IPL 2026: ಅರ್ಧದಲ್ಲೇ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಿದ ಪ್ಯಾಟ್ ಕಮ್ಮಿನ್ಸ್
ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲು, ಗೆಲುವಿನ ಆರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಸೋತಿದ್ದ ಸನ್‌ರೈಸರ್ಸ್ ಅದಾದ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದಿತ್ತು. ಆದಾಗ್ಯೂ ತಂಡದ ಬೌಲಿಂಗ್ ಮಾತ್ರ ಕಳಪೆಯಾಗಿಯೇ ಕಾಣುತ್ತಿದೆ. ಇದಕ್ಕೆ ಕಾರಣ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಇದುವರೆಗೆ ತಂಡದ ಪರ ಕಣಕ್ಕಿಳಿಯದೆ ಇರುವುದು. ಎಲ್ಲರಿಗೂ ತಿಳಿದಿರುವಂತೆ ಪ್ಯಾಟ್ ಕಮ್ಮಿನ್ಸ್ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸನ್‌ರೈಸರ್ಸ್ ಪರ ಮೊದಲೆರಡು ಪಂದ್ಯಗಳನ್ನು ಆಡಿರಲಿಲ್ಲ. ಮೂರನೇ…