Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 25ರ ದಿನಭವಿಷ್ಯ
ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಅತ್ಯಂತ ಕ್ರಿಯಾಶೀಲವಾದ ದಿನ ಇದಾಗಿರುತ್ತದೆ. ಉದ್ಯೋಗಕ್ಕೆ ರಜೆಯ ದಿನವಾಗಿದ್ದರೂ ನಿಮ್ಮ ಮನಸ್ಸು ಮುಂದಿನ ಗುರಿಗಳ ಬಗ್ಗೆ ಯೋಚಿಸುತ್ತಾ ಇರಲಿದೆ. ಕೌಟುಂಬಿಕವಾಗಿ ಸಂಭ್ರಮದ ಸಮಯವನ್ನು ಕಳೆಯಲಿದ್ದೀರಿ. ಮನೆಯ ಹಿರಿಯರೊಂದಿಗೆ ಹಳೆಯ ನೆನಪುಗಳನ್ನು ಮೆಲುಕು ಹಾಕುವಿರಿ. ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಆಕರ್ಷಣೆ ಹಾಗೂ ಬದಲಾವಣೆ ಕಂಡುಬರಲಿದ್ದು, ಸಾಮಾಜಿಕವಾಗಿ ನಿಮ್ಮ ಗೌರವ ಹೆಚ್ಚಲಿದೆ. ಆರ್ಥಿಕವಾಗಿ ಹಳೆಯ ಹೂಡಿಕೆಗಳಿಂದ ಸಣ್ಣ ಪ್ರಮಾಣದ ಲಾಭ ನಿರೀಕ್ಷೆ ಮಾಡಬಹುದು….