ದೇಶದ 400ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಸಿನಿಮಾದ ಭರ್ಜರಿ ಪ್ರಚಾರ – Kannada News | Ramayana Movie makers announce nationwide School Outreach Campaign Ranbir Kapoor Yash
ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ರಾಮಾಯಣ’ (Ramayana) ಬಿಡುಗಡೆಗೆ ಸಿದ್ಥತೆ ನಡೆಯುತ್ತಿದೆ. ಇದೀಗ ಪ್ರೇಕ್ಷಕರನ್ನು ತಲುಪಲು ಚಿತ್ರತಂಡ ಅದ್ದೂರಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ದೇಶಾದ್ಯಂತ ಬೃಹತ್ ಶಾಲಾ ಅಭಿಯಾನವನ್ನು ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ. ಜುಲೈ 9ರಿಂದಲೇ ಈ ಮಹತ್ವದ ಶಾಲಾ ಅಭಿಯಾನ ಆರಂಭವಾಗಿದೆ. ದೇಶದ 18 ಪ್ರಮುಖ ನಗರಗಳ 400ಕ್ಕೂ ಹೆಚ್ಚು ಶಾಲೆಗಳನ್ನು ತಲುಪುವ ಗುರಿ ಹೊಂದಲಾಗಿದೆ. ಈ ಕಾರ್ಯಕ್ರಮದ ಮೂಲಕ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳಿಗೆ ರಾಮಾಯಣದ…