ಸ್ಯಾಟಲೈಟ್ ಟು ಮೆಟ್ರೋ ಕನೆಕ್ಟಿವಿಟಿ ಕಷ್ಟ: ಒಂದು ಕಿ.ಮೀ ದಾಟಲು ಪ್ರಯಾಣಿಕರ ಹರಸಾಹಸ!
ಬೆಂಗಳೂರು, ಮಾ.30: ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟಲೈಟ್ ಬಸ್ ನಿಲ್ದಾಣ (KSRTC) ಮತ್ತು ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ನಡುವೆ ಸರಿಯಾದ ಸಂಪರ್ಕ ವ್ಯವಸ್ಥೆ ಇಲ್ಲದೆ ಪ್ರಯಾಣಿಕರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಎರಡು ನಿಲ್ದಾಣಗಳ ನಡುವಿನ ಅಂತರ ಒಂದು ಕಿಲೋಮೀಟರ್‌ಗಿಂತಲೂ ಕಡಿಮೆ ಇದ್ದರೂ, ಸುಗಮ ಸಂಪರ್ಕದ ಕೊರತೆಯಿಂದಾಗಿ ಜನರು ಪರದಾಡುವಂತಾಗಿದೆ. ಇದೀಗ ಈ ಬಗ್ಗೆ ಜನರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಬೆಂಗಳೂರಿಗೆ ಹೊರ ಜಿಲ್ಲೆಗಳಿಂದ ಬರುವ ಪ್ರಯಾಣಿಕರು ಮೆಟ್ರೋ ಹತ್ತಲು ಈ ಕಿಲೋಮೀಟರ್ ದೂರವನ್ನು ಕಾಲ್ನಡಿಗೆಯಲ್ಲಿ…