ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್‌ಐಆರ್
ಚಿತ್ರದುರ್ಗ, ಮಾರ್ಚ್ 14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ (Chitradurga) ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 15 ಲಕ್ಷ ರೂಪಾಯಿ ಮೌಲ್ಯದ ನಕಲಿ ಬಿಲ್ ಸಲ್ಲಿಕೆ! ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಟಿ ಲೆವಲ್ ಟೆಕ್ನಿಕಲ್ ಸೆಲ್ (CLTC) ಸಿಬ್ಬಂದಿಗಳ…