ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ – Kannada News | Aligarh Muslim University teacher Rao Danish Ali shot dead at campus area
ಘಟನೆ ನಡೆದ ಯೂನಿವರ್ಸಿಟಿ ಕ್ಯಾಂಟೀನ್ ಸ್ಥಳ ಕಾನಪುರ್, ಡಿಸೆಂಬರ್ 9: ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ (Aligarh Muslim University) ಬೋಧಕರೊಬ್ಬರನ್ನು ಕ್ಯಾಂಪಸ್ನಲ್ಲೇ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಎಬಿಕೆ ಸ್ಕೂಲ್ನಲ್ಲಿ ಬೋಧಕರಾಗಿರುವ ರಾವ್ ದಾನಿಸ್ ಅಲಿಯನ್ನು ಗುಂಡಿಟ್ಟು ಸಾಯಿಸಲಾಗಿದೆ. ಆಲಿಗಡ್ನಲ್ಲಿರುವ ಯೂನಿವರ್ಸಿಟಿ ಕ್ಯಾಂಪಸ್ನ ಮೌಲಾನ ಆಜಾದ್ ಲೈಬ್ರರಿ ಪ್ರದೇಶದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ. ಈ ಹತ್ಯೆಗೈದ ಹಂತಕರು ಯಾರೆಂದು ಗೊತ್ತಾಗಿಲ್ಲ. ದಾನಿಶ್ ಅಲಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ಮೌಲಾನ…