SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

SRH vs LSG: ನಂಬಲಸಾಧ್ಯ..! ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತ ದಾಖಲಿಸಿದ ಸನ್‌ರೈಸರ್ಸ್

ಹೈದರಾಬಾದ್​ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 10ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಹಾಗೂ ಲಕ್ನೋ ಸೂಪರ್​ಜೈಂಟ್ಸ್ (SRH vs LSG) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್‌ರೈಸರ್ಸ್ ತಂಡ ತವರಿನ ಲಾಭ ಪಡೆದು ಬೃಹತ್ ಮೊತ್ತವನ್ನು ಕಲೆಹಾಕಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಲಕ್ನೋ ಬೌಲರ್​ಗಳ ಮಾರಕ ದಾಳಿ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಆದಾಗ್ಯೂ ಲೋಕಲ್ ಬಾಯ್ ನಿತೀಶ್ ರೆಡ್ಡಿ ಹಾಗೂ ಕ್ಲಾಸೆನ್ ಅವರ ಅರ್ಧಶತಕದ ನೆರವಿನಿಂದ ಸನ್‌ರೈಸರ್ಸ್ ತಂಡ 20 ಓವರ್​ಗಳಲ್ಲಿ 156 ರನ್ ಕಲೆಹಾಕಿತು.

ಪವರ್‌ಪ್ಲೇನಲ್ಲಿ ಕೇವಲ 22 ರನ್

ಸನ್‌ರೈಸರ್ಸ್ ತಂಡದ ಬ್ಯಾಟಿಂಗ್‌ ಎಷ್ಟು ಕಳಪೆಯಾಗಿತ್ತು ಎಂದರೆ, ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ಈ ತಂಡ ಪವರ್‌ಪ್ಲೇನಲ್ಲಿ ಕಲೆಹಾಕಿದ್ದು, ಕೇವಲ 22 ರನ್. ಇದಕ್ಕಾಗಿ ಕಳೆದುಕೊಂಡಿದ್ದು ಪ್ರಮುಖ 3 ವಿಕೆಟ್. ಅಚ್ಚರಿಯ ಸಂಗತಿಯೆಂದರೆ ಇದೇ ಸನ್‌ರೈಸರ್ಸ್ ತಂಡ ಪವರ್‌ಪ್ಲೇನಲ್ಲಿ ಅತ್ಯದಿಕ ರನ್ ಕಲೆಹಾಕಿದ ದಾಖಲೆಯನ್ನು ಹೊಂದಿದೆ. ಆದರೆ ಈ ಬಾರಿ ತನ್ನ ತವರು ಪಂದ್ಯದಲ್ಲಿ ರನ್ ಕಲೆಹಾಕಲು ಹೆಣಗಾಡಬೇಕಾಯಿತು. ಈ ಮೂಲಕ ಸನ್‌ರೈಸರ್ಸ್ ತಂಡ ಈ ಆವೃತ್ತಿಯಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ಮೊತ್ತವನ್ನು ದಾಖಲಿಸಿದ ತಂಡವೆಂಬ ಬೇಡದ ದಾಖಲೆಯನ್ನು ಬರೆಯಿತು.

ಆರಂಭಿಕರ ಕಳಪೆ ಬ್ಯಾಟಿಂಗ್

ಅದರಲ್ಲೂ ಪವರ್‌ಪ್ಲೇನ ಕೊನೆಯ ಓವರ್​ನಲ್ಲಿ ಲಿವಿಂಗ್​ಸ್ಟೋನ್ ಸಿಕ್ಸರ್ ಬಾರಿಸದಿದ್ದರೆ, ತಂಡದ ಮೊತ್ತ ಮೊದಲ 6 ಓವರ್​ಗಳಲ್ಲಿ ಕೇವಲ 15 ರನ್​ಗಳಾಗಿರುತಿತ್ತು. ಇದರರ್ಥ ಸನ್‌ರೈಸರ್ಸ್ ಬ್ಯಾಟರ್​ಗಳನ್ನು ಕಟ್ಟಿಹಾಕುವಲ್ಲಿ ಲಕ್ನೋ ಬೌಲರ್​ಗಳು ಯಶಸ್ವಿಯಾಗಿದ್ದರು ಎನ್ನಬಹುದು. ಅದರಲ್ಲೂ ಆರಂಭಿಕ ದಾಳಿ ನಡೆಸಿದ ಸನ್‌ರೈಸರ್ಸ್ ತಂಡದ ಮಾಜಿ ಬೌಲರ್ ಮೊಹಮ್ಮದ್ ಶಮಿ, ಆರಂಭಿಕರಾದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಅವರನ್ನು ಬೇಗನೇ ಔಟ್ ಮಾಡಿದರು. ಅಭಿಷೇಕ್ ಶೂನ್ಯಕ್ಕೆ ಔಟಾದರೆ, ಹೆಡ್ 7 ರನ್​ಗಳಿಗೆ ಸುಸ್ತಾದರು.

SRH vs LSG IPL 2026 Live Score: ಲಕ್ನೋಗೆ 157 ರನ್ ಟಾರ್ಗೆಟ್

ನಿತೀಶ್- ಕ್ಲಾಸೆನ್ ಅರ್ಧಶತಕ

ಇವರಿಬ್ಬರ ವಿಕೆಟ್ ಪತನದ ಬಳಿಕ ನಾಯಕ ಕಿಶನ್ ಮೇಲೆ ಹೆಚ್ಚಿನ ಜವಾಬ್ದಾರಿ ಬಿದ್ದಿತ್ತು. ಆದರೆ ಕಿಶನ್ ಕೂಡ 1 ರನ್​ಗೆ ಸುಸ್ತಾದರು. ಇದೇ ಮೊದಲ ಬಾರಿಗೆ ಸನ್‌ರೈಸರ್ಸ್ ತಂಡದ ಪರ ಕಣಕ್ಕಿಳಿದಿದ್ದ ಲಿಯಾಮ್ ಲಿವಿಂಗ್​ಸ್ಟೋನ್ ಕೂಡ ಕ್ರೀಸ್​ ಕಚ್ಚಿ ಆಡಲಿಲ್ಲ. ಕೇವಲ 14 ರನ್ ಬಾರಿಸಿ ಅವರು ಕೂಡ ಔಟಾದರು. ಈ 4 ವಿಕೆಟ್​ಗಳ ಆಘಾತದ ನಂತರ ಜೊತೆಯಾದ ನಿತೀಶ್ ಹಾಗೂ ಕ್ಲಾಸೆನ್ ಶತಕದ ಜೊತೆಯಾಟ ಕಟ್ಟಿದರು. ಇವರಿಬ್ಬರು ಕ್ರಮವಾಗಿ 56 ಹಾಗೂ 62 ರನ್​ಗಳ ಇನ್ನಿಂಗ್ಸ್ ಆಡಿದರು. ಈ ನಡುವೆ ಕ್ಲಾಸೆನ್​ಗೆ ಜೀವದಾನವೂ ಸಿಕ್ಕಿತು. ಇದರ ಲಾಭ ಪಡೆದ ಕ್ಲಾಸೆನ್ ಅರ್ಧಶತಕ ಇನ್ನಿಂಗ್ಸ್ ಆಡಿ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!

ಬೆಂಗಳೂರು, (ಏಪ್ರಿಲ್ 05): ಚಾಲಕನೋರ್ವ ಲಾರಿಯೊಳಗೆ (Lorry Driver) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಜೆ.ಪಿ.ನಗರದಲ್ಲಿ ನಡೆದಿದೆ. ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆ್ಯಂಡ್ ಡ್ರೈವ (Drink And Drive )ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಲಾರಿಯನ್ನು ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ. ಆದ್ರೆ, ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಮನನೊಂದು ಚಾಲಕ, ತಡರಾತ್ರಿ ಈ ದುರಂತ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ (ಏಪ್ರಿಲ್ 04) ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ (Drink and Drive Checking) ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪೊಲೀಸರಿಗೆ ಅನುಮಾನ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಇದಾದ ನಂತರ ಪೊಲೀಸರು ನಿಯಮದಂತೆ ಷಣ್ಮುಗನಿಗೆ ಭಾರೀ ಮೊತ್ತದ ದಂಡ (Fine) ವಿಧಿಸಿದ್ದಾರೆ. ಅಲ್ಲದೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆಪಿ ನಗರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದರು. ಆದ್ರೆ, ಚಾಲಕ ಷಣ್ಮುಗ ಅದೇ ಲಾರಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!

ಮದ್ಯಪಾನದ ಅಮಲು ಹಾಗೂ ಪೊಲೀಸರು ದಂಡ ಹಾಕಿದದ್ದರಿಂದ ಮನನೊಂದು ತಡರಾತ್ರಿ ಲಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇಂದು (ಏಪ್ರಿಲ್ 05) ಬೆಳಿಗ್ಗೆ ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ UDR ಕೇಸ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಮೆಟ್ಟಿಲೇರಿಯೇ ತಿಮ್ಮಪ್ಪನ ದರ್ಶನ ಮಾಡುವುದೇಕೆ ಜಾನ್ಹವಿ: ಅದ್ಭುತ ಕಾರಣ ಕೊಟ್ಟ ನಟಿ

ಜಾನ್ಹವಿ ಕಪೂರ್ (Janhvi Kapoor), ಬಾಲಿವುಡ್​​ನ ಬಲು ಜನಪ್ರಿಯ ಮತ್ತು ಬೇಡಿಕೆಯ ಯುವನಟಿ. ಇತ್ತೀಚೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿಯೂ ಸಹ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ಜಾನ್ಹವಿ ಕಪೂರ್, ಬಾಲಿವುಡ್​​ನ ಗ್ಲಾಮರಸ್ ನಟಿಯರಲ್ಲಿ ಒಬ್ಬರು. ಸಿನಿಮಾಗಳಲ್ಲಿ ಮಾಡರ್ನ್ ಯುವತಿಯಾಗಿ ಕಾಣಿಸಿಕೊಳ್ಳುವ ಜಾನ್ಹವಿ, ಅಪ್ಪಟ ದೈವ ಭಕ್ತೆ. ಅದರಲ್ಲೂ ತಿರುಪತಿ ತಿಮ್ಮಪ್ಪನ ಪರಮ ಭಕ್ತೆ. ವರ್ಷದಲ್ಲಿ ಹಲವು ಭಾರಿ ಅವರು ತಿರುಪತಿ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಹೀಗೆ ಭೇಟಿ ನೀಡಿದ ಪ್ರತಿಬಾರಿ ಅವರು ಮೆಟ್ಟಿಲುಗಳ ಮೂಲಕ ಬೆಟ್ಟವನ್ನೇರಿಯೇ ದರ್ಶನ ಪಡೆಯುತ್ತಾರೆ. ತಾವು ಹೀಗೆ ಮಾಡುವುದು ಏಕೆ ಎಂಬುದನ್ನು ಸಹ ಜಾನ್ಹವಿ ಕಪೂರ್ ವಿವರಿಸಿದ್ದಾರೆ. ಜಾನ್ಹವಿ ಕೊಟ್ಟಿರುವ ಉತ್ತರ ತಿಮ್ಮಪ್ಪನ ಭಕ್ತರ ಮಾತ್ರವಲ್ಲ ಎಲ್ಲರ ಹೃದಯ ಗೆಲ್ಲುವಂತಿದೆ.

ದೇಶದ ಹಲವಾರು ದೇವಾಲಯಗಳಲ್ಲಿ ವಿಐಪಿ ಸಂಸ್ಕೃತಿ ಇದೆ. ಸಾಮಾನ್ಯ ಭಕ್ತರು ಗಂಟೆ ಗಟ್ಟಲೆ ಸಾಲಿನಲ್ಲಿ ನಿಂತು ಹೋಗಿ ದೇವರ ದರ್ಶನ ಮಾಡಬೇಕು ಆದರೆ ಹಣ ಇದ್ದರು ಅಥವಾ ಪ್ರಭಾವಿಗಳು ಹಣ ನೀಡಿದರೆ ಅವರಿಗೆ ವಿಶೇಷ ದರ್ಶನ ಸಿಗುತ್ತದೆ. ತಿರುಪತಿಯಲ್ಲೂ ಈ ವಿಶೇಷ ದರ್ಶನ ಸೌಲಭ್ಯ ಇದೆ. ಅದರಲ್ಲೂ ವಿವಿಐಪಿಗಳು ಕೆಲ ಸಮಯವೂ ಕಾಯುವಂತಿಲ್ಲ ಅವರಿಗೆ ನೇರ ದರ್ಶನ ವ್ಯವಸ್ಥೆ ಇದೆ. ನಟಿ ಜಾನ್ಹವಿ ಹೇಳಿರುವಂತೆ ಅವರೂ ಸಹ ಅದೇ ವಿಐಪಿ ದರ್ಶನದ ಮೂಲಕವೇ ದರ್ಶನ ಮಾಡುತ್ತಾರೆ.

ಆದರೆ, ‘ಸಾವಿರಾರು ಮಂದಿ ಗಂಟ್ಟೆಗಟ್ಟಲೆ ದೇವರ ದರ್ಶನಕ್ಕಾಗಿ ಕಾದು ದರ್ಶನ ಪಡೆಯುತ್ತಾರೆ, ಆದರೆ ನಾನು ಸುಲಭವಾಗಿ ಹಣ ಕೊಟ್ಟು ವಿಶೇಷ ದರ್ಶನ ಪಡೆಯುತ್ತೇನೆ. ಆದರೆ ಇದು ಸರಿಯಲ್ಲ, ಹಾಗೆಂದು ನಾನು ಕೆಲವು ಕಾರಣಗಳಿಗೆ (ಸೆಲೆಬ್ರಿಟಿ ಆಗಿರುವುದರಿಂದ) ಸಾಮಾನ್ಯ ಜನರ ಜೊತೆಗೆ ಹೋಗಿ ದರ್ಶನ ಮಾಡುವಂತೆಯೂ ಇಲ್ಲ. ಹಾಗಾಗಿ ನನ್ನ ಶ್ರಮ ದಾಖಲಾಗಲಿ ಎಂಬ ಕಾರಣಕ್ಕೆ ನಾನು ಪ್ರತಿ ಬಾರಿ ಮೆಟ್ಟಿಲುಗಳನ್ನು ಹತ್ತಿ, ಕಷ್ಟಪಟ್ಟು, ಶ್ರಮಪಟ್ಟು ದರ್ಶನಕ್ಕೆ ಹೋಗುತ್ತೇನೆ’ ಎಂದಿದ್ದಾರೆ ಜಾನ್ಹವಿ.

ಇದನ್ನೂ ಓದಿ:ಹುಟ್ಟುಹಬ್ಬದಂದು ತಿರುಪತಿ ಬೆಟ್ಟ ಹತ್ತಿ ದರ್ಶನ ಪಡೆದ ನಟಿ ಜಾನ್ಹವಿ ಕಪೂರ್

ಕಾರಿನಲ್ಲಿ ಬೆಟ್ಟಕ್ಕೆ ಹೋಗಿ, ಅಲ್ಲಿ ಹಣ ಕೊಟ್ಟು ವಿಐಪಿ, ವಿವಿಐಪಿ ದರ್ಶನ ಮಾಡುವುದು ಜಾನ್ಹವಿಗೆ ಬಹಳ ಸುಲಭ. ಆದರೆ ತಾನು ವಿಐಪಿ ಆಗಿ ಅಲ್ಲ ಬದಲಿಗೆ ಭಕ್ತಳಾಗಿ ದರ್ಶನಕ್ಕೆ ಹೋಗಬೇಕು ಎಂಬ ಕಾರಣಕ್ಕೆ ಜಾನ್ಹವಿ ಕಪೂರ್ ಅವರು ತಿರುಪತಿ ಬೆಟ್ಟದ 3500 ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನಕ್ಕೆ ಹೋಗುತ್ತಾರೆ.

ಜಾನ್ಹವಿ ಕಪೂರ್ ಬಹಳ ವರ್ಷಗಳಿಂದಲೂ ತಿರುಪತಿ ತಿಮ್ಮಪ್ಪನ ಭಕ್ತೆ. ಅವರ ತಾಯಿ ಶ್ರೀದೇವಿ ಸಹ ತಿಮ್ಮಪ್ಪನ ಭಕ್ತೆ ಆಗಿದ್ದರು. ಹಿಂದೊಮ್ಮೆ ಅವರೇ ಹೇಳಿಕೊಂಡಿದ್ದಂತೆ, ಅವರಿಗೆ ತಿರುಪತಿಯಲ್ಲಿಯೇ ಮನೆ ಮಾಡಿಕೊಂಡು ತನ್ನ ಪತಿ, ಮಕ್ಕಳೊಟ್ಟಿಗೆ ನೆಲೆಸುವ ಆಸೆಯೂ ಇದೆಯಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಸಿದ್ಧಗಂಗಾ ಮಠದಲ್ಲಿ ವಿಶಿಷ್ಟವಾಗಿ ಶಿವಕುಮಾರ ಶ್ರೀಗಳ ಜನ್ಮೋತ್ಸವ: 119 ಮಕ್ಕಳಿಗೆ ನಾಮಕರಣೋತ್ಸವ

ತುಮಕೂರು, ಏಪ್ರಿಲ್​ 05: ತ್ರಿವಿಧ ದಾಸೋಹಕ್ಕೆ ಹೊಸ ಭಾಷೆ ಕೊಟ್ಟವರು ಸಿದ್ದಗಂಗಾ ಮಠದ (Siddaganga Math) ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಜಿಗಳು. ಹಸಿವಿನಿಂದ ಬಂದವರಿಗೆ ಅನ್ನ ಹಾಗೂ ಆಶ್ರಯ ಕೊಟ್ಟು, ಬಡ ಮಕ್ಕಳಿಗೆ ಶಿಕ್ಷಣ ಸೇವೆ ಮುಖಾಂತರ ಲಕ್ಷಾಂತರ ಯುವ ಜನತೆಗೆ ಭವಿಷ್ಯದ ದಾರಿ ದೀಪವಾದ ಅವರು ನಡೆದಾಡುವ ದೇವರು. ಅವರ 119ನೇ ವರ್ಷದ ಜನ್ಮದಿನೋತ್ಸವ ಹಿನ್ನಲೆ ಸಿದ್ಧಗಂಗಾ ಮಠದಲ್ಲಿ ಇಂದು 119 ಮಕ್ಕಳಿಗೆ ನಾಮಕರಣೋತ್ಸವ ಎಂಬ ವಿಶೇಷ ಕಾರ್ಯಕ್ರಮ ಮಾಡಲಾಗಿದೆ. ಅವರ ನೆನಪು, ಮಾರ್ಗದರ್ಶನದ ದಾರಿ ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮಠ ಸಾಕ್ಷಿಯಾಯ್ತು.

119 ಮಕ್ಕಳಿಗೆ ಸಂಪ್ರದಾಯಬದ್ಧ ನಾಮಕರಣ

ಅನ್ನ, ಅಕ್ಷರ ಅರಿವಿಗೆ ಒತ್ತು ಕೊಟ್ಟ ಶಿವಕುಮಾರ ಸ್ವಾಮೀಜಿಗಳ ಸೇವೆ ಅಪಾರ. ಕರ್ನಾಟಕ ರತ್ನ, ಪದ್ಮಭೂಷಣ ಹಾಗೂ ನಡೆದಾಡುವ ದೇವರೆಂದೇ ಜನ‌ಮಾನಸದಲ್ಲಿ ಹಚ್ಚೆಯಾಗಿ ಉಳಿದ ಅವರ ಹೆಸರು ಮುಂದಿನ ಪೀಳಿಗೆಯಲ್ಲೂ ಮುಂದುವರೆಸಬೇಕೆಂಬ ಉದ್ದೇಶಿತ ಕಾರ್ಯಕ್ರಮ ಇಂದು ಸಿದ್ಧಗಂಗಾ ಮಠದಲ್ಲಿ ನಡೆಯಿತು.

ಶಿವಕುಮಾರ ಟ್ರಸ್ಟ್ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ 119ನೇ ವರ್ಷದ ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸವ ಹಿನ್ನಲೆ 119 ಮಕ್ಕಳಿಗೆ ಸಂಪ್ರದಾಯಬದ್ಧವಾಗಿ ನಾಮಕರಣ ಮಾಡಲಾಯಿತು.

ಇದನ್ನೂ ಓದಿ: ಕೇಂದ್ರದ ಅಂತ್ಯೋದಯ’ ಕಲ್ಪನೆಗೆ ಸಿದ್ದಗಂಗಾ ಮಠವೇ ದಾರಿದೀಪ: ಶಿವಕುಮಾರ ಶ್ರೀಗಳನ್ನ ಸ್ಮರಿಸಿದ ಜೋಶಿ

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರ ಅನುಪಸ್ಥಿತಿ ಹಿನ್ನಲೆ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಭಾಗಿಯಾಗಿದ್ದು, ನಾಮಕರಣಗೊಂಡ ಮಕ್ಕಳಿಗೆ ಆಶೀರ್ವದಿಸಿದರು. ಗಂಡು ಮಕ್ಕಳಿಗೆ ಶಿವಕುಮಾರ ಹಾಗೂ ಹೆಣ್ಣು ಮಕ್ಕಳಿಗೆ ಶಿವಾನಿ ಎಂದು ನಾಮಕರಣ ಮಾಡಲಾಯಿತು. ಜೊತೆಗೆ ಮಕ್ಕಳಿಗೆ ತೊಟ್ಟಿಲು, ಹಾಸಿಗೆ, ಸೊಳ್ಳೆ ಪರದೆ ಉಚಿತವಾಗಿ ನೀಡಲಾಯಿತು.

ಸರ್ವಧರ್ಮದವರೂ ಭಾಗಿ

ಶಿವಕುಮಾರ ಸ್ವಾಮೀಜಿಗಳ ಲಿಂಗೈಕ್ಯ ಬಳಿಕ ಆರಂಭವಾದ ನಾಮಕರಣ ಪದ್ಧತಿ, ಅವರ ಜನ್ಮ ವರ್ಷದ ಸಂಖ್ಯೆಗೆ ತಕ್ಕಂತೆ ಮಕ್ಕಳ ಸಂಖ್ಯೆಯೂ ಏರಿಕೆ ಆಗುತ್ತಿದೆ. ಇನ್ನು ವಿಶೇಷವಾಗಿ ತುಮಕೂರಿನ ದಂಪತಿ ಮದುವೆಯಾಗಿ 20 ವರ್ಷ ಕಳೆದರು ಸಹ ಮಗುವಾಗಿರಲಿಲ್ಲ. ದೇವಸ್ಥಾನಗಳು, ಆಸ್ಪತ್ರೆ ಅಂತ ಲಕ್ಷಾಂತರ ರೂ ಖರ್ಚು ಮಾಡಿ ಪ್ರಯೋಜನೆವಾಗಿರಲಿಲ್ಲ. ಆ ಬಳಿಕ ದೇವರ ಅನುಗ್ರಹದಿಂದ ಮಹಿಳೆ ಗರ್ಭವತಿಯಾಗಿದ್ದು, ಗಂಡು ಮಗುವಿಗೆ ಜನ್ಮ‌ನೀಡಿದ್ದಾರೆ. ಹೀಗಾಗಿ ಅವರು ತಮ್ಮ ಮಗುವಿಗೆ ಶಿವಕುಮಾರ ಎಂದು ಹೆಸರಿಟ್ಟರು.

ಪ್ರಮುಖವಾಗಿ ನಾಮಕರಣ ಕಾರ್ಯಕ್ರಮದಲ್ಲಿ ಸರ್ವಧರ್ಮದವರು ಸಹ ಭಾಗಿಯಾಗಿದ್ದು, ಆಂಧ್ರ ಮೂಲದ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಇಸ್ತ್ರಾ ಎಂಬುವವರು ತಮ್ಮ ಮಗಳಿಗೆ ಶಿವಾನಿ ಎಂದು ನಾಮಕರಣ ಮಾಡಲಾಗಿದೆ. ಧರ್ಮ ಯಾವುದಾದರೇನು ದೇವರು ಒಂದೇ, ನಮ್ಮ ಮಗುವಿನ ಭವಿಷ್ಯ ಉತ್ತಮವಾಗಿರಬೇಕು. ಅವರ ಆಶೀರ್ವಾದ ಬೇಕು ಎಂದು ತಾಯಿ ಇಸ್ತ್ರಾ ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಅಕ್ಷರದ ಮುಖಾಂತರ ಶಿಕ್ಷಣ, ಅರಿವೆಂಬ ಜ್ಞಾನ ಇವುಗಳಿಗೆ ಬೇಕಾದ ಆಸರೆ ನೀಡುವ ಮೂಲಕ ಶ್ರೀ ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದೊಸೋಹಿಯಾಗಿದ್ದರು. ಇವರ ಆಶ್ರಯದಲ್ಲಿ ಅದೆಷ್ಟೋ ಮಕ್ಕಳು ತಮ್ಮ‌ತಮ್ಮ ಭವಿಷ್ಯ ರೂಪಿಸಿಕೊಂಡಿದ್ದು, ಅವರ ಹೆಜ್ಜೆಗುರುತು ಹಾಗೂ ಹೆಸರು ಮುಂದಿನ ಪೀಳಿಗೆಗೂ ಮುಂದುವರೆಸುವ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಗೌರವ ಡಾಕ್ಟರೇಟ್ ನಿರಾಕರಿಸಿದ ಬಸವರಾಜ ಬೊಮ್ಮಾಯಿ, ಹಾವೇರಿ ವಿವಿಗೆ ಹೇಳಿದಿಷ್ಟು

ಹಾವೇರಿ, (ಏಪ್ರಿಲ್ 05): ಹಾವೇರಿ ವಿಶ್ವವಿದ್ಯಾಲಯವು (haveri university) ತಮಗೆ ನೀಡಲು ನಿರ್ಧರಿಸಿದ್ದ ಗೌರವ ಡಾಕ್ಟರೇಟ್ (honorary doctorate) ಅನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿನಮ್ರವಾಗಿ ನಿರಾಕರಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾರ್ವಜನಿಕ ಸೇವೆಯಲ್ಲಿರುವ ತಮಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ಅತಿ ದೊಡ್ಡ ಪ್ರಶಸ್ತಿ ಎಂದು ಹೇಳಿಕೊಂಡಿದ್ದಾರೆ. ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬೊಮ್ಮಾಯಿ ಹೊರಡಿಸಿದ ಪ್ರಕರಣೆಯಲ್ಲೇನಿದೆ?

ಈ ಕುರಿತು ಪ್ರಕಟಣೆ ನೀಡಿರುವ ಅವರು, “ನನಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿರುವುದಕ್ಕೆ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ಈಗಾಗಲೇ ಕುಲಪತಿಗಳಿಗೆ ತಿಳಿಸಿದ್ದೇನೆ. ನಾನು ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ. ಸಾರ್ವಜನಿಕ ಸೇವೆಗೆ ಜನರ ಪ್ರೀತಿ ಮತ್ತು ವಿಶ್ವಾಸವೇ ನನಗೆ ಅತ್ಯಂತ ದೊಡ್ಡ ಗೌರವವೆಂದು ಭಾವಿಸುತ್ತೇನೆ. ಆದ್ದರಿಂದ ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲವೆಂದು ವಿನಮ್ರವಾಗಿ ಪುನರುಚ್ಚರಿಸುತ್ತೇನೆ ” ಎಂದಿದ್ದಾರೆ.

“ಗೌರವ ಡಾಕ್ಟರೇಟ್ ಎಂಬುದು ದೀರ್ಘಕಾಲದಿಂದ ಯಾವುದಾದರೂ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಮಹತ್ತರ ಸೇವೆ ಸಲ್ಲಿಸಿದವರಿಗೆ ನೀಡಬೇಕಾದ ಗೌರವವೆಂಬುದು ನನ್ನ ಅಭಿಪ್ರಾಯ. ಹೀಗಾಗಿ ಇದನ್ನು ಅಂಥ ಸಾಧಕರಿಗೆ ನೀಡಬೇಕು. ರಾಜಕಾರಣಿಗಳಿಗೆ ಅಥವಾ ಸ್ವಯಂ ಪ್ರೇರಣೆಯಿಂದ ಸಮಾಜ ಸೇವೆಯಲ್ಲಿ ತೊಡಗಿರುವವರಿಗೆ ಗೌರವ ಡಾಕ್ಟರೇಟ್ ನೀಡುವುದು ಸಮಂಜಸವಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ವಿಷಯದಲ್ಲಿ ಪುನರ್ ವಿಚಾರ ಮಾಡಬೇಕೆಂದು ವಿನಂತಿಸುತ್ತೇನೆ ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೇ ತಮ್ಮ ಸಿಂಡಿಕೇಟ್ ಸಭೆಯಲ್ಲಿ ತಮಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳು, ಉಪಕುಲಪತಿಗಳು, ಕುಲಸಚಿವರು ಹಾಗೂ ಸಿಂಡಿಕೇಟ್ ಸದಸ್ಯರಿಗೆ ಬೊಮ್ಮಾಯಿ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಹುಬ್ಬಳ್ಳಿ ಲವ್ ಜಿಹಾದ್ ಕೇಸ್​ಗೆ ಟ್ವಿಸ್ಟ್: ಯುವಕನ ವಿರುದ್ಧ ದೂರು ಬೆನ್ನಲ್ಲೇ ಯುವತಿಯ ವಿಡಿಯೋಗಳು ವೈರಲ್

ಹುಬ್ಬಳ್ಳಿ, ಏಪ್ರಿಲ್​ 05: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಎರಡು ದಿನದ ಹಿಂದಷ್ಟೇ ನಡೆದ ಲವ್ ಜಿಹಾದ್ (Love Jihad) ಆರೋಪ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಈ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಮುಸ್ಲಿಂ ಯುವಕನೋರ್ವ ಪ್ರೀತಿಯ ಹೆಸರಲ್ಲಿ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಯುವತಿ ಮಾಡಿದ್ದು ಎನ್ನಲಾಗುತ್ತಿರುವ ಹೇಳಿಕೆಗಳ ಅನೇಕ ವಿಡಿಯೋಗಳು ವೈರಲ್ ಆಗಿವೆ.

ಹಿಂದೂ ಯುವತಿ ಮಾಡಿದ್ದು ಎನ್ನಲಾದ ವಿಡಿಯೋ ವೈರಲ್​​

ಹುಬ್ಬಳ್ಳಿ ಮತ್ತೊಂದು ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ವರ್ಷದ ಹಿಂದೆ ಯುವತಿ ಮಾಡಿದ್ದು ಎಂದು ಹೇಳಲಾಗುತ್ತಿರುವ ಹೇಳಿಕೆಗಳ ಅನೇಕ ವಿಡಿಯೋಗಳು ಇದೀಗ ವೈರಲ್ ಆಗಿವೆ. ನಾವಿಬ್ಬರು ಇಷ್ಟಪಟ್ಟಿದ್ದೆವು. ಅದರಂತೆ ಧಾರವಾಡ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಸಿದ್ದೆವು ಎನ್ನಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್​​: ಪ್ರೀತಿ ಹೆಸರಲ್ಲಿ ಯುವತಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು

ನಾನು ನೋಂದಣಿಗೆ ಸಹಿ ಮಾಡಿದ್ದು ಆರ್​ಎಸ್​ಎಸ್​ನವರಿಗೆ ಗೊತ್ತಾಗಿತ್ತು. ಹೀಗಾಗಿ ನಮ್ಮ ಮನೆಗೆ ಬಂದು ಅನೇಕ ಬಾರಿ ಕೌನ್ಸಿಲಿಂಗ್ ಮಾಡಿದ್ದರು. ಅವರ ಧರ್ಮ ಬೇರೆ, ನಮ್ಮ ಧರ್ಮ ಬೇರೆ ಅಂತ ಹೇಳಿದ್ದರು. ನಾನು ಮುಫಿಜ್ ಮದುವೆಯಾಗದೇ ಇದ್ದರೆ ಸಾಯುತ್ತೇನೆ ಅಂತ ಹೇಳಿದ್ದೆ. ಹೀಗಾಗಿ ಆತನ ಹೆತ್ತವರು ಮದುವೆಗೆ ಒಪ್ಪಿಕೊಂಡಿದ್ದರು.

ಇದನ್ನೂ ಓದಿ: ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ; ವಿಡಿಯೋ ವೈರಲ್

ಆರ್​ಎಸ್​ಎಸ್​ನವರು ಬಂದು ಅನೇಕ ಬಾರಿ ಕೌನ್ಸಿಲಿಂಗ್ ಮಾಡಿದ್ದಾರೆ. ಮುಫಿಜ್ ಮೇಲೆ ಕೇಸ್ ಹಾಕಿಸುತ್ತೇವೆ ಅಂತ ಹೇಳಿದ್ದರು. ಆತನ ಮೇಲೆ ಕೇಸ್ ಹಾಕಲು ನನ್ನ ಒಪ್ಪಿಗೆ ಇಲ್ಲಾ ಎಂದಿದ್ದ ಯುವತಿ ಆದರೆ ಇದೀಗ ಮುಫಿಜ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

SRH vs LSG: W,W,W,W.. ಸನ್‌ರೈಸರ್ಸ್​ಗೆ ಆರಂಭದಲ್ಲೇ ಮರ್ಮಾಘಾತ

Source link

ಏಕವಚನದಲ್ಲಿ ಬೈದಿದ್ದ ಸಚಿವ ಎಸ್​​ಎಸ್​ ಮಲ್ಲಿಕಾರ್ಜುರನ್ನು ಕ್ಷಮಿಸಿ ಪ್ರಚಾರಕ್ಕೆ ಬಂದ ಜಮೀರ್

ದಾವಣಗೆರೆ, (ಏಪ್ರಿಲ್ 05): ದಾವಣಗೆರೆ ದಕ್ಷಿಣದಲ್ಲಿ ಉಪ ಚುನಾವಣೆ (Davanagere South By Elction) ಪ್ರಚಾರದ ಕಾವು ಜೋರಾಗುತ್ತಿದೆ. ಈ ನಡುವೆ ಸಮರ್ಥ್ ಪರವಾಗಿ ಜನಾಭಿಪ್ರಾಯ ರೂಪಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದ ಕಾಂಗ್ರೆಸ್ ನಾಯಕರ ಮೇಲೆ ಒತ್ತಡವೂ ಹೆಚ್ಚಾಗುತ್ತಿದೆ. ಟಿಕೆಟ್​​ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್ ಹಾಗೂ ಎಸ್​​ಎಸ್​ ಮಲ್ಲಿಕಾರ್ಜುನ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಕ್ಷೇತ್ರಕ್ಕೆ ಬರುವುದೇ ಬೇಡ ಎಂದು ಸ್ವತಃ ಮಲ್ಲಿಕಾರ್ಜುನ, ಜಮೀರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದರು. ಇದು ಮುಸ್ಲಿಂ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದ್ದು, ಎಸ್​​ಎಸ್​​ ಮಲ್ಲಿಕಾರ್ಜುನ ಜಮೀರ್ ಅಹಮ್ಮದ್ ಖಾನ್ ಅವರ ಬಳಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದರು. ಇನ್ನೊಂದೆಡೆ ತಮ್ಮ ಸಮುದಾಯಕ್ಕೆ ಟಿಕೆಟ್ ಕೈತಪ್ಪಿದ್ದಿ, ಹಾಗೇ ಮಲ್ಲಿಕಾರ್ಜುನ ಅವರ ಮಾತಿನಿಂದ ಅಸಮಾಧಾನಗೊಂಡಿದ್ದ ಜಮೀರ್, ದಾವಣಗೆರೆ ಉಪಚುನಾವಣೆ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದರು. ಜಮೀರ್ ಅನುಪಸ್ಥಿತಿಯಲ್ಲಿ ಕ್ಷೇತ್ರದಲ್ಲಿ ಶಾಸಕರಾದ ಸಲೀಂ ಅಹ್ಮದ್, ರಿಜ್ವಾನ್ ಅರ್ಷದ್, ಎನ್ ಎ ಹ್ಯಾರಿಸ್, ಯಾಸೀನ್ ಖಾನ್ ಪಠಾಣ್ ಬೀಡುಬಿಟ್ಟಿದ್ದರು. ಆದರೂ ಸಹ ಕಾಂಗ್ರೆಸ್ ನಾಯಕರು ಹೋದಲೆಲ್ಲ ಮುಸ್ಲಿಂ ಸಮುದಾಯದ ಜನರು, ಜಮೀರ್ ಅವರನ್ನ ಕರೆಯಿಸಿ ಎಂದು ಘೋಷಣೆ ಕೂಗಿದ ಪ್ರಸಂಗಗಳ ಸಹ ನಡೆದಿವೆ.

ಇದು ನಾಯಕರ ದೊಡ್ಡ ತಲೆನೋವಿಗೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅವರಿಂದ ಮುಸ್ಲಿಂ ಮತಗಳು ವಿಭನೆಯಾಗುವ ಆತಂಕಕ್ಕೂ ಕಾರಣವಾಗಿತ್ತು. ಹೀಗಾಗಿ ಹೈಕಮಾಂಡ್, ಜಮೀರ್ ಅವರನ್ನ ದಾವಣಗೆರೆ ತೆರಳು ಸೂಚಿಸಿದೆ. ಅದರಂತೆ ಇಂದು (ಏಪ್ರಿಲ್ 05) ಜಮೀರ್ ದಾವಣಗೆರೆ ದಕ್ಷಿಣ ಕ್ಷೇತ್ರದ ಅಖಾಡಕ್ಕಿಳಿದಿದ್ದಾರೆ. ಇನ್ನು ಇದೇ ವೇಳೆ ಮಲ್ಲಿಕಾರ್ಜುನ ಅವರು ಬೈದಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನಿಗೆ ಉತ್ತರಿಸಿದ ಜಮೀರ್, ಮಲ್ಲಿಕಾರ್ಜುನ ಅವರು ನನ್ನ ಅಣ್ಣ, ಸಿಟ್ಟಿನಲ್ಲಿ ಏನೋ ಬೈದಿದ್ದಾರೆ ಎಂದಿದ್ದಾರೆ. ಈ ಮೂಲಕ ಮಲ್ಲಿಕಾರ್ಜುನ ಅವರನ್ನ ಕ್ಷಮಿಸಿ ಅವರ ಪುತ್ರನ ಪರ ಪ್ರಚಾರಕ್ಕಿಳಿದಿದ್ದಾರೆ.

ಇದನ್ನೂ ಓದಿ: ದಾವಣಗರೆ ದಕ್ಷಿಣ ಬೈ ಎಲೆಕ್ಷನ್​​ನಿಂದ ಜಮೀರ್ ದೂರವಾಗಿದ್ಯಾಕೆ? ಅಸಲಿಗೆ ಆಗಿದ್ದೇನು?

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ಪ್ರಭಾಸ್ ಆಪ್ತ ಗೆಳೆಯ

ಸಿನಿಮಾ (Cinema) ಪ್ರಚಾರದ ವೇಳೆ ನಟರು ನಾನಾ ಅವತಾರಗಳೆತ್ತುತ್ತಾರೆ. ಇದ್ದಕ್ಕಿದ್ದಂತೆ ಪ್ರೇಕ್ಷಕರು ಭಗವಂತರಂತೆ ಕಾಣುತ್ತಾರೆ, ಪ್ರೇಕ್ಷಕರನ್ನು ತಮ್ಮ ಸಿನಿಮಾಗಳತ್ತ ಸೆಳೆಯಲು ಏನೇನೋ ಮಾಡುತ್ತಾರೆ. ಕೆಲವು ಕಣ್ಣೀರು ಸಹ ಹಾಕಿದ್ದುಂಟು. ಇದೀಗ ತೆಲುಗಿನ ಖ್ಯಾತ ನಟರೊಬ್ಬರು ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ. ನಟನ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನಾನಾ ರೀತಿಯ ಕಮೆಂಟ್​​ಗಳು ಹರಿದು ಬರುತ್ತಿವೆ.

ಪ್ರಭಾಸ್ ಅವರ ಆಪ್ತ ಗೆಳೆಯರೂ ಆಗಿರುವ ನಟ ಶರವಾನಂದ ಅವರು ‘ಬೈಕರ್’ ಹೆಸರಿನ ಸಿನಿಮಾನಲ್ಲಿ ನಟಿಸಿದ್ದು, ಇದೇ ಶುಕ್ರವಾರ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಈ ಸಿನಿಮಾಕ್ಕಾಗಿ ಸಾಕಷ್ಟು ತೂಕ ಕಳೆದುಕೊಂಡು, ಫಿಟ್ ಆಗಿದ್ದು ಮಾತ್ರವೇ ಅಲ್ಲದೆ, ಬೈಕ್ ರೈಡಿಂಗ್ ಅನ್ನು ಸಹ ಕಲಿತಿದ್ದಾರೆ ಶರವಣ. ಸಿನಿಮಾನಲ್ಲಿ ಕೆಲವಾರು ಸ್ಟಂಟ್ ದೃಶ್ಯಗಳನ್ನು ಖುದ್ದಾಗಿ ಮಾಡಿದ್ದಾರೆ ನಟ. ಇದೇ ಕಾರಣಕ್ಕೆ ಸಿನಿಮಾದ ಭರ್ಜರಿ ಪ್ರಚಾರದಲ್ಲಿ ಶರವಾನಂದ ಭಾಗಿ ಆಗಿದ್ದಾರೆ.

ತೆಲಂಗಾಣದ ಹೈದರಾಬಾದ್​ನ ಮೂಸಾಪೇಟನಲ್ಲಿರುವ ಶ್ರೀರಾಮುಲು ಥಿಯೇಟರ್​​ಗೆ ನಟ ಶರವಾನಂದ ಭೇಟಿ ನೀಡಿದ್ದರು. ಈ ವೇಳೆ ನಟ ರಾಜಶೇಖರ್ ಸಹ ಅವರೊಟ್ಟಿಗಿದ್ದರು. ಈ ವೇಳೆ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದ ನಟ ಶರವಾನಂದ, ‘ನಾನು ಒಳ್ಳೆಯ ಸಿನಿಮಾಗಳನ್ನು ಮಾಡಿದ್ದೇನೆ. ನಿಮಗೆ ಇಷ್ಟವಾದ ಕೆಲ ಸಿನಿಮಾಗಳನ್ನು ಮಾಡಿದ್ದೇನೆ, ಕೆಲವು ಬಹಳ ಒಳ್ಳೆಯ ಸಿನಿಮಾಗಳನ್ನೂ ಮಾಡಿದ್ದೇನೆ. ಆದರೆ ಮತ್ತೊಮ್ಮೆ, ಅಭಿಲಾಷ್ (‘ಬೈಕರ್’ ಸಿನಿಮಾ ನಿರ್ದೇಶಕ) ನನ್ನನ್ನು ಇಲ್ಲಿಗೆ ಕರೆತಂದು ನಿರ್ದೇಶಕನೊಬ್ಬ ತನ್ನ ನಾಯಕನನ್ನು ನಿಜವಾಗಿಯೂ ಪ್ರೀತಿಸಿದಾಗ ಏನಾಗುತ್ತದೆ ಎಂಬುದನ್ನು ತೋರಿಸಿದ್ದಾನೆ. ನನ್ನ ಸಹೋದರ, ನನ್ನ ಚಿನ್ನ, ಭಾರತದ ಭವಿಷ್ಯ ಅಭಿಲಾಷ್ ಅದನ್ನು ತೋರಿಸಿದ್ದಾನೆ. ನಾನು ಇಂದು ಇಲ್ಲಿ ನಿಂತು ಪ್ರಮಾಣ ಮಾಡಿ ಹೇಳುತ್ತೇನೆ, ‘ಬೈಕರ್’ ನನ್ನ ಅತ್ಯುತ್ತಮ ಚಿತ್ರ. ಮತ್ತು ಈ ಕನಸನ್ನು ನನಗೆ ನೀಡಿದ ಈ ಚಿತ್ರಮಂದಿರಕ್ಕೆ ನನ್ನ ಸಾಷ್ಟಾಂಗ ನಮಸ್ಕಾರಗಳು’ ಎನ್ನುತ್ತಾ, ಕೆಳಗೆ ಮಲಗಿ ಸಾಷ್ಟಾಂಗ ನಮಸ್ಕಾರವನ್ನು ಶರವಾನಂದ ಮಾಡಿದ್ದಾರೆ.

ಇದನ್ನೂ ಓದಿ:‘ರಾಮಾಯಣ’ ಸಿನಿಮಾ ಅವಧಿ 6 ಗಂಟೆ; ಚಿತ್ರತಂಡದ ಎದುರಿಗೆ ಇದೆ ದೊಡ್ಡ ಸವಾಲು

‘ಬೈಕರ್’ ಸಿನಿಮಾ ಹೆಸರೇ ಸೂಚಿಸುವಂತೆ ಬೈಕರ್ ಒಬ್ಬನ ಕತೆಯಾಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಸಿನಿಮಾನಲ್ಲಿ ಶರವಾನಂದ ಜೊತೆಗೆ ಮಾಳವಿಕಾ ನಾಯರ್ ನಾಯಕಿಯಾಗಿ ನಟಿಸಿದ್ದಾರೆ. ರಾಜಶೇಖರ್ ಅವರು ತಂದೆ ಪಾತ್ರದಲ್ಲಿ, ಅತುಲ್ ಕುಲಕರ್ಣಿ ಸಹ ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದಾರೆ. ಪ್ರಭಾಸ್ ಅವರ ಪಾಲುದಾರಿಕೆ ಹೊಂದಿರುವ ಯುವಿ ಕ್ರಿಯೇಷನ್ಸ್ ‘ಬೈಕರ್’ ಸಿನಿಮಾಕ್ಕೆ ಬಂಡವಾಳ ಹೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ.

ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ:

ಈ ಉನ್ನತ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವವರು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿಯ ಮಾನದಂಡಗಳನ್ನು ಪೂರೈಸಿರಬೇಕು. ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್ ಮೂಲಕ ಸಲ್ಲಿಸಬೇಕಾಗುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ‘ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಪಿಬಿ ಸಂಖ್ಯೆ 5033, ಲೋಕ ಭವನ, ಬೆಂಗಳೂರು – 560001’ ಈ ವಿಳಾಸಕ್ಕೆ ಕಳುಹಿಸುವುದರ ಜೊತೆಗೆ, ಅದರ ಸಾಫ್ಟ್ ಕಾಪಿಯನ್ನು ಅಧಿಕೃತ ಇಮೇಲ್ ವಿಳಾಸ us.university.rb@karnataka.gov.inಕ್ಕೂ ತಲುಪಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರಮುಖ ದಿನಾಂಕಗಳು ಮತ್ತು ಗಮನಿಸಬೇಕಾದ ಅಂಶಗಳು:

ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಮೇ 10 ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ತಮ್ಮ ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ದಾಖಲೆಗಳು ಮತ್ತು ವೃತ್ತಿ ಅನುಭವದ ವಿವರಗಳನ್ನೊಳಗೊಂಡ ರೆಸ್ಯೂಮ್ ಅನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು. ಅರ್ಜಿಯನ್ನು ಕಳುಹಿಸುವಾಗ ರಿಜಿಸ್ಟರ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕವೇ ಕಳುಹಿಸುವುದು ಸೂಕ್ತ. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಎಲ್ಲಾ ವಿವರಗಳು ಸರಿಯಾಗಿವೆ ಎಂದು ಖಚಿತಪಡಿಸಿಕೊಳ್ಳುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Exit mobile version