ಸೈಕಲ್ ಓಡಿಸುತ್ತಿದ್ದ ಬಾಲಕನಿಗೆ ಸಾಕು ನಾಯಿ ಕಡಿತ; ನಾಯಿ ಮಾಲೀಕರ ಮೇಲೆ ಎಫ್ಐಆರ್!
ಬೆಂಗಳೂರು, ಏಪ್ರಿಲ್ 07: ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳ (Stray Dogs) ಜೊತೆಗೆ ಸಾಕು ನಾಯಿಗಳ ದಾಳಿಯೂ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ರಾಜಾಜಿನಗರದ 1ನೇ ಬ್ಲಾಕ್‌ನಲ್ಲಿ 11 ವರ್ಷದ ಬಾಲಕನ ಮೇಲೆ ಸಾಕು ನಾಯಿ ದಾಳಿ ನಡೆಸಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಾಲಕ ಒದ್ದಾಡುತ್ತಿದ್ದರೂ ಕ್ಯಾರೇ ಎನ್ನದ ಮಾಲೀಕರು ಮಾರ್ಚ್ 21ರಂದು ಬೆಳಗ್ಗೆ ಬ್ರೆಡ್ ತರಲು ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆ ವಾಕ್‌ಗೆ ಕರೆತಂದ ನಾಯಿಯು ಏಕಾಏಕಿ ದಾಳಿ ಮಾಡಿ…