ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ ಗೆಳೆಯರು ಸಾವು: ದೇವರಿಗೆ ಹರಕೆ ತೀರಿಸಲು ಹೋಗಿದ್ದ ಮತ್ತಿಬ್ಬರು ನದಿ ಪಾಲು
ಚಿಕ್ಕಬಳ್ಳಾಪುರ, ಏಪ್ರಿಲ್ 05: ಸ್ನೇಹಿತನ ಮನೆಗೆ ಊಟಕ್ಕೆ ಬಂದಿದ್ದ 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು (swimming) ಹೋಗಿ ನೀರುಪಾಲು (death) ಆಗಿರುವಂತಹ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಭಾನುವಾರ ರಜೆ ಹಿನ್ನೆಲೆ ಸ್ನೇಹಿತ ಜಗದೀಶ್ ಮನೆಗೆ ಒಟ್ಟು 7…