ಒಳ್ಳೆ ಸ್ಪಿನ್ನರ್ನಂತೆ ಬೌಲಿಂಗ್ ಮಾಡ್ತಿದ್ದೀಯ… ಆಟಗಾರರ ನಡುವೆ ಮಾತಿನ ಚಕಮಕಿ – Kannada News | Vyshak vijay kumar and Qamran Iqbal Fight in Ranji Final
ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಆಟಗಾರರ ನಡುವೆ ಮಾತಿನ ಚಕಮಕಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್ ವೇಳೆ ಪರಸ್ ಡೋಗ್ರಾ ಹಾಗೂ ಕೆವಿ ಅನೀಶ್ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ಕರ್ನಾಟಕ ವೇಗಿ ವೈಶಾಕ್ ವಿಜಯಕುಮಾರ್ ಹಾಗೂ ಜಮ್ಮು-ಕಾಶ್ಮೀರ ತಂಡದ ಆರಂಭಿಕ ದಾಂಡಿಗ ಖಮ್ರಾನ್ ಇಕ್ಬಾಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ನಾಲ್ಕನೇ ದಿನದಾಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡನೇ ಇನ್ನಿಂಗ್ಸ್‌ನ 49ನೇ ಓವರ್‌ನಲ್ಲಿ ವೈಶಾಕ್ ವಿಜಯಕುಮಾರ್ ಎಸೆದ ಬೌನ್ಸರ್ ಎಸೆದಿದ್ದರು. ಈ…