲೌಟ್ ಆಗಿದ್ದವು.

ಇದಾದ ಬಳಿಕ ಆಸ್ಟ್ರೇಲಿಯಾದಲ್ಲಿ ನಡೆದ ಯಾವುದೇ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನವೇ ಉಭಯ ತಂಡಗಳು ಪ್ರಥಮ ಇನಿಂಗ್ಸ್ ಅಂತ್ಯಗೊಳಿಸಿರಲಿಲ್ಲ. ಇದೀಗ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲ ದಿನ 20 ವಿಕೆಟ್​ಗಳ ಪತನಕ್ಕೆ ಸಾಕ್ಷಿಯಾಗಿದೆ.

 

Source link

Exit mobile version