ಬಾರ್ನಲ್ಲಿ ಕಿರಿಕ್; ನಟ ನಿರಂಜನ್ ಮೇಲೆ ಬಿಯರ್ ಬಾಟಲ್ನಿಂದ ಹಲ್ಲೆ
ಕನ್ನಡ ಚಿತ್ರರಂಗದಲ್ಲಿ ಈಗತಾನೇ ಗುರುತಿಸಿಕೊಳ್ಳುತ್ತಿರುವ ನಟ ನಿರಂಜನ್ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಬಾರ್ ಒಂದರಲ್ಲಿ ನಡೆದ ಕಿರಿಕ್ ಮಿತಿ ಮೀರಿದ್ದು, ಬಿಯರ್ ಬಾಟಲಿಯಿಂದ ನಟನ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾರ್ಚ್ 28ರಂದು ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್ ಅಭಿನಯದ ‘ಒಡೆಯ’ (2019) ಸಿನಿಮಾದಲ್ಲಿ ನಿರಂಜನ್ ನಟಿಸಿದ್ದರು. ಈ ಸಿನಿಮಾದಲ್ಲಿ ದರ್ಶನ್ ಸಹೋದರನ ಪಾತ್ರದಲ್ಲಿ ಅವರು ಕಾಣಿಸಿಕೊಂಡರು. ಈ ಪಾತ್ರ ಅವರ…