ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಭಾರೀ ಆಕ್ರೋಶ
ಮುಂಬೈ, ಡಿಸೆಂಬರ್ 22: ಮಹಾರಾಷ್ಟ್ರದ ಬಿಜೆಪಿ (BJP) ಶಾಸಕರೊಬ್ಬರು ಆಟೋ ಚಾಲಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘಿಸಿ, ಒನ್ವೇಯಲ್ಲಿ ಬರುತ್ತಿದ್ದ ಆಟೋ ಚಾಲಕನನ್ನು ಹಿಡಿದು ನಿಲ್ಲಿಸಿದ ಶಾಸಕ ಆತನ ಕೆನ್ನೆಗೆ ಹೊಡೆದಿದ್ದಾರೆ. ಈ ವಿಡಿಯೋ ತುಣುಕು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರೊಂದಿಗೆ, ಶಾಸಕರ ವರ್ತನೆಯ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಮಹಾರಾಷ್ಟ್ರದ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಉಂಟಾಗಿರುವ ಟ್ರಾಫಿಕ್ ಸಮಸ್ಯೆ ವಿರೋಧಿಸಿ ಬಿಜೆಪಿ ಶಾಸಕ ಪರಾಗ್ ಶಾ ಭಾನುವಾರ ಸ್ಥಳೀಯರೊಂದಿಗೆ ಪ್ರತಿಭಟನೆ ನಡೆಸಿದರು. ಈ…