ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್ ಅವರ ಮತ್ತೊಂದು ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಡಾಲಿ ಧನಂಜಯ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಜೆಸಿ: ದಿ ಯೂನಿವರ್ಸಿಟಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದ್ದು, ಸಿನಿಮಾ ಫೆಬ್ರವರಿ 6ಕ್ಕೆ ಅದ್ದೂರಿಯಾಗಿ ತೆರೆಗೆ ಬರಲಿದೆ. ಸೂರ್ಯ ಪ್ರಖ್ಯಾತ್ ಮತ್ತು ಭಾವನಾ ರೆಡ್ಡಿ ಅವರುಗಳು ‘ಜೆಸಿ’ ಸಿನಿಮಾನಲ್ಲಿ ನಟಿಸಿದ್ದು, ನಟ ಶಿವರಾಜ್ ಕುಮಾರ್, ನಿರ್ದೇಶಕ ಪ್ರೇಮ್ ಅವರುಗಳು ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ, ಸಿನಿಮಾ ತಂಡಕ್ಕೆ ಶುಭ ಹಾರೈಸಿದ್ದಾರೆ.

‘ಜೆಸಿ’ ಹೆಸರೇ ಹೇಳುತ್ತಿರುವಂತೆ ಇದು ಜೈಲಿನ ಕತೆ. ಸಹಜವಾಗಿಯೇ ಮಾಸ್ ಸಿನಿಮಾ. ಜೈಲಿನ ಸುತ್ತ ನಡೆಯುವ ಕಥೆ ಆದ್ದರಿಂದ ‘ಜೋಗಿ’ಯ ಸೂಪರ್ ಹಿಟ್ ಜೋಡಿ ಶಿವಣ್ಣ ಮತ್ತು ಪ್ರೇಮ್ ಇಬ್ಬರೂ ಸೇರಿ ಟ್ರೈಲರ್ ರಿಲೀಸ್ ಮಾಡಲು ಡಾಲಿ ಆಹ್ವಾನಿಸಿದ್ದರು. ಚೇತನ್ ಜೈರಾಮ್ ಅವರು ‘ಜೆಸಿ’ ಸಿನಿಮಾ ನಿರ್ದೇಶಿಸಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾ ಆಗಿದೆ. ಜೈಲು ಒಳಗಿನ ಅವ್ಯವಹಾರ, ಕೈದಿಗಳ ದರ್ಬಾರ್, ಕೈದಿಗಳ ಮಾನವೀಯತೆ, ಅಮಾನವೀಯತೆ ಇನ್ನಿತರೆ ಅಂಶಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ. ಫೈಟ್, ಕೊಲೆ, ರಕ್ತ, ಹಿಂಸೆಗಳ ನಡುವೆ ಅಪ್ಪ ಮಗನ ಭಾವನಾತ್ಮಕ ಕಥೆಯನ್ನು ಸಹ ಸಿನಿಮಾನಲ್ಲಿ ಹೇಳಲಾಗಿದೆ.

ಶಿವಣ್ಣ ಕೂಡ ಟ್ರೈಲರ್ ನೋಡಿ ತುಂಬಾ ಖುಷಿ ಪಟ್ಟರು. ಜೈಲ್ ಒಂದು ಪರಿವರ್ತನೆಯ ಜಾಗ, ಜೈಲಿಗೆ ಹೋಗಿ ಬಂದವರು ಅನೇಕರು ಬದಲಾಗುತ್ತಾರೆ ಎಂದರು. ಭವಿಷ್ಯದ ಸ್ಟಾರ್ ಆಗುವ ಎಲ್ಲಾ ಕ್ವಾಲಿಟಿಗಳು ಪ್ರಖ್ಯಾತ್ ಅವರಲ್ಲಿ ಇದೆ. ತುಂಬಾ ಚೆನ್ನಾಗಿ ಆಕ್ಟ್ ಮಾಡಿದ್ದಾರೆ, ಜೊತೆಗೆ ನೋಡಲು ಸಖತ್ ಸ್ಮಾರ್ಟ್ ಆಗಿದ್ದಾರೆ, ಲಕ್ ಕೂಡ ಇದೆ ಎಂದು ಪ್ರಖ್ಯಾತ್ ಅವರಿಗೆ ಹಾರೈಸಿದರು.

ಇದನ್ನೂ ಓದಿ:‘ಡಾಲಿ ಪಿಕ್ಚರ್ಸ್’ ಮೂಲಕ ಹೊಸ ಸುದ್ದಿ ನೀಡಿದ ಡಾಲಿ ಧನಂಜಯ್​

ಜೆಸಿ ದಿ ಯೂನರ್ಸಿಟಿ ಟ್ರೈಲರ್ ಅನ್ನು ನಿರ್ದೇಶಕ ಪ್ರೇಮ್ ಮತ್ತು ಶಿವಣ್ಣ ಇಬ್ಬರು ಮೆಚ್ಚಿಕೊಂಡಿದ್ದಾಗಿ ಹೇಳಿದ್ದಾರೆ. ಶಿವಣ್ಣನ ಜೋತೆಗೆ ‘ಜೋಗಿ’ ಸಿನಿಮಾದ ಶೂಟಿಂಗ್ ಅನುಭವನ್ನು ಬಿಚ್ಚಿಟ್ಟ ಪ್ರೇಮ್, ‘ಯಾರಿಗೂ ಜೈಲಿನ ಅನುಭವ ಬೇಡ, ಅಲ್ಲಿ ದುಡ್ಡು ಇರೋನಿಗೆ ಮಾತ್ರ ಬೆಲೆ, ಎಷ್ಟೋ ಜನರಿಗೆ ಬೇಲ್ ಸಿಕ್ಕಿದ್ರು ಬಿಡಿಸಿಕೊಳ್ಳಲು ಆಗಲ್ಲ ಅಂತ ಸ್ಥಿತಿಯಲ್ಲಿದ್ದಾರೆ’ ಎಂದು ಪ್ರೇಮ್ ಜೈಲಿನ ಬಗ್ಗೆ ಹೇಳಿದರು. ಜೊತೆಗೆ ಯುವ ನಟರುಗಳಿಗೆ ಕೆಲವು ಸಲಹೆಗಳನ್ನು ಸಹ ನೀಡಿದರು.

ಟ್ರೈಲರ್ ರಿಲೀಸ್ ಮಾಡಿಕೊಟ್ಟ ಶಿವಣ್ಣ ಮತ್ತು ಜೋಗಿ ಪ್ರೇಮ್ ಅವರಿಗೆ ಡಾಲಿ ಧನ್ಯವಾದ ತಿಳಿಸಿದರು. ಚಿತ್ರರಂಗದಲ್ಲಿ ಒಬ್ಬ ಅಣ್ಣನ ಹಾಗೆ ಸಹಾಯಕ್ಕೆ ನಿಂತ ವ್ಯಕ್ತಿ ಶಿವಣ್ಣ. ನನ್ನ ಮೊದಲ ನಿರ್ಮಾಣದ ಸಿನಿಮಾದಿಂದ ಇಲ್ಲಿಯ ವರೆಗೂ ತುಂಬಾ ಸಹಾಯ ಮಾಡಿದ್ದಾರೆ ಎಂದು ಶಿವಣ್ಣನ ಮೇಲಿನ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಹೀರೋ ಪ್ರಖ್ಯಾತ್ ಮಾತನಾಡಿ, ದುಡ್ಡು ಇರೋರೆಲ್ಲ ಹೀರೋ ಆಗಲು ಸಾಧ್ಯಿಲ್ಲ. ಜನ ಒಪ್ಕೊಬೇಕು, ಸರಸ್ವತಿ ಆಶೀರ್ವಾದ ಇರಬೇಕು. ಸೂಪರ್ ಸ್ಟಾರ್ ಮಕ್ಕಳುಗು ಫೇಲ್ ಆಗಿರೋದು ಇದೆ. ಬಡವರ ಮಕ್ಕಳು ಸೂಪರ್ ಸ್ಟಾರ್ ಆಗಿರುವ ಉದಾಹರಣೆಯೂ ಇದೆ. ದುಡ್ಡು ಇದ್ರೆ ಎಲಕ್ಷನ್ ಗೆಲ್ಲಬಹುದು ಆದರೆ ಸಿನಿಮಾ ಗೆಲ್ಲಿಸೋದು ಕಷ್ಟ’ ಎಂದರು. ಇನ್ನೂ ನಾಯಕಿ ಭಾವನಾ ರೆಡ್ಡಿ ಮಾತನಾಡಿ, ಹೊಸಬರಿಗೆ ಅವಕಾಶ ನೀಡುತ್ತಿರುವ ಡಾಲಿ ಧನಂಜಯ ಅವರಿಗೆ ಧನ್ಯವಾದ ತಿಳಿಸಿದರು. ಎಲ್ಲರೂ ಸಿನಿಮಾ ನೋಡಿ ಎಂದು ಕೇಳಕೊಂಡರು. ಸಿನಿಮಾ ಫೆಬ್ರವರಿ 6ಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 7:46 pm, Sat, 17 January 26

Source link

WPL 2026: ಟಾಸ್ ಗೆದ್ದ ಆರ್​ಸಿಬಿ ತಂಡದಲ್ಲಿ ಬರೋಬ್ಬರಿ 3 ಬದಲಾವಣೆ – Kannada News | WPL 2026: RCB vs DC at DY Patil Stadium – Toss and playing 11 details

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಮಹಿಳಾ ಪ್ರೀಮಿಯರ್​ ಲೀಗ್​ನ (Women’s Premier League) ನಾಲ್ಕನೇ ಆವೃತ್ತಿಯ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ತಂಡಗಳು ಮುಖಾಮುಖಿಯಾಗಿವೆ. ಉಭಯ ತಂಡಗಳು ಗೆಲುವಿನೊಂದಿಗೆ ಬರುತ್ತಿರುವ ಕಾರಣ ಈ ಪಂದ್ಯದಲ್ಲಿ ಯಾರಿಗೆ ಗೆಲುವು ಎಂಬುದನ್ನು ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಒಂದೆಡೆ ಆರ್​ಸಿಬಿ ಆಡಿದ ಮೂರು ಪಂದ್ಯಗಳಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಇತ್ತ ಡೆಲ್ಲಿ ತಂಡ ಆಡಿದ ಮೂರು ಪಂದ್ಯಗಳಲ್ಲಿ 2 ರಲ್ಲಿ ಸೋತು, 1 ರಲ್ಲಿ ಗೆದ್ದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಟಾಸ್ ಗೆದ್ದ ಆರ್​ಸಿಬಿ

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಮಾಡಲಿದೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್‌ ಮಾಡಲಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಬ್ಬನಿ ಪ್ರಮುಖ ಪಾತ್ರವಹಿಸುವ ಕಾರಣ, ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚು ನೆರವು ಸಿಗಲಿದೆ. ಹೀಗಾಗಿ ಸ್ಮತಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಆ ಪ್ರಕಾರ ಆರ್​ಸಿಬಿ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಲಾಗಿದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಸ್ಮೃತಿ ಮಂಧಾನ (ನಾಯಕಿ), ಗ್ರೇಸ್ ಹ್ಯಾರಿಸ್, ಜಾರ್ಜಿಯಾ ವೋಲ್ (ದಯಾಲನ್ ಹೇಮಲತಾ ಬದಲಿಗೆ), ರಿಚಾ ಘೋಷ್ (ವಿಕೆಟ್ ಕೀಪರ್), ಗೌತಮಿ ನಾಯ್ಕ್, ನಡಿನ್ ಡಿ ಕ್ಲರ್ಕ್, ರಾಧಾ ಯಾದವ್,ಪ್ರೇಮಾ ರಾವತ್ (ಅರುಂಧತಿ ರೆಡ್ಡಿ ಬದಲಿಗೆ), ಶ್ರೇಯಾಂಕ ಪಾಟೀಲ್, ಸಯಾಲಿ ಸತ್ಘರೆ (ಲಿನ್ಸೆ ಸ್ಮಿತ್ ಬದಲಿಗೆ), ಲಾರೆನ್ ಬೆಲ್.

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರೋಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ಸ್ನೇಹ ರಾಣಾ, ನಿಕಿ ಪ್ರಸಾದ್, ಮಿನ್ನು ಮಣಿ, ಶ್ರೀ ಚರಣಿ, ನಂದಿನಿ ಶರ್ಮಾ, ಲೂಸಿ ಹ್ಯಾಮಿಲ್ಟನ್ (ಚಿನೆಲ್ ಹೆನ್ರಿ ಬದಲಿಗೆ).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:04 pm, Sat, 17 January 26

Source link

ಒಟಿಟಿಗೆ ಬರುತ್ತಿದೆ ಸುದೀಪ್​ ನಟನೆಯ ‘ಮಾರ್ಕ್’: ಎಲ್ಲಿ? ಯಾವಾಗ ನೋಡಬಹುದು? – Kannada News | Sudeep starrer Mark Kannada movie to stream on Jio Hotstar on January 23

ಸುದೀಪ್ (Sudeep) ನಟನೆಯ ‘ಮಾರ್ಕ್’ ಸಿನಿಮಾ ಕೆಲವೇ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಭರ್ಜರಿ ಕಲೆಕ್ಷನ್ ಮಾಡಿದೆ. ಡಿಸೆಂಬರ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಗೆ ಬರುತ್ತಿದೆ ‘ಮಾರ್ಕ್’ ಸಿನಿಮಾ. ಈಗಾಗಲೇ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕದ ಘೋಷಣೆ ಮಾಡಲಾಗಿದೆ? ಮಾರ್ಕ್ ಸಿನಿಮಾ ಯಾವ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ ಮತ್ತು ಎಂದಿನಿಂದ ಪ್ರದರ್ಶನ ಆರಂಭಿಸಲಿದೆ? ಇಲ್ಲಿದೆ ಮಾಹಿತಿ…

ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಜಿಯೋ ಹಾರ್ಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಒಟಿಟಿ ಬಿಡುಗಡೆಯ ಜಾಹೀರಾತುಗಳು ಈಗಾಗಲೇ ಪ್ರಸಾರವಾಗುತ್ತಿದ್ದು, ಜಿಯೋ ಹಾಟ್​​ಸ್ಟಾರ್​​ನಲ್ಲಿ ಜನವರಿ 23 ರಂದು ‘ಮಾರ್ಕ್’ ಸಿನಿಮಾ ಸ್ಟ್ರೀಮಿಂಗ್ ಆರಂಭ ಮಾಡಲಿದೆ. ಜಿಯೋ ಹಾಟ್​​ಸ್ಟಾರ್​​ನಲ್ಲಿ ‘ಮಾರ್ಕ್’ ಸಿನಿಮಾ ಪ್ರಸಾರ ಆಗಲಿರುವುದನ್ನು ಒಟಿಟಿಯು ಚೆನ್ನಾಗಿಯೇ ಪ್ರಚಾರ ಮಾಡುತ್ತಿದೆ. ಬೇರೆ ಸಿನಿಮಾಗಳ ನಡುವೆ ‘ಮಾರ್ಕ್’ ಸಿನಿಮಾದ ಜಾಹೀರಾತುಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜಿಯೋ ಹಾಟ್​​ಸ್ಟಾರ್​​ನಲ್ಲಿ ‘ಮಾರ್ಕ್’ ಸಿನಿಮಾ ಕನ್ನಡ ಮಾತ್ರವೇ ಅಲ್ಲದೆ ಇನ್ನೂ ಕೆಲ ಭಾರತೀಯ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ.

ಇದನ್ನೂ ಓದಿ:ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್ 

‘ಮಾರ್ಕ್’ ಸಿನಿಮಾವು 2025 ರಲ್ಲಿ ಬಿಡುಗಡೆ ಆದ ಸುದೀಪ್ ನಟನೆಯ ಏಕೈಕ ಸಿನಿಮಾ ಆಗಿದ್ದು, ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಗಳಿಕೆಯನ್ನೇ ಮಾಡಿದೆ. ‘ಮಾರ್ಕ್’ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ಪೈರಸಿ ಮಾಡುವ ಬೆದರಿಕೆ ಹಾಕಲಾಗಿತ್ತು, ಅಲ್ಲದೆ ಸಿನಿಮಾದ ಬಗ್ಗೆ ನೆಗಟಿವ್ ಪ್ರಚಾರ ಇನ್ನಿತರೆಗಳನ್ನು ಸಹ ಮಾಡಲಾಗಿತ್ತು, ಅದೆಲ್ಲವನ್ನೂ ಮೀರಿ ‘ಮಾರ್ಕ್’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುವಲ್ಲಿ ಯಶಸ್ವಿ ಆಗಿದೆ. ಈಗಲೂ ಸಹ ಬೆಂಗಳೂರು ಸೇರಿದಂತೆ ಇನ್ನೂ ಕೆಲ ನಗರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಬೆಂಗಳೂರಿನಲ್ಲಿ ಭಾನುವಾರ 30 ಚಿತ್ರಮಂದಿರಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಶೋಗಳು ಪ್ರದರ್ಶನ ಆಗುತ್ತಿವೆ. ಆದರೆ ಅಷ್ಟರಲ್ಲೇ ಸಿನಿಮಾವನ್ನು ಒಟಿಟಿಗೆ ತರಲಾಗುತ್ತಿದೆ.

‘ಮಾರ್ಕ್’ ಸಿನಿಮಾವು ಸುದೀಪ್ ಅವರ ಈ ಹಿಂದಿನ ‘ಮ್ಯಾಕ್ಸ್’ ಸಿನಿಮಾದ ರೀತಿಯೇ ಕಡಿಮೆ ಅವಧಿಯಲ್ಲಿ ನಡೆಯುವ ಕತೆಯೊಂದನ್ನು ಆಧರಿಸಿದ ಆಕ್ಷನ್ ಥ್ರಿಲ್ಲರ್ ಜಾನರ್​​ನ ಸಿನಿಮಾ ಆಗಿದೆ. ‘ಮ್ಯಾಕ್ಸ್’ ಸಿನಿಮಾ ನಿರ್ದೇಶಿಸಿದ್ದ ವಿಜಯ್ ಕಾರ್ತಿಕೇಯ ಅವರೇ ‘ಮಾರ್ಕ್’ ಸಿನಿಮಾವನ್ನು ಸಹ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ಸುದೀಪ್ ಜೊತೆಗೆ ತಮಿಳಿನ ಯೋಗಿ ಬಾಬು, ಮಲಯಾಳಂನ ಶೈನ್ ಟಾಮ್ ಚಾಕೊ, ನವೀನ್ ಚಂದ್ರ, ನಾಯಕಿಯಾದ ನಿಶ್ವಿಕಾ ನಾಯ್ಡು, ರೋಷಿನಿ ಪ್ರಕಾಶ್ ಅವರುಗಳು ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್​​ಬಾಸ್ ಕನ್ನಡ: ಗೆಲ್ಲಲಿರುವ ಸ್ಪರ್ಧಿಗೆ ಬಂದಿವೆ 37 ಕೋಟಿ ಮತಗಳು – Kannada News | Bigg Boss Kannada 12: Sudeep gave Voting count

ಬಿಗ್​​ಬಾಸ್ ಕನ್ನಡ ಸೀಸನ್ 12ರ ಫಿನಾಲೆ ನಾಳೆ (ಜನವರಿ 18) ನಡೆಯಲಿದೆ. ಇಂದು (ಶನಿವಾರ) ಪ್ರೀ ಫಿನಾಲೆ ಇಂದು ನಡೆಯಲಿದೆ. ಆರು ಸ್ಪರ್ಧಿಗಳು ಮನೆಯಲ್ಲಿ ಉಳಿದಿದ್ದು, ಅಭಿಮಾನಿಗಳು ತಮ್ಮಿಷ್ಟದ ಸ್ಪರ್ಧಿಗೆ ವೋಟ್ ಮಾಡುತ್ತಿದ್ದಾರೆ. ಈ ಬಾರಿ ಅಂತೂ ದಾಖಲೆ ಸಂಖ್ಯೆಯ ವೋಟುಗಳು ಸ್ಪರ್ಧಿಗಳಿಗೆ ಬಂದಿವೆ. ಈ ವರೆಗೆ ಬಂದ ಮತಗಳ ಸಂಖ್ಯೆಯನ್ನು ಖುದ್ದು ಸುದೀಪ್ ಅವರು ಬಹಿರಂಗಪಡಿಸಿದ್ದಾರೆ. ಈಗಾಗಲೇ 37 ಕೋಟಿಗೂ ಹೆಚ್ಚು ಮತಗಳು ಬಂದಿವೆ. ನಾಳೆಯ ವರೆಗೆ ವೋಟಿಂಗ್ ಲೈನ್ ತೆರೆದಿರಲಿದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On – 6:46 pm, Sat, 17 January 26

Source link

ದೇವನಹಳ್ಳಿ: ಹೆದ್ದಾರಿಯಲ್ಲಿ ಭೀಕರ ಅಪಘಾತ; ಲಾಂಗ್ ಡ್ರೈವ್​​ ಹೊರಟ್ಟಿದ್ದ ಮೂವರು ಸ್ನೇಹಿತರು ಬಲಿ​​ – Kannada News | Devanahalli: Horrific Highway Accident Claims Lives of Three Friends on Long Drive

ದೇವನಹಳ್ಳಿ, ಜನವರಿ 17: ಅವರೆಲ್ಲಾ ಪಿಯು ವಿದ್ಯಾರ್ಥಿಗಳು. ಇಂದು ವೀಕೆಂಡ್ ಹಿನ್ನೆಲೆ ಬೈಕ್ ಏರಿ ಲಾಂಗ್ ಡ್ರೈವ್​ಗೆ ಹೊರಟ್ಟಿದ್ದರು. ಹೀಗೆ ಲಾಂಗ್ ಡ್ರೈವ್​​​ ಹೋದ ಮೂವರು ಸ್ನೇಹಿತರ ಪಾಲಿಗೆ ಅದು ಲಾಸ್ಟ್ ಡ್ರೈವ್​ ಆಗಿದ್ದು, ಭೀಕರ ಅಪಘಾತಕ್ಕೆ (Accident) ಸ್ಥಳದಲ್ಲೇ ಮೂವರು ದುರಂತ ಅಂತ್ಯವಾಗಿದ್ದಾರೆ (death). ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದ ಅಗಲಕೋಟೆ ಬಳಿ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.

ನಡೆದದ್ದೇನು?

ಇಂದು ಬೆಳಗ್ಗೆ 11: 20ರ ಸಮಯ ಹೆದ್ದಾರಿಯಲ್ಲಿ ಟಿಪ್ಪರ್​ ಸೇರಿದಂತೆ ಬೈಕ್​ಗಳು ಸಹ ಎಂದಿನಂತೆ ಸಂಚರಿಸುತ್ತಿದ್ದವು. ಇದೇ ವೇಳೆ ಒಂದು ಬದಿಯಲ್ಲಿ ಹೋಗುತ್ತಿದ್ದ ಈ ಮೂವರು ಯುವಕರಿದ್ದ ಬೈಕ್​​ ಅತಿ ವೇಗದಲ್ಲಿ ಬಂದು ನೋಡ ನೋಡುತ್ತಿದ್ದಂತೆ ಒಂದು ರಸ್ತೆಯಿಂದ ಮತ್ತೊಂದು ರಸ್ತೆಗೆ ನುಗ್ಗಿ, ನೇರವಾಗಿ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಮೂವರು ಯುವಕರ ದೇಹಗಳು ಛಿದ್ರಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ನಿಂತಿದ್ದ ಪಿಕಪ್​​ ಟ್ರಕ್​​​ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ: ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು

ತೌಸೀಪ್, ಶ್ರೀನಿವಾಸ್ ಮತ್ತು ಮಣಿಕಂಠ ಮೃತರು. ಮೂಲತಃ ಯಲಹಂಕದ ಹುಣಸಮಾರನಹಳ್ಳಿಯ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದರು. ಈ ಮೂರು ಜನ ಸ್ನೇಹಿತರು ಇಂದು ಬೆಳಗ್ಗೆ ವೀಕೆಂಡ್ ಅಂತ ಲಾಂಗ್ ಡ್ರೈವ್​​ಗೆ ಪ್ಲ್ಯಾನ್​ ಮಾಡಿ, ಅದರಂತೆ ಒಂದೇ ಬೈಕ್​ನಲ್ಲಿ ಹೊರಟಿದ್ದಾರೆ. ಹೊಸಕೋಟೆಯ ಕಂಬಳಿಪುರದ ಕಾಟೇರಮ್ಮ ದೇವಸ್ಥಾನಕ್ಕೆ ಹೋಗಿದ್ದ ಸ್ನೇಹಿತರು ವಾಪಸ್ ಯಲಹಂಕದತ್ತ ಮರಳುತ್ತಿದ್ದ ವೇಳೆ ದೇವನಹಳ್ಳಿ ಹೊರವಲಯದ ಬೂದಿಗೆರೆ ರಸ್ತೆಯ ಅಗಲಕೋಟೆ ಬಳಿ ರಸ್ತೆ ತಿರುವಿನಲ್ಲೂ ವೇಗವಾಗಿ ಬೈಕ್​​ ಓಡಿಸಿದ್ದಾರೆ. ಹೀಗಾಗಿ ಬೈಕ್ ಸವಾರನ ನಿಯಂತ್ರಣ ಕಳೆದುಕೊಂಡು ಒಂದು ಬದಿಯ ರಸ್ತೆಯಿಂದ ಮತ್ತೊಂದು ಬದಿಯ ರಸ್ತೆ ಹಾರಿದ್ದು, ಈ ವೇಳೆ ಬರುತ್ತಿದ್ದ ಟಿಪ್ಪರ್​ಗೆ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿ ರಭಸಕ್ಕೆ ಹೆಲ್ಮೆಟ್ ಹಾಕದ ಕಾರಣ ಯುಕರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪಿದ್ದಾರೆ.

ಇನ್ನು ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಿಯರು ಜಮಾಯಿಸಿ ಆಂಬುಲೆನ್ಸ್​ಗೆ ಕರೆ ಮಾಡಿದ ಒಂದು ಗಂಟೆವರೆಗೂ ಆಂಬುಲೆನ್ಸ್ ಸ್ಥಳಕ್ಕೆ ಬಾರದ ಹಿನ್ನೆಲೆ ಸ್ಥಳಿಯರು ಆಕ್ರೋಶ ಹೊರಹಾಕಿದ್ದಾರೆ. ಜೊತೆಗೆ ದೇವನಹಳ್ಳಿ ಬೂದಿಗೆರೆ ರಸ್ತೆಯ ತಿರುವುಗಳಲ್ಲಿ ಸ್ಪೀಡ್ ಬ್ರೇಕರ್ ಹಾಕದ ಕಾರಣ ವಾಹನ ಸವಾರರು ಅತಿವೇಗದಲ್ಲಿ ಬಂದು ಅಪಘಾತಗಳಿಗೆ ಬಲಿಯಾಗ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.

ಹಿಟ್ ಆ್ಯಂಡ್​ ರನ್ ಶಂಕೆ

ಮೆಲ್ನೋಟಕ್ಕೆ ಬೈಕ್ ಸವಾರ ಅತಿವೇಗ ಹಾಗೂ ಹೆಲ್ಮೆಟ್ ಹಾಕದಿರುವುದು ಮೂವರ ದುರಂತ ಅಂತ್ಯಕ್ಕೆ ಕಾರಣವಾಗಿದೆ ಅಂತ ಪೊಲೀಸರು ಶಂಕಿಸಿದ್ದಾರೆ. ಹಿಟ್ ಆ್ಯಂಡ್​ ರನ್ ಮಾಡಿ ಎಸ್ಕೇಪ್ ಆಗಿರುವ ಟಿಪ್ಪರ್ ಪತ್ತೆಗೂ ಪೊಲೀಸರು ಮುಂದಾಗಿದ್ದು, ದೇವನಹಳ್ಳಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

8 ಲಕ್ಷ ರೂ. ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ: ಟಿಕೆಟ್​​ ಪಡೆಯುವುದು ಕಡ್ಡಾಯ – Kannada News | Karnataka Bus Fines Soar: KSRTC Collects 8 Lakh for Ticketless Commute

ಬೆಂಗಳೂರು, ಜ.17: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರತಿದಿನ ಪ್ರಯಾಣಿಕರಿಗೆ ಒಂದಲ್ಲ ಒಂದು ರೀತಿಯಲ್ಲಿ ಎಚ್ಚರಿಕೆಯನ್ನು ನೀಡುತ್ತಿರುತ್ತದೆ. ಆದ್ರೂ ಜನ ಈ ಬಗ್ಗೆ ಗಮನ ನೀಡುವುದಿಲ್ಲ. ಕೆಎಸ್‌ಆರ್‌ಟಿಸಿ ಸಂಸ್ಥೆ ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಪ್ರಯಾಣಿಸಬೇಡಿ ಪ್ರತಿ ಭಾರೀ ಹೇಳಿದ್ರೂ ಇದಕ್ಕೆ ಕೇರ್​​ ಎನ್ನುತ್ತಿಲ್ಲ. ಹಾಗಾಗಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳು ಟಿಕೆಟ್​​ ಪಡೆಯದವರಿಗೆ ದಂಡ ಹಾಕುತ್ತಾರೆ. ಇದೀಗ 2025ರಲ್ಲಿ ಕೆಎಸ್‌ಆರ್‌ಟಿಸಿ 8,08,704 ರೂ. ದಂಡವನ್ನು ವಸೂಲಿ ಮಾಡಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಪ್ರಕಟನೆಯೊಂದನ್ನು ಹೊರಡಿಸಿದೆ. ಈ ಹಿಂದೆ ಅಂದರೆ 2025 ಎಪ್ರಿಲ್​​ನಲ್ಲಿ ಈ ದಂಡ ಸಾವಿರದಲ್ಲಿತ್ತು. ಇದೀಗ ಲಕ್ಷಕ್ಕೆ ದಾಟಿದೆ. 2025ರ ಡಿಸೆಂಬರ್ ತಿಂಗಳಿನಲ್ಲಿ ಕೆಎಸ್ಆರ್ಟಿಸಿ ನಿಗಮವು 8 ಲಕ್ಷದಷ್ಟು ದಂಡವನ್ನು ವಸೂಲಿ ಮಾಡಿದೆ.

ಡಿಸೆಂಬರ್ ತಿಂಗಳಿನಲ್ಲಿ ಕೆಎಸ್ಆರ್ಟಿಸಿ ನಿಗಮವು 43553 ವಾಹನಗಳನ್ನು ತನಿಖೆಗೊಳಪಡಿಸಿತ್ತು. ಅದರಲ್ಲಿ  4207 ಬಸ್ಸಿನಲ್ಲಿದ್ದ ವಸ್ತುಗಳ ಕಳ್ಳತನ ಮಾಡಿದ ಹಾಗೂ ಇತರ ಪ್ರಕರಣಗಳನ್ನು ಪತ್ತೆಹಚ್ಚಿದೆ. ಇನ್ನು 4353 ಟಿಕೇಟ್ ರಹಿತ ಪ್ರಯಾಣ ಮಾಡಿರುವ ಪ್ರಕರಣಗಳು ಪತ್ತೆ ಮಾಡಿದೆ. ಒಟ್ಟು 8,08,704 ರೂ. ದಂಡದ ರೂಪದಲ್ಲಿ ವಸೂಲಿ ಮಾಡಿದೆ. ನಿಗಮದ ಆದಾಯದಲ್ಲೂ ಸೋರಿಕೆ ಆಗುತ್ತಿದ್ದು, 1,14,500 ರೂ. ನಷ್ಟ ಆಗರುವುದನ್ನು ಪತ್ತೆಹಚ್ಚಿದ್ದಾರೆ. ಇದೀಗ ಇದನ್ನು ತಡೆಯಲು ನಿಗಮ ಹಲವು ಕ್ರಮಗಳನ್ನು ತಂದಿದೆ ಅದರ ಜತೆಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್-ಪಾಸ್ ಪಡೆಯಿರಿ ಎಂದು ಸಾರ್ವಜನಿಕರಲ್ಲಿ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ವದಂತಿ ಬಗ್ಗೆ ಬೆಸ್ಕಾಂ ಎಂಡಿ ಸ್ಪಷ್ಟನೆ

ಏಪ್ರಿಲ್ 2025 ರಲ್ಲಿ 43,244 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಪರಿಶೀಲಿಸಿದಾಗ, 97,576 ರೂ. ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ 3,882 ಪ್ರಕರಣಗಳು ಕಂಡುಬಂದಿವೆ ಎಂದು ಅಧಿಕಾರಿಗಳು ಹೇಳಿದ್ದರು. ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 3,780 ಪ್ರಯಾಣಿಕರು ಪತ್ತೆ ಮಾಡಿ, 7,32,495 ರೂ. ದಂಡ ವಿಧಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದರು. ಇದರ ಜತೆಗೆ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ವಿರುದ್ಧ ಕೂಡ ಶಿಸ್ತು ಕ್ರಮ ಕೈಗೊಳ್ಳಲಾಗಿತ್ತು. ಅದಕ್ಕಾಗಿ ಇಂತಹ ಘಟನೆಗಳನ್ನು ತಡೆಗಟ್ಟಲು ರಾಜ್ಯ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಟಿಕೆಟ್​​ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಅಬುಧಾಬಿ ಬಿಎಪಿಎಸ್ ದೇವಾಲಯ ಏಕತೆಯ ಸಂಕೇತ; ಯುಎಇ ಅಧ್ಯಕ್ಷರ ಸಾಂಸ್ಕೃತಿಕ ಸಲಹೆಗಾರರಿಂದ ಶ್ಲಾಘನೆ – Kannada News | UAE Cultural Advisor Zaki Anwar Nusseibeh visit to BAPS Hindu Mandir in Abu Dhabi

ನವದೆಹಲಿ, ಜನವರಿ 17: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷರ ಸಾಂಸ್ಕೃತಿಕ ಸಲಹೆಗಾರ ಮತ್ತು ಯುಎಇ ವಿಶ್ವವಿದ್ಯಾಲಯದ ಕುಲಪತಿ ಜಾಕಿ ಅನ್ವರ್ ನುಸ್ಸೀಬೆಹ್ ಅವರು ಇತ್ತೀಚೆಗೆ ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ (BAPS Hindu Temple) ಭೇಟಿ ನೀಡಿದರು. ತಮ್ಮ ಭೇಟಿಯ ಸಮಯದಲ್ಲಿ, ಅವರು ದೇವಾಲಯದ ಮುಖ್ಯಸ್ಥ ಸ್ವಾಮಿ ಬ್ರಹ್ಮವಿಹಾರಿ ದಾಸ್ ಅವರನ್ನು ಭೇಟಿಯಾದರು. ಅವರು ಬಿಎಪಿಎಸ್ ದೇವಾಲಯವನ್ನು 21ನೇ ಶತಮಾನದ ಜಾಗತಿಕ ಏಕತೆಯ ದಾರಿದೀಪವೆಂದು ಶ್ಲಾಘಿಸಿದರು. ಈ ದೇವಾಲಯವು ಸಂಸ್ಕೃತಿ ಮತ್ತು ಮೌಲ್ಯಗಳ ಕೇಂದ್ರವಾಗಿದೆ ಎಂದು ಅವರು ಹೇಳಿದರು.

ಯುಎಇಯ ಸ್ಥಾಪಕ ಪಿತಾಮಹ ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರು ಕಲ್ಪಿಸಿಕೊಂಡ ಸಹಿಷ್ಣುತೆ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಈ ದೇವಾಲಯವು ನಿರೂಪಿಸುತ್ತದೆ ಎಂದು ಜಾಕಿ ಅನ್ವರ್ ನುಸ್ಸೀಬೆಹ್ ಹೇಳಿದರು. ಈ ದೇವಾಲಯವು ಭವಿಷ್ಯದ ಪೀಳಿಗೆಗೆ ಕಲಿಕೆಯ ಅವಕಾಶಗಳನ್ನು ಒದಗಿಸುವ ವಿಶ್ವ ದರ್ಜೆಯ ಮಾನವೀಯ ಶಾಲೆಯಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಜೀವನದ ಅದ್ಭುತ ಅನುಭವದಲ್ಲೊಂದು; ಅಬುಧಾಬಿಯ ಬಿಎಪಿಎಸ್ ಹಿಂದೂ ಮಂದಿರಕ್ಕೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ

ಬಿಎಪಿಎಸ್ ದೇವಾಲಯವು ಪೂಜಾ ಸ್ಥಳವಾಗಿ ಮಾತ್ರವಲ್ಲದೆ ಸಾಂಸ್ಕೃತಿಕ ತಿಳುವಳಿಕೆ ಮತ್ತು ಬೌದ್ಧಿಕ ಜ್ಞಾನೋದಯದ ಕೇಂದ್ರವಾಗಿಯೂ ನಿಂತಿದೆ. ಇಂತಹ ಸ್ಥಳವನ್ನು ನಾನು ಎಲ್ಲಿಯೂ ನೋಡಿಲ್ಲ. ನಾನು ಪ್ರಪಂಚದ ಅನೇಕ ದೇಶಗಳು ಮತ್ತು ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದೇನೆ. ಆದರೆ ನಾನು ಎಲ್ಲಿಯೂ ಇಂತಹ ಪವಾಡವನ್ನು ನೋಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಎಪಿಎಸ್-ವಿಶ್ವಸಂಸ್ಥೆಯ 30 ವರ್ಷಗಳ ಪಾಲುದಾರಿಕೆಯ ಸಂಭ್ರಮಾಚರಣೆ

ಅಬುಧಾಬಿ ನಗರದ ಸಮೀಪವಿರುವ ಅಲ್ ರಹ್ಬಾ ಪ್ರದೇಶದಲ್ಲಿ ಅಬುಧಾಬಿ BAPS ಹಿಂದೂ ದೇವಾಲಯವನ್ನು ನಿರ್ಮಿಸಲಾಗಿದೆ. ಈ ನಿರ್ಮಾಣವನ್ನು BAPS ಸ್ವಾಮಿನಾರಾಯಣ ಸಂಸ್ಥೆಯ ಆಶ್ರಯದಲ್ಲಿ ನಡೆಸಲಾಯಿತು. ಇದು ಮಧ್ಯಪ್ರಾಚ್ಯದಲ್ಲಿ ವಿಶ್ವಪ್ರಸಿದ್ಧ BAPS ಸಂಘಟನೆಯ ಮೊದಲ ಸಾಂಪ್ರದಾಯಿಕ ಹಿಂದೂ ದೇವಾಲಯವಾಗಿದೆ. ದೇವಾಲಯ ನಿರ್ಮಾಣಕ್ಕೆ ಭೂಮಿಯನ್ನು ಯುಎಇ ಸರ್ಕಾರ ಒದಗಿಸಿದೆ. 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ದೇವಾಲಯದ ನಿರ್ಮಾಣಕ್ಕೆ ಅಡಿಪಾಯ ಹಾಕಿದರು. ಇದನ್ನು ಫೆಬ್ರವರಿ 14, 2024ರಂದು ಉದ್ಘಾಟಿಸಲಾಯಿತು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On – 5:56 pm, Sat, 17 January 26

Source link

Apply Now: ಬೆಂಗಳೂರಿನ ಕೃಷಿ ವಿಜ್ಞಾನ ವಿವಿಯಲ್ಲಿ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ – Kannada News | UAS Bengaluru Professor Jobs: PhD Holders Apply Now for Career Opportunity

ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು(UAS) ಅಧಿಕೃತ ಅಧಿಸೂಚನೆಯ ಮೂಲಕ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 02 ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು.

ಶೈಕ್ಷಣಿಕ ಅರ್ಹತೆ:

ಯುಎಎಸ್ ಬೆಂಗಳೂರು ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಿಎಚ್‌ಡಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: ಗ್ರಾಮ ಪಂಚಾಯತ್ನಲ್ಲಿ ಬಿಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲನೆಯದಾಗಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.
  • ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
    ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ ಕಳುಹಿಸಿ.
  • ವಿಳಾಸ: ಆಡಳಿತಾಧಿಕಾರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘45’ ಸಿನಿಮಾಕ್ಕೆ ಪೆಟ್ಟು ಕೊಟ್ಟದ್ದು ಯಾರು? ನಿರ್ಮಾಪಕ ಮಾತು – Kannada News | 45 Kannada movie producer talks about his movie success

ಶಿವರಾಜ್ ಕುಮಾರ್ (Shiva Rajkumar), ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಕೆಲ ವಾರಗಳ ಹಿಂದೆ ಬಿಡುಗಡೆ ಆಗಿತ್ತು. ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆ ಆದ ಈ ಸಿನಿಮಾಕ್ಕೆ ಪೈರಸಿ ಸಮಸ್ಯೆಗಳು ಸಹ ಕಾಡಿದ್ದವು. ‘45’ ಸಿನಿಮಾದ ಚಿತ್ರೀಕರಣ, ಬಿಡುಗಡೆ, ಯಶಸ್ಸು, ಸಮಸ್ಯೆ ಎಲ್ಲ ವಿಷಯಗಳ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ‘45’ ಸಿನಿಮಾ ಚೆನ್ನಾಗಿ ಬಿಡುಗಡೆ ಆಯ್ತು, ಜನರಿಂದ ಒಳ್ಳೆಯ ಪ್ರತಿಕ್ರಿಯೆಯೂ ಸಹ ದೊರಕಿತು, ಆದರೆ ಕೆಲ ‘ಕಾಣದ ಕೈಗಳಿಂದಾಗಿ’ ಸಿನಿಮಾಕ್ಕೆ ಸಮಸ್ಯೆ ಆಯ್ತು ಎಂದಿದ್ದಾರೆ. ಯಾವುದು ಆ ಕಾಣದ ಕೈ ಅವರೇ ವಿವರಿಸಿದ್ದಾರೆ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Vande Bharat Sleeper Train: ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Kannada News | PM Narendra Modi flags off Indias first Vande Bharat sleeper train in Malda

ಮಾಲ್ಡಾ, ಜನವರಿ 17: ಇಂದು ಭಾರತೀಯ ರೈಲ್ವೆ ಇಲಾಖೆಗೆ ಮಹತ್ವದ ದಿನ. ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ವಂದೇ ಭಾರತ್ ಸ್ಲೀಪರ್ ರೈಲು ಹೌರಾ ಮತ್ತು ಗುವಾಹಟಿ (ಕಾಮಾಕ್ಯ) ನಡುವೆ ಸಂಚರಿಸಲಿದೆ.

ಆಧುನಿಕ ಭಾರತದ ಸಾರಿಗೆ ಅಗತ್ಯಗಳನ್ನು ಪೂರೈಸಲು ಆಧುನಿಕ ಸೌಲಭ್ಯಗಳೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲನ್ನು ತಯಾರಿಸಲಾಗಿದೆ. ಇದು ಸಂಪೂರ್ಣ ಹವಾನಿಯಂತ್ರಿತ ಸ್ಲೀಪರ್ ರೈಲು ಆಗಿದ್ದು, ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ವಿಮಾನಯಾನದಂತಹ ಅನುಭವವನ್ನು ನೀಡುತ್ತದೆ.

ಪ್ರಧಾನಿ ಮೋದಿ 2 ದಿನಗಳ ಕಾಲ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪ್ರವಾಸದಲ್ಲಿದ್ದು, ಹಲವಾರು ರೈಲು ಮತ್ತು ರಸ್ತೆ ಯೋಜನೆಗಳನ್ನು ರಾಷ್ಟ್ರಕ್ಕೆ ಅರ್ಪಿಸಲಿದ್ದಾರೆ. ಮಾಲ್ಡಾದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮೋದಿ 3,250 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Source link

Exit mobile version