‘ಇದು ಐಪಿಎಲ್ ಅಲ್ಲ, ಮನೆಗೆ ಹೋಗು’; ವೈಭವ್ ಕೆರಳುವಂತೆ ಮಾಡಿದ್ದೇ ಲಂಕಾ ಕ್ರಿಕೆಟಿಗ..! – Kannada News | India A vs SL A: Vaibhav Suryavanshi Row Explained – Vishen Halambage’s ‘Go Home’ Provokes
ಶ್ರೀಲಂಕಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ ಹಾಗೂ ಭಾರತ ಎ (India A vs Sri Lanka A) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶ್ರೀಲಂಕಾ ಗೆದ್ದಿತ್ತಾದರೂ, ಪಂದ್ಯ ಮುಗಿದ ಬಳಿಕ ಉಂಟಾಗಿದ್ದ ಗದ್ದಲದಿಂದಾಗಿ ವಿವಾದವೊಂದು ಹುಟ್ಟಿಕೊಂಡಿತ್ತು. ಆರಂಭದಲ್ಲಿ ಆ ಗದ್ದಲದ ವಿಡಿಯೋವನ್ನು ನೋಡಿದವರು ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ದುರಹಂಕಾರಿ ಎಂದು ಟೀಕಿಸಿದ್ದರು. ಅಲ್ಲದೆ ವೈಭವ್ಗೆ ಸರಿಯಾದ ಶಿಕ್ಷೆಯಾಗಬೇಕೆಂಬ ಬೇಡಿಕೆಯನ್ನು ಇಟ್ಟಿದ್ದರು. ಆದರೆ ಪಂದ್ಯ ನಡೆದ ಒಂದು…