ಅಸ್ಸಾಮ್ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ – Kannada News | Blames opposition if he fails, Mallikarjuna Kharge lashes out against PM Modi on Assam statement
ನವದೆಹಲಿ, ಡಿಸೆಂಬರ್ 21: ಸುದೀರ್ಘ ಕಾಲ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಪಕ್ಷ ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳನ್ನು ಕಡೆಗಣಿಸಿದೆ. ವಲಸಿಗರನ್ನು ಬರಲು ಬಿಟ್ಟು ಪ್ರಾದೇಶೀಕ ಭದ್ರತೆಗೆ ಧಕ್ಕೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) ಭಾನುವಾರ ತಿರುಗೇಟು ನೀಡಿದ್ದಾರೆ. ಅಸ್ಸಾಮ್ನಲ್ಲಿ ಡಬಲ್ ಎಂಜಿನ್ ಸರ್ಕಾರ ಹೊಂದಿರುವ ಬಿಜೆಪಿ, ಆ ರಾಜ್ಯದಲ್ಲಿ ಆಗಿರುವ ತನ್ನ ವೈಫಲ್ಯಗಳಿಗೆ ಜವಾಬ್ದಾರಿ ಹೊರುವುದು ಬಿಟ್ಟು ವಿಪಕ್ಷಗಳತ್ತಲೇ ಬೊಟ್ಟು ಮಾಡುತ್ತಿದೆ…