ಮಕ್ಕಳ ಮುಂದೆಯೇ ಪತ್ನಿಗೆ ಬೆಂಕಿ ಹಚ್ಚಿ, ಅದೇ ಬೆಂಕಿಗೆ ಮಗಳ ತಳ್ಳಿದ ಪಾಪಿ ತಂದೆ – Kannada News | Man Arrested After Woman Dies in Suspected Domestic Violence Case in Hyderabad
ಹೈದರಾಬಾದ್, ಡಿಸೆಂಬರ್ 26: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ. ಕ್ರಿಸ್‌ಮಸ್‌ಗೆ ಒಂದು ದಿನ ಮೊದಲು ನಗರದ ನಲ್ಲಕುಂಟಾ ಪ್ರದೇಶದಲ್ಲಿ ಈ ಭೀಕರ ಘಟನೆ ನಡೆದಿದೆ. ವೆಂಕಟೇಶ್ ತನ್ನ ಪತ್ನಿ ತ್ರಿವೇಣಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24 ರಂದು, ಮಕ್ಕಳ ಮುಂದೆಯೇ ತ್ರಿವೇಣಿ ಮೇಲೆ ಹಲ್ಲೆ…