Headlines

Padma Awards 2026: ಕರ್ನಾಟಕದ ಮೂವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ; ಮಾಹಿತಿ ಇಲ್ಲಿದೆ – Kannada News | Three from Karnataka Honoured with Padma Shri Awards 2026: Here’s the Details

ಬೆಂಗಳೂರು, ಜನವರಿ 25: 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ ಮೂವರು ಸೇರಿ ಒಟ್ಟು 54 ಮಂದಿ ಕೇಂದ್ರ ಸರ್ಕಾರದಿಂದ ನೀಡಲ್ಪಡುವ ಪ್ರತಿಷ್ಠಿತ ಗೌರವಕ್ಕೆ ಭಾಜನರಾಗಿದ್ದಾರೆ. ರಾಜ್ಯದ ಅಂಕೇಗೌಡ, ಡಾ.ಸುರೇಶ್ ಹನಗವಾಡಿಮತ್ತು ಸುಶೀಲಮ್ಮ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಈ ಬಾರಿಯೂ ಕೇಂದ್ರ ಸರ್ಕಾರ ತೆರೆ ಮರೆಯ ಸಾಧಕರನ್ನೇ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ವಿಶೇಷ. ಹಿಮೊಫಿಲಿಯಾ ಪೀಡಿತ ಮಕ್ಕಳ ಸೇವಕ ಡಾ.ಸುರೇಶ್ ಹನಗವಾಡಿ JJM ಮೆಡಿಕಲ್ ಕಾಲೇಜು ಪ್ರಾಧ್ಯಾಪಕ ಡಾ.ಸುರೇಶ್ ಹನಗವಾಡಿ ಅವರು, ದಾವಣಗೆರೆಯ…

Read More

ಭಾರತ ಟಿ20 ತಂಡ ಪ್ರಕಟ: ಮೂವರ ಹೊಸ ಎಂಟ್ರಿ! – Kannada News | India T20 Squad For Zimbabwe 2026

ಝಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಭಾರತ ಟಿ20 ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್​ ಪ್ರಭ್​ಸಿಮ್ರಾನ್​ ಸಿಂಗ್​ಗೆ ಅವಕಾಶ ನೀಡಲಾಗಿದೆ. ಮೂವರಿಗೆ ಚೊಚ್ಚಲ ಅವಕಾಶ! ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಇತ್ತೀಚೆಗಷ್ಟೇ ಅತಿ ಕಿರಿಯ ವಯಸ್ಸಿನಲ್ಲಿ ಪಾದಾರ್ಪಣೆ ಮಾಡಿ ಇತಿಹಾಸ ನಿರ್ಮಿಸಿದ್ದ…

Read More

Iran-US Ceasefire: ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ: ಮೊಜ್ತಬಾ ಖಮೇನಿ

ಟೆಹ್ರಾನ್, ಏಪ್ರಿಲ್ 08: ಅಮೆರಿಕದೊಂದಿಗೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡ ನಂತರ ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ತನ್ನ ಎಲ್ಲಾ ಮಿಲಿಟರಿ ಘಟಕಗಳಿಗೆ ದಾಳಿ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಯುದ್ಧ ಅಂತ್ಯವಾಗಿಲ್ಲ, ಕದನ ವಿರಾಮವಷ್ಟೇ ಎಂದಿದ್ದಾರೆ. ಕದನ ವಿರಾಮವು ಯುದ್ಧದ ಅಂತ್ಯವನ್ನು ಸೂಚಿಸುವುದಿಲ್ಲ ಮತ್ತು ಶತ್ರುಗಳಾದ ಅಮೆರಿಕ ಅಥವಾ ಇಸ್ರೇಲ್ ಯಾವುದೇ ರೀತಿಯಲ್ಲಿ ತಪ್ಪಾಗಿ ವರ್ತಿಸಿದರೆ ನಾವು ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಫೆಬ್ರವರಿ 28 ರಂದು ಅಮೆರಿಕ ಮತ್ತು…

Read More

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು  ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಕಾರಣದಿಂದಾಗಿ ರದ್ದು ಮಾಡಲಾಗಿತ್ತು. ಇದೀಗ ಸರಣಿಯನ್ನು ಮರು ಆಯೋಜಿಸಲು ಉಭಯ ದೇಶಗಳ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸರಣಿ ರದ್ದು ಮಾಡಿದ್ದೇಕೆ? ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್…

Read More

ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್; ಹೈಕಮಾಂಡ್​ಗೆ ಪತ್ರ ಬರೆದು ಪೋಸ್ಟ್ – Kannada News | Kalaburagi backward community Seers Push DK Shivakumar for Karnataka CM Post

ಕಲಬುರಗಿ, ಡಿಸೆಂಬರ್ 22: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ  ಆಡಳಿತ ಹಂಚಿಕೆ ಸಂಬಂಧಿಸಿದ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಇಲ್ಲಿಯವರೆಗೂ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳು ಸಾಥ್ ಕೊಡುತ್ತಲೇ ಬಂದಿವೆ. ಆದರೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಹಿಂದುಳಿದ ಸಮುದಾಯದ ಮಠಾಧೀಶರು ಮುನ್ನಡೆಸಿರುವ ಮಹತ್ವದ ಚಳವಳಿ ಕಲಬುರಗಿಯಲ್ಲಿ ಆರಂಭವಾಗಿದೆ. ಬ್ರಹ್ಮ ಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ. ಈ…

Read More

ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು, ಮಾರ್ಚ್ 18: ಯುಗಾದಿ (Ugadi) ಹಾಗೂ ರಂಜಾನ್ ಹಬ್ಬದ ಸಾಲು ರಜೆಗಳ ಸಂದರ್ಭ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ (SWR) ಬೆಂಗಳೂರು (Bangalore) ನಗರದಿಂದ ವಿವಿಧ ಸ್ಥಳಗಳಿಗೆ ವಿಶೇಷ ರೈಲುಗಳ ಸೇವೆ ಒದಗಿಸುತ್ತಿದೆ. ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೋಸಪೇಟೆ ಹಾಗೂ ಗೋವಾ (ಮಡಗಾಂವ್) ಮಾರ್ಗಗಳಿಗೆ ಈ ವಿಶೇಷ ರೈಲುಗಳು ಸಂಚರಿಸುತ್ತಿವೆ. ವಿಶೇಷ ರೈಲುಗಳ ವೇಳಾಪಟ್ಟಿ, ಎಲ್ಲೆಲ್ಲಿ ನಿಲುಗಡೆ ಹೊಂದಿವೆ ಎಂಬ ಹಾಗೂ ಇತರ ಮಾಹಿತಿ ಇಲ್ಲಿದೆ. ಬೆಂಗಳೂರು ಬೆಳಗಾವಿ ವಿಶೇಷ ರೈಲು ರೈಲು…

Read More

ಸಚಿವರ ಬರ್ತ್​​ಡೇ ಗಿಫ್ಟ್​: ಸೀರೆಗಾಗಿ ಮುಗಿಬಿದ್ದ ಮಹಿಳೆಯರು, ಪೊಲೀಸರು ಸುಸ್ತು

ಬೆಂಗಳೂರು, (ಮಾರ್ಚ್ 07): ಸಚಿವ ಕೆಹೆಚ್ ಮುನಿಯಪ್ಪ ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಉಚಿತ ಸೀರೆ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದಿದ್ದು ನಾರಿ ಮಣಿಯರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಹುಟ್ಟು ಹಬಕ್ಕೆ ಬಂದಿದ್ದ ಮಹಿಳೆಯರಿಗಾಗಿ ಟೆಂಪೋದಲ್ಲಿ ಅಭಿಮಾನಿಗಳು ಸೀರೆಗಳನ್ನ ತಂದಿದ್ದರು. ಇದನ್ನು ನೋಡಿದ ಮಹಿಳೆಯರು ಸೀರೆಗಳನ್ನ ಪಡೆಯವುದಕ್ಕೆ ಕ್ಯೂ ನಲ್ಲು ಮುಗಿಬಿದ್ದಿದ್ದು, ನೂಕುನುಗ್ಗಲು ಮಾಡಿದ್ದಾರೆ. ಇದರಿಂದ ಪೊಲೀಸರು…

Read More

Gold Rate Today: 16,500 ರೂ ಗಡಿದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 28th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಯದ್ವಾತದ್ವಾ ಏರುತ್ತಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 295ರೂನಿಂದ 305 ರೂವರೆಗೆ ಏರಿದೆ. ಬೆಳ್ಳಿ ಬೆಲೆಯಂತೂ ಕಿಲೋಗೆ ನಾಲ್ಕು ಲಕ್ಷ ರೂ ಬೆಲೆ ಮುಟ್ಟಿದೆ. ಆಭರಣ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 16,500 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,51,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ…

Read More

ಸಾಯಿ ಪಲ್ಲವಿ ಜೊತೆ ಆಮಿರ್ ಖಾನ್ ಮಗನ ಒಂದು ದಿನದ ಪ್ರೀತಿ; ಏನಿದು ಕಥೆ? – Kannada News | Aamir Khan son Junaid Khan Sai Pallavi Ek Din movie Trailer release

ಬಾಲಿವುಡ್ ನಟ ಆಮಿರ್ ಖಾನ್ ಅವರ ಪುತ್ರ ಜುನೈದ್ ಖಾನ್ (Junaid Khan) ಕೂಡ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಬಹುಭಾಷಾ ನಟಿ ಸಾಯಿ ಪಲ್ಲವಿ (Sai Pallavi) ಜೊತೆ ಜುನೈದ್ ಖಾನ್ ಅಭಿನಯದ ‘ಏಕ್ ದಿನ್’ ಸಿನಿಮಾ ಮೇಲೆ ನಿರೀಕ್ಷೆ ಇದೆ. ಈ ಸಿನಿಮಾದ ಟ್ರೇಲರ್ ಗುರುವಾರ (ಏಪ್ರಿಲ್ 16) ಬಿಡುಗಡೆಯಾಗಿದೆ. ಸುನಿಲ್ ಪಾಂಡೆ ನಿರ್ದೇಶನದ ಈ ಚಿತ್ರವು ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಬ್ಯಾನರ್ ಮೂಲಕ ನಿರ್ಮಾಣ ಆಗಿದೆ. ‘ಏಕ್ ದಿನ್’ (Ek Din) ಸಿನಿಮಾದ ಕಥೆ…

Read More

Ranji Trophy Final: ತವರಿನಲ್ಲಿ ಎಡವಿದ ಕರ್ನಾಟಕ; ಚಾಂಪಿಯನ್ ಪಟ್ಟದತ್ತ ಜಮ್ಮುಕಾಶ್ಮೀರ – Kannada News | Jammu Kashmir Nears Historic Ranji Trophy 2025 26 Title; Karnataka Struggles in Final

2025-26ರ ರಣಜಿ ಟ್ರೋಫಿಯ ಫೈನಲ್ (Ranji Trophy 2025-26 Final) ಪಂದ್ಯ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ (Jammu Kashmir vs Karnataka) ನಡುವೆ ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಪಾರುಪತ್ಯ ನಾಲ್ಕನೇ ದಿನವೂ ಮುಂದುವರೆದಿದೆ. ಮೊದಲು ಬ್ಯಾಟಿಂಗ್​ನಲ್ಲಿ ಕರ್ನಾಟಕ ವೇಗಿಗಳನ್ನು ಹೈರಾಣಾಗಿಸಿದ್ದ ಜೆಕೆ ತಂಡ, ಆ ಬಳಿಕ ಬೌಲಿಂಗ್​ನಲ್ಲೂ ಕರ್ನಾಟಕ ತಂಡವನ್ನು ಕಟ್ಟಿಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್​ನಲ್ಲಿ ಮುನ್ನಡೆ ಪಡೆದುಕೊಂಡಿರುವ ಜೆಕೆ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿಯನ್ನು…

Read More