ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್
ಬಾಗಲಕೋಟೆ, ಏ.3: ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು…