ಡೊನಾಲ್ಡ್ ಟ್ರಂಪ್ ಸತ್ತರಾ? ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ ಸುದ್ದಿ; ನಿಜವಾ, ವದಂತಿಯಾ?
ವಾಷಿಂಗ್ಟನ್, ಏಪ್ರಿಲ್ 5: ಇರಾನ್ ಅನ್ನು ಹೊಸಕಿ ಹಾಕುವುದಾಗಿ ಬೆದರಿಕೆ ಹಾಕುತ್ತಿರುವ ಡೊನಾಲ್ಡ್ ಟ್ರಂಪ್ ಅವರೇ ಇನ್ನಿಲ್ಲವಾಗಿದ್ದಾರೆ (Donald Trump death rumours) ಎನ್ನುವಂತಹ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬತೊಡಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್ಗೆ (Walter Reed National Military Medical Center) ದಾಖಲಿಸಲಾಗಿದೆ. ಅವರು ಸತ್ತೇ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇದ್ದಾರೆ. ಅವರಿಗೇನೂ ಆಗಿಲ್ಲ ಎನ್ನುವ…