Headlines

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಬಾಗಲಕೋಟೆ, ಏಪ್ರಿಲ್​​ 05: ಉಪ ಚುನಾವಣಾ ಕಣ ರಂಗೇರಿದ್ದು, ಬಾಗಲಕೋಟೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಸಂಘಟನೆಯು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸಿದೆ ಎಂಬ ಗಂಭೀರ ಆರೋಪವನ್ನು ಎದುರಿಸುತ್ತಿದೆ. ಕ್ಯಾಂಪಸ್ ಒಂದಕ್ಕೆ ಪ್ರವೇಶಿಸಿದ NSUI ಕಾರ್ಯಕರ್ತರು, ಆಕ್ಷೇಪಾರ್ಹ ಕರಪತ್ರಗಳನ್ನು ವಿತರಿಸುವ ಮೂಲಕ ಅಪಪ್ರಚಾರ ನಡೆಸಿದ್ದಾರೆ. 18 NSUI ಸದಸ್ಯರು ಕೇಸರಿ ಶಾಲುಗಳನ್ನು ಧರಿಸಿ ಕ್ಯಾಂಪಸ್ ಪ್ರವೇಶಿಸಿದ್ದು, ಅವರು ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿಕೊಂಡು ಆಪಾದಿತ ಅಪಪ್ರಚಾರದ ಕರಪತ್ರಗಳನ್ನು ಹಂಚಿದ್ದಾರೆ ಎಂದು ದೂರಲಾಗಿದೆ. ಈ ಘಟನೆಗೆ…

Read More

Bengaluru Air Quality: ರಾಜ್ಯದ ಎಲ್ಲೆಡೆ ವಾಯು ಗುಣಮಟ್ಟದಲ್ಲಿ ಭಾರಿ ಸುಧಾರಣೆ!

ಬೆಂಗಳೂರು, ಏಪ್ರಿಲ್ 05: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ (Bengaluru Air Quality)  ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 128ಕ್ಕೆ ತಲುಪಿದೆ. ಬೆಂಗಳೂರಿನ…

Read More

ಇಬ್ಬರು ನಾಯಕರುಗಳು ಕಣಕ್ಕಿಳಿಯದಿರಲು ಇದುವೇ ಕಾರಣ..!

IPL 2026: ಶನಿವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್​ನ ಡಬಲ್ ಹೆಡ್ಡರ್ ಪಂದ್ಯಗಳಿಂದ ಇಬ್ಬರು ನಾಯಕರುಗಳು ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಕ್ಕೆ ಮುಂಬೈ ಇಂಡಿಯನ್ಸ್ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಅಲಭ್ಯರಾದರೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಿಂದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​​ಮನ್ ಗಿಲ್ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಈ ಇಬ್ಬರು ನಾಯಕರುಗಳು ಅಲಭ್ಯರಾಗಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿತು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ… ಹಾರ್ದಿಕ್ ಪಾಂಡ್ಯ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ…

Read More

ಪ್ರೀತಿ ವಿಚಾರ ಹುಡುಗಿ ಮನೆಗೆ ಗೊತ್ತಾಯ್ತು, ಅವ್ರು ಒಪ್ಪದಿದ್ರೆ ಮಗ ಏನಾದ್ರೂ ಮಾಡಿಕೊಂಡಾನು ಎಂದು ತಂದೆ ಜತೆನೇ ಇದ್ರೂ ಉಳಿಸಲಾಗಲಿಲ್ಲ

ಇಂದೋರ್, ಏಪ್ರಿಲ್ 5: ಮನೆಯವರಿಗೆ ವಿಡಿಯೋ ಕಾಲ್ ಮಾಡಿ ಬಳಿಕ ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಶನಿವಾರ ಸಂಜೆ ಎಂಐಜಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಿ.ಫಾರ್ಮಾ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಸಂಜೆ 6.30 ರ ಸುಮಾರಿಗೆ ವಿದ್ಯಾರ್ಥಿಯ ತಂದೆ ತರಕಾರಿ ಖರೀದಿಸಲು ಹೊರಗೆ ಹೋಗಿದ್ದರು, ಮನೆಯಲ್ಲಿ ಪಿಸ್ತೂಲ್ ಇತ್ತು. ಮನೆಯವರಿಗೆ ವೀಡಿಯೊ ಕರೆ ಮಾಡಿದ ಸ್ವಲ್ಪ ಸಮಯದ…

Read More

‘ರಾಮಾಯಣ’ ಸಿನಿಮಾದಲ್ಲಿ ರಣಬೀರ್ ಕಪೂರ್ ದ್ವಿಪಾತ್ರ: ಶ್ರೀರಾಮನ ಜೊತೆಗೆ ಪರಶುರಾಮನ ದರ್ಶನ

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಬಗ್ಗೆ ದಿನಕ್ಕೊಂದು ಕುತೂಹಲಕಾರಿ ವಿಚಾರಗಳು ಹೊರಬರುತ್ತಿವೆ. ಇತ್ತೀಚೆಗಷ್ಟೇ ಅಮೆರಿಕದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಭಾರಿ ಸಂಚಲನ ಮೂಡಿಸಿದೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಣಬೀರ್ ಕಪೂರ್ (Ranbir Kapoor), ಈ ಸಿನಿಮಾದಲ್ಲಿ ತಾವು ಕೇವಲ ಶ್ರೀರಾಮನ ಪಾತ್ರ ಮಾತ್ರವಲ್ಲದೇ ಪರಶುರಾಮನ ಪಾತ್ರವನ್ನೂ ನಿರ್ವಹಿಸುತ್ತಿರುವುದಾಗಿ ಅಧಿಕೃತವಾಗಿ ಖಚಿತಪಡಿಸಿದ್ದಾರೆ. ಅವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಶ್ರೀರಾಮ ಮತ್ತು ಪರಶುರಾಮ ಇಬ್ಬರೂ ಭಗವಾನ್ ವಿಷ್ಣುವಿನ ಅವತಾರಗಳು ಎಂಬುದು…

Read More

ದ್ವಾರಕಾದ ಬಾಡಿಗೆ ಮನೆಯಲ್ಲಿ ಇಬ್ಬರು ಸಹೋದರರ ಶವ ಪತ್ತೆ, ಕೊಲೆ ಶಂಕೆ

ನವದೆಹಲಿ, ಏಪ್ರಿಲ್ 05: ದೆಹಲಿಯ ಉತ್ತಮ್ ನಗರದ ಬಾಡಿಗೆ ಮನೆ(Home)ಯೊಂಂದರಲ್ಲಿ ಇಬ್ಬರು ಸಹೋದರರ ಶವ ಪ್ತತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಪೊಲೀಸ್ ತನಿಖೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಸಂಜೆ 6.55 ರ ಸುಮಾರಿಗೆ ಉತ್ತಮ್ ನಗರ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದ್ವಾರಕಾ ಜಿಲ್ಲೆಗೆ ಸೇರಿದ ಮೋಹನ್ ಗಾರ್ಡನ್‌ನಲ್ಲಿರುವ ಮೆಟ್ರೋ ಪಿಲ್ಲರ್ ಸಂಖ್ಯೆ 743 ರ ಬಳಿಯ ಮನೆಯೊಳಗೆ ಎರಡು ಶವಗಳು ಕಂಡುಬಂದಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ…

Read More

ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!

ಮಡಿಕೇರಿ, ಏಪ್ರಿಲ್​​ 05: ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳ ಮೂಲದ ಯುವತಿ ನಾಪತ್ತೆಯಾಗಿ ಮೂರು ದಿನಗಳಾದರೂ ಆಕೆಯ ಸುಳಿವು ಮಾತ್ರ ಈವರೆಗೂ ಸಿಕ್ಕಿಲ್ಲ. ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು. ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್…

Read More

ವೇಗ ಅತೀ ವೇಗ… ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆವೃತ್ತಿಯಲ್ಲಿ ಭಾರತೀಯ ಯುವ ವೇಗಿಗಳ ಅಬ್ಬರ ಮುಂದುವರಿದಿದೆ. ಏಪ್ರಿಲ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ (RR) ವಿರುದ್ಧದ ಪಂದ್ಯದಲ್ಲಿ, ಗುಜರಾತ್ ಟೈಟಾನ್ಸ್ ತಂಡದ ಉದಯೋನ್ಮುಖ ವೇಗಿ ಅಶೋಕ್ ಶರ್ಮಾ ಈ ಸೀಸನ್​ನ ಅತಿ ವೇಗದ ಎಸೆತವನ್ನು ಎಸೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ಪಂದ್ಯದ 16ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ 23 ವರ್ಷದ ಅಶೋಕ್ ಶರ್ಮಾ, ತಮ್ಮ ಓವರ್‌ನ ಅಂತಿಮ ಎಸೆತವನ್ನು ರಾಜಸ್ಥಾನ್…

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ: ಭಾರತದಲ್ಲೇ ಸಾವಿರ ಕೋಟಿ ರೂಪಾಯಿ ಸನಿಹ

ಬಾಲಿವುಡ್ ನಟ ರಣವೀರ್ ಸಿಂಗ್ ಮತ್ತು ನಿರ್ದೇಶಕ ಆದಿತ್ಯ ಧರ್ ಕಾಂಬಿನೇಷನ್‌ನ ಸ್ಪೈ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್ 2’ (Dhurandhar 2) ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಬಿಡುಗಡೆಯಾಗಿ ಮೂರನೇ ವಾರಕ್ಕೆ ಕಾಲಿಟ್ಟಿದ್ದರೂ ಚಿತ್ರದ ಕಲೆಕ್ಷನ್‌ (Box Office Collection) ಚೆನ್ನಾಗಿಯೇ ಆಗುತ್ತಿದೆ. ಸದ್ಯ ಈ ಚಿತ್ರವು ಭಾರತ ಬಾಕ್ಸ್ ಆಫೀಸ್​​ನಲ್ಲಿ ಸಾವಿರ ಕೋಟಿ ರೂಪಾಯಿ ಗಳಿಸುವತ್ತ ವೇಗವಾಗಿ ಮುನ್ನುಗ್ಗುತ್ತಿದೆ. ಈಗಾಗಲೇ 985 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂದು Sacnilk ವರದಿ ಮಾಡಿದೆ. ರಣವೀರ್…

Read More

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.     Source…

Read More