ಗುವಾಹಟಿಯಲ್ಲಿ ನಡೆದ ಐಪಿಎಲ್ 2026 ರ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಮೂಲಕ ಸಿಎಸ್ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಸಿಎಸ್ಕೆ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಗೆದ್ದಿದ್ದ ರಾಜಸ್ಥಾನ್, ಈ ಆವೃತ್ತಿಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ಕೇವಲ 127 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್, 15 ವರ್ಷದ ವೈಭವ್ ಸೂರ್ಯವಂಶಿಯ ಸಿಡಿಲಬ್ಬರದ ಅರ್ಧಶತಕದಿಂದಾಗಿ ಇನ್ನು 47 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.
7ನೇ ವರ್ಷದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (Chandanavana Film Critics Academy Awards) ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ‘ಗತ ವೈಭವ’ ಸಿನಿಮಾದ ನಟನೆಗಾಗಿ ಆಶಿಕಾ ರಂಗನಾಥ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು.
2025ನೇ ಸಾಲಿನ ಅತ್ಯುತ್ತಮ ಸಿನಿಮಾ ಪ್ರಶಸ್ತಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪಾಲಾಯಿತು. ಈ ಸಿನಿಮಾ ಒಟ್ಟು 9 ವಿಭಾಗದಲ್ಲಿ ಪ್ರಶಸ್ತಿ ಪಡೆಯಿತು. ಮೂರು ಟ್ರೋಫಿಗಳು ರಿಷಬ್ ಅವರ ಕೈಸೇರಿತು. ಸುಬ್ಬಯ್ಯ ನಾಯ್ಡು ಅವರ ಮರಿಮೊಮ್ಮಗ ಸುಕ್ರತ್ ಸೃಜನ್ ಲೋಕೇಶ್ ಅವರಿಗೆ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ನಿರ್ದೇಶಕ ರಾಜೇಂದ್ರ್ ಸಿಂಗ್ ಬಾಬು ಅವರಿಗೆ ಜೀವಮಾನ ಸಾಧನೆಯ ಗೌರವವನ್ನು ನೀಡಲಾಯಿತು.
2025ನೇ ಸಾಲಿನ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪಡೆದವರು:
1. ಅತ್ಯುತ್ತಮ ಚೊಚ್ಚಲು ನಿರ್ಮಾಣ: ನಿವೇದಿತಾ ಶಿವರಾಜ್ ಕುಮಾರ್ (ಫೈರ್ ಪ್ಲೈ)
2. ಅತ್ಯುತ್ತಮ ಚೊಚ್ಚಲ ಬರಹಗಾರ: ಸುಮಂತ್ ಭಟ್ (ಮಿಥ್ಯ)
3. ಅತ್ಯುತ್ತಮ ಚೊಚ್ಚಲ ಸಿನಿಮಾ ನಿರ್ದೇಶನ : ಭೀಮರಾವ್ ಪಿ (ಹೆಬ್ಬುಲಿ ಕಟ್)
4. ಅತ್ಯುತ್ತಮ ಚೊಚ್ಚಲ ನಟಿ: ಪ್ರಿಯಾಂಕಾ ಆಚಾರ್ (ಏಳುಮಲೆ)
5. ಅತ್ಯುತ್ತಮ ಚೊಚ್ಚಲ ನಟ: ಕಿರಿಟಿ (ಜ್ಯೂನಿಯರ್) ಹಾಗೂ ದುಷ್ಯಂತ್ (ಗತ ವೈಭವ)
6. ಅತ್ಯುತ್ತಮ ಬಾಲ ನಟ: ಅತೀಶ್ ಶೆಟ್ಟಿ (ಮಿಥ್ಯ)
7. ಅತ್ಯುತ್ತಮ ವಿಎಫೆಕ್ಸ್: ಕೆ.ವಿ, ಸಂಜಿತ್ (ಕಾಂತಾರ ಚಾಪ್ಟರ್ 1)
8. ಅತ್ಯುತ್ತಮ ಕಲಾ ನಿರ್ದೇಶನ : ಬೆಂಗಲನ್ ಮತ್ತು ಧರಣಿ ಗಂಗಾಪುತ್ರ (ಕಾಂತಾರ ಚಾಪ್ಟರ್ 1)
9. ಅತ್ಯುತ್ತಮ ಸಾಹಸ ನಿರ್ದೇಶನ: ಅರ್ಜುನ್ ರಾಜ್ ( ಕಾಂತಾರ ಚಾಪ್ಟರ್ 1)
10. ಅತ್ಯುತ್ತಮ ಸಂಕಲನ: ಕೆ.ಎಂ ಪ್ರಕಾಶ್ (ಏಳುಮಲೆ)
11. ಅತ್ಯುತ್ತಮ ಸಂಭಾಷಣೆ: ಜೆ.ಪಿ. ತುಮಿನಾಡು (ಸು ಫ್ರಂ ಸೋ)
12. ಅತ್ಯುತ್ತಮ ಸಿನಿಮಾಟೋಗ್ರಫಿ: ಅರವಿಂದ್ ಕಶ್ಯಪ್ (ಕಾಂತಾರ ಚಾಪ್ಟರ್ 1)
13. ಅತ್ಯುತ್ತಮ ನೃತ್ಯ ನಿರ್ದೇಶನ: ವಿನಾಯಕ ಆಚಾರ್ಯ (ಸು ಫ್ರಂ ಸೋ)
14. ಅತ್ಯುತ್ತಮ ಗಾಯಕ: ಅಬ್ಬಿ ವಿ (ಕಾಂತಾರ ಚಾಪ್ಟರ್ 1)
15. ಅತ್ಯುತ್ತಮ ಗಾಯಕಿ: ಸಾನ್ವಿ ಸುದೀಪ್ ( ಮಾರ್ಕ್)
16. ಅತ್ಯುತ್ತಮ ಚಿತ್ರ ಸಾಹಿತ್ಯ: ಸಿಂಪಲ್ ಸುನಿ (ಗತ ವೈಭವ)
17. ಅತ್ಯುತ್ತಮ ಹಿನ್ನೆಲೆ ಸಂಗೀತ: ಸಂದೀಪ್ ತುಳಸಿದಾಸ್ ( ಸು ಫ್ರಂ ಸೋ)
18. ಅತ್ಯುತ್ತಮ ಸಂಗೀತ: ಅಜನೀಶ್ ಲೋಕನಾಥ್ (ಕಾಂತಾರ ಚಾಪ್ಟರ್ 1)
19. ಅತ್ಯುತ್ತಮ ಚಿತ್ರಕಥೆ: ಪುನೀತ್ ರಂಗಸ್ವಾಮಿ (ಏಳು ಮಲೆ)
20. ಅತ್ಯುತ್ತಮ ಸಹ ನಟಿ: ಸಂಧ್ಯಾ ಅರಕೆರೆ (ಸು ಫ್ರಂ ಸೋ)
21. ಅತ್ಯುತ್ತಮ ಸಹ ನಟ: ಮಹಾಂತೇಶ್ ಹಿರೇಮಠ (ಹೆಬ್ಬುಲಿ ಕಟ್)
22. ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್ 1)
23. ಅತ್ಯುತ್ತಮ ನಟಿ : ಆಶಿಕಾ ರಂಗನಾಥ್ ( ಗತ ವೈಭವ)
24. ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್
25. ಅತ್ಯುತ್ತಮ ಚಿತ್ರ: ಕಾಂತಾರ ಚಾಪ್ಟರ್ 1
26. ಜೀವಮಾನ ಸಾಧನೆ ಪ್ರಶಸ್ತಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು
ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ತಾರಾ ಅನುರಾಧಾ, ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಖ್ಯಾತ ನಿರ್ದೇಶಕ ಬಿ. ಸುರೇಶ, ಹಿರಿಯ ನಟಿ ಗಿರಿಜಾ ಲೋಕೇಶ್, ಖ್ಯಾತ ನಟಿ ಪೂಜಾ ಗಾಂಧಿ, ಬಿಗ್ ಬಾಸ್ ಖ್ಯಾತಿಯ ಅಶ್ವಿನಿ ಗೌಡ, ಖ್ಯಾತ ನಟ ಮಾಸ್ಟರ್ ಮಂಜುನಾಥ್ ಮುಂತಾದವರು ಭಾಗಿ ಆಗಿದ್ದರು.
ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ‘ಕಿಂಗ್’ (King) ಸಿನಿಮಾದ ಚಿತ್ರೀಕರಣಕ್ಕೆ ಅನಿರೀಕ್ಷಿತ ಅಡೆತಡೆ ಎದುರಾಗಿದೆ. ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು!
ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ ಒಂದು ವಾರಗಳ ಕಾಲ ‘ಕಿಂಗ್’ ಸಿನಿಮಾಗೆ ಚಿತ್ರೀಕರಣ ನಡೆಸಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಸಹ ಪಡೆಯಲಾಗಿತ್ತು. ಆದರೆ, ಯುದ್ಧದ ಭೀತಿಯಿಂದಾಗಿ ಪ್ಲ್ಯಾನ್ ಬದಲಾಗಿದೆ. ಸಿನಿಮಾದ ತಾರಾಗಣ ಮತ್ತು ತಾಂತ್ರಿಕ ತಂಡದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
ದುಬೈ ಪ್ಲ್ಯಾನ್ ರದ್ದಾದ ಬೆನ್ನಲ್ಲೇ ಚಿತ್ರತಂಡ ಪರ್ಯಾಯ ವ್ಯವಸ್ಥೆ ಮಾಡಿಕೊಂಡಿದೆ. ಮುಂಬೈನ ವಿಲೆ ಪಾರ್ಲೆ ಬಳಿಯ ಸ್ಟುಡಿಯೋದಲ್ಲಿ ಈಗ ಚಿತ್ರೀಕರಣ ನಡೆಯಲಿದೆ. ಅಲ್ಲಿನ ಪ್ರೊಡಕ್ಷನ್ ವಿನ್ಯಾಸ ತಂಡವು ಮರುಭೂಮಿಯಂತಹ ಬೃಹತ್ ಸೆಟ್ ನಿರ್ಮಿಸುತ್ತಿದೆ. ಇಲ್ಲಿ ಶಾರುಖ್ ಖಾನ್ ಅವರ ಸಾಹಸ ದೃಶ್ಯಗಳು ಮತ್ತು ಚೇಸಿಂಗ್ ಸೀಕ್ವೆನ್ಸ್ ಚಿತ್ರೀಕರಿಸಲಾಗುವುದು.
ದುಬೈನಲ್ಲಿ ಶಾರುಖ್ ಖಾನ್ ಆ್ಯಕ್ಷನ್ ದೃಶ್ಯಗಳಲ್ಲಿ ಭಾಗಿಯಾಗಬೇಕಿತ್ತು. ಸುಹಾನಾ ಖಾನ್ ಮತ್ತು ಅನಿಲ್ ಕಪೂರ್ ಅವರು ಮರುಭೂಮಿಯ ದೃಶ್ಯಗಳಲ್ಲಿ ಕಾಣಿಸಿಕೊಳ್ಳಬೇಕಿತ್ತು. ಈ ಚಿತ್ರದಲ್ಲಿ ಇವರಲ್ಲದೇ ದೀಪಿಕಾ ಪಡುಕೋಣೆ, ಅಭಿಷೇಕ್ ಬಚ್ಚನ್, ರಾಣಿ ಮುಖರ್ಜಿ, ಅಭಯ್ ವರ್ಮಾ, ಅರ್ಷದ್ ವಾರ್ಸಿ ಮತ್ತು ರಾಘವ್ ಜುಯಲ್ ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ.
ಶಾರುಖ್ ಒಡೆತನದ ‘ರೆಡ್ ಚಿಲ್ಲಿಸ್ ಎಂಟರ್ಟೈನ್‌ಮೆಂಟ್’ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ವೃತ್ತಿಪರ ಹಂತಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಪಾಯಕಾರಿ ಜಗತ್ತಿನಲ್ಲಿ ಬದುಕುಳಿಯುವುದು ಹೇಗೆ ಎಂಬ ಬಗ್ಗೆ ಯುವತಿಯೊಬ್ಬಳಿಗೆ ಅವರು ತರಬೇತಿ ನೀಡುವ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ ಎನ್ನಲಾಗಿದೆ. ಈ ಬಹುನಿರೀಕ್ಷಿತ ಚಿತ್ರವು ಕ್ರಿಸ್‌ಮಸ್ ವೇಳೆಗೆ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗುತ್ತಿದೆ.
ಧಾರವಾಡ, (ಮಾರ್ಚ್ 30): ಹಿಂದೂ ಯುವತಿಯರನ್ನು (hindu Young Women) ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ (Dharwad) ನಗರದ ಮರಾಠಾ ಕಾಲನಿಯಲ್ಲಿರುವ ಫಿಟ್ನೆಸ್ ಫಸ್ಟ್ ಜಿಮ್ ಟ್ರೈನರ್ ಸಾಬಿರ್, ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆ ಮಾಡುತ್ತಾನೆಂದು ಆರೋಪಿಸಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಯುವತಿಯರ ಬಾತ್ ರೂಮ್ಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ ಸಂಬಂಧ ಬಜರಂಗದಳ ಕಾರ್ಯಕರ್ತರು ಜಿಮ್ಗೆ ಬೀಗ ಹಾಕಿ ಜಿಮ್ ಟ್ರೈನರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಹೀಗೆ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪ ಸಂಬಂಧ ಈ ಹಿಂದೆಯೇ ಟ್ರೈನರ್ ಸಾಬಿರ್ಗೆ ಬಜರಂಗದಳ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದರು. ಆದರೂ ವರ್ತನೆ ಸರಿಪಡಿಸಿಕೊಳ್ಳದ ಸಾಬಿರ್ ವಿರುದ್ಧ ಮತ್ತೆ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಇದೀಗ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅನುಚಿತ ವರ್ತನೆ ಮಾಡುವ ಜಿಮ್ ನಲ್ಲಿ ಟ್ರೈನರ್ ಸಾಬಿರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಪ ನಗರ ಠಾಣೆ ಪೊಲೀಸರು, ದೌಡಾಯಿಸಿ ಪ್ರತಿಭಟನೆಕಾರರ ಮನವೊಲಿಸಲು ಯತ್ನಿಸಿದ್ದಾರೆ. ಆದರೂ ಪಟ್ಟು ಬಿಡಿದ ಪ್ರತಿಭಟನೆಕಾರರು, ಸ್ಥಳಕ್ಕೆ ಸಾಬಿರ್ ಕರೆಸುವಂತೆ ಒತ್ತಾಯಿಸಿದ್ದಾರೆ.
ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ
ಬೆಂಗಳೂರು: ಇನ್ನೊಂದೆಡೆ ರ್ಯಾಪಿಡೋ ಚಾಲಕನೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯೋರ್ವಳು ಬಿಟಿಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ಬೈಕ್ ಬುಕ್ ಮಾಡಿದ್ದಳು. ಬಳಿಕ ಬೈಕ್‌ನಲ್ಲಿ ಬರುವಾಗ ಚಾಲಕ ಮೊಹಮ್ಮದ್ ಖಾಜಾ, ದಾರಿಯುದ್ದಕ್ಕೂ ಮೈಮುಟ್ಟಿ ಅಸಭ್ಯ ವರ್ತಿಸಿದ್ದಾನೆಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಯುವತಿ ದೂರು ನೀಡಿದ್ದಾಳೆ. ಇದರ ಮೇರೆಗೆ ಇದೀಗ ಇಂದಿರಾನಗರ ಠಾಣೆ ಪೊಲೀಸರು ರ್ಯಾಪಿಡೋ ಚಾಲಕ ಮೊಹಮ್ಮದ್ ಖಾಜಾ ಎನ್ನುವಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಗುವಾಹಟಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ ಕೇವಲ 127 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ವೈಭವ್ ಸಿಡಿಲಬ್ಬರದ ಆರಂಭ ಒದಗಿಸಿಕೊಟ್ಟರು.
ಜೇಮಿ ಓವರ್ಟನ್ ಎಸೆದ ಮೊದಲ ಓವರ್ನಲ್ಲಿ ತಾನು ಎದುರಿಸಿದ ಮೊದಲ ಎಸೆತದಲ್ಲೇ ವೈಭವ್ ಸಿಕ್ಸರ್ ಬಾರಿಸುವ ಯತ್ನದಲ್ಲಿ ಕ್ಯಾಚ್ ನೀಡಿದ್ದರು. ಆದರೆ ಸ್ವಲ್ಪ ಕಷ್ಟಕರವಾದ ಕ್ಯಾಚ್ ಅನ್ನು ಕಾರ್ತಿಕ್ ಶರ್ಮಾ ಕೈಚೆಲ್ಲಿದರು. ಕ್ಯಾಚ್ ಬಿಟ್ಟಿದಲ್ಲದೆ ಬೌಂಡರಿಯನ್ನು ಬಿಟ್ಟುಕೊಟ್ಟರು. ಮೊದಲ ಎಸೆತದಲ್ಲೇ ಜೀವದಾನ ಪಡೆದ ವೈಭವ್ ನಂತರದ ಎಸೆತವನ್ನು ಸಿಕ್ಸರ್ಗಟ್ಟಿದರು.
ಪ್ರತಿ ಓವರ್ನಲ್ಲೂ ಬೌಂಡರಿ ಹಾಗೂ ಸಿಕ್ಸರ್ ಬಾರಿಸಿದ ವೈಭವ್ ತಂಡವನ್ನು ಪವರ್ ಪ್ಲೇ ಮುಕ್ತಾಯಕ್ಕೆ 74 ರನ್ಗಳಿಗೆ ಕೊಂಡೊಯ್ದರು. ಇದರಲ್ಲಿ ವೈಭವ್ ಅವರ ಬ್ಯಾಟ್ನಿಂದ ಸಿಡಿದಿದ್ದು ಬರೋಬ್ಬರಿ 50 ರನ್. ಇತ್ತ ಯಶಸ್ವಿ ಜೈಸ್ವಾಲ್ ಕಲೆಹಾಕಿದ್ದು, ಕೇವಲ 18 ರನ್. 6ನೇ ಓವರ್ನಲ್ಲಿ ಸತತ ಎರಡು ಸಿಕ್ಸರ್ ಬಾರಿಸುವ ಮೂಲಕ ವೈಭವ್ ಕೇವಲ 15 ಎಸೆತಗಳಲ್ಲಿ ಐಪಿಎಲ್ ಇತಿಹಾಸದಲ್ಲಿ ಮೂರನೇ ವೇಗದ ಅರ್ಧಶತಕ ಬಾರಿಸಿದ ದಾಖಲೆ ಬರೆದರು.
ಆದಾಗ್ಯೂ ಅರ್ಧಶತಕ ಬಾರಿಸಿದ ಬಳಿಕ ವೈಭವ್ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಅಂತಿಮವಾಗಿ ವೈಭವ್ ತಮ್ಮ ಇನ್ನಿಂಗ್ಸ್ನಲ್ಲಿ 17 ಎಸೆತಗಳನ್ನು ಎದುರಿಸಿ 5 ಭರ್ಜರಿ ಸಿಕ್ಸರ್ ಮತ್ತು 4 ಬೌಂಡರಿಗಳ ಸಹಿತ 52 ರನ್ ಬಾರಿಸಿ ಔಟಾದರು. ಅಂದರೆ ವೈಭವ್ ಕಲೆಹಾಕಿದ 52 ರನ್ಗಳಲ್ಲಿ 46 ರನ್ಗಳು ಕೇವಲ ಬೌಂಡರಿ, ಸಿಕ್ಸರ್ಗಳಿಂದಲೇ ಬಂದವು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕನ್ನಡ ಚಿತ್ರರಂಗದಲ್ಲಿ ಯಲ್ಲಮ್ಮನ (Yellamma) ಕುರಿತು ಒಂದಷ್ಟು ಹಾಡುಗಳು ಬಂದಿವೆ. ಈಗ ಅವುಗಳ ಸಾಲಿಗೆ ಮತ್ತೊಂದು ಹೊಸ ಗೀತೆ ಸೇರ್ಪಡೆ ಆಗಿದೆ. ಈ ಹಿಂದೆ ‘ಬ್ರಹ್ಮರಾಕ್ಷಸ’ ಸಿನಿಮಾ ಮಾಡಿದ್ದ ಶಂಕರ್ ರಾಜ ವರ್ಮ ಅವರು ಈಗ ‘ಶ್ರೀಕೃಷ್ಣ’ (Shri Krishna) ಎಂಬ ಹೊಸ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ. ಈಗ ಇದೇ ಸಿನಿಮಾದಿಂದ ‘ಉಧೋ ಉಧೋ ಯಲ್ಲವ್ವ..’ (Udho Udho Yellavva) ಹಾಡನ್ನು ರಿಲೀಸ್ ಮಾಡಲಾಗಿದೆ.
ಈ ಹಾಡಿಗೆ ಎಂ.ಎಸ್. ತ್ಯಾಗರಾಜ್ ಅವರು ಸಾಹಿತ್ಯ ಬರೆದು, ಸಂಗೀತ ನೀಡಿದ್ದಾರೆ. ಅಲ್ಲದೇ, ಅವರೇ ಧ್ವನಿಯಾಗಿದ್ದಾರೆ. ಅವರ ಜೊತೆಗೆ ಸರಯೂ ಕೂಡ ಹಾಡಿದ್ದಾರೆ. ‘ಸಿರಿ ಮ್ಯೂಸಿಕ್’ ಮೂಲಕ ಈ ಲಿರಿಕಲ್ ಹಾಡು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಕಾರ್ಯಕ್ರಮದ ವೇಳೆ ಚಿತ್ರತಂಡದವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ‘ಬೃಹಸ್ಪತಿ ಕ್ರಿಯೇಷನ್ಸ್’ ಬ್ಯಾನರ್ ಮೂಲಕ ಶಂಕರ್ ರಾಜ ವರ್ಮ ಮತ್ತು ಅಜಯ್ ಕುಮಾರ್ ಪಿ.ಎಂ. ಅವರು ‘ಶ್ರೀಕೃಷ್ಣ’ ಸಿನಿಮಾ ನಿರ್ಮಿಸುತ್ತಿದ್ದಾರೆ. ಶಿವಲಿಂಗಯ್ಯ ಸಿ.ಎಂ, ಉಲ್ಲಾಸ್ ಕೆ.ಸಿ.ಎಸ್., ಚಾಣುಕ್ಯ ಆರ್, ‘ನೆನಪಿರಲಿ’ ಮೋಹನ್ ಹಾಗೂ ಲತಾ ಮಂಜುನಾಥ್ ಸಹ ನಿರ್ಮಾಪಕರಾಗಿದಾರೆ.
Shri Krishna Movie Team
ನಟ-ನಿರ್ದೇಶಕ ಶಂಕರ್ ರಾಜ ವರ್ಮ ಮಾತನಾಡಿ, ‘ನಾನು ನಿರ್ದೇಶಕನಾಗುತ್ತೇನೆ, ಒಂದು ಸಂಸ್ಥೆ ಕಟ್ಟಿ ಇಷ್ಟು ದೂರ ಸಾಗುತ್ತೇನೆ ಎಂದು ಯಾವತ್ತೂ ಯೋಚಿಸಿರಲಿಲ್ಲ. ಅದಕ್ಕೆ ಕಾರಣರಾದವರು ನಮ್ಮ ತಂದೆ-ತಾಯಿ, ಕುಟುಂಬದವರು ಮತ್ತು ಸ್ನೇಹಿತರು. ಅವರೆಲ್ಲರ ಪ್ರೋತ್ಸಾಹ ಮತ್ತು ಬೆಂಬಲದಿಂದ ಈ ಚಿತ್ರ ಸಾಧ್ಯವಾಗಿದೆ. ‘ಬ್ರಹ್ಮರಾಕ್ಷಸ’ ಚಿತ್ರದಲ್ಲಿ ಬಹುತೇಕ ಯಾರೆಲ್ಲಾ ಕೆಲಸ ಮಾಡಿದ್ದಾರೋ, ಅವರೆಲ್ಲರೂ ಈ ಚಿತ್ರತಂಡದಲ್ಲಿದ್ದಾರೆ’ ಎಂದು ಹೇಳಿದರು.
ಉಧೋ ಉಧೋ ಯಲ್ಲವ್ವ ಹಾಡು:
ಕಥೆ ಬಗ್ಗೆ ಕೂಡ ಅವರು ಮಾಹಿತಿ ನೀಡಿದರು. ‘ಮೂವರು ಅನಾಥರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಸಿನಿಮಾ ಹೇಳುತ್ತದೆ. ಇಲ್ಲಿ ನಾಯಕಿ ಸಹ ಅನಾಥೆ. ಎಲ್ಲರೂ ಜೊತೆಯಾಗಿರುವಾಗ ಅವರ ಜೀವನದಲ್ಲೊಂದು ಘಟನೆ ನಡೆಯುತ್ತದೆ. ಇದರಿಂದ ಅವರು ಜೈಲಿಗೆ ಹೋಗಬೇಕಾಗುತ್ತದೆ. ಜೈಲಿಂದ ತಪ್ಪಿಸಿಕೊಂಡು ಬಂದ ನಂತರ ಅವರು ಏನೆಲ್ಲಾ ಮಾಡುತ್ತಾರೆ ಎನ್ನುವುದೇ ಚಿತ್ರದ ಕಥೆ’ ಎಂದು ಅವರು ಹೇಳಿದರು.
ಅನಿರುದ್ಧ್ ಅವರ ಛಾಯಾಗ್ರಹಣ, ಕೀರ್ತಿರಾಜು ಅವರ ಸಂಕಲನ ‘ಶ್ರೀಕೃಷ್ಣ’ ಚಿತ್ರಕ್ಕಿದೆ. ಚೈತ್ರಾ ತೋಟದ್ ಅವರು ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹುಬ್ಬಳ್ಳಿ ಮೂಲದ ಅವರು ‘ಬ್ರಹ್ಮರಾಕ್ಷಸ’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದನ್ನು ಮಾಡಿದ್ದರು. ಈಗ ನಾಯಕಿಯಾಗಿದ್ದಾರೆ. ಪ್ರದೀಪ್ ಪೂಜಾರಿ, ಭುವನ್ ಗೌಡ, ಸ್ನೇಹಾ, ಈಶ್ವರ್ ಶೆಟ್ಟಿ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ.
ಉಡುಪಿ, (ಮಾರ್ಚ್ 30): ಮದುವೆಯಾದ (Marriage) ಒಂದೇ ತಿಂಗಳಿಗೆ ಉದ್ಯಮಿ (Businessman) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ (Udupi) ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೂಲತಃ ನೆಲ್ಯಾಡಿ ನಿವಾಸಿಯಾಗಿರುವ ಸುದೀಪ್ ಶೆಟ್ಟಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಸುದೀಪ್ ಶೆಟ್ಟಿ, ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಹತ್ತಾರು ದಿನ ಜೀವನ್ಮರಣ ಹೋರಾಟ ನಡೆಸಿ ಕೊನೆಗೆ ಚಿಕಿತ್ಸೆ ಫಲಿಸದೆ ಮಾರ್ಚ್ 29ರಂದು ಕೊನೆಯುಸಿರೆಳೆದಿದ್ದಾರೆ.ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸುದೀಪ್‌ನ ತಂದೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಸುದೀಪ್‌ನ ಪತ್ನಿ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ದೂರು ದಾಖಲಿಸಿದ್ದಾರೆ.
ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ
ಸುದೀಪ್ ಹಾಗೂ ಸೌಮ್ಯ ಶೆಟ್ಟಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮೂಲತಃ ಕಾರ್ಕಳ ತಾಲೂಕಿನ ಬಂಗ್ಲೆಗುಡ್ಡೆ ನಿವಾಸಿಯಾಗಿರುವ ಸೌಮ್ಯ ಶೆಟ್ಟಿ, ಜೊತೆ ಸುದೀಪ್ ಕಳೆದ ತಿಂಗಳು ಫೆಬ್ರವರಿ 17ರಂದು ಪುತ್ತೂರು ರಿಜಿಸ್ಟರ್ ಆಫೀಸಿನಲ್ಲಿ ಮದುವೆಯಾಗಿದ್ದರು. ನಾಟಕ ಕಲಾವಿದೆ ಹಾಗೂ ಮೇಕಪ್ ಆರ್ಟಿಸ್ಟ್ ಆಗಿರುವ ಸೌಮ್ಯ ಶೆಟ್ಟಿ ಈ ಹಿಂದೆ ಒಂದು ಮದುವೆಯಾಗಿ ಪತಿಗೆ ಡಿವೋರ್ಸ್ ನೀಡಿ ಸುದೀಪ್ ಜೊತೆ ವಿವಾಹವಾಗಿದ್ದರು. ಆದರೆ, ಸೌಮ್ಯ ಜೊತೆ ವಿವಾಹದ ಬಗ್ಗೆ ಸುದೀಪ್ ಕುಟುಂಬ ಆಕ್ಷೇಪ ವ್ಯಕ್ತಪಡಿಸಿತ್ತು.
ಸೌಮ್ಯ ಶೆಟ್ಟಿ ಜೊತೆ ಮದುವೆಯಾಗಿದ್ದಕ್ಕೆ ಸುದೀಪ್ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಒಂದೇ ತಿಂಗಳಲ್ಲಿ ಸಂಬಂಧ ಬಿಗಡಾಯಿಸಿತ್ತು. ಬಳಿಕ ಸುದೀಪ್ ಕಳೆದ ಮಾರ್ಚ್ 17 ರಂದು ಕಡಬ ತಾಲೂಕಿನ ನೆಲ್ಯಾಡಿಯಲ್ಲಿದ್ದ ವೇಳೆ ಅಲ್ಲಿಗೆ ಬಂದಿದ್ದ ಸೌಮ್ಯ ಬೆದರಿಕೆ ಹಾಕಿರುವುದಾಗಿ ಆರೋಪ ಕೇಳಿಬಂದಿದೆ. ಇದಾದ ಬಳಿಕ ಮಾರ್ಚ್ 22 ರಂದು ಸುದೀಪ್ ವಿಷ ಸೇವಿಸಿರುವ ಬಗ್ಗೆ ಸೌಮ್ಯ ಸಂಬಂಧಿಕರು ಮಾಹಿತಿ ನೀಡಿದ್ದರು. ಮಾ.23 ರಂದು ವಿಷ ಸೇವಿಸಿದ ಸುದೀಪ್ನನ್ನು ಸೌಮ್ಯ ನಿಟ್ಟೆಯ ಗಜಾರಿಯ ಆಸ್ಪತ್ರೆಗೆ ಸೇರಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ರವಾನಿಸಲಾಗಿತ್ತು. ನಂತರ ಮಾರ್ಚ್ 24ರಂದು ಸುದೀಪ್ ತಂದೆ ಮಂಗಳೂರಿನ ಏನಪೋಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ದುರಾದೃಷ್ಟವಶಾತ್ ಸುದೀಪ್ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಸಾವನ್ನಪ್ಪಿದ್ದಾರೆ.
ಮಗ ಸಾವನ್ನಪ್ಪಿದ ಬೆನ್ನಲ್ಲೇ ಸೊಸೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಮೃತ ಸುದೀಪ್ ತಂದೆ ದಾಮೋದರ್ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕಾರ್ಕಳ ನಗರ ಪೊಲೀಸರು, ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ತನಿಖೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.
ಪತ್ನಿ ಸೌಮ್ಯ ಶೆಟ್ಟಿ ಹೇಳಿದ್ದೇನು?
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ಸೌಮ್ಯ ಶೆಟ್ಟಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸುದೀಪ್ ಸಾವಿಗೆ ನಾನು ಕಾರಣವಲ್ಲ. ಸುದೀಪ್ ಸ್ವತಃ ವಿಷ ಸೇವಿಸಿರುವ ಬಗ್ಗೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ವಿಷ ಸೇವಿಸಿದ ನಂತರವೂ 4-5 ದಿನ ಆರಾಮಾಗಿದ್ದರು. ಬಳಿಕ ಫುಡ್ ಪಾಯಿಸನ್ ಆಗಿದೆ ಎಂಬ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿದೆ. ಅಲ್ಲಿ ಜಾಂಡಿಸ್ ಆಗಿರಬಹುದು ಎಂದು ಚಿಕಿತ್ಸೆ ನೀಡಿದರು. ಯಾವ ಕಾರಣಕ್ಕೆ ವಿಷ ಸೇವಿಸಿದ್ದಾರೆ ತಿಳಿದಿಲ್ಲ ಎಂದು ತಮ್ಮ ಮೇಲಿನ ಆರೋಪವನ್ನು ಅಲ್ಲಗಳೆದಿದ್ದಾರೆ.
ಐಪಿಎಲ್ 2026 ರ ಮೂರನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿಯಾಗಿವೆ. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದೊಂದಿಗೆ, ಮಾಜಿ ಐಪಿಎಲ್ ಚಾಂಪಿಯನ್ ತಂಡಗಳು ಲೀಗ್‌ನ 19 ನೇ ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಪ್ರಾರಂಭಿಸಿವೆ. ಅದರಂತೆ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ಕೆ, ರಾಜಸ್ಥಾನ್ ಬೌಲಿಂಗ್ ದಾಳಿಗೆ ತತ್ತರಿ ಕೇವಲ 127 ರನ್ಗಳಿಗೆ ತನ್ನ ಇನ್ನಿಂಗ್ಸ್ ಮುಗಿಸಿದೆ. ತಂಡದ ಪರ 8ನೇ ಕ್ರಮಾಂಕದಲ್ಲಿ ಬಂದ ಜೆಮಿ ಓವರ್ಟನ್ ಅತ್ಯಧಿಕ 42 ರನ್ಗಳ ಇನ್ನಿಂಗ್ಸ್ ಆಡಿದರೆ, ಕಾರ್ತಿಕ್ ಶರ್ಮಾ 18 ರನ್ಗಳ ಕಾಣಿಕೆ ನೀಡಿದರು. ಉಳಿದಂತೆ ತಂಡದ 8 ಬ್ಯಾಟ್ಸ್ಮನ್ಗಳಿಗೆ ಒಂದಂಕಿ ಮೊತ್ತವನ್ನು ದಾಟಲು ಸಾಧ್ಯವಾಗಲಿಲ್ಲ.
ಪವರ್ಪ್ಲೇನಲ್ಲಿ 4 ವಿಕೆಟ್
ಗುವಾಹಟಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿದ ಸಿಎಸ್ಕೆಗೆ ಉತ್ತಮ ಆರಂಭ ಸಿಗಲಿಲ್ಲ. ಪವರ್‌ಪ್ಲೇನಲ್ಲಿಯೇ ತಂಡ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ 41 ರನ್ ಕಲೆಹಾಕಿತು. ಇದು ತಂಡವನ್ನು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿಸಿತು. ಆರಂಭಿಕರಾದ ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಸಂಜು ಸ್ಯಾಮ್ಸನ್ಗೆ 10 ರನ್ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ.
ಮೊದಲ ವಿಕೆಟ್ ರೂಪದಲ್ಲಿ ಸಂಜು ಸ್ಯಾಮ್ಸನ್ ಪೆವಿಲಿಯನ್ತ್ತ ಹೆಜ್ಜೆ ಹಾಕಿದರು. ಸಂಜು ತಮ್ಮ ಇನ್ನಿಂಗ್ಸ್ನಲ್ಲಿ 7 ಎಸೆತಗಳನ್ನು ಎದುರಿಸಿ 6 ರನ್ಗಳಿಗೆ ಔಟಾದರು. ಸಂಜು ವಿಕೆಟ್ ಪತನದ ನಂತರ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊಂದಿದ್ದ ರುತುರಾಜ್ ಕೂಡ ಸಂಜು ಔಟಾದ ಮುಂದಿನ ಓವರ್ನಲ್ಲೇ ಅಂದರೆ ಮೂರನೇ ಓವರ್ನ ಕೊನೆಯ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ರುತುರಾಜ್ ತಮ್ಮ ಇನ್ನಿಂಗ್ಸ್ನಲ್ಲಿ 11 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಸಹಿತ 6 ರನ್ ಬಾರಿಸಿ ಔಟಾದರು.
ಓವರ್ಟನ್ ಏಕಾಂಗಿ ಹೋರಾಟ
ರುತುರಾಜ್ ವಿಕೆಟ್ ಪತನದ ಬಳಿಕ ಯುವ ಬ್ಯಾಟರ್ ಆಯುಷ್ ಮ್ಹಾತ್ರೆ ಕೂಡ ಖಾತೆ ತೆರೆಯದೆ ಔಟಾದರೆ, ಮ್ಯಾಟ್ ಶಾರ್ಟ್ ಕೂಡ 2 ರನ್ಗಳಿಗೆ ಸುಸ್ತಾದರು. ಶಿವಂ ದುಬೆ ಕೂಡ 6 ರನ್ಗಳಿಗೆ ಬ್ಯಾಟ್ ಎತ್ತಿಟ್ಟರು. ತಂಡದ ಪರ ಏಕಾಂಗಿ ಹೋರಾಟ ನೀಡಿದ ಜೆಮಿ ಓವರ್ಟನ್ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಬಂದು 42 ರನ್ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಓವರ್ಟನ್ ಅವರ ಈ ಇನ್ನಿಂಗ್ಸ್, ಸಿಎಸ್ಕೆ ತಂಡವನ್ನು 100 ರನ್ಗಳ ಗಡಿ ದಾಟಿಸಿತು. ಇಲ್ಲದಿದ್ದರೆ, ಸಿಎಸ್ಕೆ ಎರಡಂಕಿ ಮೊತ್ತವನ್ನು ದಾಟುತ್ತಿರಲಿಲ್ಲ. ಇತ್ತ ರಾಜಸ್ಥಾನ್ ಪರ ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್ ಹಾಗೂ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಇತ್ತೀಚಿನ ವರ್ಷಗಳಲ್ಲಿ ಹೃದಯಾಘಾತ (Heart Attack) ವಯಸ್ಸಾದವರಲ್ಲಿ ಮಾತ್ರವಲ್ಲ ಸಣ್ಣ ವಯಸ್ಸಿನವರಲ್ಲಿಯೂ ಕಂಡುಬರುತ್ತಿರುವುದನ್ನು ನೀವು ಕಂಡಿರಬಹುದು. ಜೊತೆಗೆ ಹೃದಯ ಸಂಬಂಧಿತ ಸಮಸ್ಯೆಗಳು, ಹೈ ಬ್ಲಡ್ ಪ್ರೆಶರ್, ಕೊಲೆಸ್ಟ್ರಾಲ್ ಹೆಚ್ಚಾಗುವುದು, ಬ್ಲಾಕೇಜ್ ಮತ್ತು ಹೃದಯ ಬಡಿತದಲ್ಲಿ ಏರುಪೇರಾಗುತ್ತಿರುವ ಸಮಸ್ಯೆ ಕಂಡುಬರುತ್ತಿದೆ. ಇದಕ್ಕೆ ಜೀವನಶೈಲಿಯ ಬದಲಾವಣೆ, ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ಹೆಚ್ಚುತ್ತಿರುವ ಒತ್ತಡ ಮತ್ತು ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ. ಅದರಲ್ಲಿಯೂ ದೀರ್ಘಕಾಲ ಕುಳಿತು ಕೆಲಸ ಮಾಡುವವರು, ಸದಾ ಒತ್ತಡದಲ್ಲಿ ಇರುವವರು ಅಥವಾ ಕುಟುಂಬದಲ್ಲಿ ಹೃದಯ ರೋಗ ಸಂಬಂಧಿ ಸಮಸ್ಯೆ ಇರುವವರು ಹೆಚ್ಚಿನ ಅಪಾಯದಲ್ಲಿದ್ದಾರೆ. ಯುವಕರಲ್ಲಿ ಹೆಚ್ಚುತ್ತಿರುವ ಈ ಸಮಸ್ಯೆ ಆರೋಗ್ಯದ ಕಡೆ ನಿರ್ಲಕ್ಷ್ಯ ತೋರಬಾರದು. ಅದರ ಬದಲು ಈ ರೀತಿಯಾಗುವುದಕ್ಕೆ ಕಾರಣವೇನು, ಲಕ್ಷಣಗಳು ಹೇಗಿರುತ್ತವೆ ಎಂಬುದನ್ನು ತಿಳಿದುಕೊಂಡು ಈ ರೀತಿಯ ಸಮಸ್ಯೆ ಹೆಚ್ಚಾಗದಂತೆ ತಡೆಯಬೇಕು.
ಸಣ್ಣ ವಯಸ್ಸಿನಲ್ಲಿ ಹೃದಯಾಘಾತವಾಗುವುದಕ್ಕೆ ಕಾರಣ:
ದೀರ್ಘಕಾಲ ಕುಳಿತುಕೊಳ್ಳುವುದು ಮತ್ತು ವ್ಯಾಯಾಮ ಮಾಡದಿರುವುದು
ಬೆಳಗಾವಿ, ಮಾರ್ಚ್ 30: ಈಜಲು ತೆರಳಿದ್ದ ಇಬ್ಬರು ಬಾಲಕರು (boys) ನೀರುಪಾದ (death) ಘಟನೆ ಜಿಲ್ಲೆ ಹುಕ್ಕೇರಿ ತಾಲೂಕಿನ ಹಳೆಗುಡಗನಟ್ಟಿ ಗ್ರಾಮದ ಬಳಿಯ ಹಿಡಕಲ್ ಡ್ಯಾಮ್ನ ಹಿನ್ನೀರಲ್ಲಿ ನಡೆದಿದೆ. ಕೃಷ್ಣಾ ಖಾನಾಪುರಿ(14) ಮತ್ತು ಪ್ರಜ್ವಲ್ ಗೋಕಾರ್(13) ಮೃತ ಬಾಲಕರು. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
ನಡೆದಿದ್ದೇನು?
ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಬಾಲಕರು ಈಜುಲು ತೆರಳಿದ್ದರು. ಈ ವೇಳೆ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನ ಸ್ಥಳೀಯರು ಮತ್ತು ಪೊಲೀಸರು ಹೊರತೆಗೆದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.
ಎತ್ತಿನ ಮೈತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ ನಡೆದಿದೆ. ಮುತ್ತಪ್ಪ ಮುರ್ಲಾಪುರ(20) ಮೃತ ಯುವಕ. ಗದಗ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಸಂಬಂಧಿಕರ ಮನೆಗೆ ಬಂದಿದ್ದ ಮುಳುಗುಂದ ಗ್ರಾಮದ ಮುತ್ತಪ್ಪ ಮುರ್ಲಾಪುರ ಈ ವೇಳೆ ಎತ್ತಿನ ಮೈ ತೊಳೆಯಲು ಕೆರೆಗೆ ಹೋದಾಗ ದುರ್ಘಟನೆ ಸಂಭವಿಸಿದೆ. ಆಯಾತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.
ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಸಾವು
ಆಟವಾಡುವ ವೇಳೆ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚನ್ನಗಾನಹಳ್ಳಿಯಲ್ಲಿ ನಡೆದಿದೆ. ಕೀರ್ತನಾ(10) ಮೃತ ಬಾಲಕಿ. ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಜಲು ಹೋಗಿದ್ದ SSLC ವಿದ್ಯಾರ್ಥಿ ಸಾವು
ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಯಲಿಯೂರು ಗ್ರಾಮದಲ್ಲಿ ಸ್ನೇಹಿತರ ಜತೆ ಈಜಲು ಹೋಗಿದ್ದ SSLC ವಿದ್ಯಾರ್ಥಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಕುಶಾಲ್(16) ಮೃತ ವಿದ್ಯಾರ್ಥಿ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಮೃತದೇಹಕ್ಕೆ ಶೋಧ ಕಾರ್ಯ ನಡೆದಿದೆ.
ನಿನ್ನೆ ಶಾಲೆಯ ವಿಶೇಷ ತರಗತಿ ಮುಗಿಸಿಕೊಂಡು ಮನೆಗೆ ತೆರಳಿದ್ದ ವಿದ್ಯಾರ್ಥಿ ಕುಶಾಲ್, ಬಳಿಕ ಸ್ನೇಹಿತರ ಜೊತೆಗೆ ಕೆರೆಗೆ ತೆರಳಿದ್ದು, ಕೆರೆಯ ಆಳ ಪ್ರದೇಶದಲ್ಲಿ ಮುಳುಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಸ್ನೇಹಿತರು ಹಾಗೂ ಕುರಿಗಾಯಿಯಿಂದ ರಕ್ಷಿಸಲು ಯತ್ನಿಸಲಾಗಿದೆ. ಆದರೆ ಕುಶಾಲ್ ದೇಹ ನಾಪತ್ತೆಯಾಗಿದೆ.
ಪೋಷಕರ ಗಮನಕ್ಕೆ
ಸದ್ಯ ಬೇಸಿಗೆ ರಜೆ ಆರಂಭವಾಗಿದೆ. ಹೀಗಾಗಿ ಪೋಷಕರು ತಮ್ಮ ಚಿಕ್ಕ ಮಕ್ಕಳ ಚಲನವಲನಗಳ ಬಗ್ಗೆ ಗಮನಹರಿಸಬೇಕಿದೆ. ಒಮ್ಮೆ ಹೋದ ಜೀವ ಮತ್ತೆ ವಾಪಸ್ ಬರಲ್ಲ. ಹಾಗಾಗಿ ಮಕ್ಕಳನ್ನ ಬಾವಿ, ಕೆರೆ-ಕಟ್ಟೆಗಳು, ಕೃಷಿ ಹೊಂಡಗಳು, ಸ್ವಿಮ್ಮಿಂಗ್ ಪೂಲ್, ನದಿ ಬಳಿ ಬಿಡದಿರುವುದು ಉತ್ತಮ. ಒಂದು ಸಣ್ಣ ನಿರ್ಲಕ್ಷ್ಯದಿಂದ ಮಕ್ಕಳ ಜೀವವೇ ಹೋಗಬಹುದು ಜಾಗರೂಕರಾಗಿರಿ.