Headlines

Video Viral: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಚಂಡೀಗಢ: ವೈದ್ಯಕೀಯ ವೃತ್ತಿ ಎಂದರೆ ಅದೊಂದು ಪವಿತ್ರ ಸೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಕೇವಲ ‘ಹಣ ಮಾಡುವ ಯಂತ್ರ’ಗಳಂತೆ ನೋಡುತ್ತಿವೆ ಎಂಬ ಕಹಿಸತ್ಯವೊಂದನ್ನು ಯುವ ವೈದ್ಯೆಯೊಬ್ಬರು ಧೈರ್ಯವಾಗಿ ಬಯಲಿಗೆಳೆದಿದ್ದಾರೆ. ಚಂಡೀಗಢದ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಈ ಘಟನೆ ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಏನಿದು ಘಟನೆ? ಯುವ ವೈದ್ಯೆ ಡಾ. ಪ್ರಭ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯೆಯಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ…

Read More

Assembly Elections 2026 Voting: ನಾಳೆ ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ, ಮೇ 4ಕ್ಕೆ ಫಲಿತಾಂಶ

ನವದೆಹಲಿ, ಏಪ್ರಿಲ್ 08: ಅಸ್ಸಾಂ ಮತ್ತು ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ(Assembly Election) ನಡೆಯಲಿದೆ. ಚುನಾವಣೆಯ ಪ್ರಚಾರ ಮಂಗಳವಾರ ಸಂಜೆ ಕೊನೆಗೊಂಡಿದೆ. ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನ 126 ಸ್ಥಾನಗಳು, ಕೇರಳದ 140 ಸ್ಥಾನಗಳು ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಗುರುವಾರ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂನಲ್ಲಿ ಎಷ್ಟು ಮತದಾರರಿದ್ದಾರೆ? ಅಸ್ಸಾಂನಲ್ಲಿ ಒಟ್ಟು 25…

Read More

Karnataka 2nd PUC Result 2026: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಂಜೆ ರಿಸಲ್ಟ್ ಘೋಷಿಸಲಿದ್ದಾರೆ ಸಚಿವ ಮಧು ಬಂಗಾರಪ್ಪ!

ಬೆಂಗಳೂರು, ಏ.8: ದ್ವಿತೀಯ ಪಿಯುಸಿ ಪರೀಕ್ಷೆ ( 2nd PUC Result 2026) ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ನಾಳೆ, ಏಪ್ರಿಲ್ 9 ರಂದು ದ್ವಿತೀಯ ಪಿಯುಸಿ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು…

Read More

Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 8: ಬಹಳ ದಿನಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ (Gold Rates) ಒಂದು ಗ್ರಾಮ್​ಗೆ 300ರಿಂದ 500 ರೂಗಳಷ್ಟು ಏರಿಕೆ ಪಡೆದಿದೆ. ಬೆಳ್ಳಿ ಬೆಲೆಯೂ ಕೂಡ ಒಂದು ಗ್ರಾಮ್​ಗೆ 10 ರೂನಷ್ಟು ದುಬಾರಿಗೊಂಡಿದೆ. ಚೀನಾ ದೇಶದ ಸೆಂಟ್ರಲ್ ಬ್ಯಾಂಕ್ ಸತತವಾಗಿ ಚಿನ್ನದ ಖರೀದಿ ಮಾಡುತ್ತಿರುವುದು ಬೆಲೆ ಹೆಚ್ಚಳಕ್ಕೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,000…

Read More

ಕಾರ್ಪೊರೇಟ್ ಕೆಲಸ ತೊರೆದು ಕ್ಲೌಡ್ ಕಿಚನ್ ಶುರು ಮಾಡಿದ ಯುವ ಉದ್ಯಮಿ!

ಬೆಂಗಳೂರು, ಏಪ್ರಿಲ್ 08: ಓದು ಮುಗಿಸಿ, ಕೆಲಸ ಹಿಡಿದು, ಆರಾಮದಾಯಕ ಜೀವನ ಕಟ್ಟಿಕೊಂಡರೆ ಸಾಕು ಎನ್ನುವ ಮನೋಭಾವ ಹಲವು ಯುವಕರಿಗಿದೆ. ಆದರೆ ಕೆಲವೇ ಕೆಲವರು ಮಾತ್ರ ರಿಸ್ಕ್ ತೆಗೆದುಕೊಂಡು ತಾವೇ ಒಂದು ಸ್ಟಾರ್ಟ್​ಅಪ್ (Startup) ಮಾಡಲು ಮುಂದಾಗುತ್ತಾರೆ. ಅಂತೆಯೇ ನಗರದಲ್ಲಿ ಯುವ ಉದ್ಯಮಿಯೊಬ್ಬರು ತಮ್ಮ ಕಾರ್ಪೊರೇಟ್ ವೃತ್ತಿಯನ್ನು ತೊರೆದು ಹೊಸ ಪ್ರಯೋಗಕ್ಕೆ ಕೈಹಾಕಿರುವ ಘಟನೆ ಗಮನಸೆಳೆದಿದೆ. ನಗರದ ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಪ್ರದೇಶದ 23 ವರ್ಷದ ವ್ಯಕ್ತಿಯೊಬ್ಬರು ತಮ್ಮದೇ ಫ್ಲಾಟ್‌ನಿಂದ ಕ್ಲೌಡ್ ಕಿಚನ್ ಆರಂಭಿಸಿ ಸ್ವಯಂ…

Read More

ಸಾಲದ ವಿಚಾರದಲ್ಲಿ ರಾಜ್‌ಪಾಲ್ ಯಾದವ್​ರನ್ನು ಅಪಹಾಸ್ಯ ಮಾಡಿದವರಿಗೆ ಸಲ್ಮಾನ್ ನೇರ ಉತ್ತರ

ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟ ರಾಜ್‌ಪಾಲ್ ಯಾದವ್ ಅವರನ್ನು ಅಪಹಾಸ್ಯ ಮಾಡಲಾಗಿತ್ತು. ಈ ವಿಡಿಯೋ ವೈರಲ್ ಆದ ನಂತರ, ಸಲ್ಮಾನ್ ಖಾನ್ ಈಗ ರಾಜ್‌ಪಾಲ್ ಅವರನ್ನು ಬೆಂಬಲಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಡಾಲರ್ ದರ ಏರಿಕೆಯ ಬಗ್ಗೆ ಮಾತನಾಡುವಾಗ, ಕಾರ್ಯಕ್ರಮದ ನಿರೂಪಕ, ಪತ್ರಕರ್ತ ಸೌರಭ್ ದ್ವಿವೇದಿ, ಚೆಕ್ ಬೌನ್ಸ್ ವಿಷಯದ ಬಗ್ಗೆ ರಾಜ್‌ಪಾಲ್ ಅವರನ್ನು ಅಣಕಿಸಿದರು. ಡಾಲರ್ ದರ ಹೆಚ್ಚಾದರೂ ಅಥವಾ ಕಡಿಮೆಯಾದರೂ, ನೀವು ಅದಕ್ಕೆ ತಕ್ಕಂತೆ ಸಾಲದ ಮೊತ್ತವನ್ನು ಮರುಪಾವತಿಸಬೇಕಾಗುತ್ತದೆ ಎಂದು ಅವರು…

Read More

ಕ್ಷುಲ್ಲಕ ಕಾರಣಕ್ಕೆ ಪ್ರೇಮಿಗಳ ದುರಂತ ಅಂತ್ಯ: ಮೊದಲು ಯುವತಿ ಆತ್ಮಹತ್ಯೆ, ವಿಷಯ ಕೇಳಿ ಯುವಕನೂ ಸೂಸೈಡ್​​

ಬಾಗಲಕೋಟೆ, ಏಪ್ರಿಲ್​​ 08: ವೈಮನಸ್ಸಿನ ಕಾರಣಕ್ಕೆ ಪ್ರೇಮಿಗಳಿಬ್ಬರು ದುರಂತ ಅಂತ್ತ ಕಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬನಹಟ್ಟಿಯ KHDC ಕಾಲೋನಿಯಲ್ಲಿ ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳಾಗಿದ್ದಾರೆ. ನಿನ್ನೆ ಇಬ್ಬರ ಮಧ್ಯೆಯೂ ವೈಮನಸ್ಸು ಉಂಟಾಗಿ ಜಗಳ ನಡೆದಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ,…

Read More

‘ಮರಿ, ನಿಮಗಿಂತ ಮೊದಲೇ ನಾನು ಧುರಂಧರ್ 2 ನೋಡಿದೀನಿ’; ದೀಪಿಕಾ ಖಡಕ್ ತಿರುಗೇಟು

ಬಾಲಿವುಡ್ ಸಿನಿಮಾ ‘ಧುರಂಧರ್ 2’ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ಭಾರತದಲ್ಲೇ ಸಾವಿರಾರು ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ನಿರ್ಮಿಸಿದೆ. ಈ ಚಿತ್ರವನ್ನು ಕ್ರಿಕೆಟರ್​​ಗಳು, ರಾಜಕೀಯ ನಾಯಕರು ಸೇರಿದಂತೆ ಅನೇಕರು ಹಾಡಿ ಹೊಗಳಿದ್ದಾರೆ. ಆದರೆ, ಕಥಾ ನಾಯಕ ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಾತ್ರ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈ ಬಗ್ಗೆ ಚರ್ಚೆ ಶುರುವಾಗಿತ್ತು. ಇದಕ್ಕೆ ದೀಪಿಕಾ ಉತ್ತರ ನೀಡಿದ್ದಾರೆ. ಇನ್​​ಸ್ಟಾಗ್ರಾಮ್ ಒಂದರಲ್ಲಿ ವಿಡಿಯೋ ವೈರಲ್ ಆಗಿದೆ….

Read More

SSLC Exam: ಹಿಂದಿ ಮಾತ್ರವಲ್ಲ, ಕನ್ನಡವೂ ಸೇರಿ 9 ಭಾಷೆಗಳಿಗೆ ಅನ್ವಯವಾಗಲಿದೆ ಗ್ರೇಡಿಂಗ್! ಗ್ರೇಡ್ ಕೊಡೋದು ಹೇಗೆ ಗೊತ್ತಾ?

ಬೆಂಗಳೂರು, ಏಪ್ರಿಲ್ 8: ರಾಜ್ಯದ ಎಸ್ಎಸ್​ಎಲ್​​ಸಿ (SSLC) ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ಕ್ರಾಂತಿಕಾರಿ ನಿರ್ಧಾರ ಪ್ರಕಟಿಸಿದ್ದಾರೆ. ಇನ್ಮುಂದೆ ಎಸ್ಎಸ್​ಎಲ್​​ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕ ಇರುವುದಿಲ್ಲ. ಕೇವಲ ಗ್ರೇಡಿಂಗ್ (Grading system) ವ್ಯವಸ್ಥೆ ಇರಲಿದೆ. ಅಲ್ಲದೆ, ಈ ಭಾಷೆಯಲ್ಲಿ ಪಾಸ್ ಅಥವಾ ಫೇಲ್ ಎಂಬ ಪದ್ಧತಿ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಪ್ರಮುಖವಾಗಿ ಹಿಂದಿ ಹೇರಿಕೆ ತಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದ್ದರೂ,…

Read More

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ನವದೆಹಲಿ, ಏಪ್ರಿಲ್ 08: ದೇಶಾದ್ಯಂತ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ(Airport)ಗಳಲ್ಲಿ ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಈ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಡಿತವು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಮೂರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮೂರು ತಿಂಗಳ ನಂತರ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು AERA ಮಾರುಕಟ್ಟೆ ಪರಿಸ್ಥಿತಿಗಳು, ವಿಮಾನಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿ ಮತ್ತು…

Read More