ಉಪಚುನಾವಣೆ ಪ್ರಚಾರ ಅಬ್ಬರ: ದಾವಣಗೆರೆಯಲ್ಲಿ ಮಳೆಯಲ್ಲೇ ‘ಕೈ’ ನಾಯಕರ ಘರ್ಜನೆ; ಬಾಗಲಕೋಟೆಯಲ್ಲಿ ಚರಂತಿಮಠ ಪರ ಯತ್ನಾಳ್ ಮತಬೇಟೆ!
ದಾವಣಗೆರೆ/ಬಾಗಲಕೋಟೆ, ಏಪ್ರಿಲ್ 3: ಕರ್ನಾಟಕದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Karnataka By-Election 2026) ಪ್ರಚಾರ ಅಂತಿಮ ಘಟ್ಟಕ್ಕೆ ತಲುಪಿದ್ದು, ಅಡಳಿತಾರೂಢ ಕಾಂಗ್ರೆಸ್ (Congress) ಮತ್ತು ಪ್ರತಿಪಕ್ಷ ಬಿಜೆಪಿ (BJP) ನಡುವೆ ಬಿರುಸಿನ ಪೈಪೋಟಿ ಏರ್ಪಟ್ಟಿದೆ. ದಾವಣಗೆರೆ ದಕ್ಷಿಣದ ಪ್ರಚಾರ ಕಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರಿಸಿದರೆ, ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೇಸರಿ ಅಭ್ಯರ್ಥಿ ಪರ ಬ್ಯಾಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ದಾವಣಗೆರೆ ದಕ್ಷಿಣ: ಮಳೆಯಲ್ಲೂ ಧೃತಿಗೆಡದ…