ಡೆಲಿವರಿ ಬಾಯ್ಗೆ ಬೆದರಿಸಿ ತಡ ರಾತ್ರಿ ಹಣ ಪೀಕಿದ ಗುಂಪು: ದೂರು ನೀಡದಂತೆಯೂ ಬೆದರಿಕೆ
ಬೆಂಗಳೂರು, ಏಪ್ರಿಲ್ 09: ತಡ ರಾತ್ರಿಯೂ ಕೆಲಸ ಮಾಡುವ ಡೆಲಿವರಿ ಬಾಯ್ಗಳನ್ನೇ ಟಾರ್ಗೆಟ್ ಮಾಡಿ ದೋಚುವ ಪ್ರಕರಣಗಳು ಬೆಂಗಳೂರಲ್ಲಿ (Bengaluru) ಮೇಲಿಂದ ಮೇಲೆ ನಡೆಯುತ್ತಿದ್ದು, ಇವುಗಳ ಸಾಲಿಗೆ ಮತ್ತೊಂದು ಕೇಸ್ ಸೇರ್ಪಡೆಯಾಗಿದೆ. ನಗರದ ನೆಕ್ಸಸ್ ಮಾಲ್ ಬಳಿ ನಿಂತಿದ್ದ 19 ವರ್ಷದ ಡೆಲಿವರಿ ಬಾಯ್ನ ಬೆದರಿಸಿರುವ ಮೂರು ಮಂದಿಯ ಗುಂಪು, ಆನ್‌ಲೈನ್ ಮೂಲಕ 49 ಸಾವಿರ ರೂಪಾಯಿ ಹಣವನ್ನು ವರ್ಗಾಯಿಸಿಕೊಂಡಿರುವ ಬಗ್ಗೆ ದೂರು ದಾಖಲಾಗಿದೆ. ಯುವಕನ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ಆರೋಪಿಸಲಾಗಿದೆ. ಮಾರ್ಚ್ 31ರ ರಾತ್ರಿ…