ದೆಹಲಿ ವಿಧಾನಸಭೆಯಲ್ಲಿ ಭದ್ರತಾ ಲೋಪ; ಗೇಟ್ ಮುರಿದು ಒಳಗೆ ನುಗ್ಗಿ, ಹೂಗುಚ್ಛ ಇಟ್ಟು ಹೋದ ಕಾರು ಚಾಲಕ!
ನವದೆಹಲಿ, ಏಪ್ರಿಲ್ 6: ಇಂದು ಮಧ್ಯಾಹ್ನ ದೆಹಲಿ ವಿಧಾನಸಭೆಯಲ್ಲಿ (Delhi Assembly) ಗಂಭೀರ ಭದ್ರತಾ ಲೋಪ ಕಂಡುಬಂದಿದೆ. ಉತ್ತರ ಪ್ರದೇಶದ ನೋಂದಣಿ ನಂಬರ್ ಹೊಂದಿರುವ ಅಪರಿಚಿತ ಕಾರು ಗೇಟ್ ಅನ್ನು ಮುರಿದು ಒಳಗೆ ನುಗ್ಗಿದೆ. ಭದ್ರತಾ ಸಿಬ್ಬಂದಿ ನೋಡನೋಡುತ್ತಿದ್ದಂತೆ ಕಾರು ಸ್ಪೀಕರ್ ವಿಜೇಂದರ್ ಗುಪ್ತಾ ಅವರ ಆಫೀಸ್ ಬಳಿ ತೆರಳಿದೆ. ಈ ಘಟನೆ ಕೋಲಾಹಲಕ್ಕೆ ಕಾರಣವಾಯಿತು. ಆ ಕಾರು, ಚಾಲಕ ಮತ್ತು ಘಟನೆಯ ಹಿಂದಿನ ಕಾರಣಗಳನ್ನು ಗುರುತಿಸಲು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಭದ್ರತಾ ವ್ಯವಸ್ಥೆಗಳ…